ಬಿಡುಗಡೆ ಸಜ್ಜುಗೊಂಡ ಹ್ಯುಂಡೈ ಕಾರ್ಲಿನೋ ಕಂಪ್ಯಾಕ್ಟ್ ಎಸ್‌ಯುವಿ
ಕಂಪ್ಯಾಕ್ಟ್ ಎಸ್‌ಯುವಿ ವೈಶಿಷ್ಟ್ಯತೆಗಳೊಂದಿಗೆ ಬಿಡುಗಡೆ ಸಿದ್ಧಗೊಂಡಿರುವ ಕಾರ್ಲಿನೋ ಬಗ್ಗೆ ಹ್ಯುಂಡೈ ಅಧಿಕೃತ ಮಾಹಿತಿ ಬಹಿರಂಗಗೊಳಿಸಿದ್ದು, 2019ರ ಮೊದಲ ತ್ರೈಮಾಸಿಕ ವೇಳೆಗೆ ಬಿಡುಗಡೆಗೊಳಿಸುವ ಬಗ್ಗೆ ಸುಳಿವು ನೀಡಿದೆ.
ಕಂಪ್ಯಾಕ್ಟ್ ಎಸ್‌ಯುವಿ ವೈಶಿಷ್ಟ್ಯತೆಗಳೊಂದಿಗೆ ಬಿಡುಗಡೆ ಸಿದ್ಧಗೊಂಡಿರುವ ಕಾರ್ಲಿನೋ ಬಗ್ಗೆ ಹ್ಯುಂಡೈ ಅಧಿಕೃತ ಮಾಹಿತಿ ಬಹಿರಂಗಗೊಳಿಸಿದ್ದು, 2019ರ ಮೊದಲ ತ್ರೈಮಾಸಿಕ ವೇಳೆಗೆ ಬಿಡುಗಡೆಗೊಳಿಸುವ ಬಗ್ಗೆ ಸುಳಿವು ನೀಡಿದೆ.

ಭಾರತೀಯ ಮಾರುಕಟ್ಟೆಯಲ್ಲಿ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಗಳಿಗೆ ವಿಶೇಷ ಬೇಡಿಕೆಯಿದ್ದು, ಈ ಹಿನ್ನೆಲೆ ಹೊಸ ಮಾದರಿಯ ಕಾರ್ಲಿನೋ ಎಂಬ ಕಂಪ್ಯಾಕ್ಟ್ ಎಸ್‌ಯುವಿಯನ್ನು ಪರಿಚಯಿಸುತ್ತಿರು ಹ್ಯುಂಡೈ ವಿಶೇಷ ವಿನ್ಯಾಸ ಕೈಗೊಂಡಿದೆ.

ಈ ಬಗ್ಗೆ ಮಾತನಾಡಿರುವ ಹ್ಯುಂಡೈ ಇಂಡಿಯಾ ಎಂಡಿ ಆ್ಯಂಡ್ ಸಿಇಒ ವೈ.ಕೆ.ಕೂ, ಕಂಪ್ಯಾಕ್ಟ್ ಎಸ್‌ಯುವಿ ಮಾದರಿಗಳಿಗೆ ಭಾರತದಲ್ಲಿ ಉತ್ತಮ ಮಾರುಕಟ್ಟೆಯಿದ್ದು, 2019ರ ಮೊದಲ ತ್ರೈಮಾಸಿಕ ವೇಳೆಗೆ ಕಾರ್ಲಿನೊ ಬಿಡುಗಡೆ ಖಚಿತ ಎಂದಿದ್ದಾರೆ.

ನಿನ್ನೆಯಷ್ಟೇ ಹ್ಯುಂಡೈ ವೆರ್ನಾ ಬಿಡುಗಡೆಯಾಗಿದ್ದು ಇದೇ ವೇಳೆ ಮಾತನಾಡಿದ ಮಾತನಾಡಿದ ವೈ.ಕೆ.ಕೂ ಕಾರ್ಲಿನೋ, ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ ಬಗ್ಗೆ ಮೊದಲ ಬಾರಿಗೆ ಅಧಿಕೃತ ಮಾಹಿತಿ ಹಂಚಿಕೊಂಡಿದ್ದಾರೆ.

ಪೆಟ್ರೋಲ್ ಮತ್ತು ಡೀಸೆಲ್ ಎರಡು ಮಾದರಿಯಲ್ಲೂ ಹ್ಯುಂಡೈ ಕಾರ್ಲಿನೋ ಕಂಪ್ಯಾಕ್ಟ್ ಎಸ್‌ಯುವಿ ಲಭ್ಯವಿರಲಿದ್ದು, ಪೆಟ್ರೋಲ್ ಆವೃತ್ತಿಯು 1-ಲೀಟರ್ ಟರ್ಬೋ ಚಾರ್ಜ್ಡ್ ಎಂಜಿನ್ ಹಾಗೂ ಡೀಸೆಲ್ ಆವೃತ್ತಿಯು 1.4-ಲೀಟರ್ ಎಂಜಿನ್ ಹೊಂದಿರಲಿದೆ ಎಂದಿದೆ.

ಜೊತೆಗೆ ಅಗ್ಗದ ಬೆಲೆಯಲ್ಲಿ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಬಗ್ಗೆಯು ಮಾಹಿತಿ ಹಂಚಿಕೊಂಡಿರುವ ಹ್ಯುಂಡೈ ಇಂಡಿಯಾ ಸಂಸ್ಥೆಯು, ಫೋರ್ಡ್ ಇಕೋ ಸ್ಪೋರ್ಟ್, ಮಾರುತಿ ಸುಜುಕಿ ಬ್ರೇಜಾ ಮತ್ತು ಬರಲಿರುವ ಟಾಟಾ ನೆಕ್ಸಾ ಹಿಂದಿಕ್ಕುವ ತವಕದಲ್ಲಿದೆ.

ಡ್ರೈವ್ ಸ್ಪಾರ್ಕ್ ಅಭಿಪ್ರಾಯ
ಹತ್ತು ಹಲವು ವಿಶೇಷತೆಗಳೊಂದಿಗೆ ಬಿಡುಗಡೆಯಾಗುತ್ತಿರುವ ಹ್ಯುಂಡೈ ಕಾರ್ಲಿನೋ ಕಂಪ್ಯಾಕ್ಟ್ ಎಸ್‌ಯುವಿ ಕಾರು ಅಗ್ಗದ ಬೆಲೆಯಲ್ಲಿ ಖರೀದಿಗೆ ಲಭ್ಯವಾಗುವ ಸಾಧ್ಯತೆಗಳಿದ್ದು, ಕಂಪ್ಯಾಕ್ಟ್ ಎಸ್‌ಯುವಿಗಳಿಗೆ ಉತ್ತಮ ಪ್ರತಿಸ್ಪರ್ಧಿಯಾಗಲಿದೆ.


Click it and Unblock the Notifications