2015ರಿಂದ ರಾಜ್ಯದೆಲ್ಲೆಡೆ ಹೆಲ್ಮೆಟ್ ಬಳಕೆ ಕಡ್ಡಾಯ?

By Nagaraja

ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯಾದ್ಯಾಂತ ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಬಳಕೆಯನ್ನು ಕಡ್ಡಾಯಗೊಳಿಸಲು ರಾಜ್ಯ ಸಾರಿಗೆ ಇಲಾಖೆ ಅಧಿಕಾರಿಗಳು ಒಮ್ಮತದ ನಿರ್ಧಾರ ಕೈಗೊಂಡಿದ್ದಾರೆ.

ಕಠಿಣ ರಸ್ತೆ ಸುರಕ್ಷಾ ನಿಯಮಗಳನ್ನು ಕಡ್ಡಾಯಗೊಳಿಸಲು ಮುಂದಾಗಿರುವ ರಾಜ್ಯ ಸಾರಿಗೆ ಇಲಾಖೆಯು ರಾಜ್ಯ ಸರಕಾರದ ಮುಂದೆ ಇಂತಹದೊಂದು ಪ್ರಸ್ತಾವನೆ ಮುಂದಿಟ್ಟಿದ್ದು, ಈ ಬಗ್ಗೆ ಅಂತಿಮ ನಿರ್ಧಾರವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಸರಕಾರ ಕೈಗೊಳ್ಳಲಿದೆ.

helmet

ಈಗಿನ ನಿಯಮ ಪ್ರಕಾರ ನಗರ ಮಿತಿ ವ್ಯಾಪ್ತಿಯಲ್ಲಿ ಮಾತ್ರ ಹೆಲ್ಮೆಟ್ ಬಳಕೆ ಕಡ್ಡಾಯವಾಗಿದೆ. ಆದರೆ ಅಪಘಾತಗಳ ಸಂಖ್ಯೆಯಲ್ಲಿ ವರ್ಧೆನೆಯಾಗುತ್ತಿರುವ ಹಿನ್ನಲೆಯಲ್ಲಿ ಸಣ್ಣ ಸಣ್ಣ ಗ್ರಾಮ, ನಗರ, ಪಟ್ಟಣ ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿಗಳಲ್ಲೂ ದ್ವಿಚಕ್ರ ಸವಾರರು ಹೆಲ್ಮೆಟ್ ಬಳಕೆ ಕಡ್ಡಾಯಗೊಳಿಸುವಂತೆ ಸೂಚಿಸಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಸಾರಿಗೆ ಇಲಾಖೆ ಆಯುಕ್ತ ರಾಮೇಗೌಡ, "2015 ಮೊದಲ ವಾರದಿಂದಲೇ ಹೊಸ ನಿಯಮ ಕಟ್ಟುನಿಟ್ಟಾಗಿ ಜಾರಿಗೆ ತರುವ ಇರಾದೆಯಲ್ಲಿದ್ದೇವೆ. ಈ ಸಂಬಂಧ ರಸ್ತೆ ಸುರಕ್ಷಾ ಕಾರ್ಯಕ್ರಮದ ಬಗ್ಗೆ ಕೇಂದ್ರ ಸರಕಾರದಿಂದಲೂ ಮಾರ್ಗಸೂಚಿಗಳನ್ನು ಪಡೆಯಲಾಗಿದೆ" ಎಂದಿದ್ದಾರೆ.

"ಸವಾರ ಅಥವಾ ಹಿಂಬದಿಯ ಪ್ರಯಾಣಿಕ ಹೆಲ್ಮೆಟ್ ಧರಿಸದೇ ಇರುವುದರಿಂದ ಸಂಭವಿಸಿರುತ್ತದೆ. ಹಾಗಾಗಿ ಹೆಲ್ಮೆಟ್ ಬಳಕೆಯನ್ನು ಕಡ್ಡಾಯಗೊಳಿಸಲು ನಿರ್ಧರಿಸಿದ್ದೇವೆ" ಎಂದಿದ್ದಾರೆ.

ಹಿಂಬದಿ ಸವಾರರಿಗೂ ಹೆಲ್ಮೆಟ್ ಕಡ್ಡಾಯ?
ಹಿಂಬದಿಯ ಪ್ರಯಾಣಿಕರೂ ಕಡ್ಡಯವಾಗಿ ಹೆಲ್ಮೆಟ್ ಧರಿಸುವುದರ ಕುರಿತಂತೆ ಪ್ರಸ್ತಾವನೆ ಪರಿಗಣನೆಯಲ್ಲಿದೆ. ಅಷ್ಟೇ ಆಲ್ಲದೆ ಹೆಲ್ಮೆಟ್ ಮೋಟಾರು ಕಾಯ್ದೆ ಅನ್ವಯ ಹೆಲ್ಮೆಟ್ ದಂಡ ಪರಿಷ್ಕರಿಸುವಂತೆಯೂ ಪ್ರಸ್ತಾವನೆ ಸಲ್ಲಿಸಲಾಗಿದೆ.

Most Read Articles

Kannada
English summary
State Transport Department officials have decided to make it compulsory for two-wheeler riders across Karnataka to wear helmets.
Story first published: Monday, December 22, 2014, 14:11 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X