ಭಾರತದ ಮೊದಲ ಎಲೆಕ್ಟ್ರಿಕ್ ಕಾರಿನ ಚಾರ್ಜ್ ಸ್ಟೇಷನ್ ಬಗ್ಗೆ ಮಾಹಿತಿ ಇಲ್ಲಿದೆ

Written By:

ಮುಂಬರುವ ದಿನಗಳಲ್ಲಿ ಸಾಂಪ್ರದಾಯಿಕ ವಾಹನಗಳು ತಮ್ಮ ಮಿತಿಗಳನ್ನು ತಲುಪುವ ಕಾರಣದಿಂದಾಗಿ ವಿದ್ಯುತ್ ವಾಹನಗಳು 'ಭವಿಷ್ಯದ ಸಾರಿಗೆ' ಎಂದು ಹೇಳಲಾಗುತ್ತದೆ. ಈ ವಿದ್ಯುತ್ ವಾಹನಗಳ ಬಗ್ಗೆ ಈಗೊಂದು ಖುಷಿ ವಿಚಾರ ಹೊರಬಂದಿದೆ.

ಭಾರತದ ಮೊದಲ ಎಲೆಕ್ಟ್ರಿಕ್ ಕಾರು ಚಾರ್ಜ್ ಸ್ಟೇಷನ್ ಬಗ್ಗೆ ಮಾಹಿತಿ ಇಲ್ಲಿದೆ

ದೆಹಲಿ ಮತ್ತು ನೊಯಿಡಾದಲ್ಲಿರುವ ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಸಂಸ್ಥೆ ತನ್ನ ಕಚೇರಿಗಳಲ್ಲಿ ವಾಹನದ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಿದೆ. ಎಲೆಕ್ಟ್ರಿಕ್ ವಾಹನಗಳ ಬಗ್ಗೆ ಹೆಚ್ಚಿನ ಜನಕ್ಕೆ ಪ್ರೋತ್ಸಾಹ ತುಂಬುವ ಸಲುವಾಗಿ ಈ ನಿರ್ಧಾರವನ್ನು ಸಂಸ್ಥೆ ಕೈಗೊಂಡಿದೆ.

ಭಾರತದ ಮೊದಲ ಎಲೆಕ್ಟ್ರಿಕ್ ಕಾರು ಚಾರ್ಜ್ ಸ್ಟೇಷನ್ ಬಗ್ಗೆ ಮಾಹಿತಿ ಇಲ್ಲಿದೆ

ಶುದ್ಧ ಇಂಧನ ಸಾರಿಗೆ ವ್ಯವಸ್ಥೆ ಹೆಚ್ಚು ಮುಖ್ಯವಾಗಿದ್ದು, ಈ ಬಗ್ಗೆ ಹೆಚ್ಚಿನ ಉತ್ತೇಜನ ನೀಡುವ ಉದ್ದೇಶದಿಂದ ಈ ರೀತಿಯ ಸ್ಟೇಷನ್ ಸ್ಥಾಪನೆ ಮಾಡಲಾಗಿದೆ.

ಭಾರತದ ಮೊದಲ ಎಲೆಕ್ಟ್ರಿಕ್ ಕಾರು ಚಾರ್ಜ್ ಸ್ಟೇಷನ್ ಬಗ್ಗೆ ಮಾಹಿತಿ ಇಲ್ಲಿದೆ

2030ರ ಹೊತ್ತಿಗೆ ಭಾರತೀಯ ರಸ್ತೆಗಳನ್ನು ಸಂಪೂರ್ಣವಾಗಿ ವಿದ್ಯುತ್ ಮಾಡುವ ಮಹತ್ವಾಕಾಂಕ್ಷೆಯನ್ನು ಭಾರತ ಸರ್ಕಾರವು ಇಟ್ಟುಕೊಂಡಿದ್ದು ಈ ಪ್ರಯುಕ್ತ ಹೊಸ ಯೋಜನೆಗಳನ್ನು ರೂಪಿಸುತ್ತಿದೆ.

ಭಾರತದ ಮೊದಲ ಎಲೆಕ್ಟ್ರಿಕ್ ಕಾರು ಚಾರ್ಜ್ ಸ್ಟೇಷನ್ ಬಗ್ಗೆ ಮಾಹಿತಿ ಇಲ್ಲಿದೆ

ಎಲೆಕ್ಟ್ರಿಕ್ ಕಾರುಗಳ ಮೂಲಭೂತ ಸೌಕರ್ಯ ಕೊರತೆ ಮತ್ತು ಎಲೆಕ್ಟ್ರಿಕ್ ಕಾರಿನ ಬೆಲೆ ಹೆಚ್ಚಿಗೆ ಇರುವ ಕಾರಣದಿಂದಾಗಿ, ಭಾರತದಲ್ಲಿ ಸಾಂಪ್ರದಾಯಿಕ ಕಾರುಗಳಂತೆ ವಿದ್ಯುತ್ ವಾಹನಗಳು ತುಂಬಾ ಜನಪ್ರಿಯವಾಗಿಲ್ಲ ಎನ್ನುವುದನ್ನು ನಾವು ತಿಳಿದುಕೊಳ್ಳಬೇಕಾಗಿದೆ.

