Kia Carens Clavis: ಹೊಸ ಕಿಯಾ ಕ್ಯಾರೆನ್ಸ್ ಕ್ಲಾವಿಸ್ ರಿವ್ಯೂ.. ಅದ್ಭುತ ಫ್ಯಾಮಿಲಿ ಕಾರಿದು, ಎಲ್ಲವೂ ಇದರಲ್ಲಿದೆ!

ದ.ಕೊರಿಯಾ ಮೂಲದ ಕಿಯಾ ಮೋಟಾರ್ಸ್ (Kia Motors) ವಿಶ್ವಾಸಾರ್ಹ ವಾಹನ ತಯಾರಕ ಕಂಪನಿಯಾಗಿ ಹೊರಹೊಮ್ಮಿದೆ. 2019ರಲ್ಲಿ ಸೆಲ್ಟೋಸ್ (Seltos) ಎಸ್‌ಯುವಿ ಬಿಡುಗಡೆಯೊಂದಿಗೆ ದೇಶೀಯ ಮಾರುಕಟ್ಟೆಗೂ ಪಾದಾರ್ಪಣೆ ಮಾಡಿತ್ತು. 2021ರ ಡಿಸೆಂಬರ್ 16ರಂದು ಇದೇ ಸೆಲ್ಟೋಸ್ ಪ್ಲಾಟ್‌ಫಾರ್ಮ್ ಆಧಾರಿತ ಕ್ಯಾರೆನ್ಸ್ (Clarens) ಎಂಪಿವಿಯನ್ನು ಅನಾವರಣಗೊಳಿಸಿತ್ತು. ಬರೋಬ್ಬರಿ 4 ವರ್ಷಗಳ ನಂತರ ಈ ಕಾರನ್ನು ನವೀಕರಣಕ್ಕೆ ಒಳಪಡಿಸಲಾಗಿದೆ. ಮೇ.8 ರಂದು ಮೇಲ್ದರ್ಜೆಗೇರಿಸಲಾದ 'ಕ್ಯಾರೆನ್ಸ್ ಕ್ಲಾವಿಸ್'ನ್ನು ಅದ್ದೂರಿಯಾಗಿ ಪರಿಚಯಿಸಲಾಗಿತ್ತು.

ಇತ್ತೀಚೆಗೆ, ಬೆಂಗಳೂರಿನಲ್ಲಿ ನಮ್ಮ 'ಡ್ರೈವ್‌ಸ್ಪಾರ್ಕ್' ತಂಡದ ಸದಸ್ಯರಿಗೆ ಹೊಚ್ಚ ಹೊಸ ಕಿಯಾ ಕ್ಯಾರೆನ್ಸ್ ಕ್ಲಾವಿಸ್ (Kia Carens Clavis) ಎಂಪಿವಿ ಟೆಸ್ಟ್ ಡ್ರೈವ್ ಮಾಡುವ ಅವಕಾಶ ಒದಗಿ ಬಂದಿತ್ತು. ಬನ್ನಿ, ಈ ಕಾರಿನ ವಿನ್ಯಾಸ ಹೇಗಿದೆ.. ಯಾವ ರೀತಿಯ ಕಾರ್ಯಕ್ಷಮತೆ ಹೊಂದಿದೆ.. ಜೊತೆಗೆ ವೈಶಿಷ್ಟ್ಯಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.

Kia Carens Clavis Review Specs Driving Impressions Design And Features Details

ಕಿಯಾ ಕ್ಯಾರೆನ್ಸ್ ಕ್ಲಾವಿಸ್ ಎಂಪಿವಿಯಲ್ಲಿ ಹೊಸತೇನಿದೆ: ಈ ಕಾರು ಆಕರ್ಷಕ ವಿನ್ಯಾಸವನ್ನು ಒಳಗೊಂಡಿದೆ. ಇದು ನೋಡುಗರ ಕಣ್ಣು ಕುಕ್ಕುವಂತಿದೆ. ಹಳೆಯ 'ಕ್ಯಾರೆನ್ಸ್' ಮಾಡೆಲ್‌ಗೆ ಹೋಲಿಕೆ ಮಾಡಿದರೆ, ಹೆಚ್ಚು ಪ್ರೀಮಿಯಂ ಲುಕ್‌ನ್ನು ಹೊಂದಿದೆ. ನೂತನ ಎಂಪಿವಿಯ ವಿನ್ಯಾಸದ ಒಂದಷ್ಟು ಅಂಶಗಳು 'ಕಿಯಾ ಇವಿ9' ಕಾರಿನಂತೆಯೂ ಇವೆ.

