Maruti Victoris: ನಿನ್ನೆಯಷ್ಟೇ ಪರಿಚಯ.. 5-ಸ್ಟಾರ್ ಸೇಫ್ಟಿಯ ನೂತನ ಮಾರುತಿ ವಿಕ್ಟೋರಿಸ್‌ ಕುರಿತ ಪ್ರಮುಖಾಂಶಗಳಿವು!

ಬಹುನಿರೀಕ್ಷಿತ ಮಾರುತಿ ಸುಜುಕಿ ವಿಕ್ಟೋರಿಸ್ (Maruti Suzuki Victoris) ಕಾರನ್ನು ಬುಧವಾರವಷ್ಟೇ ಅನಾವರಣಗೊಳಿಸಲಾಗಿದೆ. ಇದೊಂದು ಎಸ್‌ಯುವಿಯಾಗಿದೆ. ಅರೆನಾ ಡೀಲರ್‌ಶಿಪ್ ಮೂಲಕ ಮಾರಾಟಗೊಳಿಸಲಾಗುತ್ತದೆ. ಈ ಕಾರು ಅತ್ಯಾಧುನಿಕ ವಿನ್ಯಾಸವನ್ನು ಹೊಂದಿದ್ದು, ನೋಡುಗರನ್ನು ಸೆಳೆಯುವಂತಿದೆ. ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಕೈಗಟುಕುವ ಬೆಲೆಯಲ್ಲಿಯೂ ಬಿಡುಗಡೆಯಾಗುವ ಸಾಧ್ಯತೆಯಿದೆ. ನಾವಿಲ್ಲಿ ನೂತನ 'ವಿಕ್ಟೋರಿಸ್'ನ ನಿರೀಕ್ಷಿತ ದರ ಹಾಗೂ ವಿಶೇಷತೆಗಳ ಕುರಿತಂತೆ ಪ್ರಮುಖಾಂಶಗಳು ಏನೆಂಬುದನ್ನು ತಿಳಿಸಿಕೊಟ್ಟಿದ್ದೇವೆ.

ಬೆಲೆ & ರೂಪಾಂತರಗಳು (Price & Variants):

ಹೊಚ್ಚ ಹೊಸ ಮಾರುತಿ ವಿಕ್ಟೋರಿಸ್ ಎಸ್‌ಯುವಿ, ಬಜೆಟ್ ಬೆಲೆಯಲ್ಲಿ ಮಾರಾಟಕ್ಕೆ ಬರುವ ನಿರೀಕ್ಷೆಯಿದೆ. ರೂ.12 ಲಕ್ಷ (ಎಕ್ಸ್-ಶೋರೂಂ) ದರದಲ್ಲಿ ಬಿಡುಗಡೆಯಾಗಬಹುದು ಎಂದು ಅಂದಾಜಿಸಲಾಗಿದೆ. ಈಗಾಗಲೇ, ಬುಕ್ಕಿಂಗ್ ಶುರುವಾಗಿದ್ದು, ಆಸಕ್ತರು, ಕಂಪನಿಯ ಅಧಿಕೃತ ವೆಬ್‌ಸೈಟ್‌ ಅಥವಾ ಸಮೀಪದ ಡೀಲರ್‌ಶಿಪ್‌ಗೆ ಭೇಟಿ ನೀಡಿ, ರೂ.11,000 ಮುಂಗಡ ಹಣ ಪಾವತಿಸಿ, ಆರ್ಡರ್ ಮಾಡಬಹುದು. ಇದು ಎಲ್ಎಕ್ಸ್ಐ, ವಿಎಕ್ಸ್ಐ, ಜಡ್ಎಕ್ಸ್ಐ, ಜಡ್ಎಕ್ಸ್ಐ (ಒ), ಜಡ್ಎಕ್ಸ್ಐ ಪ್ಲಸ್ ಹಾಗೂ ಜಡ್ಎಕ್ಸ್ಐ (ಒ) ಪ್ಲಸ್ ಎಂಬ ರೂಪಾಂತರಗಳೊಂದಿಗೂ ಸಿಗುತ್ತದೆ.

New Maruti Suzuki Victoris Suv Top Things You Should Must Know

ವಿನ್ಯಾಸ & ಬಣ್ಣಗಳು (Design):

ಈ ಕಾರು ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದೆ. ಉತ್ತಮವಾದ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಸ್ಕ್ವೇರ್ಡ್ ಆಫ್ ವೀಲ್ ಆರ್ಚ್‌ಗಳು, ಶಾರ್ಕ್ ಫಿನ್ ಆಂಟೆನಾ, ಎಲ್ಇಡಿ ಟೈಲ್‌ಲ್ಯಾಂಪ್‌ಗಳು ಮತ್ತು 18-ಇಂಚಿನ ಡುಯಲ್ ಟೋನ್ ಅಲಾಯ್ ವೀಲ್‌ಗಳನ್ನು ಪಡೆದಿದೆ.

