Tata Safari Review: ಗಜ ಗಾತ್ರದ ಕಾರಿದು.. ನೂತನ ಟಾಟಾ ಸಫಾರಿ ಪೆಟ್ರೋಲ್ ಡಾರ್ಕ್ ಎಡಿಷನ್ ರಿವ್ಯೂ.. ಹೇಗಿದೆ ಗೊತ್ತಾ?
ಟಾಟಾ ಸಫಾರಿ (Tata Safari) ಜನಮೆಚ್ಚಿದ ಎಸ್‌ಯುವಿಯಾಗಿದೆ. ಇದು ನೋಡಲು ತುಂಬಾ ಚೆನ್ನಾಗಿದ್ದು, ಭರಪೂರ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಪ್ರತಿ ತಿಂಗಳು ಉತ್ತಮ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ. ಗ್ರಾಹಕರು ಕೂಡ ನಾ ಮುಂದು - ತಾ ಮುಂದು ಎಂಬಂತೆ ಇಷ್ಟಪಟ್ಟು ಕೊಂಡುಕೊಳ್ಳುತ್ತಿದ್ದಾರೆ. ಸದ್ಯ, ಈ ಕಾರನ್ನು ಹೊಸ ರೂಪದಲ್ಲಿ ಕಂಪನಿಯು ಮಾರಾಟಕ್ಕೆ ತರಲಿದೆ. ಅದಕ್ಕಾಗಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ.
ಕೆಲವೇ ದಿನಗಳ ಹಿಂದೆ, ನಮ್ಮ 'ಡ್ರೈವ್‌ಸ್ಪಾರ್ಕ್' ತಂಡಕ್ಕೆ ನೂತನ ಟಾಟಾ ಸಫಾರಿ ಪೆಟ್ರೋಲ್ ಡಾರ್ಕ್ ಎಡಿಷನ್ (Tata Safari Petrol Dark Edition), ಟೆಸ್ಟ್ ಡ್ರೈವ್ ನಡೆಸುವುದಕ್ಕೆ ಲಭ್ಯವಾಗಿತ್ತು. ಬನ್ನಿ, ಈ ಎಸ್‌ಯುವಿಯ ವಿನ್ಯಾಸವೇನು.. ವೈಶಿಷ್ಟ್ಯಗಳೇನು.. ಯಾವ ರೀತಿ ಕಾರ್ಯ ನಿರ್ವಹಿಸುತ್ತದೆ ಎಂಬುದರ ಕುರಿತಂತೆ ಪ್ರತಿಯೊಂದು ವಿವರಗಳನ್ನು ತಿಳಿಯೋಣ.

ಹೊರಭಾಗದ ವಿನ್ಯಾಸ (Outside Design):
ಇದು ತುಂಬಾ ಅಚ್ಚುಕಟ್ಟಾದ ವಿನ್ಯಾಸ ಹೊಂದಿದ್ದು, ನೋಡುಗರ ಕಣ್ಣು ಕುಕ್ಕುವಂತಿದೆ. ಬಹುತೇಕ ಸ್ಟ್ಯಾಂಡರ್ಡ್ ಸಫಾರಿಗೆ ಹೋಲಿಕೆಯಾಗಲಿದ್ದು, ಸ್ಟೈಲಿಶ್ ಲುಕ್ ಹೊಂದಿದೆ. ಡಾರ್ಕ್ ಎಡಿಷನ್ ಆಗಿರುವುದರಿಂದ ಬ್ಲ್ಯಾಕ್ & ರೆಡ್ ಕಲರ್ ಹೆಚ್ಚು ಹೈಲೆಟ್ ಆಗಿದೆ. ಇದರೊಂದಿಗೆ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಸಫಾರಿ ಬ್ಯಾಡ್ಜಿಂಗ್, ಫಾಗ್ ಲೈಟ್‌ಗಳು ಎಲ್ಇಡಿ ಟೈಲ್ ಲ್ಯಾಂಪ್‌ಗಳು ಮತ್ತು 19-ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದಿದೆ.
ಸುತ್ತಳತೆ (Dimensions):
ಹೊಚ್ಚ ಹೊಸ 'ಟಾಟಾ ಸಫಾರಿ ಪೆಟ್ರೋಲ್ ಡಾರ್ಕ್ ಎಡಿಷನ್' ಎಸ್‌ಯುವಿಯು ಸಾಕಷ್ಟು ವಿಶಾಲವಾಗಿದೆ. 4,668 ಮಿ.ಮೀ ಉದ್ದ, 1,922 ಮಿ.ಮೀ ಅಗಲ ಮತ್ತು 1,795 ಮಿ.ಮೀ ಎತ್ತರವಿದೆ. ಜೊತೆಗೆ 205 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,741 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ.

ಆಸನ ಆಯ್ಕೆ ಬೂಟ್ ಸ್ಪೇಸ್ (Seating Capacity & Boot Space):
ಈ ಕಾರು ದೊಡ್ಡ ಕುಟುಂಬಗಳಿಗೆ ಹೆಚ್ಚು ಸೂಕ್ತವಾಗಿದೆ. 6/ 7 ಆಸನಗಳನ್ನು ಪಡೆದಿದ್ದು, ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ಪ್ರಯಾಣಿಕರು ದೂರದ ಊರುಗಳಿಗೆ ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಕೊಂಡೊಯ್ಯಲು 420 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.
ಕಾರ್ಯಕ್ಷಮತೆ (Performance):
ಇದು ನವೀನವಾದ ಪವರ್‌ಟ್ರೇನ್‌ನ್ನು ಹೊಂದಿದೆ. 1.5 ಲೀಟರ್ ಟಿಜಿಡಿಐ ಟರ್ಬೊ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 170 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 280 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 6-ಸ್ಪೀಡ್ ಮ್ಯಾನುಯಲ್ ಹಾಗೂ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ತನ್ನದಾಗಿಸಿಕೊಂಡಿದೆ. 14.8 ರಿಂದ 16.3 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡಬಹುದು ಎಂದು ಅಂದಾಜಿಸಲಾಗಿದೆ.

