ಸರ್ಕಾರಿ ಅಧಿಕಾರಿಗಳಿಗಾಗಿ ಇನ್ಮುಂದೆ ಎಲೆಕ್ಟ್ರಿಕ್ ಕಾರುಗಳನ್ನು ಖರೀದಿಸಲಿದೆ ಇಇಎಸ್ಎಲ್

ಹೊಸ ಯೋಜನೆಯೊಂದನ್ನು ರೂಪಿಸಿರುವ ಇಇಎಸ್ಎಲ್ ಸಂಸ್ಥೆಯು ಸರ್ಕಾರಿ ಅಧಿಕಾರಿಗಳಿಗಾಗಿ 1 ಸಾವಿರ ಎಲೆಕ್ಟ್ರಿಕ್ ಕಾರುಗಳನ್ನು ಖರೀದಿಸಲಾಗುತ್ತಿದೆ.

By Praveen

ಪರಿಸರ ಮಾಲಿನ್ಯ ತಡೆ ಉದ್ದೇಶದಿಂದಾಗಿ ಎಲೆಕ್ಟ್ರಿಕ್ ಕಾರುಗಳಿಗೆ ದಿನದಿಂದ ದಿನಕ್ಕೆ ಬೇಡಿಕೆ ಹೆಚ್ಚುತ್ತಿದ್ದು, ಈ ನಿಟ್ಟಿನಲ್ಲಿ ಹೊಸ ಯೋಜನೆಯೊಂದನ್ನು ರೂಪಿಸಿರುವ ಇಇಎಸ್ಎಲ್ ಸಂಸ್ಥೆಯು ಸರ್ಕಾರಿ ಅಧಿಕಾರಿಗಳಿಗಾಗಿ 1 ಸಾವಿರ ಎಲೆಕ್ಟ್ರಿಕ್ ಕಾರುಗಳನ್ನು ಖರೀದಿಸಲಾಗುತ್ತಿದೆ.

ಸರ್ಕಾರಿ ಅಧಿಕಾರಿಗಳಿಗಾಗಿ ಇನ್ಮುಂದೆ ಎಲೆಕ್ಟ್ರಿಕ್ ಕಾರುಗಳ ಭಾಗ್ಯ

ಜಗತ್ತಿನಲ್ಲಿ ಅತಿ ಹೆಚ್ಚು ಮಾಲಿನ್ಯ ಹೊರಸೂಸುವ ರಾಷ್ಟ್ರಗಳಲ್ಲಿ 3 ನೇ ಸ್ಥಾನ ಹೊಂದಿರುವ ಭಾರತವು ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆ ಮತ್ತು ಖರೀದಿಗೆ ವಿಶೇಷ ಗಮನಹರಿಸುತ್ತಿದ್ದು, ಇದಕ್ಕಾಗಿಯೇ ತಳಮಟ್ಟದಿಂದಲೇ ಎಲೆಕ್ಟ್ರಿಕ್ ಕಾರುಗಳಿಗೆ ಉತ್ತೇಜನ ನೀಡುವ ಉದ್ದೇಶ ಹೊಂದಲಾಗಿದೆ.

ಸರ್ಕಾರಿ ಅಧಿಕಾರಿಗಳಿಗಾಗಿ ಇನ್ಮುಂದೆ ಎಲೆಕ್ಟ್ರಿಕ್ ಕಾರುಗಳ ಭಾಗ್ಯ

ಇದಕ್ಕಾಗಿಯೇ ಎನರ್ಜಿ ಎಫಿಷಿಯೆನ್ಸಿ ಸರ್ವಿಸ್ ಲಿಮಿಟೆಡ್ (ಇಇಎಸ್ಎಲ್) ಸಂಸ್ಥೆಯು 1 ಸಾವಿರ ಎಲೆಕ್ಟ್ರಿಕ್ ಕಾರುಗಳ ಖರೀದಿಗೆ ಟ್ರೇಂಡರ್ ಕರೆಯಲಾಗಿದ್ದು, ಕಲ್ಲಿದ್ದಲು, ಗಣಿ, ವಿದ್ಯುತ್, ಹೊಸ ಮತ್ತು ನವೀಕರಿಸಬಹುದಾದ ಶಕ್ತಿ ಇಲಾಖೆಗಳ ಅಧಿಕಾರಿಗಳಿಗೆ ಎಲೆಕ್ಟ್ರಿಕ್ ಕಾರುಗಳನ್ನೇ ಒದಗಿಸುತ್ತಿದೆ.

