ಹಿಮಾಚಲಪ್ರದೇಶದಲ್ಲಿ ಎಲೆಕ್ಟ್ರಿಕ್ ಬಸ್‌ ಸಂಚಾರಕ್ಕೆ ಹಸಿರು ನಿಶಾನೆ

Written By:

ಎಲೆಕ್ಟ್ರಿಕ್ ಎಂಜಿನ್ ಪ್ರೇರಿತ ವಾಹನಗಳಿಗೆ ಸಾಕಷ್ಟು ಬೇಡಿಕೆ ಸೃಷ್ಠಿಯಾಗುತ್ತಿದ್ದು, ಇದೀಗ ಹಿಮಾಚಲಪ್ರದೇಶದಲ್ಲೂ ಮೊದಲ ಬಾರಿಗೆ ಸಾರ್ವಜನಿಕ ಸಾರಿಗೆ ವಲಯದಲ್ಲೂ ಎಲೆಕ್ಟ್ರಿಕ್ ಬಸ್‌ಗಳ ಸಂಚಾರಕ್ಕೆ ಹಸಿರು ನಿಶಾನೆ ತೊರಲಾಗಿದೆ.

To Follow DriveSpark On Facebook, Click The Like Button
ಹಿಮಾಚಲಪ್ರದೇಶದಲ್ಲಿ ಎಲೆಕ್ಟ್ರಿಕ್ ಬಸ್‌ ಸಂಚಾರಕ್ಕೆ ಹಸಿರು ನಿಶಾನೆ

ಮಾಲಿನ್ಯ ರಹಿತ ಎಂಜಿನ್ ವೈಶಿಷ್ಟ್ಯತೆಗಳೊಂದಿಗೆ ಅಭಿವೃದ್ಧಿಯಾಗಿರುವ ಗೋಲ್ಡ್‌ಸ್ಟೋನ್ ಲಿಮಿಟೆಡ್ ನಿರ್ಮಾಣದ ಎಲೆಕ್ಟ್ರಿಕ್ ಬಸ್‌ಗಳು ಹತ್ತು ಹಲವು ವಿಶೇಷತೆಗಳನ್ನು ಹೊಂದಿದ್ದು, 25+1 ಆಧಾರದಲ್ಲಿ ಪ್ರಯಾಣಿಕರು ಹೊತ್ತುಯ್ಯುವ ಸಾಮರ್ಥ್ಯ ಹೊಂದಿವೆ.

ಹಿಮಾಚಲಪ್ರದೇಶದಲ್ಲಿ ಎಲೆಕ್ಟ್ರಿಕ್ ಬಸ್‌ ಸಂಚಾರಕ್ಕೆ ಹಸಿರು ನಿಶಾನೆ

ಸದ್ಯ ಹಿಮಾಚಲ ಪ್ರದೇಶದಲ್ಲಿ ಸಂಚಾರಕ್ಕೆ ಮುಕ್ತವಾಗಿರುವ ಗೋಲ್ಡ್‌ ಸ್ಟೋನ್ ಎಲೆಕ್ಟ್ರಿಕ್ ಬಸ್‌ಗಳು ಕುಲ್ಲು-ಮನಾಲಿ-ರೋಹ್ಟಂಗ್ ಮಧ್ಯೆ ಸಂಚರಿಸಿದ್ದು, ಅಗತ್ಯಕ್ಕೆ ಅನುಗುಣವಾಗಿ ಎಲೆಕ್ಟ್ರಿಕ್ ಚಾರ್ಜಿಂಗ್ ಸ್ಟೇಷನ್‌ಗಳನ್ನು ಕೂಡಾ ನಿರ್ಮಾಣ ಮಾಡಲಾಗಿದೆ.

ಹಿಮಾಚಲಪ್ರದೇಶದಲ್ಲಿ ಎಲೆಕ್ಟ್ರಿಕ್ ಬಸ್‌ ಸಂಚಾರಕ್ಕೆ ಹಸಿರು ನಿಶಾನೆ

ಒಂದು ಬಾರಿ ಚಾರ್ಜಿಂಗ್ ಮಾಡಿದಲ್ಲಿ 200 ಕಿಮಿ ಮೈಲೇಜ್ ಸಾಮರ್ಥ್ಯ ಹೊಂದಿರುವ ಗೋಲ್ಡ್‌ಸ್ಟೋನ್ ಲಿಮಿಟೆಡ್ ನಿರ್ಮಾಣದ ಎಲೆಕ್ಟ್ರಿಕ್ ಬಸ್‌ಗಳು, ಪೂರ್ಣ ಪ್ರಮಾಣದ ಚಾರ್ಜಿಂಗ್ ಪಡೆಯಲು ನಾಲ್ಕು ಗಂಟೆಗಳ ಕಾಲಾವಧಿ ಪಡೆದುಕೊಳ್ಳುತ್ತವೆ.

