Tata Sierra Suv Review: ಹೊಸ ಟಾಟಾ ಸಿಯೆರಾ ರಿವ್ಯೂ.. ಹೇಗಿದೆ ಗೊತ್ತಾ? ಜನ ಮುಗಿಬಿದ್ದು ಖರೀದಿಸುವುದು ಪಕ್ಕಾ!
ಟಾಟಾ ಮೋಟಾರ್ಸ್ (Tata motors), ಮೊದಲ ಬಾರಿಗೆ 1991ರಲ್ಲಿ 'ಸಿಯೆರಾ' ಕಾರನ್ನು ಅದ್ದೂರಿಯಾಗಿ ಪರಿಚಯಿಸಿತ್ತು. ಆದರೆ, ನಾನಾ ಕಾರಣಗಳಿಗೆ 2003ರಲ್ಲಿ ಈ ಕಾರಿನ ಮಾರಾಟವನ್ನು ಸ್ಥಗಿತಗೊಳಿಸಲಾಗಿತ್ತು. ಇದೇ ನವೆಂಬರ್ 25ರಂದು 'ಸಿಯೆರಾ'ವನ್ನು ಹೊಸ ರೂಪದಲ್ಲಿ ಬಿಡುಗಡೆಗೊಳಿಸಲಾಯಿತು. ಇದು ರೂ.11.49 ಲಕ್ಷದಿಂದ ರೂ.18.49 ಲಕ್ಷ (ಎಕ್ಸ್-ಶೋರೂಂ - ನವದೆಹಲಿ) ಬೆಲೆಯನ್ನು ಹೊಂದಿದೆ. ಸ್ಮಾರ್ಟ್ ಪ್ಲಸ್, ಪ್ಯೂರ್, ಪ್ಯೂರ್ ಪ್ಲಸ್, ಅಡ್ವೆಂಚರ್, ಅಡ್ವೆಂಚರ್ ಪ್ಲಸ್, ಅಕಾಂಪ್ಲಿಶ್ಡ್ ಹಾಗೂ ಅಕಾಂಪ್ಲಿಶ್ಡ್ ಪ್ಲಸ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಲಭ್ಯವಿದೆ.
ಈಚೆಗೆ ನಮ್ಮ 'ಡ್ರೈವ್‌ಸ್ಪಾರ್ಕ್' ತಂಡಕ್ಕೆ ಚಂಡೀಗಢದಲ್ಲಿ ಹೊಚ್ಚ ಹೊಸ ಟಾಟಾ ಸಿಯೆರಾ (Tata Sierra) ಎಸ್‌ಯುವಿ ಟೆಸ್ಟ್ ಡ್ರೈವ್ ನಡೆಸುವುದಕ್ಕೆ ಲಭ್ಯವಾಗಿತ್ತು. ಬನ್ನಿ.. ಈ ನೂತನ ಕಾರಿನ ವಿನ್ಯಾಸವೇನು.. ವೈಶಿಷ್ಟ್ಯಗಳೇನು.. ಹೇಗೆ ಕಾರ್ಯ ನಿರ್ವಹಿಸುತ್ತದೆ ಎಂಬುದರ ಕುರಿತಂತೆ ಎಲ್ಲ ವಿವರಗಳನ್ನು ತಿಳಿಯೋಣ.

ವಿನ್ಯಾಸ & ಬಣ್ಣಗಳು (Design & Colors):
ಇದು ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದ್ದು, ನೋಡುಗರ ಕಣ್ಣು ಕುಕ್ಕುವಂತಿದೆ. ಉತ್ತಮವಾದ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಪ್ರೊಜೆಕ್ಟರ್ ಫಾಗ್ ಲೈಟ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು, ಫ್ಲಶ್ ಫಿಟ್ಟಿಂಗ್ ಡೋರ್ ಹ್ಯಾಂಡಲ್‌ಗಳು, 17-ಇಂಚಿನ ಸ್ಟೀಲ್ ವೀಲ್‌ಗಳು ಅಥವಾ 19-ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದಿದೆ. ಅಂಡಮಾನ್ ಅಡ್ವೆಂಚರ್ (ಯೆಲ್ಲೋ), ಬೆಂಗಾಲ್ ರೂಜ್ (ರೆಡ್), ಕೂರ್ಗ್ ಕ್ಲೌಡ್ಸ್ (ಸಿಲ್ವರ್), ಮುನ್ನಾರ್ ಮಿಸ್ಟ್ (ಗ್ರೀನ್), ಮಿಂಟಲ್ ಗ್ರೇ ಹಾಗೂ ಪ್ರಿಸ್ಟೀನ್ ವೈಟ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.
ಸುತ್ತಳತೆ (Dimensions):
ಈ ಎಸ್‌ಯುವಿ ಹೆಚ್ಚು ವಿಶಾಲ ಗಾತ್ರದಲ್ಲಿದ್ದು, ಬೃಹದಾಕಾರದ ಕಾರಿನಂತೆ ಭಾಸವಾಗುತ್ತದೆ. 4,340 ಮಿ.ಮೀ ಉದ್ದ, 1,841 ಮಿ.ಮೀ ಅಗಲ ಮತ್ತು 1,715 ಮಿ.ಮೀ ಎತ್ತರವಿದೆ. 205 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,730 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ.

