ಪೆಟ್ರೋಲ್, ಡೀಸೆಲ್ ಅಬಕಾರಿ ಸುಂಕ ಹೆಚ್ಚಳ

By Nagaraja

ಕೇಂದ್ರ ಸರಕಾರವು ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಹೊಸ ವರ್ಷವಾದ ಜನವರಿ 01, ಗುರುವಾರದಂದು ಮಗದೊಮ್ಮೆ ಹೆಚ್ಚಿಸಿದೆ. ಆದರೆ ಇದರಿಂದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಯಾವುದೇ ವ್ಯತ್ಯಾಸವುಂಟಾಗುವುದಿಲ್ಲ. ಇದರಿಂದ ಜನ ಸಾಮಾನ್ಯರಿಗೆ ನೆಮ್ಮದಿ ಸಿಕ್ಕಂತಾಗಿದೆ.

ಪ್ರತಿ ಲೀಟರ್‌ಗೆ ಪೆಟ್ರೋಲ್ ಹಾಗೂ ಡೀಸೆಲ್ ಇಂಧನ ಬೆಲೆಯ ಮೇಲಿನ ಅಬಕಾರಿ ಸುಂಕವನ್ನು ಎರಡು ರುಪಾಯಿಗಳಷ್ಟು ಹೆಚ್ಚಿಸಲಾಗಿದೆ. ಜಾಗತಿಕ ಕಚ್ಚಾ ತೈಲ ಮಾರುಕಟ್ಟೆಯಲ್ಲಿ ಸತತವಾಗಿ ಇಂಧನ ಬೆಲೆಯಲ್ಲಿ ಇಳಿಕೆ ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಇಂತಹದೊಂದು ಕ್ರಮ ಕೈಗೊಂಡಿದೆ. ಈ ಮೂಲಕ ಹೆಚ್ಚಿನ ಆದಾಯ ಸಂಗ್ರಹವನ್ನು ಗುರಿಯಿರಿಸಿಕೊಂಡಿದೆ.

petrol

ಇಲ್ಲಿ ಸಂಗ್ರಹವಾಗುವ ಮೊತ್ತವನ್ನು ದೇಶದ ಮೂಲ ಸೌಕರ್ಯ ಅಭಿವೃದ್ಧಿ ಕೆಲಸ ಕಾರ್ಯಗಳಿಗೆ ವ್ಯಯ ಮಾಡಲಾಗುವುದು ಎಂಬುದನ್ನು ವಿತ್ತ ಸಚಿವಾಲಯ ತಿಳಿಸಿದೆ. ನಿಮ್ಮ ಮಾಹಿತಿಗಾಗಿ, ಪ್ರಸಕ್ತ ಆರ್ಥಿಕ ಸಾಲಿನಲ್ಲಿ 15,000 ಕೀ.ಮೀ. ಉದ್ದದ ರಸ್ತೆ ಅಭಿವೃದ್ಧಿಗೆ ಕೇಂದ್ರ ಸರಕಾರ ಗುರಿಯಿರಿಸಿಕೊಂಡಿದೆ.

ಇದರೊಂದಿಗೆ 2014 ನವೆಂಬರ್ ತಿಂಗಳ ಬಳಿಕ ಇಂಧನಗಳ ಮೇಲಿನ ಅಬಕಾರಿ ಸುಂಕ ಮೂರನೇ ಬಾರಿಗೆ ಏರಿಕೆ ಕಂಡಿದೆ. ಹೊಸ ನೀತಿಯು ಶುಕ್ರವಾರದಿಂದಲೇ ಜಾರಿಗೆ ಬಂದಿದ್ದು, 2014-15ನೇ ಆರ್ಥಿಕ ಸಾಲಿನಲ್ಲಿ ಉಳಿದಿರುವ ಮೂರು ತಿಂಗಳಲ್ಲಿ 6,000 ಕೋಟಿ ರುಪಾಯಿಗಳನ್ನು ಸಂಗ್ರಹಿಸಲು ನೆರವಾಗಲಿದೆ.

Most Read Articles

Kannada
English summary
Excise duty on petrol, diesel hiked; no change in retail price
Story first published: Friday, January 2, 2015, 11:31 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X