ರಾಮನಗರ ಬಳಿ ಭೀಕರ ಅಪಘಾತ- ನಾಲ್ವರು ಮೆಡಿಕಲ್ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು..!!
ರಾಮನಗರ ಜಿಲ್ಲೆಯ ಕೆಂಪನಹಳ್ಳಿ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಕಂಟೈನರ್ ಹಾಗೂ ಹ್ಯುಂಡೈ ವೆರ್ನಾ ಕಾರ್ ನಡುವೆ ಸಂಭವಿಸಿದ ಅಪಘಾತದಲ್ಲಿ ನಾಲ್ವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ರಾಮನಗರ ಜಿಲ್ಲೆಯ ಕೆಂಪನಹಳ್ಳಿ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಕಂಟೈನರ್ ಹಾಗೂ ಹ್ಯುಂಡೈ ವೆರ್ನಾ ಕಾರ್ ನಡುವೆ ಸಂಭವಿಸಿದ ಅಪಘಾತದಲ್ಲಿ ನಾಲ್ವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮೃತರಲ್ಲಿ ಇಬ್ಬರನ್ನು ಬೆಂಗಳೂರಿನ ರಾಜರಾಜೇಶ್ವರಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳಾದ ಜೋಯದ್ ಜಾಕಬ್ ಮತ್ತು ದಿವ್ಯ ಎಂದು ಗುರುತಿಸಲಾಗಿದ್ದು, ಇವರು ಕೇರಳ ಮೂಲದವರೆಂದು ಹೇಳಲಾಗಿದೆ.

ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ ಇನ್ನಿಬ್ಬರನ್ನು ವೆಲ್ಲೂರಿನ ವಿಐಟಿಯು ಕಾಲೇಜಿನ ಜೀನಾ, ನಿಖಿತ್ ಎಂದು ಗುರುತಿಸಲಾಗಿದ್ದು, ವೇಗದಲ್ಲಿದ್ದ ಕಾರು ನಿಯಂತ್ರಣ ಕಳೆದುಕೊಂಡ ಪರಿಣಾಮ ಅಪಘಾತ ಸಂಭವಿಸಿದೆ.
Recommended Video


ಮೊದಲು ರಸ್ತೆ ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಬಳಿಕ ಪಕ್ಕದ ರಸ್ತೆಯಲ್ಲಿ ಹೋಗುತ್ತಿದ್ದ ಕಂಟೈನರ್‌ಗೆ ಗುದ್ದಿದೆ. ಈ ವೇಳೆ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಬೆಂಗಳೂರಿನಿಂದ ಮೈಸೂರು ಕಡೆಗೆ ಹೋಗುತ್ತಿದ್ದ KA 53, AM 1801 ಕಾರು ಕಂಟೈನರ್‌ಗೆ ಡಿಕ್ಕಿ ಹೊಡೆದಿದ್ದು, ಕಾರು ಗುದ್ದಿದ ರಭಸಕ್ಕೆ ಕಾರಿನಲ್ಲಿದ್ದ ನಾಲ್ವರು ವಿದ್ಯಾರ್ಥಿಗಳು ಒಂದೇ ವೇಳೆಗೆ ಸಾವನ್ನಪ್ಪಿದ್ದಾರೆ.

ಅಲ್ಲದೇ ಮೈಸೂರು ಕಡೆಗೆ ಹೋಗುತ್ತಿದ್ದ ಕಂಟೈನರ್ ಸಂಖ್ಯೆಯನ್ನು HR 55, Y -5331 ಎಂದು ಪತ್ತೆಹಚ್ಚಲಾಗಿದ್ದು, ಈ ಸಂಬಂಧ ರಾಮನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡಾ ದಾಖಲಾಗಿದೆ.

ಸದ್ಯ ಸ್ಥಳಕ್ಕೆ ಭೇಟಿ ನೀಡಿರುವ ಡಿವೈಎಸ್ಪಿ ಎಂ.ಕೆ. ತಮ್ಮಯ್ಯ ಅವರು ಪರಿಶೀಲನೆ ನಡೆಸಿದ್ದು, ಪ್ರಾಥಮಿಕ ತನಿಖೆ ವೇಳೆ ಅತಿ ವೇಗದ ಕಾರು ಚಾಲನೆಯೇ ಅಪಘಾತಕ್ಕೆ ಕಾರಣ ಎಂಬ ಬಗ್ಗೆ ವರದಿ ಸಿದ್ಧಪಡಿಸಲಾಗಿದೆ.


Click it and Unblock the Notifications