ಈ ಕಿಯಾ ಕ್ಯಾರೆನ್ಸ್ ಕ್ಲಾವಿಸ್ ಎಂಪಿವಿಯು ಮುಂಭಾಗ (ಫ್ರಂಟ್) ತ್ರೈ-ಅಂಗುಲರ್ ಶೇಪ್ಡ್ ಎಲ್ಇಡಿ ಹೆಡ್‌ಲೈಟ್‌ಗಳು, ಇಂಗ್ಲೀಷ್ ಭಾಷೆಯ 'ಎಲ್' ಅಕ್ಷಕರಕ್ಕೆ ಹೋಲಿಕೆಯಾಗಬಲ್ಲ ಎಲ್ಇಡಿ ಡಿಆರ್‌ಎಲ್‌ಗಳನ್ನು ಹೊಂದಿದೆ. ಹಾಗೆಯೇ ಗ್ರಿಲ್‌ ಮೇಲೆ ಚಲಿಸಬಲ್ಲ ಲೈಟ್‌ಬಾರ್‌ನ್ನು ಕೂಡ ನೋಡಬಹುದಾಗಿದೆ. ಮುಂದೆ & ಹಿಂದೆ ನವೀನವಾಗಿರುವ ಬಂಪರ್‌ಗಳನ್ನು ಪಡೆದಿದೆ.

Kia Carens Clavis Review Specs Driving Impressions Design And Features Details

ಇದರೊಟ್ಟಿಗೆ ಹೊಸ ಕಾರು ವಿನ್ಯಾಸ ದೃಷ್ಟಿಯಿಂದ 17-ಇಂಚಿನ ಡೈಮಂಡ್-ಕಟ್ ಡುಯಲ್ ಟೋನ್ ಅಲಾಯ್ ವೀಲ್‌ಗಳು ಮತ್ತು ರೂಫ್ ರೈಲ್‌ಗಳನ್ನು ಹೊಂದಿದೆ. ಹಿಂಭಾಗ (ರೇರ್) ಎಲ್ಇಡಿ ಟೈಲ್‌ಲೈಟ್‌ಗಳನ್ನು ಸಂಪರ್ಕಿಸಬಹುದಾದ ಲೈಟ್‌ ಬಾರ್‌ನ್ನು ಒಳಗೊಂಡಿದೆ. ಜೊತೆಗೆ ಗ್ರಾಹಕರನ್ನು ಸೆಳೆಯಬಲ್ಲ ಪ್ಯೂಟರ್ ಆಲಿವ್, ಗ್ರಾವಿಟಿ ಗ್ರೇ, ಸ್ಪಾರ್ಕ್ಲಿಂಗ್ ಸಿಲ್ವರ್, ಅರೋರಾ ಬ್ಲ್ಯಾಕ್ ಪರ್ಲ್, ಕ್ಲಿಯರ್ ವೈಟ್, ಗ್ಲೇಸಿಯರ್ ವೈಟ್ ಪರ್ಲ್ & ಇಂಪೀರಿಯಲ್ ಬ್ಲೂ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಲಭ್ಯವಿದೆ.

ನೂತನ ಕಿಯಾ ಕ್ಯಾರೆನ್ಸ್ ಕ್ಲಾವಿಸ್ ಎಂಪಿವಿ ಒಳಭಾಗದಲ್ಲೂ ಸಾಕಷ್ಟು ಬದಲಾವಣೆಗಳನ್ನು ಹೊಂದಿದೆ. ಬಹುಮುಖ್ಯವಾಗಿ ಡ್ಯಾಶ್‌ಬೋರ್ಡ್‌ ಸಾಕಷ್ಟು ನವೀನವಾಗಿದೆ. ವೈರ್‌ಲೆಸ್ ಆಂಡ್ರಾಯ್ಡ್ ಆಟೋ & ಆಪಲ್ ಕಾರ್‌ಪ್ಲೇ ಬೆಂಬಲಿಸಬಲ್ಲ 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್‌ನ್ನು ಒಳಗೊಂಡಿದೆ. 10.25-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ & ಫ್ಲಾಟ್-ಬಾಟಮ್ ಸ್ಟೀರಿಂಗ್ ವೀಲ್‌ನ್ನು ಹೊಂದಿದೆ.

