ಇನ್ಮುಂದೆ ದಿನಂಪ್ರತಿ ತೈಲ ಬೆಲೆ ಪರಿಷ್ಕರಣೆ- ಇಂದು ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಇಳಿಕೆ
ಕಚ್ಚಾ ತೈಲ ಬೆಲೆ ಇಳಿಕೆ ಹಿನ್ನೆಲೆ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಯಾಗಿದ್ದು, ಪ್ರತಿ ಲೀಟರ್ ಪೆಟ್ರೋಲ್ ಬೆಲೆ 1.12 ರೂ. ಇಳಿಕೆಯಾಗಿದ್ದರೆ, ಡೀಸೆಲ್ ಬೆಲೆ 1.24 ರೂ. ಇಳಿಕೆಯಾಗಿದೆ.
ಕಚ್ಚಾ ತೈಲ ಬೆಲೆ ಇಳಿಕೆ ಹಿನ್ನೆಲೆ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಯಾಗಿದ್ದು, ಪ್ರತಿ ಲೀಟರ್ ಪೆಟ್ರೋಲ್ ಬೆಲೆ 1.12 ರೂ. ಇಳಿಕೆಯಾಗಿದ್ದರೆ, ಡೀಸೆಲ್ ಬೆಲೆ 1.24 ರೂ. ಇಳಿಕೆಯಾಗಿದೆ.

ಇದುವರೆಗೂ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಕಚ್ಚಾ ತೈಲದ ಬೆಲೆ ಮೇಲೆ ಭಾರತೀಯ ತೈಲ ಕಂಪನಿಗಳು ಪ್ರತಿ 15 ದಿನಗಳಿಗೊಮ್ಮೆ ತೈಲ ದರವನ್ನು ಪರಿಷ್ಕರಿಸುತ್ತಿದ್ದವು.

ಆದ್ರೆ ಇನ್ಮುಂದೆ ದಿನಂಪ್ರತಿ ತೈಲ ಬೆಲೆ ಪರಿಷ್ಕಣೆ ಮಾಡುತ್ತಿದ್ದು, ಮೊದಲ ದಿನವೇ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 1.12 ರೂ. ಇಳಿಕೆಯಾಗಿದ್ದರೆ, ಡೀಸೆಲ್ ಬೆಲೆ 1.24 ರೂ. ಇಳಿಕೆಯಾಗಿದೆ.

ಬೆಲೆ ಕಡಿತ ಹಿನ್ನೆಲೆ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 70.47 ರೂ. ಆಗಿದ್ದರೆ, ಡೀಸೆಲ್ ಬೆಲೆ 58.52 ರೂ. ಆಗಲಿದೆ.

ಈ ಹಿಂದೆ ಮೇ 31ರಂದು ಪ್ರತಿ ಲೀಟರ್ ಪೆಟ್ರೋಲ್ ಬೆಲೆ 1.23 ರೂ. ಏರಿಕೆಯಾಗಿದ್ದರೆ, ಡೀಸೆಲ್ ಬೆಲೆ 89 ಪೈಸೆ ಏರಿಕೆಯಾಗಿತ್ತು.

Click it and Unblock the Notifications