ಆಸನ ಆಯ್ಕೆ & ಬೂಟ್ ಸ್ಪೇಸ್ (Seating Capacity & Boot Space):
ಹೊಸ 'ಟಾಟಾ ಸಿಯೆರಾ' 5 ಆಸನಗಳನ್ನು ಹೊಂದಿದೆ. ಪ್ರಯಾಣಿಕರು ದೂರದ ಊರುಗಳಿಗೆ ಸುಲಭವಾಗಿ ಓಡಾಟ ನಡೆಸಬಹುದು. ವೀಕೆಂಡ್‌ಗಳಲ್ಲಿ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಕೊಂಡೊಯ್ಯಲು ಸಾಧ್ಯವಾಗುವಂತೆ 622 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ.
ಕಾರ್ಯಕ್ಷಮತೆ (Performance):
ಇದು ಶಕ್ತಿಶಾಲಿಯಾದ 3 ಪವರ್‌ಟ್ರೇನ್‌ನ್ನು ಹೊಂದಿದೆ. ಇದರ 1.5-ಲೀಟರ್ 4 ಸಿಲಿಂಡರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್, 6,000 ಆರ್‌ಪಿಎಂನಲ್ಲಿ 106 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 2,100 ಆರ್‌ಪಿಎಂನಲ್ಲಿ 145 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 6-ಸ್ಪೀಡ್ ಮ್ಯಾನುವಲ್ ಹಾಗೂ 7-ಸ್ಪೀಡ್ ಡಿಸಿಟಿ (ಡುಯಲ್ ಕ್ಲಚ್ ಟ್ರಾಸ್ಮಿಷನ್) ಗೇರ್‌ಬಾಕ್ಸ್‌ನ್ನು ತನ್ನದಾಗಿಸಿಕೊಂಡಿದೆ.

ಮತ್ತೊಂದು 1.5-ಲೀಟರ್ 4 ಸಿಲಿಂಡರ್ ಟರ್ಬೊ ಪೆಟ್ರೋಲ್ ಎಂಜಿನ್, 5,000 ಆರ್‌ಪಿಎಂನಲ್ಲಿ 160 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 4,000 ಆರ್‌ಪಿಎಂನಲ್ಲಿ 255 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. ಕೇವಲ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ.
ಇನ್ನೊಂದು 1.5-ಲೀಟರ್ 4 ಸಿಲಿಂಡರ್ ಡೀಸೆಲ್ ಎಂಜಿನ್, 4,000 ಆರ್‌ಪಿಎಂನಲ್ಲಿ 118 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 2,750 ಆರ್‌ಪಿಎಂನಲ್ಲಿ 260 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. ಈ ಕಾರು 17 ರಿಂದ 20 ಕಿ.ಮೀವರೆಗೆ ಮೈಲೇಜ್ ಕೊಡಬಹುದು ಎಂದು ಹೇಳಲಾಗಿದೆ.

