Tata Harrier Petrol Review: ಬಿಡುಗಡೆಯೇ ಆಗಿಲ್ಲ, ಹೊಸ ಟಾಟಾ ಹ್ಯಾರಿಯರ್ ಪೆಟ್ರೋಲ್ ರಿವ್ಯೂ.. ಮೈಲೇಜ್ ಎಷ್ಟು?

ಟಾಟಾ ಹ್ಯಾರಿಯರ್ (Tata Harrier) ಜನಪ್ರಿಯ ಮಿಡ್-ಸೈಜ್ ಎಸ್‌ಯುವಿಯಾಗಿದೆ. 2019ರಲ್ಲಿ ಮೊದಲ ಬಾರಿಗೆ ದೇಶೀಯವಾಗಿ ಮಾರುಕಟ್ಟೆಗೆ ಪರಿಚಯಿಸಲಾಗಿತು. ಅಂದಿನಿಂದ ಇಂದಿನವರೆಗೆ ಸ್ಪರ್ಧಾತ್ಮಕ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ. ಗ್ರಾಹಕರು ಕೂಡ ಇಷ್ಟಪಟ್ಟು ಕೊಂಡುಕೊಳ್ಳುತ್ತಿದ್ದಾರೆ. ಇದು 'ಡೀಸೆಲ್' ಎಂಜಿನ್‌ ಆಯ್ಕೆಯಲ್ಲಿ ಮಾತ್ರ ಖರೀದಿಗೆ ದೊರೆಯುತ್ತದೆ. ಸದ್ಯ, ಈ ಕಾರನ್ನು 'ಪೆಟ್ರೋಲ್' ಪವರ್‌ಟ್ರೇನ್‌ನೊಂದಿಗೆ ನವೀಕರಿಸಲಾಗಿದೆ. ಅತಿ ಶೀಘ್ರದಲ್ಲೇ ಅದ್ದೂರಿಯಾಗಿಯೂ ಬಿಡುಗಡೆಗೊಳಿಸಲಾಗುತ್ತದೆ.

ಈಚೆಗೆ ನಮ್ಮ 'ಡ್ರೈವ್‌ಸ್ಪಾರ್ಕ್' ತಂಡಕ್ಕೆ ಹೊಚ್ಚ ಹೊಸ 'ಟಾಟಾ ಹ್ಯಾರಿಯರ್' ಪೆಟ್ರೋಲ್ ಕಾರು ಟೆಸ್ಟ್ ಡ್ರೈವ್ ನಡೆಸುವುದಕ್ಕೆ ಲಭ್ಯವಾಗಿತ್ತು. ಬನ್ನಿ, ಈ ನೂತನ ಎಸ್‌ಯುವಿಯ ವಿನ್ಯಾಸವೇನು.. ವೈಶಿಷ್ಟ್ಯಗಳೇನು.. ಹೇಗೆ ಕಾರ್ಯ ನಿರ್ವಹಿಸುತ್ತದೆ ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.

Tata Harrier Petrol Review Design Specs Features And Driving Impressions Details

ವಿನ್ಯಾಸ (Design):

ಹೊಸ ಟಾಟಾ ಹ್ಯಾರಿಯರ್ ಪೆಟ್ರೋಲ್ ಎಸ್‌ಯುವಿಯು ಹೆಚ್ಚು ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಹೊಂದಿದೆ. ಡೀಸೆಲ್ ಚಾಲಿತ ಹ್ಯಾರಿಯರ್‌ಗೆ ಹೋಲಿಕೆ ಮಾಡಿದರೆ, ಸಣ್ಣ - ಪುಟ್ಟ ಬದಲಾವಣೆಗಳಾಗಿವೆ. ಮುಂಭಾಗ (ಫ್ರಂಟ್) ಅತ್ಯುತ್ತಮವಾದ ಗ್ರಿಲ್, ಟಾಟಾ ಲೋಗೋ, ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳನ್ನು ಒಳಗೊಂಡಿದೆ.

ಇದರೊಂದಿಗೆ ಸ್ಟೈಲಿಶ್ ಆಗಿರುವ ರೂಫ್ ರೈಲ್, ಶಾರ್ಕ್ ಫಿನ್ ಆಂಟೆನಾ, ಎಲ್ಇಡಿ ಟೈಲ್ ಲೈಟ್‌ಗಳು, ಸಿಲ್ವರ್ ಕಲರ್‌ನ ಸ್ಕಫ್ ಪ್ಲೇಟ್‌ನ್ನು ಹೊಂದಿದೆ. 18 ಇಂಚಿನ ಗ್ಲಾಸ್ ಬ್ಲ್ಯಾಕ್ ಅಲಾಯ್ ವೀಲ್‌ಗಳನ್ನು ಪಡೆದಿದೆ. ಜೊತೆಗೆ ವಿವಿಧ ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿಯೂ ಸಿಗಲಿದೆ.

Tata Harrier Petrol Review Design Specs Features And Driving Impressions Details

ಸುತ್ತಳತೆ (Dimensions):

ಈ ಕಾರು ಸಾಕಷ್ಟು ವಿಶಾಲವಾಗಿದೆ. 4,605 ಮಿ.ಮೀ ಉದ್ದ, 1,922 ಮಿ.ಮೀ ಅಗಲ ಹಾಗೂ 1,718 ಮಿ.ಮೀ ಎತ್ತರವಿದೆ. 205 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2741 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ.

