ಎಸ್‌ಯುವಿ ಕಾರು ಮಾರಾಟದಲ್ಲಿ ನ್ಯೂ ಜನರೇಷನ್ ಟಾಟಾ ಸಫಾರಿ ಹೊಸ ದಾಖಲೆ

ನ್ಯೂ ಜನರೇಷನ್ ಸಫಾರಿ ಎಸ್‌ಯುವಿ ಕಾರು ಮಾದರಿಯನ್ನು ಬಿಡುಗಡೆಗೊಳಿಸಿರುವ ಟಾಟಾ ಮೋಟಾರ್ಸ್ ಕಂಪನಿಯು ಮೊದಲ ತಿಂಗಳಿನಲ್ಲಿಯೇ ಉತ್ತಮ ಬೇಡಿಕೆ ಪಡೆದುಕೊಂಡಿದ್ದು, ಹೊಸ ಕಾರು ಖರೀದಿಗಾಗಿ ಇದುವರೆಗೆ ಸುಮಾರು 5 ಸಾವಿರ ಗ್ರಾಹಕರು ಬುಕ್ಕಿಂಗ್ ದಾಖಲಿಸಿರುವುದಾಗಿದೆ ಟಾಟಾ ಮೋಟಾರ್ಸ್ ಅಧಿಕೃತ ಮಾಹಿತಿ ಹಂಚಿಕೊಂಡಿದೆ.

ಎಸ್‌ಯುವಿ ಕಾರು ಮಾರಾಟದಲ್ಲಿ ನ್ಯೂ ಜನರೇಷನ್ ಟಾಟಾ ಸಫಾರಿ ಹೊಸ ದಾಖಲೆ

ಕಳೆದ ತಿಂಗಳು 22ರಂದು ಬಿಡುಗಡೆಗೊಂಡಿದ್ದ ಹೊಸ ಸಫಾರಿ ಕಾರು ಇದುವರೆಗೆ ಸುಮಾರು ಎರಡೂವರ ಸಾವಿರ ಯುನಿಟ್ ಕಾರನ್ನು ವಿತರಣೆ ಮಾಡಲಾಗಿದ್ದು, ಹೊಸ ಕಾರಿನಲ್ಲಿ ಟಾಪ್ ಎಂಡ್ ಮಾದರಿಗಳಿಗೆ ಹೆಚ್ಚಿನ ಪ್ರಮಾಣದ ಬೇಡಿಕೆ ಸಲ್ಲಿಕೆಯಾಗಿದೆ. ಹೊಸ ಸಫಾರಿ ಕಾರು ಸ್ಟ್ಯಾಂಡರ್ಡ್ ಮತ್ತು ಅಡ್ವೆಂಚರ್ ಎನ್ನುವ ಎರಡು ಪ್ರಮುಖ ವೆರಿಯೆಂಟ್‌ಗಳಲ್ಲಿ ಮಾರಾಟಗೊಳ್ಳುತ್ತಿದ್ದು, ಹೊಸ ಕಾರು ಆರಂಭಿಕವಾಗಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ.14.69 ಲಕ್ಷಕ್ಕೆ ಮತ್ತು ಟಾಪ್ ಎಂಡ್ ಮಾದರಿಯು ರೂ. 21.45 ಲಕ್ಷ ಬೆಲೆ ಹೊಂದಿದೆ.

ಎಸ್‌ಯುವಿ ಕಾರು ಮಾರಾಟದಲ್ಲಿ ನ್ಯೂ ಜನರೇಷನ್ ಟಾಟಾ ಸಫಾರಿ ಹೊಸ ದಾಖಲೆ

ಎಕ್ಸ್ಇ, ಎಕ್ಸ್ಎಂ, ಎಕ್ಸ್‌ಟಿ, ಎಕ್ಸ್‌ಟಿ ಪ್ಲಸ್, ಎಕ್ಸ್‌ಜೆಡ್, ಎಕ್ಸ್‌ಜೆಡ್ ಪ್ಲಸ್ ಮತ್ತು ಎಕ್ಸ್‌ಜೆಡ್ ಪ್ಲಸ್ ಅಡ್ವೆಂಚರ್ ಪೆರಸೊನಾ ಮಾದರಿಗಳೊಂದಿಗೆ ಖರೀದಿಗೆ ಲಭ್ಯವಿದ್ದು, ಸಫಾರಿ ಕಾರು ಗ್ರಾಹಕರ ಬೇಡಿಕೆಯೆಂತೆ 6 ಸೀಟರ್ ಮತ್ತು 7 ಸೀಟರ್ ಆಯ್ಕೆ ಪಡೆದುಕೊಂಡಿದೆ.