Kia Carens Clavis Review Specs Driving Impressions Design And Features Details

ಇದು ಮಾತ್ರವಲ್ಲದೆ, ಪನೋರಮಿಕ್ ಸನ್‌ರೂಫ್, 4-ವೇ ಪವರ್ಡ್ ಡ್ರೈವರ್ ಸೀಟ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, 64-ಕಲರ್ ಆಂಬಿಯೆಂಟ್ ಲೈಟಿಂಗ್ ಹಾಗೂ 9-ಸ್ಪೀಕರ್ ಬೋಸ್ ಸೌಂಡ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಈ ಕಾರಿನ ಗರಿಷ್ಠ ಶ್ರೇಣಿ ರೂಪಾಂತರ (ಟಾಪ್ ಎಂಡ್ ವೇರಿಯೆಂಟ್) 360-ಡಿಗ್ರಿ ಕ್ಯಾಮೆರಾ ಮತ್ತು ಕಿಯಾದ ಕನೆಕ್ಟ್ಡ್ ಕಾರ್ ಟೆಕ್ ಸೂಟ್‌ನ್ನು ಒಳಗೊಂಡಿದೆ.

ಹೊಸ ಕ್ಯಾರೆನ್ಸ್ ಕ್ಲಾವಿಸ್ ಎಂಪಿವಿ ಪ್ರಯಾಣಿಕರಿಗೆ ಗರಿಷ್ಠ ಮಟ್ಟದ ರಕ್ಷಣೆಯನ್ನು ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಎಸ್‌ಸಿ (ಎಲೆಕ್ಟ್ರಿಕ್ ಸ್ಟೆಬಿಲಿಟಿ ಕಂಟ್ರೋಲ್), ಫ್ರಂಟ್ & ರೇರ್ ಪಾರ್ಕಿಂಗ್ ಸೆನ್ಸರ್ಸ್, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್), ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್ ಮತ್ತು ಆಲ್ ವೀಲ್ ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ.

Kia Carens Clavis Review Specs Driving Impressions Design And Features Details

ಈ ಕಾರು ವಿವಿಧ 7 ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿ ಖರೀದಿಗೆ ಸಿಗಲಿದೆ. ಪ್ರಮುಖವಾಗಿ ಹೆಚ್‌ಟಿಇ, ಹೆಚ್‌ಟಿಇ (ಒ), ಹೆಚ್‌ಟಿಕೆ, ಹೆಚ್‌ಟಿಕೆ ಪ್ಲಸ್, ಹೆಚ್‌ಟಿಕೆ ಪ್ಲಸ್ (ಒ), ಹೆಚ್‌ಟಿಎಕ್ಸ್ ಮತ್ತು ಹೆಚ್‌ಟಿಎಕ್ಸ್ ಪ್ಲಸ್ ಎಂಬ ರೂಪಾಂತರಗಳನ್ನು ಹೊಂದಿದೆ. ಇವುಗಳು ಪಡೆದುಕೊಂಡಿರುವ ವೈಶಿಷ್ಟ್ಯಗಳಲ್ಲಿ ಕೊಂಚ ಮಟ್ಟಿಗೆ ವ್ಯತ್ಯಾಸಗಳು ಇರಲಿವೆ.

ನೂತನ ಕಿಯಾ ಕ್ಯಾರೆನ್ಸ್ ಕ್ಲಾವಿಸ್ ಎಂಪಿವಿ 6/ 7 ಆಸನಗಳನ್ನು ಹೊಂದಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ನಡೆಸಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಪ್ರವಾಸಕ್ಕೆ ತೆರಳುವಾಗ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ದೊಡ್ಡ ಗಾತ್ರದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.

Kia Carens Clavis Review Specs Driving Impressions Design And Features Details

ಕಿಯಾ ಕ್ಯಾರೆನ್ಸ್ ಕ್ಲಾವಿಸ್ ಎಂಪಿವಿ ಕಾರ್ಯಕ್ಷಮತೆ: ಈ ಕಾರು ಸಾಕಷ್ಟು ಬಲಿಷ್ಠವಾದ 3 ಪವರ್‌ಟ್ರೇನ್‌ನ್ನು ಪಡೆದಿದೆ. ಇದರ 1.5-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್, 115 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 144 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಕೇವಲ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ ಆಯ್ಕೆಯನ್ನು ಮಾತ್ರ ಹೊಂದಿದೆ.

ಇನ್ನೊಂದು 1.5-ಲೀ. ಟರ್ಬೊ ಪೆಟ್ರೋಲ್ ಎಂಜಿನ್, 160 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 253 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಪಡೆದಿದೆ. 6-ಸ್ಪೀಡ್ ಮ್ಯಾನುವಲ್ ಹಾಗೂ 7-ಸ್ಪೀಡ್ ಡಿಸಿಟಿ (ಡುಯಲ್ ಕ್ಲಚ್ ಟ್ರಾಸ್ಮಿಷನ್) ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ.

