ಹೊಸ ಹ್ಯುಂಡೈ ಐ20 ಹಬ್ಬದ ಆವೃತ್ತಿಯಲ್ಲಿ ಬಿಡುಗಡೆ

By Nagaraja

ಮುಂಬರುವ ಹಬ್ಬದ ಆವೃತ್ತಿ ವೇಳೆಯಲ್ಲಿ ಹೊಚ್ಚ ಹೊಸತನದಿಂದ ಕೂಡಿರುವ ಹ್ಯುಂಡೈ ಐ20 ಫೇಸ್‌ಲಿಫ್ಟ್ ವರ್ಷನ್ ಬಿಡುಗಡೆಯಾಗಲಿದೆ. ವರದಿಗಳ ಪ್ರಕಾರ ಈ ದಕ್ಷಿಣ ಕೊರಿಯಾ ಮೂಲದ ವಾಹನ ತಯಾರಕ ಸಂಸ್ಥೆಯು ನವೆಂಬರ್ ತಿಂಗಳಲ್ಲಿ ತನ್ನ ಜನಪ್ರಿಯ ಹ್ಯುಂಡೈ ಐ20 ಫೇಸ್‌ಲಿಫ್ಟ್ ಆವೃತ್ತಿ ಬಿಡುಗಡೆ ಮಾಡಲಿದೆ.

ಕಳೆದ ಕೆಲವು ತಿಂಗಳುಗಳಲ್ಲಿ ಹಲವು ಬಾರಿ ಟೆಸ್ಟಿಂಗ್ ವೇಳೆ ಸೆರೆಸಿಕ್ಕಿರುವ ಹ್ಯುಂಡೈ ಐ20 ಫೇಸ್‌ಲಿಫ್ಟ್, ಆಕರ್ಷಕ ಮೈಬಣ್ಣವನ್ನು ಪಡೆದುಕೊಂಡಿದೆ. ಇದು ಗ್ರಾಹಕರ ಬೇಡಿಕೆಗಳಿಗಾನುಸಾರವಾಗಿ ಕೆಲವೊಂದು ಮಾರ್ಪಾಡುಗಳನ್ನು ಪಡೆದುಕೊಂಡಿದೆ.

Hyundai i20

ಇತ್ತೀಚೆಗಷ್ಟೇ ಲಾಂಚ್ ಆಗಿರುವ ಎಕ್ಸ್‌ಸೆಂಟ್ ಕಾಂಪಾಕ್ಟ್ ಸೆಡಾನ್ ಕಾರಿಗೆ ಹೆಚ್ಚಿನ ಬೇಡಿಕೆ ಕಂಡುಬಂದಿತ್ತು. ಇದರಂತೆ ಹ್ಯುಂಡೈ ಐ20 ಸಹ ಇದೇ ಹಾದಿಯಲ್ಲಿ ಸಾಗುವ ನಿರೀಕ್ಷೆಯನ್ನಿಟ್ಟುಕೊಂಡಿದೆ.

ಈ ಹಿಂದೆ 2015 ವರ್ಷಾರಂಭದಲ್ಲಿ ಬಿಡುಗಡೆಯಾಗುವ ಬಗ್ಗೆ ಯೋಜನೆಗಳಿದ್ದರೂ ಬಹುಬೇಗನೇ ಮಾರುಕಟ್ಟೆಗೆ ಪರಿಚಯಿಸಲು ಹ್ಯುಂಡೈ ನಿರ್ಧರಿಸಿದೆ. ಹಾಗೆಯೇ ಅಕ್ಟೋಬರ್ ತಿಂಗಳಲ್ಲಿ ನಡೆಯಲಿರುವ 2014 ಪ್ಯಾರಿಸೋ ಮೋಟಾರು ಶೋದಲ್ಲಿ ಪ್ರದರ್ಶನ ಕಾಣಲಿರುವ ಹ್ಯುಂಡೈ ಐ20 ತದಾ ಬಳಿಕ ಭಾರತ ಮಾರುಕಟ್ಟೆಗೆ ಪರಿಚಯವಾಗಲಿದೆ.

ಹ್ಯುಂಡೈ ಐ20 ಆವೃತ್ತಿಯಲ್ಲಿ ಫ್ಯೂಯಿಡಿಕ್ ಡಿಸೈನ್ ಕಾನ್ಸೆಪ್ಟ್ ಅನುಸರಿಸಲಾಗಿದೆ. ಇದು 1.2 ಲೀಟರ್ ಕಪ್ಪ ಎಂಜಿನ್ ಜತೆಗೆ 1.5 ಲೀಟರ್ ಡೀಸೆಲ್ ಎಂಜಿನ್ ಸಹ ಪಡೆದುಕೊಳಅಳಲಿದೆ. ಹಾಗೆಯೇ ಆಟೋಮ್ಯಾಟಿಕ್ ಹಾಗೂ 5 ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಪಡೆಯಲಿದೆ.

More from DriveSpark

Article Published On: Tuesday, May 27, 2014, 16:05 [IST]
English summary
Hyundai plan to launch the new facelifted i20 in November this year.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+