ಬಣ್ಣಗಳು & ಸುತ್ತಳತೆ (Colors & Dimensions):

ಇದು ಆರ್ಕ್ಟಿಕ್ ವೈಟ್, ಸ್ಪ್ಲೆಂಡಿಡ್ ಸಿಲ್ವರ್, ಎಟರ್ನಲ್ ಬ್ಲೂ, ಸಿಜ್ಲಿಂಗ್ ರೆಡ್, ಬ್ಲೂಯಿಶ್ ಬ್ಲ್ಯಾಕ್, ಮ್ಯಾಗ್ಮಾ ಗ್ರೇ ಮತ್ತು ಮಿಸ್ಟಿಕ್ ಗ್ರೀನ್ ಒಳಗೊಂಡಂತೆ ಹಲವು ಬಣ್ಣಗಳೊಂದಿಗೂ ದೊರೆಯುತ್ತದೆ. 4,360 ಎಂಎಂ ಉದ್ದ, 1,655 ಎಂಎಂ ಅಗಲ ಮತ್ತು 1,795 ಎಂಎಂ ಎತ್ತರವಿದೆ. ಜೊತೆಗೆ 2,600 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ.

New Maruti Suzuki Victoris Suv Top Things You Should Must Know

ಆಸನ ಆಯ್ಕೆ (Seating Capacity):

ನೂತನ ಮಾರುತಿ ವಿಕ್ಟೋರಿಸ್ ಎಸ್‌ಯುವಿ 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ ದೊಡ್ಡ ಗಾತ್ರದ ಬೂಟ್ ಸ್ಪೇಸ್‌ನ್ನು ಪಡೆದಿದೆ.

ಕಾರ್ಯಕ್ಷಮತೆ & ಮೈಲೇಜ್ (Performance & Mileage):

ಹೊಸ ವಿಕ್ಟೋರಿಸ್ ಕಾರು ಬಲಿಷ್ಠವಾದ 3 ಪವರ್‌ಟ್ರೇನ್‌ನ್ನು ಹೊಂದಿದೆ. 1.5-ಲೀಟರ್ ಮೈಲ್ಡ್ ಹೈಬ್ರಿಡ್ ಪೆಟ್ರೋಲ್, 1.5-ಲೀಟರ್ ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಹಾಗೂ 1.5-ಲೀಟರ್ ಪೆಟ್ರೋಲ್/ಸಿಎನ್‌ಜಿ ಎಂಜಿನ್‌ ಆಯ್ಕೆಯನ್ನು ಪಡೆದಿದೆ. 5-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್ ಹಾಗೂ ಇ-ಸಿವಿಟಿ ಗೇರ್‌ಬಾಕ್ಸ್‌ನ್ನು ಪಡೆದಿದೆ. 19 ರಿಂದ 28 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ.

New Maruti Suzuki Victoris Suv Top Things You Should Must Know

ವೈಶಿಷ್ಟ್ಯಗಳು (Features):

ಇದರ ಕ್ಯಾಬಿನ್ ವಿನ್ಯಾಸವು ಉತ್ತಮವಾಗಿದೆ. ಬಹುಮುಖ್ಯವಾಗಿ 10.1-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ಪನೋರಮಿಕ್ ಸನ್‌ರೂಫ್, 64-ಕಲರ್ ಆಂಬಿಯೆಂಟ್ ಲೈಟಿಂಗ್, ವೈರ್‌ಲೆಸ್ ಫೋನ್ ಚಾರ್ಜರ್ ಮತ್ತು ಆಟೋ ಎಸಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

ಸುರಕ್ಷತಾ ವೈಶಿಷ್ಟ್ಯಗಳು (Safety Features):

ಈ ಕಾರನ್ನು 'ಭಾರತ್ ಎನ್‌ಸಿಎಪಿ' ಅತ್ಯಂತ ಸುರಕ್ಷಿತ ಕಾರೆಂದು ತೀರ್ಮಾನಿಸಿದ್ದು, 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ನೀಡಿದೆ. ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು 360-ಡಿಗ್ರಿ ಕ್ಯಾಮೆರಾ ಒಳಗೊಂಡಂತೆ ಹಲವು ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಪಡೆದಿದೆ.

ಪ್ರತಿಸ್ಪರ್ಧಿ ಕಾರುಗಳು (Rival cars)

ದೇಶೀಯ ಮಾರುಕಟ್ಟೆಯಲ್ಲಿ 'ಮಾರುತಿ ವಿಕ್ಟೋರಿಸ್'ಗೆ ಸಾಲು ಸಾಲು ಪ್ರತಿಸ್ಪರ್ಧಿಗಳಿವೆ. ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೋಸ್, ಟಾಟಾ ಕರ್ವ್, ಹೋಂಡಾ ಎಲಿವೇಟ್, ಟಾಟಾ ನೆಕ್ಸಾನ್‌, ಹ್ಯುಂಡೈ ವೆನ್ಯೂ, ಕಿಯಾ ಸೋನೆಟ್ ಹಾಗೂ ಸ್ಕೋಡಾ ಕುಶಾಕ್‌ನಂತಹ ಜನಪ್ರಿಯ ಕಾಂಪ್ಯಾಕ್ಟ್ ಎಸ್‌ಯುವಿಗಳು ಪ್ರಬಲವಾದ ಎದುರಾಳಿಯಾಗಿವೆ.

More from DriveSpark

Article Published On: Thursday, September 4, 2025, 8:30 [IST]
English summary
New maruti suzuki victoris suv top things you should must know
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+