TRENDING ON ONEINDIA
-
ಸಾಕ್ಷ್ಯಾಧಾರ ಇಲ್ಲದೆ ಪಾಕಿಸ್ತಾನವನ್ನು ದೂಷಿಸಬೇಡಿ ಎಂದ ಚೀನಾ
-
7 ಸೀಟರ್ ವೈಶಿಷ್ಟ್ಯತೆಗಳೊಂದಿಗೆ ಬಿಡುಗಡೆಯಾಗಲಿದೆ ಕಿಯಾ ಕಾರ್ನಿವಾಲ್
-
ಯಾವುದೇ ಆಪ್ಗಳ ಕ್ಯಾಶೆ ಕ್ಲಿಯರ್ ಮಾಡುತ್ತಿರಬೇಕು ಏಕೆ ಮತ್ತು ಹೇಗೆ?
-
'ಬೆಲ್ ಬಾಟಮ್' ಪಾಸು, 'ಕೆಮಿಸ್ಟ್ರಿ ಆಫ್ ಕರಿಯಪ್ಪ'ನ ಫಾರ್ಮೂಲಾ ವರ್ಕೌಟ್
-
ಭಾರತ ಪಾಕ್ ನಡುವೆ ಯುದ್ದ ನಡೆದರೆ ಉಂಟಾಗುವ ಆರ್ಥಿಕ ದುಷ್ಪರಿಣಾಮಗಳೇನು?
-
ಮುಖಮೈಥುನ ನಡೆಸುವ ಪುರುಷರಿಗೆ 'ಬಾಯಿ-ಗಂಟಲ ಕ್ಯಾನ್ಸರ್' ಬರಬಹುದು!
-
ಅಭಿಮಾನಿಗಳಿಂದ ಕೊಹ್ಲಿ-ಎಬಿಡಿ ಪೋಸ್ಟರ್ಗೆ ಹಾಲಭಿಷೇಕ: ವಿಡಿಯೋ
-
ಐಟಿಐ ಲಿಮಿಟೆಡ್ ನಲ್ಲಿ ಕಾನೂನು ಪದವಿ ಅಭ್ಯರ್ಥಿಗೆ ಉದ್ಯೋಗಾವಕಾಶ
ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆಯಲ್ಲಿ ಭಾರತದಿಂದ ಹೊಸ ಮೈಲಿಗಲ್ಲು- ಸಚಿವ ನಿತಿನ್ ಗಡ್ಕರಿ
ಪರಿಸರ ಮಾಲಿನ್ಯ ತಡೆ ಉದ್ದೇಶದಿಂದ ಎಲೆಕ್ಟ್ರಿಕ್ ವಾಹನ ಉತ್ಪಾದನೆ ಮತ್ತು ಮಾರಾಟ ಮೇಲೆ ವಿಶೇಷ ಗಮನಹರಿಸಲಾಗುತ್ತಿದ್ದು, ಭವಿಷ್ಯದ ವಾಹನಗಳ ಉತ್ಪಾದನೆಯಲ್ಲಿ ಭಾರತ ಹೊಸ ಮೈಲಿಗಲ್ಲು ಸಾಧಿಸುತ್ತಿದೆ. ಇದಕ್ಕೆ ಕಾರಣ ಇತರೆ ದೇಶಗಳಿಂತ ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆಯಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಮಹತ್ವದ ಯೋಜನೆ ಬಗ್ಗೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹರ್ಷ ವ್ಯಕ್ತಪಡಿಸಿದ್ದಾರೆ.
2030ರ ವೇಳೆಗೆ ಪೂರ್ಣ ಪ್ರಮಾಣದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕಾರುಗಳನ್ನು ನಿಷೇಧಗೊಳಿಸಿ ಎಲೆಕ್ಟ್ರಿಕ್ ಕಾರುಗಳನ್ನು ರಸ್ತೆಗಿಳಿಸುವ ಮಹತ್ವದ ಯೋಜನೆಗೆ ವಿಶ್ವಾದ್ಯಂತ ಎಲ್ಲ ರಾಷ್ಟ್ರಗಳು ಸಜ್ಜುಗೊಳ್ಳುತ್ತಿದ್ದು, ದೇಶಿಯ ಮಾರುಕಟ್ಟೆಯಲ್ಲೂ ಕೂಡಾ ಎಲ್ಲ ಪ್ರಮುಖ ಆಟೋ ಉತ್ಪಾದಕರು ಭವಿಷ್ಯದ ವಾಹನಗಳ ಉತ್ಪಾದನೆ ಮೇಲೆ ವಿಶೇಷ ಒತ್ತು ನೀಡುತ್ತಿದ್ದಾರೆ.