ಸ್ಟ್ಯಾಂಡರ್ಡ್ ಸಫಾರಿಯು 2-ಲೀಟರ್ ಡೀಸೆಲ್ ಎಂಜಿನ್‌ನ್ನು ಹೊಂದಿದೆ. 170 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 350 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಒಳಗೊಂಡಿದೆ. 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 15 ರಿಂದ 16 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ.
ಒಳಾಂಗಣ & ವೈಶಿಷ್ಟ್ಯಗಳು (Interior & Features):
ಈ ಕಾರಿನ ಕ್ಯಾಬಿನ್ ವಿನ್ಯಾಸವು ಉತ್ತಮವಾಗಿದೆ. ಬ್ಲ್ಯಾಕ್ & ರೆಡ್ ಕಲರ್ ಥೀಮ್‌ನ್ನು ಹೊಂದಿದೆ. 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25-ಇಂಚಿನ ಡಿಜಿಟಲ್ ಡ್ರೈವರ್ ಡಿಸ್ಪ್ಲೇ, 4-ಸ್ಪೋಕ್ ಸ್ಟೀರಿಂಗ್ ವೀಲ್, ವೈರ್‌ಲೆಸ್ ಫೋನ್ ಚಾರ್ಜಿಂಗ್, ಆಂಬಿಯೆಂಟ್ ಲೈಟಿಂಗ್, ಜೆಬಿಎಲ್ ಸೌಂಡ್ ಸಿಸ್ಟಮ್, ಸನ್‌ರೂಫ್ ಹಾಗೂ ಆಟೋಮೆಟಿಕ್ ಎಸಿಯಂತಹ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ.

ಸುರಕ್ಷತಾ ವೈಶಿಷ್ಟ್ಯಗಳು (Safety Features):
ಇದು ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 7-ಏರ್‌ಬ್ಯಾಗ್‌ಗಳು, ಲೆವೆಲ್ 2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು 360-ಡಿಗ್ರಿ ಸರೌಂಡ್-ವ್ಯೂ ಕ್ಯಾಮೆರಾವನ್ನು ಒಳಗೊಂಡಿದೆ.
ಚಾಲನಾ ಅನುಭವ (Driving Impressions):
ನೂತನ 'ಟಾಟಾ ಸಫಾರಿ ಪೆಟ್ರೋಲ್ ಡಾರ್ಕ್ ಎಡಿಷನ್' ಲೀಲಾಜಾಲವಾಗಿ ಸಂಚರಿಸಿತು. ಈ ಕಾರನ್ನು ಎಲ್ಲ ರಸ್ತೆಗಳಲ್ಲಿಯೂ ಸುಲಭವಾಗಿ ಓಡಿಸಲು ಸಾಧ್ಯವಾಗಲಿದೆ. ಸ್ಟೀರಿಂಗ್ ವೀಲ್ ಕೂಡ ಅದ್ಬುತವಾಗಿದ್ದು, ರಸ್ತೆಯ ಮೇಲೆ ಬಿಗಿಯಾದ ಹಿಡಿತ ಒದಗಿಸಲು ನೆರವಾಗಲಿದೆ. ಸಸ್ಪೆನ್ಷನ್ ಸೆಟಪ್ ಮತ್ತು ಬ್ರೇಕಿಂಗ್ ಸಿಸ್ಟಮ್‌ಗಳು ತುಂಬಾ ಚೆನ್ನಾಗಿ ಕೆಲಸ ಮಾಡಿದವು.

ಒಟ್ಟಾರೆ ಅಭಿಪ್ರಾಯ (Overall Opinion):
ಈ ಕಾರು ಅತಿ ಶೀಘ್ರದಲ್ಲೇ ಮಾರಾಟಕ್ಕೆ ಬರಲಿದೆ. ನಾನಾ ಬಗೆಯ ವೈಶಿಷ್ಟ್ಯಗಳನ್ನು ಹೊಂದಿರುವ ಬೃಹದಾಕಾರದ ಫ್ಯಾಮಿಲಿ ಎಸ್‌ಯುವಿ ಹುಡುಕುತ್ತಿರುವವರಿಗೆ ಬೆಸ್ಟ್ ಚಾಯ್ಸ್ ಆಗಲಿದೆ. ಇದಕ್ಕೆ ಸಾಲು - ಸಾಲು ಎದುರಾಳಿಗಳಿವೆ. ಬಹುಮುಖ್ಯವಾಗಿ, ಟೊಯೊಟಾ ಇನ್ನೋವಾ ಹೈಕ್ರಾಸ್ ಹಾಗೂ ಮಹೀಂದ್ರಾ ಸ್ಕಾರ್ಪಿಯೋ ಎನ್ ಪ್ರಬಲವಾದ ಪ್ರತಿಸ್ಪರ್ಧಿಯಾಗಲಿವೆ.


Click it and Unblock the Notifications