ಎಸ್‌ಯುವಿ ಕಾರು ಮಾರಾಟದಲ್ಲಿ ನ್ಯೂ ಜನರೇಷನ್ ಟಾಟಾ ಸಫಾರಿ ಹೊಸ ದಾಖಲೆ

ಸ್ಟ್ಯಾಂಡರ್ಡ್ ಸಫಾರಿ ಮಾದರಿಯು ಎಕ್ಸ್‌ಶೋರೂಂ ಪ್ರಕಾರ ರೂ.14.69 ಲಕ್ಷದಿಂದ ರೂ. 21.25 ಲಕ್ಷ ಬೆಲೆ ಹೊಂದಿದ್ದಲ್ಲಿ ಅಡ್ವೆಂಚರ್ ಪೆರಸೊನಾ ಸಫಾರಿ ಮಾದರಿಯು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 20.20 ಲಕ್ಷದಿಂದ ರೂ. 21.45 ಲಕ್ಷ ಬೆಲೆ ಪಡೆದುಕೊಂಡಿದೆ.

ಎಸ್‌ಯುವಿ ಕಾರು ಮಾರಾಟದಲ್ಲಿ ನ್ಯೂ ಜನರೇಷನ್ ಟಾಟಾ ಸಫಾರಿ ಹೊಸ ದಾಖಲೆ

ಒಮೆಗಾ ಪ್ಲ್ಯಾಟ್‌ಫಾರ್ಮ್‌ನಿಂದಾಗಿ ಟಾಟಾ ಹೊಸ ಕಾರಿಗೆ ಐಷಾರಾಮಿ ವಿನ್ಯಾಸ, ಪ್ರಯಾಣಿಕರಿಗೆ ಗರಿಷ್ಠ ಸುರಕ್ಷತೆ ನೀಡುವುದರ ಜೊತೆಗೆ ಎಂಜಿನ್ ಕಾರ್ಯಕ್ಷಮತೆಯಲ್ಲೂ ಗಮನಸೆಳೆಯಲಿದೆ. ಹೊಸ ಕಾರಿನ ಬೆಸ್ ಮಾದರಿಗಳಲ್ಲಿ ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್, ಇಎಸ್‌ಪಿ, ಹಿಲ್ ಹೋಲ್ಡ್ ಅಸಿಸ್ಟ್, ರೋಲ್ ಓವರ್ ಮಿಟಿಗೇಷನ್, ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಟೆಲಿಸ್ಕೋಪಿಕ್ ಸ್ಟೀರಿಂಗ್ ವೀಲ್ಹ್ ಮತ್ತು ಪ್ರೋಜೆಕ್ಟರ್ ಹೆಡ್‌ಲ್ಯಾಂಪ್ ಸೌಲಭ್ಯಗಳಿವೆ.

ಎಸ್‌ಯುವಿ ಕಾರು ಮಾರಾಟದಲ್ಲಿ ನ್ಯೂ ಜನರೇಷನ್ ಟಾಟಾ ಸಫಾರಿ ಹೊಸ ದಾಖಲೆ

ಮಧ್ಯಮ ಆವೃತ್ತಿಗಳಲ್ಲಿ ಆರಂಭಿಕ ಮಾದರಿಯಲ್ಲಿನ ಕೆಲವು ಫೀಚರ್ಸ್‌ಗಳೊಂದಿಗೆ ಟೈರ್ ಪ್ರೆಷರ್ ಮಾನಿಟರ್, ಆಟೋ ಡಿಮ್ಮಿಂಗ್ ಇನ್‌ಸೈಡ್ ರಿಯರ್ ವ್ಯೂ ಮಿರರ್, 18-ಇಂಚಿನ ಅಲಾಯ್ ವೀಲ್ಹ್, ಆಟೋ ಕ್ಲೈಮೆಟ್ ಕಂಟ್ರೋಲ್, ಆಟೋ ಹೆಡ್‌ಲೈಟ್ಸ್ ಮತ್ತು ವೈಪರ್ಸ್, ಪವರ್ ಫೋಲ್ಡಿಂಗ್ ಮತ್ತು ಹೊಂದಾಣಿಕೆ ಮಾಡಬಹುದಾದ ವಿಂಗ್ ಮಿರರ್, ಕೀ ಲೆಸ್ ಎಂಟ್ರಿ, ಆ್ಯಂಬಿಯೆಂಟ್ ಮೋಡ್ ಮತ್ತು ಐರಾ ಕಾರ್ ಕನೆಕ್ಟ್ ಟೆಕ್ನಾಲಜಿ ನೀಡಲಾಗಿದೆ.

