ಕೇವಲ 5 ನಿಮಿಷ ಚಾರ್ಜ್ ಮಾಡಿದ್ರೆ ಸಾಕು 482 ಕಿ.ಮಿ ಮೈಲೇಜ್ ನೀಡಬಲ್ಲ ಬ್ಯಾಟರಿ ಆವಿಷ್ಕಾರ..!!

Written By:

ಸುಧಾರಿತ ತಂತ್ರಜ್ಞಾನ ಹೊಂದಿರುವ ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆಗಾಗಿ ವಿಶ್ವಮಟ್ಟದಲ್ಲಿ ಹೊಸ ಹೊಸ ಆವಿಷ್ಕಾರ ನಡೆಯುತ್ತಿದ್ದು, ಇದೀಗ ಕೇವಲ 5 ನಿಮಿಷ ಚಾರ್ಜ್ ಮಾಡಿದರೆ 482 ಕಿ.ಮಿ ಮೈಲೇಜ್ ನೀಡಬಲ್ಲ ಬ್ಯಾಟರಿಯೊಂದನ್ನು ಅಭಿವೃದ್ಧಿಗೊಳಿಸಿಸಲಾಗಿದೆ.

ಇಸ್ರೇಲ್ ಮೂಲದ ನ್ಯಾನೋ ತಂತ್ರಜ್ಞಾನ ಸಂಸ್ಥೆಯೊಂದು ಈ ಸುಧಾರಿತ ಬ್ಯಾಟರಿಯನ್ನು ಆವಿಷ್ಕಾರ ಮಾಡಿದ್ದು, ಕೇವಲ 5 ನಿಮಿಷಗಳಲ್ಲಿ ಬ್ಯಾಟರಿ ಸಂಪೂರ್ಣ ಚಾರ್ಜ್ ಆಗಬಲ್ಲದು.

ಸುಧಾರಿತ ಬ್ಯಾಟರಿಗೆ ಸ್ಟೋರ್ ಡಾಟ್ ಎಂದು ಕರೆದಿರುವ ಇಸ್ರೇಲ್ ನ್ಯಾನೋ ತಂತ್ರಜ್ಞಾನ ಸಂಸ್ಥೆಯು, ಮುಂಬರುವ ದಿನಗಳಲ್ಲಿ ಪ್ರಮುಖ ಎಲೆಕ್ಟ್ರಿಕ್ ಕಾರು ಮಾದರಿಗಳಿಗೆ ಪರಿಚಯಿಸಲಿದೆ.

ಬರ್ಲಿನ್ ಮೂಲದ ಕ್ಯೂಬ್ ಟೆಕ್ ಸಂಸ್ಥೆಯೊಂದಿಗೆ ಜಂಟಿಯಾಗಿ ವಿಶೇಷ ಬ್ಯಾಟರಿ ತಯಾರಿಸಿರುವ ಇಸ್ರೇಲ್ ನ್ಯಾನೋ ತಂತ್ರಜ್ಞಾನ ಸಂಸ್ಥೆಯು, ವಿಶ್ವದ ಆಟೋಮೊಬೈಲ್ ಉದ್ಯಮದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಲಿಥಿಮ್ ಆಯಾನ್ ಬ್ಯಾಟರಿ ವೈಶಿಷ್ಟ್ಯತೆಗಳನ್ನು ಹೊಂದಿರುವ ಸ್ಪೋರ್ ಡಾಟ್, ಅತ್ಯಂತ ಕಡಿಮೆ ಅವಧಿಯಲ್ಲಿ ವಿದ್ಯುತ್ ಶಕ್ತಿಯನ್ನು ಸಂಗ್ರಹಿಸಿಕೊಳ್ಳುವ ಸಾಮರ್ಥ್ಯ ಹೊಂದಿದೆ.

ಒಂದು ವೇಳೆ ಸ್ಪೋರ್ ಡಾಟ್ ಬ್ಯಾಟರಿ ಎಲೆಕ್ಟ್ರಿಕ್ ಕಾರುಗಳಲ್ಲಿ ಬಳಕೆ ಅವಕಾಶ ಸಿಕ್ಕಿದ್ದೆ ಆದಲ್ಲಿ ಪರಿಸರ ಮಾಲಿನ್ಯ ಸಮಸ್ಯೆಗೆ ಹೊಸ ಪರಿಹಾರ ಸಿಗಲಿದೆ ಎಂದು ಹೇಳಲಾಗುತ್ತಿದೆ.

ಇನ್ನು ವಿಶ್ವಮಟ್ಟದಲ್ಲಿ ಎಲೆಕ್ಟ್ರಿಕ್ ಕಾರುಗಳ ಬಳಕೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಮುಂಬರುವ ದಿನಗಳಲ್ಲಿ ಪೆಟ್ರೋಲ್ ಮತ್ತು ಡಿಸೇಲ್ ಕಾರುಗಳ ಬೇಡಿಕೆ ಸಂಪೂರ್ಣ ತಗ್ಗಲಿದ್ದು, ಪರಿಸರ ಮಾಲಿನ್ಯ ಗಣನೀಯವಾಗಿ ಇಳಿಕೆಯಾಗಲಿದೆ.

Story first published: Saturday, June 3, 2017, 17:17 [IST]
English summary
Read in Kannada about An Israeli nanotech firm called StoreDot has unveiled a battery that can be fully charged in five minutes.
Please Wait while comments are loading...

Latest Photos