ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಮೇಲಿನ ವ್ಯಾಟ್ ಕಡಿತ ಅಸಾಧ್ಯವೇ? ಹಾಗಾದ್ರೆ ಸಿಎಂ ಹೇಳಿದ್ದೇನು?

ಕಳೆದ ಒಂದು ವಾರದಿಂದ ದೇಶದ ಪ್ರಮುಖ ರಾಜ್ಯಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ಪ್ರಮಾಣವನ್ನು ಕಡಿತಗೊಳಿಸಿ ಆದೇಶ ಹೊರಡಿಸುತ್ತಿದ್ದು, ಈ ಹಿನ್ನಲೆ ಕರ್ನಾಟಕದಲ್ಲೂ ವ್ಯಾಟ್ ಕಡಿಮೆ ಆಗಬಹುದೆಂಬ ನೀರಿಕ್ಷೆಗಳಿದ್ದವು.

By Praveen

ಕಳೆದ ಒಂದು ವಾರದಿಂದ ದೇಶದ ಪ್ರಮುಖ ರಾಜ್ಯಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ಪ್ರಮಾಣವನ್ನು ಕಡಿತಗೊಳಿಸಿ ಆದೇಶ ಹೊರಡಿಸುತ್ತಿದ್ದು, ಈ ಹಿನ್ನಲೆ ಕರ್ನಾಟಕದಲ್ಲೂ ವ್ಯಾಟ್ ಕಡಿಮೆ ಆಗಬಹುದೆಂಬ ನೀರಿಕ್ಷೆಗಳಿದ್ದವು. ಆದ್ರೆ ಈ ಬಗ್ಗೆ ಸಿಎಂ ಸಿದ್ದರಾಮಯ್ಯನವರ ನೀಡಿರುವ ಹೇಳಿಕೆಯು ವ್ಯಾಟ್ ಇಳಿಕೆಯಾಗಬಹುದೆಂಬ ನೀರಿಕ್ಷೆಯನ್ನು ಹುಸಿಗೊಳಿಸಿದೆ.

ರಾಜ್ಯದಲ್ಲಿ ಪೆಟ್ರೋಲ್,ಡೀಸೆಲ್ ಮೇಲಿನ ವ್ಯಾಟ್ ಕಡಿತ ಅಸಾಧ್ಯವೇ?

ಕಳೆದ ವಾರ ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸಿದ ಬೆನ್ನಲ್ಲೇ ಗುಜರಾತ್ ಮತ್ತು ಮಹಾರಾಷ್ಟ್ರ ರಾಜ್ಯಗಳು ತಮ್ಮ ಪಾಲಿನ ತೆರಿಗೆ ಪ್ರಮಾಣದಲ್ಲಿ ಕಡಿತಗೊಳಿಸಿದ್ದವು. ಇದೀಗ ಈ ಪಟ್ಟಿಗೆ ಮಧ್ಯಪ್ರದೇಶ ಸರ್ಕಾರ ಕೂಡ ಸೇರ್ಪಡೆಯಾಗಿದೆ.

ರಾಜ್ಯದಲ್ಲಿ ಪೆಟ್ರೋಲ್,ಡೀಸೆಲ್ ಮೇಲಿನ ವ್ಯಾಟ್ ಕಡಿತ ಅಸಾಧ್ಯವೇ?

ಮೂಲಗಳ ಪ್ರಕಾರ ಮಧ್ಯ ಪ್ರದೇಶ ಸರ್ಕಾರವು ಪೆಟ್ರೋಲ್ ಮೇಲಿನ ರಾಜ್ಯದ ತೆರಿಗೆ ಪ್ರಮಾಣದಲ್ಲಿ ಶೇ.5ರಷ್ಟು ಮತ್ತು ಡೀಸೆಲ್ ಮೇಲಿನ ತೆರಿಗೆ ಪ್ರಮಾಣದಲ್ಲಿ ಶೇ.3ರಷ್ಟು ಮೌಲ್ಯವರ್ಧಿತ ತೆರಿಗೆಯನ್ನ ಕಡಿತಗೊಳಿಸಿದೆ. ಜೊತೆಗೆ ನೂತನ ದರಗಳು ನಿನ್ನೆ ಮಧ್ಯರಾತ್ರಿಯಿಂದಲೇ ಜಾರಿಗೆ ಬಂದಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಪರಿಷ್ಕರಣೆಗೊಂಡಿವೆ.

Recommended Video

Ather S340 Electric Scooter Official Launch - DriveSpark
ರಾಜ್ಯದಲ್ಲಿ ಪೆಟ್ರೋಲ್,ಡೀಸೆಲ್ ಮೇಲಿನ ವ್ಯಾಟ್ ಕಡಿತ ಅಸಾಧ್ಯವೇ?