ಹಿಮಾಚಲಪ್ರದೇಶದಲ್ಲಿ ಎಲೆಕ್ಟ್ರಿಕ್ ಬಸ್‌ ಸಂಚಾರಕ್ಕೆ ಹಸಿರು ನಿಶಾನೆ

ಇನ್ನು ಪ್ರತಿಷ್ಠಿತ ಎಲೆಕ್ಟ್ರಿಕ್ ಎಂಜಿನ್ ಅಭಿವೃದ್ಧಿ ಸಂಸ್ಥೆಯಾಗಿರುವ ಬಿವೈಡಿ ಆಟೋ ಲಿಮಿಟೆಡ್ ಸಂಸ್ಥೆ ಜೊತೆಗೂಡಿ ಎಲೆಕ್ಟ್ರಿಕ್ ಬಸ್‌ಗಳನ್ನು ನಿರ್ಮಾಣ ಮಾಡಿರುವ ಗೋಲ್ಡ್‌ಸ್ಟೋನ್ ಲಿಮಿಟೆಡ್, ಹೊಸ ಬಸ್ ಮಾದರಿಗಳ ಗುಣಮಟ್ಟ ಕುರಿತಂತೆ ಆಟೋಮೆಟಿವ್ ರಿಸರ್ಚ್ ಅಸೋಶಿಯೆಷನ್ ಆಫ್ ಇಂಡಿಯಾದಿಂದ ಪ್ರಮಾಣ ಪತ್ರ ಪಡೆದಿದೆ.

ಹಿಮಾಚಲಪ್ರದೇಶದಲ್ಲಿ ಎಲೆಕ್ಟ್ರಿಕ್ ಬಸ್‌ ಸಂಚಾರಕ್ಕೆ ಹಸಿರು ನಿಶಾನೆ

ಹೀಗಾಗಿ ಅತ್ಯುತ್ತಮ ಕಾರ್ಯಕ್ಷಮತೆಯನ್ನು ಹೊಂದಿರುವ ಎಲೆಕ್ಟ್ರಿಕ್ ಬಸ್ ಮಾದರಿಗಳಲ್ಲಿ ಗೋಲ್ಡ್‌ಸ್ಟೋನ್ ಬಸ್‌ಗಳು ಮುಂಚೂಣಿಯಲ್ಲಿದ್ದು, ಈಗಾಗಲೇ ಭಾರೀ ಪ್ರಮಾಣದ ಬಸ್‌ಗಳ ನಿರ್ಮಾಣಕ್ಕೆ ಬೇಡಿಕೆ ಬಂದಿರುವುದು ಮತ್ತೊಂದು ವಿಶೇಷ ಎನ್ನಬಹುದು.

ಹಿಮಾಚಲಪ್ರದೇಶದಲ್ಲಿ ಎಲೆಕ್ಟ್ರಿಕ್ ಬಸ್‌ ಸಂಚಾರಕ್ಕೆ ಹಸಿರು ನಿಶಾನೆ

ಡ್ರೈವ್ ಸ್ಪಾರ್ಕ್ ಅಭಿಪ್ರಾಯ

ದೇಶಾದ್ಯಂತ ಈಗಾಗಲೇ ಹಲವಾರು ವಾಹನ ಉತ್ಪಾದಕರು ಎಲೆಕ್ಟ್ರಿಕ್ ಬಸ್ ನಿರ್ಮಾಣಕ್ಕೆ ಬೃಹತ್ ಯೋಜನೆಗಳನ್ನು ರೂಪಿಸುತ್ತಿದ್ದು, ಇದೀಗ ಗೋಲ್ಡ್‌ ಸ್ಟೋನ್ ಸಂಸ್ಥೆಯು ಹಿಮಾಚಲಪ್ರದೇಶದಲ್ಲಿ ಮೊದಲ ಬಾರಿಗೆ ವಾಣಿಜ್ಯ ಸಂಚಾರ ಆರಂಭಿಸುವ ಮೂಲಕ ಬದಲಾವಣೆ ಪರ್ವಕ್ಕೆ ನಾಂದಿ ಹಾಡಿರುವುದು ಗಮನಾರ್ಹ.

English summary
Read in Kannada about Goldstone Electric Bus Launched In Himachal pradesh.
Story first published: Saturday, September 23, 2017, 12:24 [IST]
Please Wait while comments are loading...

Latest Photos

ತಕ್ಷಣದ ಆಟೊ ಸುದ್ದಿಗಳನ್ನು ಡ್ರೈವ್ಸ್ಪಾರ್ಕ್ನಲ್ಲಿ ಪಡೆದುಕೊಳ್ಳಿ- Kannada DriveSpark