ಹೀಗಾಗಿ ದೇಶಿಯ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ಕಾರುಗಳಿಗೆ ದಿನದಿಂದ ದಿನಕ್ಕೆ ಎಲೆಕ್ಟ್ರಿಕ್ ವಾಹನಗಳಿಗೆ ಬೇಡಿಕೆ ಹೆಚ್ಚುತ್ತಿದ್ದು, ಹೊಸ ಬೆಳವಣಿಗೆ ಬಗ್ಗೆ ಸಚಿವ ನಿತಿನ್ ಗಡ್ಕರಿ ಖುಷಿ ವ್ಯಕ್ತಪಡಿಸಿರುವುದಲ್ಲದೇ ಭಾರತ ಮುಂದೊಂದು ದಿನ ಎಲೆಕ್ಟ್ರಿಕ್ ಕಾರುಗಳನ್ನು ರಫ್ತು ಮಾಡುವ ಪ್ರಮುಖ ರಾಷ್ಟ್ರಗಳಲ್ಲಿ ಒಂದಾಗಲಿದೆ ಎಂದಿದ್ದಾರೆ.
ನವದೆಹಲಿಯಲ್ಲಿ ನಡೆದ 2017ರ ಆಟೋ ಎಕ್ಸ್‌ಪೋದಲ್ಲಿ ಮಾತನಾಡಿದ ಸಚಿವ ನಿತಿನ್ ಗಡ್ಕರಿ ಅವರು 'ಭವಿಷ್ಯದಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಉತ್ತಮ ಮಾರುಕಟ್ಟೆ ಇದ್ದು, ಗ್ರಾಹಕ ಸ್ನೇಹಿ ಕಾರು ಉತ್ಪನ್ನಗಳ ಜೊತೆ ಜೊತೆಗೆ ಉತ್ಪಾದನೆಯಲ್ಲಿ ಗುಣಮಟ್ಟ ಕಾಯ್ದುಕೊಳ್ಳುವಂತೆ ಆಟೋ ಉತ್ಪಾದನಾ ಸಂಸ್ಥಗಳಿಗೆ ಸಲಹೆ ನೀಡಿದ್ದಾರೆ.
ಇದರ ಜೊತೆಗೆ ಎಲೆಕ್ಟ್ರಿಕ್ ಕಾರುಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಮುಂಬೈ-ದೆಹಲಿ ನಡುವೆ ವಿನೂತನ ರಾಷ್ಟ್ರೀಯ ಹೆದ್ದಾರಿಯೊಂದನ್ನು ನಿರ್ಮಾಣ ಮಾಡುವ ಯೋಜನೆ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು, ಇದರಲ್ಲಿ ಎಲೆಕ್ಟ್ರಿಕ್ ಕಾರುಗಳಿಗೆ ಅವಶ್ಯವಾಗಿ ಬೇಕಾದ ಚಾರ್ಜಿಂಗ್ ಸ್ಟೆಷನ್‌ಗಳನ್ನು ನಿರ್ಮಾಣ ಮಾಡಲಿದ್ದಾರೆ.
ತಪ್ಪದೇ ಓದಿ-ಬಿಎಂಡಬ್ಲ್ಯು ಜಿಎಸ್ 1200 ಬೈಕ್ ಮೇಲೆ ಹರಿದ ಟ್ರಕ್- ಘಟನೆಯಲ್ಲಿ ಪೈಲಟ್ ದುರ್ಮರಣ
ಈ ಮೂಲಕ ಮೆಟ್ರೋ ಸಿಟಿಗಳಲ್ಲಿನ ಪೆಟ್ರೋಲ್, ಡಿಸೇಲ್ ಕಾರುಗಳ ಮಾರಾಟ ಪ್ರಮಾಣವನ್ನು ತಗ್ಗಿಸಿ ಎಲೆಕ್ಟ್ರಿಕ್ ಕಾರುಗಳ ಖರೀದಿಯತ್ತ ಸೆಳೆಯುವ ಉದ್ದೇಶವಿದ್ದು, ಇದಕ್ಕಾಗಿ ಕೇಂದ್ರ ಸರ್ಕಾರ ಕೂಡಾ ಕೆಲವು ವಿನಾಯತಿಗಳನ್ನು ಕೂಡಾ ನೀಡುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಡ್ರೈವ್ ಸ್ಪಾರ್ಕ್ ಅಭಿಪ್ರಾಯ
ಎಲೆಕ್ಟ್ರಿಕ್ ಕಾರುಗಳಿಗೆ ಭಾರತೀಯ ಮಾರುಕಟ್ಟೆ ಸೇರಿದಂತೆ ಮುಂದುವರಿದ ರಾಷ್ಟ್ರಗಳಲ್ಲಿ ಉತ್ತಮ ಭವಿಷ್ಯವಿದ್ದು, ಪರಿಸರ ಮಾಲಿನ್ಯ ತಡೆಯುವ ಉದ್ದೇಶದಿಂದ ಇಂತದೊಂದು ಮಹತ್ವದ ಯೋಜನೆಗಾಗಿ ಎಲ್ಲ ಆಟೋ ಉತ್ಪಾದಕರು ಕೈಜೋಡಿಸಿರುವುದು ಮತ್ತೊಂದು ವಿಶೇಷ ಎನ್ನಬಹುದು.
Trending DriveSpark YouTube Videos
Subscribe To DriveSpark Kannada YouTube Channel - Click Here