Simple One: 265 Km ಓಡುತ್ತೆ.. ಬೆಲೆ ಇಷ್ಟೇನಾ.. ಬೆಂಗಳೂರಿನ ಹೊಸ ಸಿಂಪಲ್ ಒನ್ ಜೆನ್ 2 ಸ್ಕೂಟರ್ ರಿವ್ಯೂ, ಹೇಗಿದೆ?
ಬೆಂಗಳೂರು ಮೂಲದ 'ಸಿಂಪಲ್ ಎನರ್ಜಿ' ಪ್ರಮುಖ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ತಯಾರಕ ಕಂಪನಿಯಾಗಿ ಹೊರಹೊಮ್ಮಿದೆ. ಈಚೆಗೆ ಹೊಚ್ಚ ಹೊಸ ಸಿಂಪಲ್ ಒನ್ ಜೆನ್ 2 (Simple One Gen 2) ಇ-ಸ್ಕೂಟರ್‌ನ್ನು ಅದ್ದೂರಿಯಾಗಿ ಮಾರಾಟಕ್ಕೆ ತಂದಿತ್ತು. ಇದು ಕೈಗೆಟುಕುವ ಬೆಲೆಯಲ್ಲಿಯೂ ಲಭ್ಯವಿದೆ. ರೂ.1.70 ಲಕ್ಷದಿಂದ ರೂ.1.78 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ನೋಡಲು ತುಂಬಾ ಚೆನ್ನಾಗಿದ್ದು, ಹಲವು ಹೊಸತನಗಳಿಗೂ ಸಾಕ್ಷಿಯಾಗಿದೆ.
ನಮ್ಮ 'ಡ್ರೈವ್‌ಸ್ಪಾರ್ಕ್' ತಂಡಕ್ಕೂ ನೂತನ 'ಸಿಂಪಲ್ ಒನ್ ಜೆನ್ 2' ಎಲೆಕ್ಟ್ರಿಕ್ ಸ್ಕೂಟರ್, ಟೆಸ್ಟ್ ಡ್ರೈವ್ ನಡೆಸುವುದಕ್ಕೆ ಲಭ್ಯವಾಗಿತ್ತು. ಬನ್ನಿ, ಈ ಸ್ಕೂಟರ್‌ನ ವಿನ್ಯಾಸವೇನು.. ಹೇಗೆ ಕಾರ್ಯ ನಿರ್ವಹಿಸುತ್ತದೆ.. ವೈಶಿಷ್ಟ್ಯಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.

ವಿನ್ಯಾಸ & ಬಣ್ಣಗಳು (Design & Colors):
ಇದು ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಒಳಗೊಂಡಿದೆ. ಬಾಡಿ ಪ್ಯಾನೆಲ್ ಉತ್ತಮವಾಗಿದ್ದು, ನವೀನವಾಗಿರುವ ಹೆಡ್‌ಲ್ಯಾಂಪ್, ಹ್ಯಾಂಡಲ್‌ಬಾರ್ ಕೌಲ್‌ನಲ್ಲಿ ಇಂಟಿಗ್ರೇಟೆಡ್ ಡಿಆರ್‌ಎಲ್‌ಗಳು ಹಾಗೂ ಟೈಲ್ ಲ್ಯಾಂಪ್‌ನ್ನು ಪಡೆದಿದೆ. ಗ್ರೇಸ್ ವೈಟ್, ಏರೋ ಗ್ರೇ, ಬ್ರೇಜನ್ ಬ್ಲ್ಯಾಕ್, ಅಜುರೆ ಬ್ಲೂ ಹಾಗೂ ಸೋನಿಕ್ ರೆಡ್ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಲಭ್ಯವಿದೆ.
ಸುತ್ತಳತೆ (Dimensions):
ಈ ಸ್ಕೂಟರ್ ಸಾಕಷ್ಟು ವಿಶಾಲ ಗಾತ್ರದಲ್ಲಿದೆ. 1,907 ಮಿ.ಮೀ ಉದ್ದ, 758 ಮಿ.ಮೀ ಅಗಲ ಹಾಗೂ 1,168 ಮಿ.ಮೀ ಎತ್ತರವಿದೆ. 172 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 1,347 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ. ಸರಿ ಸುಮಾರು 126 ರಿಂದ 129 ಕೆಜಿ ತೂಕವಿದೆ.

ಕಾರ್ಯಕ್ಷಮತೆ (Performance):
ಹೊಸ 'ಸಿಂಪಲ್ ಒನ್ ಜೆನ್ 2' ಶಕ್ತಿಶಾಲಿಯಾದ 2 ಪವರ್‌ಟ್ರೇನ್‌ನ್ನು ಆಯ್ಕೆಯನ್ನು ಹೊಂದಿದೆ. 4.5 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್ ಹೊಂದಿರುವ ಮಾಡೆಲ್, ಸಂಪೂರ್ಣ ಚಾರ್ಜ್‌ನಲ್ಲಿ 236 ಕಿಲೋಮೀಟರ್ ರೇಂಜ್ (ಮೈಲೇಜ್) ಕೊಡುತ್ತದೆ. 90 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಕೇವಲ 3.3 ಸೆಕೆಂಡುಗಳಲ್ಲಿ 0 ರಿಂದ 40 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ. ಇದರಲ್ಲಿರುವ ಎಲೆಕ್ಟ್ರಿಕ್ ಮೋಟಾರ್, 6.4 ಕೆಡಬ್ಲ್ಯೂ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 52 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ.
ಮತ್ತೊಂದು 5 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್ ಒಳಗೊಂಡಿರುವ ಮಾಡೆಲ್, ಭರ್ತಿ ಚಾರ್ಜ್‌ನಲ್ಲಿ 265 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ. 115 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಬರೀ 2.55 ಸೆಕೆಂಡುಗಳಲ್ಲಿ 0 ರಿಂದ 40 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ. ಈ ಸ್ಕೂಟರ್‌ನಲ್ಲಿ ಉಪಯೋಗಿಸುವ ಎಲೆಕ್ಟ್ರಿಕ್ ಮೋಟಾರ್, 8.8 ಕೆಡಬ್ಲ್ಯೂ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 72 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ.