ಭಾರತದ ಮೊದಲ ಎಲೆಕ್ಟ್ರಿಕ್ ಕಾರು ಚಾರ್ಜ್ ಸ್ಟೇಷನ್ ಬಗ್ಗೆ ಮಾಹಿತಿ ಇಲ್ಲಿದೆ

ವಾಹನಗಳನ್ನು ಚಾರ್ಜ್ ಮಾಡಬಹುದಾದ ಇವಿ ಚಾರ್ಜಿಂಗ್ ಕೇಂದ್ರಗಳ ಸ್ಥಾಪನೆ ಈಗಷ್ಟೇ ಪ್ರಾರಂಭವಾಗಿದ್ದು, ಜನರಿಂದ ಉತ್ತಮ ಪ್ರತಿಕ್ರಿಯೆ ನಿರೀಕ್ಷೆ ಮಾಡಲಾಗಿದೆ.

ಭಾರತದ ಮೊದಲ ಎಲೆಕ್ಟ್ರಿಕ್ ಕಾರು ಚಾರ್ಜ್ ಸ್ಟೇಷನ್ ಬಗ್ಗೆ ಮಾಹಿತಿ ಇಲ್ಲಿದೆ

ಕಂಪನಿಯು ವಾಹನಗಳ ಇವಿ ಚಾರ್ಜಿಂಗ್ ವ್ಯವಹಾರಕ್ಕೆ ಪ್ರವೇಶ ಮಾಡಿದೆ ಎಂದು ಏನ್‌ಟಿಪಿಸಿ ಸಂಸ್ಥೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದು, ಮುಂದಿನ ದಿನಗಳಲ್ಲಿ ಕಂಪನಿಯ ನೆಡೆಯನ್ನು ತಿಳಿಸಲಾಗುವುದು ಎಂದಿದ್ದಾರೆ.

ಭಾರತದ ಮೊದಲ ಎಲೆಕ್ಟ್ರಿಕ್ ಕಾರು ಚಾರ್ಜ್ ಸ್ಟೇಷನ್ ಬಗ್ಗೆ ಮಾಹಿತಿ ಇಲ್ಲಿದೆ

ದೇಶದಲ್ಲಿಯೇ ಮೊದಲ ಬಾರಿಗೆ ದೆಹಲಿ ಮತ್ತು ನೋಯ್ಡಾದ ಏನ್‌ಟಿಪಿಸಿ ಕಚೇರಿಗಳಲ್ಲಿ ಮೊಟ್ಟ ಮೊದಲ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ಅವರು ಹೇಳಿದರು.

ಭಾರತದ ಮೊದಲ ಎಲೆಕ್ಟ್ರಿಕ್ ಕಾರು ಚಾರ್ಜ್ ಸ್ಟೇಷನ್ ಬಗ್ಗೆ ಮಾಹಿತಿ ಇಲ್ಲಿದೆ

ದೆಹಲಿಯು ಸೇರಿದಂತೆ ಇತರ ನಗರಗಳಲ್ಲಿ ವಿದ್ಯುತ್ ವಾಹನಗಳ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಲು ಕಂಪನಿಯು ಉದ್ದೇಶಿಸಿದೆ ಎಂದು ಅವರು ತಿಳಿಸಿದರು.

ಭಾರತದ ಮೊದಲ ಎಲೆಕ್ಟ್ರಿಕ್ ಕಾರು ಚಾರ್ಜ್ ಸ್ಟೇಷನ್ ಬಗ್ಗೆ ಮಾಹಿತಿ ಇಲ್ಲಿದೆ

ರಾಜ್ಯ ಸರ್ಕಾರಿ ಸ್ವಾಮ್ಯದ ಕಂಪನಿಯಾದ ಏನ್‌ಟಿಪಿಸಿ ಸಂಸ್ಥೆ, ವಿದ್ಯುತ್ ವಾಹನ ವಿಭಾಗದಲ್ಲಿ ಹೊಸ ವ್ಯಾಪಾರ ಅವಕಾಶಗಳನ್ನು ರಚಿಸಲು ಯೋಜಿಸುತ್ತಿದೆ.

ಭಾರತದ ಮೊದಲ ಎಲೆಕ್ಟ್ರಿಕ್ ಕಾರು ಚಾರ್ಜ್ ಸ್ಟೇಷನ್ ಬಗ್ಗೆ ಮಾಹಿತಿ ಇಲ್ಲಿದೆ

2010ರ ಹೊತ್ತಿಗೆ ಭಾರತದ ಎಲ್ಲಾ ವರ್ಗ ಎಲೆಕ್ಟ್ರಿಕ್ ವಾಹನಗಳು ಹೊಂದುವ ಉದ್ದೇಶದೊಂದಿಗೆ ಈ ಯೋಜನೆಯು ಸಾಗುತ್ತಿದೆ ಎನ್ನಲಾಗಿದೆ. ಸದ್ಯ, ಭಾರತೀಯ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ಕಾರುಗಳನ್ನು ಮಾರಾಟ ಮಾಡುತ್ತಿರುವ ಏಕೈಕ ವಾಹನ ತಯಾರಕ ಕಂಪನಿ ಮಹೀಂದ್ರಾ ಎನ್ನಬಹುದು.

English summary
Read in Kannada about National Thermal Power Corporation has installed charging stations at its offices in Delhi and Noida.
Story first published: Tuesday, June 6, 2017, 12:30 [IST]
Please Wait while comments are loading...

Latest Photos