ದೀಪಾವಳಿ ಕೊಡುಗೆ; ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಸಾಧ್ಯತೆ
ಜಾಗತಿಕ ಕಚ್ಚಾ ತೈಲ ಬೆಲೆಗಳಲ್ಲಿ ಗಣನೀಯ ಇಳಿಕೆ ಕಂಡುಬಂದಿರುವ ಹಿನ್ನಲೆಯಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳಲ್ಲಿ ರು. 1.50ರಿಂದ 2.50ರಷ್ಟು ಇಳಿಕೆ ಮಾಡಲು ತೈಲ ಕಂಪನಿಗಳು ಚಿಂತನೆ ಮಾಡಿದೆ.
ಇದರೊಂದಿಗೆ ದೀಪಾವಳಿ ಹಬ್ಬವನ್ನು ಬರ ಮಾಡಿಕೊಳ್ಳುತ್ತಿರುವ ದೇಶದ ಗ್ರಾಹಕರಿಗೆ ಅತ್ಯುತ್ತಮ ಕೊಡುಗೆ ಲಭಿಸಲಿದೆ. ಜಾಗತಿಕ ಕಚ್ಚಾ ತೈಲ ಬೆಲೆ ಕಳೆದ ಎರಡು ವರ್ಷಗಳಲ್ಲೇ ಅತ್ಯಂತ ಕಡಿಮೆ ಅಂದರೆ ಪ್ರತಿ ಬ್ಯಾರೆಲ್‌ಗೆ 88 ಅಮೆರಿಕನ್ ಡಾಲರ್‌ಗಳಿಗೆ ಇಳಿಕೆಯಾಗಿತ್ತು.

ಇಂಡಿಯನ್ ಆಯಿಲ್ ಕಾರ್ಪೋರೇಷನ್ (ಐಒಸಿ) ನಿಕಟ ಮೂಲಗಳ ಪ್ರಕಾರ ಅಕ್ಟೋಬರ್ 15ರಂದು ಈ ಬಗ್ಗೆ ಶುಭ ಸುದ್ದಿ ಕೇಳಿಬರುವ ಸಾಧ್ಯತೆಯಿದೆ. ಇದಕ್ಕೂ ಮೊದಲು 2014 ಸೆಪ್ಟೆಂಬರ್ 30ರಂದು ಪೆಟ್ರೋಲ್ ಬೆಲೆಯನ್ನು ಇಳಿಕೆಗೊಳಿಸಿತ್ತು. ಆದರೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಮೆರಿಕ ಪ್ರವಾಸ ಕೈಗೊಂಡಿದ್ದರ ಹಿನ್ನಲೆಯಲ್ಲಿ ಡೀಸೆಲ್ ಬೆಲೆ ಕಡಿತವನ್ನು ತಡೆ ಹಿಡಿಯಲಾಗಿತ್ತು.
ಡೀಸೆಲ್ ದರ ಮೇಲೆ ಅನಿಯಂತ್ರಣ ಹೇರದಿರುವುದರಿಂದ ಬೆಲೆ ಕಡಿತಕ್ಕೆ ಸಂಬಂಧಿಸಿದಂತೆ ಕೇಂದ್ರ ಸರಕಾರದಿಂದ ಒಪ್ಪಿಗೆ ಪಡೆಯುವ ಅವಶ್ಯಕತೆಯಿದೆ. ಆದರೆ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಡೀಸೆಲ್ ದರ ಕಡಿತ ಘೋಷಣೆ ಇನ್ನಷ್ಟು ಮುಂದಕ್ಕೆ ಹೋಗುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ.


Click it and Unblock the Notifications