ವೈಶಿಷ್ಟ್ಯಗಳು (Features):
ಇದು ಹತ್ತಾರು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. 7-ಇಂಚಿನ ಟಿಎಫ್‌ಟಿ ಟಚ್‌ಸ್ಕ್ರೀನ್ ಇನ್ಸ್ಟ್ರುಮೆಂಟ್ ಕನ್ಸೋಲ್, ಡಿಜಿಟಲ್ ಡಾಕ್ಯುಮೆಂಟ್ ಸ್ಟೋರೇಜ್, ಒಟಿಎ ಅಪ್ಡೇಟ್ಸ್ ಹಾಗೂ ಬ್ಲೂಟೂತ್ ಕನೆಕ್ಟಿವಿಟಿಯನ್ನು ಪಡೆದಿದೆ. ಇಕೋ, ಇಕೋ ಎಕ್ಸ್, ರೈಡ್, ಏರ್, ಸೋನಿಕ್ ಮತ್ತು ಸೋನಿಕ್ ಎಕ್ಸ್ ಎಂಬ 6 ರೈಡಿಂಗ್ ಮೋಡ್‌ಗಳನ್ನು ಒಳಗೊಂಡಿದೆ. 35 ಲೀಟರ್ ಅಂಡರ್ ಸೀಟ್ ಸ್ಟೋರೇಜ್ ಆಯ್ಕೆಯನ್ನು ಹೊಂದಿದೆ. ಸೀಟ್ ಎತ್ತರ 780 ಮಿ.ಮೀ ಇದೆ.
ಸಸ್ಪೆನ್ಷನ್ ಸೆಟಪ್ & ಬ್ರೇಕಿಂಗ್ ಸಿಸ್ಟಮ್ (Suspension Setup And Braking System):
ನೂತನ 'ಸಿಂಪಲ್ ಒನ್ ಜೆನ್ 2' ಎಲೆಕ್ಟ್ರಿಕ್ ಸ್ಕೂಟರ್, ಸವಾರರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಗಾಗಿ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಹಾಗೂ ಹಿಂಭಾಗ (ರೇರ್) ಮೊನೊಶಾಕ್ ಯುನಿಟ್ ಸಸ್ಪೆನ್ಷನ್ ಸೆಟಪ್‌ನ್ನು ಒಳಗೊಂಡಿದೆ. ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ. 12-ಇಂಚಿನ ಟ್ಯೂಬ್‌ಲೆಸ್ ಯೂರೋಗ್ರಿಪ್ ಟೈರ್‌ಗಳನ್ನು ಒಳಗೊಂಡಿದೆ.

ಚಾಲನಾ ಅನುಭವ (Riding Impressions):
ಇದು ಅದ್ಭುತವಾದ ಚಾಲನಾ ಅನುಭವವನ್ನು ಒದಗಿಸಿತು. ಎಲ್ಲ ವಿಧವಾದ ರಸ್ತೆಗಳಲ್ಲೂ ಸುಲಭವಾಗಿ ಹೊಂದಾಣಿಕೆಯಾಗಬಲ್ಲದು. ಬೇಗನೇ ವೇಗ ವರ್ಧನೆಯನ್ನು ಪಡೆಯಬಲ್ಲದು. ತಿರುವುಗಳಲ್ಲಿ ಸಸ್ಪೆನ್ಷನ್ ಸೆಟಪ್ ಹಾಗೂ ಬ್ರೇಕಿಂಗ್ ಸಿಸ್ಟಮ್ ಉತ್ತಮವಾಗಿ ಕೆಲಸ ಮಾಡಿತು. ರೈಡಿಂಗ್ ಮೋಡ್‌ಗಳು ಕೂಡ ಚೆನ್ನಾಗಿವೆ. ಆದರೂ ಈ ಸ್ಕೂಟರ್‌ನಲ್ಲಿ ಒಂದಷ್ಟು ಸಣ್ಣ - ಪುಟ್ಟ ಸಮಸ್ಯೆಗಳನ್ನು ಗುರುತಿಸಬಹುದು.

ಒಟ್ಟಾರೆ ಅಭಿಪ್ರಾಯ (Overall Opinion):
ನೀವು ಕೈಗೆಟುಕುವ ಬೆಲೆಯಲ್ಲಿ ಹೊಸ ಸ್ಕೂಟರ್‌ವೊಂದನ್ನು ಖರೀದಿಸಲು ಹುಡುಕಾಟ ನಡೆಸುತ್ತಿದ್ದರೆ, ಹೊಸ 'ಸಿಂಪಲ್ ಒನ್ ಜೆನ್ 2' ಬೆಸ್ಟ್ ಚಾಯ್ಸ್ ಆಗಲಿದೆ. ದಿನಬಳಕೆಗೂ ಹೆಚ್ಚು ಸೂಕ್ತವಾಗಿದೆ. ಇದಕ್ಕೆ ಸಾಲು - ಸಾಲು ಎದುರಾಳಿಗಳಿವೆ. ಬಹುಮುಖ್ಯವಾಗಿ ಟಿವಿಎಸ್ ಆರ್ಬಿಟರ್ (TVS Orbiter), ಎಥರ್ ರಿಜ್ಟಾ (Ather Rizta) ಹಾಗೂ ಬಜಾಜ್ ಚೇತಕ್‌ಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.


Click it and Unblock the Notifications