ಒಳಾಂಗಣ & ವೈಶಿಷ್ಟ್ಯಗಳು (Interior & Features):
ಈ ಕಾರಿನ ಕ್ಯಾಬಿನ್ ವಿನ್ಯಾಸವು ಚೆನ್ನಾಗಿದೆ. ಅತ್ಯುತ್ತಮವಾದ ಡ್ಯಾಶ್‌ಬೋರ್ಡ್‌ನ್ನು ಒಳಗೊಂಡಿದೆ. ಟ್ರಿಪಲ್ ಸ್ಕ್ರೀನ್ ಸೆಟಪ್ (ಡಿಜಿಟಲ್ ಡ್ರೈವರ್ ಡಿಸ್ಪ್ಲೇ, ಟಚ್‌ಸ್ಕ್ರೀನ್ ಸೆಂಟ್ರಲ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಪ್ಯಾಸೆಂಜರ್ ಸೈಡ್ ಡಿಸ್ಪ್ಲೇ), ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಡುಯಲ್ ಝೋನ್ ಕ್ಲೇಮೇಟ್ ಕಂಟ್ರೋಲ್ ಸಿಸ್ಟಮ್, 12-ಸ್ಪೀಕರ್ ಬಿಜಿಎಲ್ ಸೌಂಡ್ ಸಿಸ್ಟಮ್, ಪುಶ್-ಬಟನ್ ಸ್ಟಾರ್ಟ್/ ಸ್ಟಾಪ್, ಆಟೋಮೆಟಿಕ್ ವೈಪರ್‌ಗಳು, ರೇರ್ ಎಸಿ ವೆಂಟ್‌ಗಳು, ಸನ್‌ರೂಫ್ ಹಾಗೂ ವೆಂಟಿಲೇಟೆಡ್ ಫ್ರಂಟ್ ಸೀಟ್‌ನಂತಹ ವೈಶಿಷ್ಟ್ಯಗಳನ್ನು ಪಡೆದಿದೆ.
ಸುರಕ್ಷತಾ ವೈಶಿಷ್ಟ್ಯಗಳು (Safety Features):
ಹೊಸ 'ಟಾಟಾ ಸಿಯೆರಾ' ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಬಲ್ಲದು. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

ಚಾಲನಾ ಅನುಭವ (Driving Impressions):
ನೂತನ 'ಟಾಟಾ ಸಿಯೆರಾ' ಅದ್ಭುತವಾದ ಚಾಲನಾ ಅನುಭವವನ್ನು ಒದಗಿಸಿತು. ಇದು ಲೀಲಾಜಾಲವಾಗಿ ಚಲಿಸಿತು. ಸ್ಟೀರಿಂಗ್ ವೀಲ್ ಉತ್ತಮವಾಗಿ ಕಾರ್ಯ ನಿರ್ವಹಿಸಬಲ್ಲದು. ಸಿಟಿ & ಸ್ಪೋರ್ಟ್ ಎಂಬ ಡ್ರೈವಿಂಗ್ ಮೋಡ್‌ಗಳನ್ನು ಹೊಂದಿದೆ. ಇವು ಚಾಲನೆಗೆ ತುಂಬಾ ಸಹಕಾರಿಯಾಗಿವೆ ಎಂದು ಹೇಳಬಹುದು.
ಈ ಕಾರನ್ನು ಯಾವುದೇ ರಸ್ತೆಯಲ್ಲಿ ಬೇಕಾದರೂ ಸುಲಭವಾಗಿ ಓಡಿಸಬಹುದು. ತಿರುವುಗಳಲ್ಲಿ ಸಸ್ಪೆನ್ಷನ್ ಸೆಟಪ್ ಹಾಗೂ ಬ್ರೇಕಿಂಗ್ ಸಿಸ್ಟಮ್‌ಗಳು ಅತ್ಯುತ್ತಮವಾಗಿ ಕೆಲಸ ಮಾಡಿದವು. ಲೆವೆಲ್-2 'ಎಡಿಎಎಸ್' ವೈಶಿಷ್ಟ್ಯವು ಚಾಲನೆ ಮಾಡುವಾಗ, ಚಾಲಕನ ಆತ್ಮ ವಿಶ್ವಾಸವನ್ನು ಹೆಚ್ಚಿಸುತ್ತದೆ.

ಒಟ್ಟಾರೆ ಅಭಿಪ್ರಾಯ (Overall Opinion):
ಹೊಸ 'ಸಿಯೆರಾ' ಬೆಲೆ ತಕ್ಕ ಉತ್ಪನ್ನವಾಗಿದೆ. ಹೊಸ ಕಾರು ಖರೀದಿ ಮಾಡುವವರಿಗೆ ಬೆಸ್ಟ್ ಚಾಯ್ಸ್ ಆಗಲಿದೆ. ಈ ಕಾರಿಗೆ ಡಿಸೆಂಬರ್ 16ರಿಂದ ಕಂಪನಿಯು ಬುಕ್ಕಿಂಗ್‌ನ್ನು ತೆಗೆದುಕೊಳ್ಳಲಿದೆ. 2026ರ ಜನವರಿ 15ರಿಂದ ವಿತರಣೆ ಕಾರ್ಯಕ್ಕೂ ಚಾಲನೆ ನೀಡಲಾಗುತ್ತದೆ.


Click it and Unblock the Notifications