ಹೀಗಾಗಿ ಕರ್ನಾಟಕದಲ್ಲೂ ವ್ಯಾಟ್ ಇಳಿಕೆ ಬಗ್ಗೆ ನೀರಿಕ್ಷೆಗಳನ್ನು ಇಟ್ಟುಕೊಂಡಿದ್ದ ವಾಹನ ಸವಾರರಿಗೆ ರಾಜ್ಯ ಸರ್ಕಾರ ಶಾಕ್ ನೀಡಿದೆ. ಸದ್ಯಕ್ಕೆ ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ಇಳಿಸುವ ಯಾವುದೇ ಚಿಂತನೆ ಇಲ್ಲವೆಂದು ಸಿಎಂ ಸಿದ್ಧರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ರಾಜ್ಯದಲ್ಲಿ ಪೆಟ್ರೋಲ್,ಡೀಸೆಲ್ ಮೇಲಿನ ವ್ಯಾಟ್ ಕಡಿತ ಅಸಾಧ್ಯವೇ?

ಗುಜರಾತ್‌ ಮತ್ತು ಮಹಾರಾಷ್ಟ್ರ ಸರ್ಕಾರಗಳು ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ವ್ಯಾಟ್‌ ಇಳಿಸಿದ್ದು, ರಾಜ್ಯ ಸರ್ಕಾರದ ನಡೆಯ ಬಗ್ಗೆ ಪ್ರಶ್ನಿಸಿದಾಗ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಈ ರೀತಿ ಪ್ರತಿಕ್ರಿಯಿಸಿದ್ದಾರೆ.

ರಾಜ್ಯದಲ್ಲಿ ಪೆಟ್ರೋಲ್,ಡೀಸೆಲ್ ಮೇಲಿನ ವ್ಯಾಟ್ ಕಡಿತ ಅಸಾಧ್ಯವೇ?

ಇದಕ್ಕೆ ಮುಖ್ಯ ಕಾರಣ ರಾಜ್ಯಕ್ಕೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ಪ್ರಮಾಣದಿಂದಲೇ ಬರೋಬ್ಬರಿ 11 ಸಾವಿರ ಕೋಟಿಗೂ ಹೆಚ್ಚು ಆದಾಯವಿದ್ದು, ವ್ಯಾಟ್ ಪ್ರಮಾಣ ಕಡಿತಗೊಳಿಸಿದ್ದಲ್ಲಿ ಆದಾಯಕ್ಕೆ ಧಕ್ಕೆಯಾಗಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ರಾಜ್ಯದಲ್ಲಿ ಪೆಟ್ರೋಲ್,ಡೀಸೆಲ್ ಮೇಲಿನ ವ್ಯಾಟ್ ಕಡಿತ ಅಸಾಧ್ಯವೇ?

ಇನ್ನು ಕಳೆದ ಮೂರು ತಿಂಗಳಿನಿಂದ ಇಂಧನ ಬೆಲೆಯಲ್ಲಿ ಗಣನೀಯ ಪ್ರಮಾಣದ ಏರಿಕೆ ಕಂಡುಬಂದಿತ್ತು. ಅಲ್ಲದೇ ಕೇಂದ್ರ ಸರ್ಕಾರವು ಪೆಟ್ರೋಲ್ ಡೀಸೆಲ್ ಬೆಲೆಗಳನ್ನು ನಿತ್ಯ ಪರಿಷ್ಕರಣಿಗೆ ಒಳಪಡಿಸಿದಾಗಿನಿಂದಲೂ ಬೆಲೆಗಳು ಗಗನದತ್ತ ಮುಖ ಮಾಡಿದ್ದವು.

ರಾಜ್ಯದಲ್ಲಿ ಪೆಟ್ರೋಲ್,ಡೀಸೆಲ್ ಮೇಲಿನ ವ್ಯಾಟ್ ಕಡಿತ ಅಸಾಧ್ಯವೇ?

ಇದೇ ಕಾರಣಕ್ಕೆ ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಪೆಟ್ರೋಲ್ ಡೀಸೆಲ್ ಗೂ ಜಿಎಸ್ ಟಿ ಅಳವಡಿಸಬೇಕು ಎಂದು ಹೇಳಿದ್ದರು. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ತನ್ನ ಪಾಲಿನ ತೆರಿಗೆ ಪ್ರಮಾಣದಲ್ಲಿ ಇಳಿಕೆ ಮಾಡಿತ್ತು. ಹೀಗಾಗಿಯೇ ರಾಜ್ಯ ಸರ್ಕಾರಗಳೂ ಕೂಡ ತಮ್ಮ ಪಾಲಿನ ತೆರಿಗೆ ಪ್ರಮಾಣದಲ್ಲಿ ಇಳಿಕೆ ಮಾಡಬೇಕು ಎಂದು ಕೇಳಿತ್ತು. ಆದ್ರೆ ಕರ್ನಾಟಕ ಸರ್ಕಾರವು ಇದಕ್ಕೆ ಸ್ಪಂದಿಸದಿರುವುದು ವಿಪರ್ಯಾಸ.

Most Read Articles

Kannada
English summary
Read in Kannada about CM Siddaramaiah statement on lesser VAT on Petrol in Katrnataka.
Story first published: Friday, October 13, 2017, 17:43 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X