ಸೆಪ್ಟೆಂಬರ್ 15ಕ್ಕೆ ಬಿಡುಗಡೆಯಾಗಲಿದೆ ಫೋರ್ಡ್ ಇಕೋ ಸ್ಪೋರ್ಟ್ ಫೇಸ್‌ಲಿಫ್ಟ್
ಫೋರ್ಡ್ ಕಾರು ಮಾದರಿಗಳಲ್ಲೇ ಅತಿಹೆಚ್ಚು ಬೇಡಿಕೆಯನ್ನು ಹೊಂದಿರುವ ಇಕೋ ಸ್ಪೋರ್ಟ್ ಕಾರಿನ ಫೇಸ್‌ಲಿಫ್ಟ್ ಆವೃತ್ತಿಯು ಸೆಪ್ಟೆಂಬರ್ 15ಕ್ಕೆ ಬಿಡುಗಡೆಯಾಗಿದ್ದು, ಹೊಸ ಕಾರಿನ ಸಂಪೂರ್ಣ ಮಾಹಿತಿ ಇಲ್ಲಿದೆ.
ಫೋರ್ಡ್ ಕಾರು ಮಾದರಿಗಳಲ್ಲೇ ಅತಿಹೆಚ್ಚು ಬೇಡಿಕೆಯನ್ನು ಹೊಂದಿರುವ ಇಕೋ ಸ್ಪೋರ್ಟ್ ಕಾರಿನ ಫೇಸ್‌ಲಿಫ್ಟ್ ಆವೃತ್ತಿಯು ಸೆಪ್ಟೆಂಬರ್ 15ಕ್ಕೆ ಬಿಡುಗಡೆಯಾಗಿದ್ದು, ಹೊಸ ಕಾರಿನ ಸಂಪೂರ್ಣ ಮಾಹಿತಿ ಇಲ್ಲಿದೆ.

2016ರಲ್ಲಿ ಲಾಸ್ ಏಂಜಲೀಸ್ ಆಟೋ ಮೇಳದಲ್ಲಿ ಪ್ರದರ್ಶನಗೊಳ್ಳುವ ಮೂಲಕ ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಫೋರ್ಡ್ ಇಕೋ ಸ್ಪೋರ್ಟ್ ಫೇಸ್‌ಲಿಫ್ಟ್ ಆವೃತ್ತಿಯು ಇದೀಗ ಗ್ರಾಹಕರ ಕೈ ಸೇರುತ್ತಿದ್ದು, ಸೆಪ್ಟೆಂಬರ್ 15ಕ್ಕೆ ಭಾರತದಲ್ಲಿ ಬಿಡುಗಡೆಗೊಳ್ಳುವುದು ಖಚಿತವಾಗಿದೆ.

ಕಂಪ್ಯಾಕ್ಟ್ ಎಸ್‌ಯುವಿ ವೈಶಿಷ್ಟ್ಯತೆಗಳನ್ನು ಹೊಂದಿರುವ ಇಕೋ ಸ್ಪೋರ್ಟ್ ಫೇಸ್‌ಲಿಫ್ಟ್ ಆವೃತ್ತಿಯು, ಸಿಂಗಲ್ ಪೀಸ್ ಹೆಕ್ಸ್‌ಗೊನಲ್ ಫ್ರಂಟ್ ಗ್ರಿಲ್ ಪಡೆದುಕೊಂಡಿರುವುದು ಹೊಸ ಕಾರಿನ ಅಂದವನ್ನು ಹೆಚ್ಚಿಸಿದೆ.

ಈ ಹಿಂದೆ 2013ರಲ್ಲಿ ಬಿಡುಗಡೆಯಾದ ಇಕೋ ಸ್ಪೋರ್ಟ್ ಆವೃತ್ತಿಗಿಂತ ವಿಭಿನ್ನವಾಗಿರುವ ಫೇಸ್‌ಲಿಫ್ಟ್ ಆವೃತ್ತಿಯು, ಸ್ಪೋರ್ಟ್ ಕಾರಿನ ವಿನ್ಯಾಸಗಳು ಮತ್ತು ಸುಧಾರಿತ ಸುರಕ್ಷಾ ವಿಧಾನಗಳನ್ನು ಪಡೆದುಕೊಂಡಿದೆ.

ಎಂಜಿನ್
ಪೆಟ್ರೋಲ್ ಮತ್ತು ಡೀಸೆಲ್ ಎರಡು ಆವೃತ್ತಿಯಲ್ಲೂ ಲಭ್ಯವಿರಲಿರುವ ಇಕೋ ಸ್ಪೋರ್ಟ್ ಫೇಸ್‌ಲಿಫ್ಟ್, ಡೀಸೆಲ್ ಮಾದರಿಯಲ್ಲಿ 1.5-ಲೀಟರ್ ಎಂಜಿನ್ ಮತ್ತು ಪೆಟ್ರೋಲ್ ಮಾದರಿಯಲ್ಲಿ 1.5-ಲೀಟರ್ ಎಂಜಿನ್‌ನೊಂದಿಗೆ ಅಭಿವೃದ್ಧಿ ಹೊಂದಿವೆ.

ಜೊತೆಗೆ 1.0-ಲೀಟರ್ ಇಕೋ ಬೂಸ್ಟರ್ ಪೆಟ್ರೋಲ್ ಎಂಜಿನ್ ಕೂಡಾ ಖರೀದಿಗೆ ಲಭ್ಯವಿರಲಿದ್ದು, ಪೆಟ್ರೋಲ್ ಆವೃತ್ತಿಯು 110-ಬಿಎಚ್‌ಪಿ ಮತ್ತು 140-ಎನ್ಎಂ ಟಾರ್ಕ್ ಉತ್ಪಾದನಾ ಶಕ್ತಿಯನ್ನು ಹೊಂದಿವೆ.

ಇದಲ್ಲದೇ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಪಡೆದುಕೊಂಡಿದ್ದು, ಡಿಸೇಲ್ ಆವೃತ್ತಿಯು 99-ಬಿಎಚ್‌ಪಿ ಮತ್ತು 205-ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

ಡ್ರೈವ್ ಸ್ಪಾರ್ಕ್ ಅಭಿಪ್ರಾಯ
ಸ್ಪೋರ್ಟ್ ಕಂಪ್ಯಾಕ್ಟ್ ಎಸ್‌ಯುವಿ ವಿನ್ಯಾಸದೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಡುತ್ತಿರುವ ಫೋರ್ಡ್ ಇಕೋ ಸ್ಪೋರ್ಟ್ ಫೇಸ್‌ಲಿಫ್ಟ್ ಆವೃತ್ತಿಯು ಮಾರುತಿ ಸುಜುಕಿ ವಿಟಾರಾ ಬ್ರೇಜಾ ಆವೃತ್ತಿಯ ಪ್ರತಿಸ್ಪರ್ಧಿಯಾಗಿದ್ದು, ಬೆಲೆಗಳ ಮೇಲೆ ಹೊಸ ಕಾರಿನ ಭವಿಷ್ಯ ನಿರ್ಧಾರವಾಗಲಿದೆ.


Click it and Unblock the Notifications