ಸರ್ಕಾರಿ ಅಧಿಕಾರಿಗಳಿಗಾಗಿ ಇನ್ಮುಂದೆ ಎಲೆಕ್ಟ್ರಿಕ್ ಕಾರುಗಳ ಭಾಗ್ಯ

ದೇಶದಲ್ಲಿ ವಿದ್ಯುತ್ ವಾಹನಗಳನ್ನು ಉತ್ತೇಜಿಸಲು ಸರ್ಕಾರದ ಮಹತ್ವದ ಯೋಜನೆ ಹೊಂದಿದ್ದು, 2030 ರ ವೇಳೆಗೆ ವಿದ್ಯುತ್ ವಾಹನಗಳು ಮಾತ್ರವೇ ದೇಶದಲ್ಲಿ ಮಾರಾಟಗೊಳ್ಳಲಿವೆ ಎಂದು ವಿದ್ಯುತ್, ಕಲ್ಲಿದ್ದಲು, ಗಣಿ, ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪಿಯುಶ್ ಗೋಯಲ್ ಹೊಸ ಆಶಯ ವ್ಯಕ್ತಪಡಿಸಿದ್ದಾರೆ.

ಸರ್ಕಾರಿ ಅಧಿಕಾರಿಗಳಿಗಾಗಿ ಇನ್ಮುಂದೆ ಎಲೆಕ್ಟ್ರಿಕ್ ಕಾರುಗಳ ಭಾಗ್ಯ

ಇದರ ಜೊತೆಗೆ ಮುಂಬರುವ ದಿನಗಳಲ್ಲಿ ಕ್ಯಾಬಿನೆಟ್ ಸಚಿವರಿಗೂ ಪೆಟ್ರೋಲ್ ಮತ್ತು ಡೀಸೆಲ್ ಕಾರುಗಳ ಬದಲಾಗಿ ಎಲೆಕ್ಟ್ರಿಕ್ ಕಾರುಗಳನ್ನೇ ವಿತರಣೆ ಮಾಡುವ ಬಗ್ಗೆಯು ಸಚಿವ ಪಿಯುಶ್ ಗೋಯಲ್ ಸುಳಿವು ನೀಡಿದ್ದು, ಎಲೆಕ್ಟ್ರಿಕ್ ಕಾರುಗಳ ಉತ್ತೇಜನಕ್ಕೆ ಹೊಸ ಆಯಾಮ ನೀಡಲಿದ್ದಾರೆ.

Recommended Video

Tata Tiago XTA AMT Variant Launched In India - DriveSpark
ಸರ್ಕಾರಿ ಅಧಿಕಾರಿಗಳಿಗಾಗಿ ಇನ್ಮುಂದೆ ಎಲೆಕ್ಟ್ರಿಕ್ ಕಾರುಗಳ ಭಾಗ್ಯ

ಈ ಬಗ್ಗೆ ಮಾತನಾಡಿರುವ ಇಇಎಸ್ಎಲ್ ಅಧ್ಯಕ್ಷ ಕ್ರೋವವಾರ್ ಕುಮಾರ್, "ಪ್ರಮುಖ ಇಲಾಖೆಗಳ ವಿವಿಧ ಅಧಿಕಾರಿಗಳಿಗೆ ಮೊದಲ ಹಂತದಲ್ಲಿ 4 ಬಾಗಿಲವುಳ್ಳ 10 ಸಾವಿರ ಎಲೆಕ್ಟ್ರಿಕ್‌ ಕಾರುಗಳು ಒದಗಿಸಲು ಎಲ್ಲ ಸಿದ್ಧತೆಗಳನ್ನು ನಡೆಸಲಾಗಿದೆ" ಎಂದಿದ್ದಾರೆ.

ಸರ್ಕಾರಿ ಅಧಿಕಾರಿಗಳಿಗಾಗಿ ಇನ್ಮುಂದೆ ಎಲೆಕ್ಟ್ರಿಕ್ ಕಾರುಗಳ ಭಾಗ್ಯ

ಹೀಗಾಗಿ ಹೊಸ ಯೋಜನೆಗಾಗಿ ಅಗತ್ಯ ಪ್ರಮಾಣದ ಎಲೆಕ್ಟ್ರಿಕ್ ಕಾರುಗಳ ಚಾರ್ಜಿಂಗ್ ಸ್ಟೇಷನ್‌ಗಳ ಅಗತ್ಯವಿದ್ದು, ಇದಕ್ಕಾಗಿ ಹೊಸ ಟೆಂಡರ್ ಮೂಲಕ ಅಗತ್ಯ ಪ್ರದೇಶಗಳಲ್ಲಿ ಚಾರ್ಜಿಂಗ್ ಸ್ಟೇಷನ್ ಆರಂಭಿಸಲಾಗುತ್ತಿದೆ.

Article Published On: Friday, August 18, 2017, 19:53 [IST]
English summary
Read in Kannada about EESL to procure 10,000 electric cars for various ministries.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+