ಆಸನ ಆಯ್ಕೆ ಬೂಟ್ ಸ್ಪೇಸ್‌ (Seating Capacity & Boot Space):

ನೂತನ 'ಟಾಟಾ ಹ್ಯಾರಿಯರ್' 5 ಆಸನ ಆಯ್ಕೆ ವ್ಯವಸ್ಥೆಯನ್ನು ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ದೂರದ ಊರುಗಳಿಗೆ ಪ್ರವಾಸಕ್ಕೆ ಹೋಗುವ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 445 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ.

Tata Harrier Petrol Review Design Specs Features And Driving Impressions Details

ಕಾರ್ಯಕ್ಷಮತೆ (Performance):

ಇದು ಬಲಿಷ್ಠವಾದ ಪವರ್‌ಟ್ರೇನ್‌ನ್ನು ತನ್ನದಾಗಿಸಿಕೊಂಡಿದೆ. 1.5-ಲೀಟರ್ ಜಿಡಿಐ ಟರ್ಬೊ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 168 ರಿಂದ 170 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 280 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಹೊಂದಿದೆ. 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 16.8 ಕಿಲೋಮೀಟರ್‌ವರೆಗೆ ಮೈಲೇಜ್ ನೀಡಬಹುದು ಎಂದು ಅಂದಾಜಿಸಲಾಗಿದೆ. 50 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‍ನ್ನು ತನ್ನದಾಗಿಸಿಕೊಂಡಿದೆ.

ಒಳಾಂಗಣ & ವೈಶಿಷ್ಟ್ಯಗಳು (Interior & Features):

ಈ ಕಾರಿನ ಕ್ಯಾಬಿನ್ ವಿನ್ಯಾಸವು ಉತ್ತಮವಾಗಿದೆ. ಪ್ರತಿಯೊಬ್ಬರ ಕಣ್ಣು ಕುಕ್ಕುವಂತಿದೆ. 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, 10-ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್, ಡುಯಲ್ ಜೋನ್ ಆಟೋಮೆಟಿಕ್ ಎಸಿ, ವೈರ್‌ಲೆಸ್ ಫೋನ್ ಚಾರ್ಜಿಂಗ್ ಹಾಗೂ ಪನೊರೊಮಿಕ್ ಸನ್‌ರೂಫ್‌ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

Tata Harrier Petrol Review Design Specs Features And Driving Impressions Details

ಸುರಕ್ಷತಾ ವೈಶಿಷ್ಟ್ಯಗಳು (Safety Features):

ಹೊಸ 'ಟಾಟಾ ಹ್ಯಾರಿಯರ್' ಪೆಟ್ರೋಲ್ ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಬಲ್ಲದು. ಸುರಕ್ಷತೆಯ ದೃಷ್ಟಿಯಿಂದ 7-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಇಎಸ್​​ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.

ಚಾಲನಾ ಅನುಭವ (Driving Impressions):

ಇದು ಅತ್ಯದ್ಭುತವಾದ ಚಾಲನಾ ಅನುಭವವನ್ನು ಒದಗಿಸಿತು. ಎಲ್ಲ ವಿಧದ ರಸ್ತೆಗಳಿಗೂ ಸುಲಭವಾಗಿ ಹೊಂದಾಣಿಕೆಯಾಗಬಲ್ಲದು. ನಾರ್ಮಲ್, ಸ್ಪೋರ್ಟ್ ಹಾಗೂ ಇಕೋ ಎಂಬ ಮೂರು ಡ್ರೈವಿಂಗ್ ಮೋಡ್‌ಗಳನ್ನು ಒಳಗೊಂಡಿದೆ. ತಿರುವುಗಳಲ್ಲಿಯೂ ಉತ್ತಮವಾಗಿ ಸಂಚರಿಸಿತು. ಸಸ್ಪೆನ್ಷನ್ ಸೆಟಪ್ & ಬ್ರೇಕಿಂಗ್ ಸಿಸ್ಟಮ್‌ಗಳು ಕೂಡ ಚೆನ್ನಾಗಿಯೇ ಕೆಲಸ ಮಾಡಿದವು.

Tata Harrier Petrol Review Design Specs Features And Driving Impressions Details

ಒಟ್ಟಾರೆ ಅಭಿಪ್ರಾಯ (Overall Opinion):

ನೂತನ 'ಟಾಟಾ ಹ್ಯಾರಿಯರ್' ಪೆಟ್ರೋಲ್ ರೂ.15.49 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿರುವ ನಿರೀಕ್ಷೆಯಿದೆ. ಅತ್ಯಾಧುನಿಕವಾದ ವಿನ್ಯಾಸ ಹಾಗೂ ನಾನಾ ಬಗೆಯ ಭರಪೂರ ವೈಶಿಷ್ಟ್ಯಗಳನ್ನು ಪಡೆದಿದೆ. ಹೊಸದೊಂದು ಎಸ್‌ಯುವಿ ಖರೀದಿಸಲು ಹುಡುಕಾಟ ನಡೆಸುವವರಿಗೆ ಬೆಸ್ಟ್ ಚಾಯ್ಸ್ ಆಗಲಿದೆ. ಇದಕ್ಕೆ ಎಂಜಿ ಹೆಕ್ಟರ್ ಪ್ಲಸ್, ಜೀಪ್ ಕಂಪಾಸ್ ಹಾಗೂ ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.

More from DriveSpark

Article Published On: Monday, December 22, 2025, 12:00 [IST]
English summary
Tata harrier petrol review design specs features and driving impressions details
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+