ಪೆಟ್ರೋಲ್ ಬೆಲೆಯಲ್ಲಿ ಮತ್ತೆ ಇಳಿಕೆ ಸಾಧ್ಯತೆ
ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ದಾಖಲೆಯ ರೀತಿಯಲ್ಲಿ ಕುಸಿದಿರುವ ಹಿನ್ನೆಲೆಯಲ್ಲಿ ಪೆಟ್ರೋಲ್ ಬೆಲೆಯಲ್ಲಿ ಮಗದೊಮ್ಮೆ ಇಳಿಕೆಯಾಗುವ ಎಲ್ಲ ಸಾಧ್ಯತೆಗಳು ಕಂಡುಬರುತ್ತಿದೆ.
ಕಳೆದ ಆರು ವರ್ಷಗಳಲ್ಲೇ ಅಂತರಾಷ್ಟ್ರೀಯ ಕಚ್ಚಾ ತೈಲ ಬೆಲೆ ಅತ್ಯಂತ ಕಡಿಮೆ ಮಟ್ಟಕ್ಕೆ ತಲುಪಿದೆ. ಇದರ ಗರಿಷ್ಠ ಪ್ರಯೋಜನವನ್ನು ಗ್ರಾಹಕರಿಗೆ ತಲುಪಿಸುವುದು ಸರಕಾರದ ಕರ್ತವ್ಯವಾಗಿದೆ.

ಈ ನಿಟ್ಟಿನಲ್ಲಿ ಸಭೆ ಸೇರಲಿರುವ ಇಂಡಿಯನ್ ಆಯಿಲ್ ಕಾರ್ಪೋರೇಷನ್ ಬಳಕೆದಾರರಿಗೆ ಪೂರಕ ನಿಲುವು ವ್ಯಕ್ತಪಡಿಸುವ ಸಾಧ್ಯತೆಯಿದೆ. ಹಾಗೊಂದು ವೇಳೆ ಪೆಟ್ರೋಲ್ ಬೆಲೆಯಲ್ಲಿ ಇಳಿಕೆ ಕಂಡುಬಂದ್ದಲ್ಲಿ ಕಳೆದ ವರ್ಷ ಆಗಸ್ಟ್ ತಿಂಗಳ ಬಳಿಕ ಸತತ ಒಂಬತ್ತನೇ ಬಾರಿಗೆ ಬೆಲೆಯಲ್ಲಿ ಇಳಿಕೆಯಾಗಲಿದೆ.
ಪ್ರತಿ 15 ದಿನಕ್ಕೊಮ್ಮೆ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳ ಪರಿಷ್ಕರಣೆಗೆ ಸಂಬಂಧಿಸಿದಂತೆ ಸಭೆ ಸೇರಲಾಗುತ್ತದೆ. ಈ ಹಿಂದೆ ಜನವರಿ 1ರಂದು ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಎರಡು ರು.ಗಳಷ್ಟು ಹೆಚ್ಚಿಸಲಾಗಿತ್ತು. ಆದರೆ ಇದರಿಂದ ಬಳಕೆದಾರರ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಯಾವುದೇ ವ್ಯತ್ಯಾಸವುಂಟಾಗಿಲ್ಲ.


Click it and Unblock the Notifications








