ತಿರುವಿನಲ್ಲಿ ತಪ್ಪಿದ ನಿಯಂತ್ರಣ; ಅನಿಲ ಸೋರಿಕೆಯಿಂದ ಸ್ಪೋಟ

ಇಡೀ ರಾಜ್ಯದ ಜನತೆಯನ್ನೇ ಬೆಚ್ಚಿ ಬೀಳಿಸುವಂತಹ ದುರಂತ ಘಟನೆಯೊಂದು ದಕ್ಷಿಣ ಕನ್ನಡ ಜಿಲ್ಲೆಯಿಂದ ವರದಿಯಾಗಿದೆ. ಪುತ್ತೂರು ತಾಲೂಕಿನ ಉಪ್ಪಿನಂಗಡಿಯ ಪರ್ನೆ ಬಳಿ ಅನಿಲ ಟ್ಯಾಂಕರ್ ಪಲ್ಟಿಯಾದ ಪರಿಣಾಮ ಏಳು ಮಂದಿ ಸಜೀವ ದಹನವಾಗಿದ್ದು, ಮೂರು ಮಂದಿಯ ಸ್ಥಿತಿ ಚಿಂತಾಜನಕವಾಗಿದೆ.

ಮಂಗಳೂರಿನ ಎಂಆರ್‌ಪಿಎಲ್‌ನಿಂದ ತೈಲ ತುಂಬಿಕೊಂಡು ಬೆಂಗಳೂರಿಗೆ ಸಾಗುತ್ತಿದ್ದ ತೈಲ ಟ್ಯಾಂಕರ್‌ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿತ್ತು. 16,000 ಸಾವಿರ ಲೀಟರ್‌ ಎಲ್‌ಪಿಜಿ ತೈಲ ತುಂಬಿದ ಟ್ಯಾಂಕರ್‌ ಉಪ್ಪಿನಂಗಡಿ ಸಮೀಪ 48ನೇ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿತ್ತು. ಟ್ಯಾಂಕರ್ ಪಲ್ಟಿ ಹೊಡೆದ ರಭಸಕ್ಕೆ ಅನಿಲ ಸೋರಿಕೆಯಾಗಿ ಬೆಂಕಿ ಹತ್ತಿಕೊಂಡಿತ್ತು. ಈ ಬೆಂಕಿಯು ಅಕ್ಕಪಕ್ಕದ ಹಲವು ಮನೆಗಳಿಗೂ ಆವರಿಸಿತ್ತು ಎಂಬುದು ಪ್ರಾಥಮಿಕ ತನಿಖೆ ವೇಳೆ ತಿಳಿದು ಬಂದಿದೆ.

ಘಟನೆಯಲ್ಲಿ ಅನಿಲ ಟ್ಯಾಂಕರ್ ಚಾಲಕ, ಕ್ಲೀನರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿರುವುದೇ ಟ್ಯಾಂಕರ್ ಪಲ್ಟಿ ಹೊಡೆಯಲು ಕಾರಣವೆನ್ನಲಾಗುತ್ತಿದೆ. ಘಟನೆಯಲ್ಲಿ ಒಂದು ಓಮ್ನಿ ಕಾರು ಹಾಗೂ ಟೆಂಪೊ ಸಂಪೂರ್ಣ ಭಸ್ನವಾಗಿದೆ. ಹಾಗಿದ್ದರೂ ಟೆಂಪೊ ಚಾಲಕ ಯಾವುದೇ ಪ್ರಾಣಪಾಯವಿಲ್ಲದೆ ಪಾರಾಗುವಲ್ಲಿ ಯಶಸ್ವಿಯಾಗಿದ್ದಾರೆ.

ಸ್ಥಳಕ್ಕೆ ಧಾವಿಸಿದ್ದ ಅಗ್ನಿಶಾಮಕ ವಾಹನಗಳು ನಡೆಸಿದ ನಿರಂತರ ಪ್ರಕ್ರಿಯೆ ಬಳಿಕ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿತ್ತು. ಘಟನೆಯಲ್ಲಿ ಗಾಯಗೊಂಡವರನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಈ ಅವಘಡದಿಂದಾಗಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ.
ತಾಜಾ ಸುದ್ದಿಗಾಗಿ ಟ್ವಿಟರ್‌ನಲ್ಲಿ ನಮ್ಮನ್ನು ಫಾಲೋ ಮಾಡಿರಿ

More from DriveSpark

Article Published On: Tuesday, April 9, 2013, 15:18 [IST]
English summary
A tanker that was carrying 16,000 litres of LPG from HPCL to Bangalore from the city overturned at Perne on national highway 75 near Uppinangady. As per the latest reports from the gas tanker accident spot, seven bodies have been recovered.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+