ಫ್ಲೈಓವರ್‌ನಿಂದ ಬಿದ್ದ ಕಾರು- ಇಬ್ಬರು ವಿದ್ಯಾರ್ಥಿಗಳು ದುರ್ಮರಣ

Written By:

ವೇಗವಾದ ಕಾರು ಚಾಲನೆ ಸಂದರ್ಭದಲ್ಲಿ ಫ್ಲೈಓವರ್‍‌‌ನಿಂದ ಹೋಂಡಾ ಸಿಟಿ ಕಾರು ಮೊಗಚಿ ಬಿದ್ದಿದ್ದು, ಕಾರಿನಲ್ಲಿದ್ದ 7 ವಿದ್ಯಾರ್ಥಿಗಳ ಪೈಕಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಪಶ್ಚಿಮ ದೆಹಲಿಯ ಪಂಜಾಬಿ ಭಾಗ್ ಬಳಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು, ಐವರು ಗಾಯಗೊಂಡಿದ್ದಾರೆ.

ಪರೀಕ್ಷೆಗಾಗಿ ಹೊರಟಿದ್ದರು

ಅಪಘಾತದಲ್ಲಿ ಸಿಲುಕಿರುವ 7 ವಿದ್ಯಾರ್ಥಿಗಳು ದೆಹಲಿ ಇನ್ಸ್‌ಟಿಟ್ಯೂಟ್ ಆಫ್ ಪ್ರೊಫೆಷನಲ್ ಸ್ಟಡೀಸ್ ಅಂಡ್ ರಿಸರ್ಚ್‍ನಲ್ಲಿ ಅಧ್ಯಯನ ಮಾಡುತ್ತಿದ್ದು, ಪರೀಕ್ಷೆ ಬರೆಯಲು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ.

ಅತೀ ವೇಗವಾಗ ಕಾರು ಚಾಲನೆ ಮಾಡುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ.

ನಿಯಂತ್ರಣ ತಪ್ಪಿದ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಗಾಳಿಯಲ್ಲಿ ಹಾರಿ ಫ್ಲೈಓವರ್ ಪಕ್ಕದಿಂದ ಕೆಳಗೆ ಬಿದ್ದಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಕಾರಿನಲ್ಲಿದ್ದ ಸಂಚಿತ್ ಎಂಬ ವಿದ್ಯಾರ್ಥಿ ಕಾರಿನ ಛಾವಣಿ ಮತ್ತು ಸೀಟಿನ ಮಧ್ಯೆ ಅಪ್ಪಚ್ಚಿಯಾಗಿದ್ದು, ಕಾರಿನಲ್ಲಿದ್ದ ಇಬ್ಬರು ಯುವತಿಯರಲ್ಲಿ ರಿತು ಎಂಬಾಕೆ ಸ್ಥಳಕ್ಕೆ ಉಸಿರು ಚೆಲ್ಲಿದ್ದಾಳೆ.

ಪ್ರಣವ್, ಗರಿಮಾ, ರಿಷಬ್, ರಜತ್ ಹಾಗೂ ರಾಜಾ ಎಂಬುವರಿಗೆ ಗಂಭೀರ ಗಾಯಗಳಾಗಿದ್ದು, ರಜತ್ ಎಂಬಾತನೇ ಕಾರು ಚಾಲನೆ ಮಾಡುತ್ತಿದ್ದ ಎಂದು ಹೇಳಲಾಗಿದೆ.

ಪೊಲೀಸರ ಹೇಳಿಕೆ ಪ್ರಕಾರ ಈ ಎಲ್ಲಾ ವಿದ್ಯಾರ್ಥಿಗಳು ಎರಡನೇ ಸೆಮಿಸ್ಟರ್ ಪರೀಕ್ಷೆ ಬರೆಯಲು ಹೋಗ್ತಿದ್ದರು ಎಂದು ತಿಳಿದು ಬಂದಿದ್ದು, ಘಟನಾ ಸ್ಥಳದಲ್ಲಿ ಹಾಲ್ ಟಿಕೆಟ್ ಹಾಗೂ ಪುಸ್ತಕಗಳು ಪತ್ತೆಯಾಗಿವೆ.

ಭೀಕರ ಅಪಘಾತದಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿ ಸಿಲುಕಿದ್ದ ವಿದ್ಯಾರ್ಥಿಗಳನ್ನು ಹೊರಗೆಳೆಯಲು ಪೊಲೀಸರು ಹರಸಾಹಸಪಟ್ಟಿದ್ದಾರೆ.

ಸದ್ಯ ಗಾಯಾಳುಗಳನ್ನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ.

ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದು, ಘಟನೆಗೆ ನಿಖರ ಕಾರಣ ಎನು ಎಂಬುವುದನ್ನು ಪತ್ತೆಹಚ್ಚುತ್ತಿದ್ದಾರೆ.

Read more on ಅಪಘಾತ accident
English summary
fatal car accident in dehli. Two college student death on the spot.
Please Wait while comments are loading...

Latest Photos