ಬಿಡುಗಡೆಗೆ ದಿನಗಣನೆ ಶುರು- ಸ್ಪಾಟ್ ಟೆಸ್ಟಿಂಗ್ ನಡೆಸಿದ 2018ರ ಮಾರುತಿ ಸುಜುಕಿ ಸ್ವಿಫ್ಟ್
ಮಾರುತಿ ಸುಜುಕಿ 2018ರ ಸ್ವಿಫ್ಟ್ ಕಾರು ಆವೃತ್ತಿಯು ಬಿಡುಗಡೆಗೆ ಸಜ್ಜುಗೊಳ್ಳುತ್ತಿದ್ದು, ಈ ಮಧ್ಯೆ ಮುಂಬೈ ಹೊರವಲಯದಲ್ಲಿ ಸ್ಪಾಟ್ ಟೆಸ್ಟಿಂಗ್ ಕೈಗೊಂಡಿರುವುದು ಸ್ವಿಫ್ಟ್ ಪ್ರಿಯರ ಕುತೂಹಲಕ್ಕೆ ಕಾರಣವಾಗಿದೆ.
ಮಾರುತಿ ಸುಜುಕಿ 2018ರ ಸ್ವಿಫ್ಟ್ ಕಾರು ಆವೃತ್ತಿಯು ಬಿಡುಗಡೆಗೆ ಸಜ್ಜುಗೊಳ್ಳುತ್ತಿದ್ದು, ಈ ಮಧ್ಯೆ ಮುಂಬೈ ಹೊರವಲಯದಲ್ಲಿ ಸ್ಪಾಟ್ ಟೆಸ್ಟಿಂಗ್ ಕೈಗೊಂಡಿರುವುದು ಸ್ವಿಫ್ಟ್ ಪ್ರಿಯರ ಕುತೂಹಲಕ್ಕೆ ಕಾರಣವಾಗಿದೆ.

ಮಾರುತಿ ಸುಜುಕಿ ಬಿಡುಗಡೆ ಮಾಹಿತಿ ಪ್ರಕಾರ 2018ರ ಫೆಬ್ರುವರಿನಲ್ಲಿ ನಡೆಯಲಿರುವ ಆಟೋ ಮೇಳದಲ್ಲಿ ಭಾಗಿಯಾದ ನಂತರ ಹೊಸ ಸ್ವಿಫ್ಟ್ ಕಾರ್‌ನ್ನು ಭಾರತೀಯ ಮಾರುಕಟ್ಟೆಗೆ ಪರಿಚಯಲಿಸಲಿದ್ದು, ಮಾರ್ಚ್ ಮೊದಲ ವಾರವೇ ಹೊಸ ಕಾರು ಬಿಡುಗಡೆಯಾಗುವ ಸಾಧ್ಯತೆಗಳಿವೆ.

ಇನ್ನು ಬಿಡುಗಡೆಗೊಳ್ಳಲಿರುವ 2018ರ ಸ್ವಿಫ್ಟ್ ಆವೃತ್ತಿಯು ನೆಕ್ಸ್ಟ್ ಜನರೇಷನ್ ವೈಶಿಷ್ಟ್ಯತೆಗಳೊಂದಿಗೆ ನಿರ್ಮಾಣವಾಗಿದ್ದು, ಪ್ರಸಕ್ತ ಮಾರುಕಟ್ಟೆಯಲ್ಲಿರುವ ಸ್ವಿಫ್ಟ್ ಆವೃತ್ತಿಗಿಂತಲೂ ಸಾಕಷ್ಟು ಬದಲಾವಣೆಗಳನ್ನು ಪಡೆದುಕೊಂಡಿರುವುದು ಸ್ಪಾಟ್ ಟೆಸ್ಟಿಂಗ್ ವೇಳೆ ಬಹಿರಂಗಗೊಂಡಿದೆ.
Recommended Video


ಹೀಗಾಗಿ ಹಿಂದಿನ ಮಾದರಿಗಿಂತ ಹೊಸ ಆವೃತ್ತಿಯಲ್ಲಿ 50 ಕೆ.ಜಿ ತೂಕವನ್ನು ಕಡಿತಗೊಳಿಸಲಾಗಿದ್ದು, ಡಿಜೈರ್ ಕಂಪ್ಯಾಕ್ಟ್ ಹ್ಯಾಚ್‌ಬ್ಯಾಕ್ ಮಾದರಿಯಲ್ಲೇ ಹೊರ ವಿನ್ಯಾಸಗಳನ್ನು ಜೋಡಿಸುವ ಮೂಲಕ ಮಾರುತಿ ಸುಜುಕಿ ಪ್ರಿಯರಿಗೆ ಡಬಲ್ ಧಮಾಕಾ ನೀಡಲಾಗುತ್ತಿದೆ.

