ಗ್ಲೋಬಲ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಹೋಂಡಾ ಸಿವಿಕ್ ಪಡೆದ ರೇಟಿಂಗ್ ಎಷ್ಟು?
ಕಾರಿನ ಸುರಕ್ಷಾ ವಿಚಾರವಾಗಿ ನಡೆಸಲಾಗುವ ಗ್ಲೋಬಲ್ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಹೋಂಡಾ ಸಿವಿಕ್ ಸೆಡಾನ್ ಕಾರು ಅತ್ಯುತ್ತಮ ಮಾದರಿಯಾಗಿ ಹೊರಹೊಮ್ಮಿದ್ದು, ಹೊಸ ಕಾರಿನಲ್ಲಿರುವ ಸುರಕ್ಷಾ ತಂತ್ರಜ್ಞಾನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.
ಕಾರಿನ ಸುರಕ್ಷಾ ವಿಚಾರವಾಗಿ ನಡೆಸಲಾಗುವ ಗ್ಲೋಬಲ್ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಹೋಂಡಾ ಸಿವಿಕ್ ಸೆಡಾನ್ ಕಾರು ಅತ್ಯುತ್ತಮ ಮಾದರಿಯಾಗಿ ಹೊರಹೊಮ್ಮಿದ್ದು, ಹೊಸ ಕಾರಿನಲ್ಲಿರುವ ಸುರಕ್ಷಾ ತಂತ್ರಜ್ಞಾನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

ಏನಿದು ಕ್ರ್ಯಾಶ್ ಟೆಸ್ಟಿಂಗ್?
ಹೊಸ ಕಾರು ಮಾದರಿಗಳ ಸುರಕ್ಷತೆ ಕುರಿತಂತೆ ಪರೀಕ್ಷೆ ನಡೆಸುವ ಗ್ಲೋಬಲ್ ಎನ್‌ಸಿಎಪಿಯು, ಕಾರುಗಳಲ್ಲಿನ ಸುರಕ್ಷಾ ವೈಶಿಷ್ಟ್ಯತೆಗಳಿಗೆ ರೇಟಿಂಗ್ ನೀಡುತ್ತದೆ.

ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ 5 ಸ್ಟಾರ್ ಪಡೆದರೆ ಅದು ಹೆಚ್ಚು ಸುರಕ್ಷಿತ ಕಾರು ಎಂದರ್ಥ. ಜೊತೆಗೆ 0 ಸ್ಟಾರ್ ರೇಟಿಂಗ್ ಬಂದಲ್ಲಿ ಅದು ಅಸುರಕ್ಷಿತ ಕಾರು ಎಂದು ಕರೆಯಲಾಗುತ್ತದೆ.

ಇದೀಗ ಹೋಂಡಾ ಸಿವಿಕ್ ಸೆಡಾನ್ ಮಾದರಿ ಕೂಡಾ 4 ಸ್ಟಾರ್ ರೇಟಿಂಗ್ ಪಡೆದಿದ್ದು, ಅಪಘಾತ ಸಂದರ್ಭಗಳಲ್ಲಿ ಗ್ರಾಹಕರಿಗೆ ಹೆಚ್ಚಿನ ಸುರಕ್ಷತೆ ನೀಡುವಲ್ಲಿ ಶಕ್ತವಾಗಿದೆ.

ಪ್ರತಿ ಕಾರು ಮಾದರಿಗಳಿಗೂ ಸುರಕ್ಷೆ ವಿಚಾರಕ್ಕಾಗಿ ಜಾಗತಿಕ ಪ್ರಮಾಣ ಪತ್ರದ ಅವಶ್ಯಕತೆಯಿದ್ದು, ಹೋಂಡಾ ಸಿವಿಕ್ ಪಡೆದುಕೊಂಡ ಉತ್ತಮ ರೇಟಿಂಗ್‌ನಿಂದಾಗಿ ಸುರಕ್ಷತೆಯಲ್ಲಿ ಯಾವುದೇ ರಾಜಿ ಮಾಡಿಕೊಂಡಿಲ್ಲ ಎಂಬುವುದು ಖಾತ್ರಿಯಾಗಿದೆ.

ಅಪಘಾತಗಳ ಸಂದರ್ಭಗಳಲ್ಲಿ ಕಾರಿನಲ್ಲಿನಲ್ಲಿರುವ ಏರ್‌ಬ್ಯಾಗ್ ಸೌಲಭ್ಯವು ಯಾವ ರೀತಿ ಕಾರ್ಯನಿರ್ವಹಿಸುತ್ತವೆ ಎಂಬುವುದನ್ನು ಕ್ರ್ಯಾಶ್ ಟೆಸ್ಟ್‌ನಲ್ಲಿ ಅಳೆಯಲಾಗುತ್ತದೆ. ಇದರಲ್ಲಿ ಹೋಂಡಾ ಸಿವಿಕ್ ಸಂಪೂರ್ಣ ಸುರಕ್ಷೆತೆ ನೀಡುವ ಸಾಮರ್ಥ್ಯ ಹೊಂದಿದೆ.
ಗ್ಲೋಬಲ್ ಎಸಿಎಪಿ ನಡೆಸಿದ ಕ್ರ್ಯಾಶ್ ಟೆಸ್ಟಿಂಗ್ ವಿಡಿಯೋ ವೀಕ್ಷಿಸಿ.


Click it and Unblock the Notifications