ಕಾರು ಮತ್ತು ಲಾರಿ ನಡುವೆ ಡಿಕ್ಕಿ- ಒಂದೇ ಕುಟುಂಬದ 6 ಮಂದಿ ದುರ್ಮರಣ

Written By:

ವೇಗವಾಗಿ ಹೋಗುತ್ತಿದ್ದ ಕಾರು, ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಆರು ಮಂದಿ ದುರಂತವಾಗಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ರಾಯಚೂರಿನ ದಡೆಸುಗೂರು ಬಳಿ ನಡೆದಿದೆ.

ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ದಡೆಸುಗೂರು ಬಳಿ ಲಾರಿ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ 6 ಮಂದಿ ಮೃತಪಟ್ಟಿದ್ದಾರೆ. 

ಅಪಘಾತದಲ್ಲಿ ಪತಿ ಹುಸೇನ್ ಭಾಷಾ(35), ಪತ್ನಿ ಮೌಲಾನಾ( 32), ಮಕ್ಕಳಾದ ಗುಲಾಬ್ ಶಾ(5) ಸಾಬೀರ್(14)ಮೆಹಬೂಬ್ ಪಾಷಾ(3) ಮೃತಪಟ್ಟಿದ್ದಾರೆ.

ಇನ್ನು ಗಾಯಗೊಂಡಿದ್ದ ಎರಡು ವರ್ಷದ ಬಾಲಕಿ ಅಲ್ಸಿಯಾಳನ್ನು ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ಸೇರಿಸಲಾಗಿತ್ತಾದ್ರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾಳೆ.

ಮೃತರನ್ನು ಕೊಪ್ಪಳ ಜಿಲ್ಲೆ ಗಂಗಾವತಿಯ ಅಂಬೇಡ್ಕರ್ ನಗರದ ನಿವಾಸಿಗಳೆಂದು ಗುರುತಿಸಲಾಗಿದ್ದು, ಬಳ್ಳಾರಿಯ ಸಿರಗುಪ್ಪಕ್ಕೆ ಹೊರಟಿದ್ದರು ಎಂದು ತಿಳಿದುಬಂದಿದೆ.

ಅತೀವೇಗದಲ್ಲಿದ್ದ ಕಾರು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. 

ಆದ್ರೆ ಗಂಭೀರ ಸ್ಥಿತಿಯಲ್ಲಿದ್ದ ಮೂವರು ಬಳ್ಳಾರಿಯ ವಿಮ್ಸ್‌ನಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

ಇನ್ನು  ಘಟನೆ ಹಿನ್ನೆಲೆ ಸಿಂಧನೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಆದ್ರೆ ಘಟನೆಗೆ ನಿಖರ ತಿಳಿದಿಲ್ಲವಾದರೂ ಕಾರು ಅತಿವೇಗದಲ್ಲಿದ್ದ ಹಿನ್ನೆಲೆಯೇ ಲಾರಿಗೆ ಡಿಕ್ಕಿ ಹೊಡೆದದಿರುವ ಅನುಮಾನ ವ್ಯಕ್ತವಾಗಿದೆ.

ಭೀಕರ ಅಪಘಾತ ಹಿನ್ನೆಲೆ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಲಾರಿ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.

Read more on ಅಪಘಾತ accident
Story first published: Saturday, May 20, 2017, 10:57 [IST]
English summary
Clash between car and lorry, 6 death in spot
Please Wait while comments are loading...

Latest Photos