ಎಸ್‌ಯುವಿ ಕಾರು ಮಾರಾಟದಲ್ಲಿ ನ್ಯೂ ಜನರೇಷನ್ ಟಾಟಾ ಸಫಾರಿ ಹೊಸ ದಾಖಲೆ

ಟಾಪ್ ಎಂಡ್‌ನಲ್ಲಿರುವ ಎಕ್ಸ್‌ಜೆಡ್, ಎಕ್ಸ್‌ಜೆಡ್ ಪ್ಲಸ್ ಆವೃತ್ತಿಗಳಲ್ಲಿ ಆರಂಭಿಕ ಮಾದರಿಗಳಲ್ಲಿನ ಹಲವು ಫೀಚರ್ಸ್‌ನೊಂದಿಗೆ ಪನೊರಮಿಕ್ ಸನ್‌ರೂಫ್, ಸೈಡ್ ಕರ್ಟೈನ್ ಏರ್‌ಬ್ಯಾಗ್, ಹಿಲ್ ಡಿಸೆಂಟ್ ಕಂಟ್ರೋಲ್, ಟೈರೈನ್ ರೆಸ್ಪಾನ್ಸ್ ಸೌಲಭ್ಯಗಳಿವೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಎಸ್‌ಯುವಿ ಕಾರು ಮಾರಾಟದಲ್ಲಿ ನ್ಯೂ ಜನರೇಷನ್ ಟಾಟಾ ಸಫಾರಿ ಹೊಸ ದಾಖಲೆ

ಹಾಗೆಯೇ ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್, ಮಷಿನ್ ಕಟ್ ಅಯಾಲ್ ವೀಲ್ಹ್, ಜೆಕ್ಸಾನ್ ಹೆಚ್‌ಡಿಐ ಹೆಡ್‌ಲೈಟ್ಸ್, ಫ್ರಂಟ್ ಫಾಗ್ ಲೈಟ್ಸ್, ಕಾರ್ನರಿಂಗ್ ಫಂಕ್ಷನ್, ಟೆರೈನ್ ರೆನ್ಪಾನ್ಸ್ ಮೋಡ್, 8.8 ಇಂಚಿನ ಇನ್ಪೋಟೈನ್‌ಮೆಂಟ್ ಸಿಸ್ಟಂ ನೀಡಲಾಗಿದೆ.

ಎಸ್‌ಯುವಿ ಕಾರು ಮಾರಾಟದಲ್ಲಿ ನ್ಯೂ ಜನರೇಷನ್ ಟಾಟಾ ಸಫಾರಿ ಹೊಸ ದಾಖಲೆ

ಟಾಪ್ ಎಂಡ್‍ಗಳಲ್ಲಿ 7 ಇಂಚಿನ ಡಿಜಿಟಲ್ ಡಿಸ್‌ಪ್ಲೇ, 9 ಜೆಬಿಎಲ್ ಸ್ಪೀಕರ್ಸ್ 6 ಹಂತಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಡ್ರೈವರ್ ಸೀಟ್, ಪನೊರಮಿಕ್ ಸನ್‌ರೂಫ್ ಸೌಲಭ್ಯ ಸೇರಿದಂತೆ ಸುರಕ್ಷತೆ ಹೆಚ್ಚಿನ ಒತ್ತು ನೀಡಲಾಗಿದ್ದು, ಸ್ಟ್ಯಾಂಡರ್ಡ್ ಮತ್ತು ಅಡ್ವೆಂಚರ್ ಎರಡು ಮಾದರಿಗಳಲ್ಲೂ ಒಂದೇ ಮಾದರಿಯ ಡೀಸೆಲ್ ಎಂಜಿನ್ ಆಯ್ಕೆ ನೀಡಲಾಗಿದೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಎಸ್‌ಯುವಿ ಕಾರು ಮಾರಾಟದಲ್ಲಿ ನ್ಯೂ ಜನರೇಷನ್ ಟಾಟಾ ಸಫಾರಿ ಹೊಸ ದಾಖಲೆ

ಸಫಾರಿ ಎಸ್‌ಯುವಿಯಲ್ಲಿ ಆರು ಸ್ಪೀಡ್ ಮ್ಯಾನುವಲ್ ಅಥವಾ ಆರು ಸ್ಪೀಡ್ ಆಟೋಮ್ಯಾಟಿಕ್ ಟಾರ್ಕ್ ಕನ್ವರ್ಟರ್ ಗೇರ್‌ಬಾಕ್ಸ್ ಆಯ್ಕೆ ಹೊಂದಿರುವ 2.0-ಲೀಟರ್ ಕ್ರಿಯೊಟೆಕ್ ಡೀಸೆಲ್ ಎಂಜಿನ್ ಆಯ್ಕೆ ನೀಡಲಾಗಿದ್ದು, ಫ್ರಂಟ್ ವೀಲ್ಹ್ ಡ್ರೈವ್ ಸಿಸ್ಟಂನೊಂದಿಗೆ 168-ಬಿಎಚ್‌ಪಿ ಮತ್ತು 350-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದೆ.

More from DriveSpark

Article Published On: Monday, March 15, 2021, 15:52 [IST]
English summary
Tata Safari Bookings Crosses 5000 Mark. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+