ಆಟೋ ಉದ್ಯಮದಲ್ಲಿ ನಡೆಯಲಿದೆ ಹೊಸ ಕ್ರಾಂತಿ- ಅಗ್ಗವಾಗಲಿವೆ ಎಲೆಕ್ಟ್ರಿಕ್ ಕಾರುಗಳ ಬೆಲೆ
ಪೆಟ್ರೋಲ್ ಮತ್ತು ಡೀಸೆಲ್ ಕಾರುಗಳ ಉತ್ಪಾದನೆ ಮತ್ತು ಬೇಡಿಕೆಯನ್ನು ತಗ್ಗಿಸುವ ನಿಟ್ಟಿನಲ್ಲಿ ಹೊಸ ಯೋಜನೆ ಕೈಗೊಳ್ಳಲಾಗುತ್ತಿದ್ದು, ಎಲೆಕ್ಟ್ರಿಕ್ ಕಾರುಗಳ ಬೆಲೆಗಳು ತಗ್ಗಲಿವೆ.
2030ರ ವೇಳೆಗೆ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕಾರುಗಳ ಉತ್ಪಾದನೆ ಮತ್ತು ಮಾರಾಟ ಸಂಪೂರ್ಣ ತಗ್ಗಲಿದ್ದು, ಎಲೆಕ್ಟ್ರಿಕ್ ಕಾರುಗಳ ಬಳಕೆ ಹೆಚ್ಚಲಿದೆ.

ಪರಿಸರ ಮಾಲಿನ್ಯ ತಡೆ ಉದ್ದೇಶ ಹಿನ್ನೆಲೆ ಪೆಟ್ರೋಲ್ ಮತ್ತು ಡೀಸೆಲ್ ಕಾರುಗಳು ಬಳಕೆಯನ್ನು ತಗ್ಗಿಸಲಾಗುತ್ತಿದ್ದು, ಎಲೆಕ್ಟ್ರಿಕ್ ಕಾರುಗಳ ಮಾರಾಟ ಮತ್ತು ಉತ್ಪಾದನೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ.

ಈ ಉದ್ದೇಶದಿಂದಲೇ ಹೊಸ ರೂಲ್ಸ್ ಜಾರಿ ಮಾಡಲು ಮುಂದಾಗಿರುವ ನೀತಿ ಆಯೋಗವು ಮುಂಬರುವ ದಿನಗಳಲ್ಲಿ ಲಾಟರಿ ಮೂಲಕ ಕಾರು ಖರೀದಿ ಮಾಡುವ ವ್ಯವಸ್ಥೆಯನ್ನು ಜಾರಿ ತರುತ್ತಿದೆ.

ಹೊಸ ಕಾಯ್ದೆ ಜಾರಿಗೆ ಬಂದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕಾರು ಖರೀದಿ ಸಂಪೂರ್ಣ ತಗ್ಗಲಿದ್ದು, 2030ರ ವೇಳೆಗೆ ಸಂಪೂರ್ಣ ನಿಷೇಧವಾಗುವ ಸಾಧ್ಯತೆಗಳು ಕೂಡಾ ಇವೆ.

ಹೀಗಾಗಿ ಎಲೆಕ್ಟ್ರಿಕ್ ಕಾರುಗಳ ಖರೀದಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಹೊಸ ಯೋಜನೆಗಳನ್ನು ರೂಪಿಸುತ್ತಿದ್ದು, ಎಲೆಕ್ಟ್ರಿಕ್ ಕಾರು ಖರೀದಿ ಸುಲಭ ಮತ್ತು ಅಗ್ಗವಾಗಲಿವೆ.

ಇದೇ ನಿಟ್ಟಿನಲ್ಲಿ ವಿಶ್ವದ ಪ್ರಮುಖ ಕಾರು ಉತ್ಪಾದನಾ ಸಂಸ್ಥೆ ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆ ಮೇಲೆ ವಿಶೇಷ ಕಾಳಜಿ ತೊರುತ್ತಿದ್ದು, ಭಾರತೀಯ ಮಾರುಕಟ್ಟೆಯ ಬೇಡಿಕೆಗೆ ಅನುಗುಣವಾಗಿ ಕಾರು ತಯಾರಿಕೆ ಮಾಡಲಿವೆ.

ಇದರಿಂದ ಪೆಟ್ರೋಲ್ ಮತ್ತು ಡಿಸೇಲ್ ಕಾರುಗಳ ಖರೀದಿಗಿಂತ ಶೇ.30ರಷ್ಟು ಕಡಿಮೆ ಬೆಲೆಗಳಲ್ಲಿ ಎಲೆಕ್ಟ್ರಿಕ್ ಕಾರುಗಳನ್ನು ಖರೀದಿ ಮಾಡಬಹುದಾಗಿದೆ.


Click it and Unblock the Notifications