Kia Carens Clavis Review Specs Driving Impressions Design And Features Details

ಮತ್ತೊಂದು 1.5-ಲೀ. ಡೀಸೆಲ್ ಎಂಜಿನ್‌ನ್ನು ಹೊಂದಿದೆ. 116 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 250 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 6-ಸ್ಪೀಡ್ ಮ್ಯಾನುವಲ್ & 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. ಆದರೆ ಈ ಕಾರಿನ ಮೈಲೇಜ್ ಕುರಿತಂತೆ ಹೆಚ್ಚಿನ ವಿವರಗಳು ಲಭ್ಯವಾಗಿಲ್ಲ.

ಚಾಲನಾ ಅನುಭವ: ನಮಗೆ ಟೆಸ್ಟ್ ಡ್ರೈವ್ ಮಾಡಲು ಹೊಸ ಕಿಯಾ ಕ್ಯಾರೆನ್ಸ್ ಕ್ಲಾವಿಸ್ ಎಂಪಿವಿಯ ಟರ್ಬೊ ಪೆಟ್ರೋಲ್ ಎಂಜಿನ್ & ಡಿಸಿಟಿ ಗೇರ್‌ಬಾಕ್ಸ್ ಹೊಂದಿರುವ ಮಾಡೆಲ್ ಲಭ್ಯವಾಗಿತ್ತು. ಇದು ಅದ್ಭುತವಾದ ಚಾಲನಾ ಅನುಭವ ಒದಗಿಸಿತು. ಈ ಕಾರಿನಲ್ಲಿ ಆರಾಮದಾಯಕವಾಗಿ ಕುಳಿತುಕೊಂಡು ಪ್ರಯಾಣ ಮಾಡಬಹುದಾಗಿದ್ದು, ಬೆಂಗಳೂರಿನ ಸಾಮಾನ್ಯ ರಸ್ತೆ ಹಾಗೂ ಕಚ್ಚಾ ರಸ್ತೆಗಳಲ್ಲಿಯೂ ಸುಲಭವಾಗಿ ಚಲಿಸಿತು.

Kia Carens Clavis Review Specs Driving Impressions Design And Features Details

ನೂತನ ಎಂಪಿವಿ ಇಕೋ, ನಾರ್ಮಲ್ ಮತ್ತು ಸ್ಪೋರ್ಟ್ ಎಂಬ ಡ್ರೈವಿಂಗ್ ಮೋಡ್‌ಗಳನ್ನು ಹೊಂದಿದೆ. ಪ್ರತಿಯೊಂದು ಮೋಡ್‌ನಲ್ಲೂ ಈ ಕಾರಿಗೆ ಸರಿ ಸಾಟಿಯೇ ಇಲ್ಲ ಎಂದು ಹೇಳಬಹುದು. ಗೇರ್‌ನ್ನು ಬೇಗ ಬದಲಾವಣೆ ಮಾಡಲು ಸಾಧ್ಯವಾಗಿತು. ಸ್ಟೀರಿಂಗ್ ವೀಲ್ ಕೂಡ ತುಂಬಾ ಚೆನ್ನಾಗಿದೆ. ಸಸ್ಪೆನ್ಷನ್ ಸೆಟಪ್ & ಬ್ರೇಕಿಂಗ್ ಸಿಸ್ಟಮ್‌ಗಳು ಸಹ ಒಳ್ಳೆಯ ರೀತಿಯಲ್ಲಿ ಕೆಲಸ ಮಾಡಿದವು.

ಒಟ್ಟಾರೆ ಅಭಿಪ್ರಾಯ: ಹೊಸ ಕಿಯಾ ಕ್ಯಾರೆನ್ಸ್ ಕ್ಲಾವಿಸ್ ಎಂಪಿವಿ ಸಾಕಷ್ಟು ಉತ್ತಮವಾಗಿದೆ ಎಂದು ಹೇಳಬಹುದು. ಈ ಕಾರನ್ನು ಇದೇ 23ರಂದು ಬಿಡುಗಡೆಗೊಳಿಸಲಾಗುತ್ತದೆ. ಆಸಕ್ತರು ರೂ.25,000 ಮುಂಗಡ ಹಣವನ್ನು ಪಾವತಿಸುವುದರೊಂದಿಗೆ ಆರ್ಡರ್ ಮಾಡಬಹುದು. ಈ ಕಾರು ರೂ.11 ಲಕ್ಷದಿಂದ ರೂ.19 ಲಕ್ಷ (ಎಕ್ಸ್-ಶೋರೂಂ) ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುವ ನಿರೀಕ್ಷೆಯಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Friday, May 16, 2025, 13:00 [IST]
English summary
Kia carens clavis review specs driving impressions design and features details
Read more on kia motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+