ಎಂಜಿನ್ ಸಾಮರ್ಥ್ಯ
1.2-ಲೀಟರ್ ಪೆಟ್ರೋಲ್ ಹಾಗೂ 1.3-ಲೀಟರ್ ಡೀಸೆಲ್ ಎಂಜಿನ್ ಪಡೆದುಕೊಳ್ಳಲಿರುವ ಮಾರುತಿ ಸುಜುಕಿ ಸ್ವಿಫ್ಟ್ ಹೊಸ ಆವೃತ್ತಿಯು, ಡೀಸೆಲ್ ಮಾದರಿಯಲ್ಲಿ 82-ಬಿಎಚ್‌ಪಿ ಹಾಗೂ 75-ಎನ್ಎಂ ಟಾರ್ಕ್ ಉತ್ಪಾದನಾ ಶಕ್ತಿ ಒದಗಿಸಲಾಗಿದೆ.
ತಪ್ಪದೇ ಓದಿ- ಬೆಂಗಳೂರಿನ ಪ್ರತಿಷ್ಠಿತ ಮಾರುತಿ ಸರ್ವಿಸ್ ಸ್ಟೇಷನ್ ಕರ್ಮಕಾಂಡ ಬಯಲು ಮಾಡಿದ ಗ್ರಾಹಕ !! ವಿಡಿಯೋ

ಇದರ ಜೊತೆಗೆ ಡಿಸೇಲ್ ಮತ್ತು ಪೆಟ್ರೋಲ್ ಎರಡು ಆವೃತ್ತಿಯಲ್ಲೂ ಆಟೋಮ್ಯಾಟಿಕ್ ಗೆೇರ್‌ಬಾಕ್ಸ್ ವ್ಯವಸ್ಥೆಯನ್ನು ಆಯ್ಕೆ ರೂಪದಲ್ಲಿ ನೀಡಲಾಗುತ್ತಿದ್ದು, 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಕೂಡಾ ಲಭ್ಯವಿರಲಿದೆ.

ಈ ಮೂಲಕ ಹ್ಯಾಚ್‌ಬ್ಯಾಕ್ ಆವೃತ್ತಿಗಳಲ್ಲೇ ಅತ್ಯುತ್ತಮ ಮಾದರಿಯನ್ನು ಗ್ರಾಹಕರಿಗೆ ಒದಗಿಸುತ್ತಿರುವ ಮಾರುತಿ ಸುಜುಕಿ ಸಂಸ್ಥೆಯು, ಸುಧಾರಿತ ತಂತ್ರಜ್ಞಾನ ವ್ಯವಸ್ಥೆಗಳಾದ ಟ್ವಿನ್ ಪಾಡ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ವಿಸ್ತರಿತ ಬೂಟ್ ಸ್ಪೆಸ್, ಆ್ಯಪಲ್ ಕಾರ್ ಪ್ಲೇ ಮತ್ತು ಡ್ಯುಯಲ್ ಏರ್‌ಬ್ಯಾಗ್‌ಗಳನ್ನು ಕೂಡಾ ನೀಡಲಾಗಿದೆ.

ಡ್ರೈವ್ ಸ್ಪಾರ್ಕ್ ಅಭಿಪ್ರಾಯ
ಹ್ಯಾಚ್‌ಬ್ಯಾಕ್ ಕಾರು ಆವೃತ್ತಿಗಳಲ್ಲೇ 2018ರ ಸ್ವಿಫ್ಟ್ ಮಾದರಿಯು ಸಾಕಷ್ಟು ವಿಶೇಷತೆಗಳನ್ನು ಹೊಂದಿದ್ದು, ನಿಗದಿತ ಅವಧಿಯಲ್ಲೇ ಮಾರುಕಟ್ಟೆ ಪ್ರವೇಶಕ್ಕಾಗಿ ಎದರು ನೋಡುತ್ತಿದೆ. ಹೀಗಾಗಿ ಬೆಲೆ ವಿಚಾರವಾಗಿ ಗಮನಸೆಳೆದಿದ್ದೇ ಆದಲ್ಲಿ ಹ್ಯುಂಡೈ ಐ20, ಫೋಕ್ಸ್‌ವ್ಯಾಗನ್ ಪೊಲೊ ಮತ್ತು ಫೋರ್ಡ್ ಫಿಗೋ ಆವೃತ್ತಿಗಳಲ್ಲಿ ತೀವ್ರ ಸ್ಪರ್ಧೆ ಒಡ್ಡುವುದರಲ್ಲಿ ಯಾವುದೇ ಅನುಮಾನವಿಲ್ಲ.
ತಪ್ಪದೇ ಓದಿ-ನಿಷೇಧಿತ ಬುಲ್ ಬಾರ್ ಹಾಗೂ ಕ್ರ್ಯಾಶ್ ಗಾರ್ಡ್ ಹಾಕಿದ್ರೆ ದಂಡ ಎಷ್ಟು ಗೊತ್ತಾ?
ಹ್ಯುಂಡೈ ಕ್ರೇಟಾ ಹಿಂದಿಕ್ಕುತ್ತಾ ಎಂಜಿ ಮೋಟಾರ್ಸ್ ನಿರ್ಮಾಣದ ಝೆಡ್ಎಸ್ ಎಸ್‌ಯುವಿ?
Trending DriveSpark YouTube Videos
Subscribe To DriveSpark Kannada YouTube Channel - Click Here


Click it and Unblock the Notifications








