ಭಾರತ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್‌ಗೆ ಬಿಎಂಡಬ್ಲ್ಯು ಕಾರು ಗಿಫ್ಟ್ !!

Written By:

ಭಾರತದ ಮಹಿಳಾ ಕ್ರಿಕೆಟ್ ತಂಡದ ನಾಯಕಿಯಾಗಿರುವ ಮಿಥಾಲಿ ರಾಜ್ ಅವರಿಗೆ ಹೈದರಾಬಾದ್ ಬ್ಯಾಡ್ಮಿಂಟನ್ ಅಸೋಸಿಯೇಷನ್ ಉಪಾಧ್ಯಕ್ಷರಾದ ಚಾಮುಂಡೇಶ್ವರಿ‌ನಾಥ್ ಅವರು ಬಿಎಂಡಬ್ಲ್ಯೂ ಕಾರನ್ನು ಕೊಡುಗೆಯಾಗಿ ನೀಡಿದರು.

ಭಾರತ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್‌ಗೆ ಬಿಎಂಡಬ್ಲ್ಯು ಕಾರು ಗಿಫ್ಟ್ !!

ಪುಲ್ಲೇಲ ಗೋಪಿಚಂದ್ ಬ್ಯಾಡ್ಮಿಂಟನ್ ಅಕಾಡೆಮಿಯಲ್ಲಿ ನೆಡೆದ ಸಮಾರಂಭದಲ್ಲಿ ಇತ್ತೀಚೆಗಷ್ಟೇ ಮುಕ್ತಾಯವಾದ ಐಸಿಸಿ ಮಹಿಳೆಯರ ವಿಶ್ವ‌ಕಪ್‌ನಲ್ಲಿ ಉತ್ತಮ ರೀತಿಯ ಪ್ರದರ್ಶನವನ್ನು ಪರಿಗಣಿಸಿ ಹೈದರಾಬಾದ್ ಬ್ಯಾಡ್ಮಿಂಟನ್ ಅಸೋಸಿಯೇಷನ್ ಉಪಾಧ್ಯಕ್ಷರಾದ ಚಾಮುಂಡೇಶ್ವರಿ‌ನಾಥ್ ಈ ಕೊಡುಗೆಯನ್ನು ನೀಡಿದರು.

ಭಾರತ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್‌ಗೆ ಬಿಎಂಡಬ್ಲ್ಯು ಕಾರು ಗಿಫ್ಟ್ !!

ಭಾರತ ಇಂಗ್ಲೆಂಡ್ ವಿರುದ್ಧ ಮಹಿಳೆಯರ ವಿಶ್ವ‌ಕಪ್‌ನಲ್ಲಿ ಫೈನಲ್ ಪ್ರವೇಶಿಸಿ ದೇಶದ ಕೀರ್ತಿಯನ್ನು ಹೆಚ್ಚಿಸಿದ್ದ ಭಾರತದ ಮಹಿಳಾ ತಂಡಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಸಹ ಶುಭ ಹಾರೈಸಿದ್ದರು.

ಭಾರತ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್‌ಗೆ ಬಿಎಂಡಬ್ಲ್ಯು ಕಾರು ಗಿಫ್ಟ್ !!

ಮಿಥಾಲಿ ರಾಜ್ ಅವರು ಭಾರತೀಯ ಮಹಿಳಾ ಕ್ರಿಕೆಟ್ ಕ್ಷೇತ್ರದ ಮೇಲೆ ದೊಡ್ಡ ಮಟ್ಟದಲ್ಲಿ ಪ್ರಭಾವ ಬೀರಿದ್ದು, ಅವರು ಶ್ರೇಷ್ಠ ಪ್ರದರ್ಶನದಿಂದಾಗಿ ಎಷ್ಟೋ ಬಾರಿ ಭಾರತವನ್ನು ಸೋಲಿನಿಂದ ಪಾರು ಮಾಡಿರುವುದನ್ನು ನಾವು ಗಮನಿಸಬಹುದಾಗಿದೆ.

ಭಾರತ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್‌ಗೆ ಬಿಎಂಡಬ್ಲ್ಯು ಕಾರು ಗಿಫ್ಟ್ !!

ಹಲವಾರು ವರ್ಷಗಳಿಂದ ಭಾರತದ ಮಹಿಳಾ ಕ್ರಿಕೆಟ್ ತಂಡದ ಪ್ರಮುಖ ಆಟಗಾರ್ತಿಯಾಗಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿರುವ ಮಿಥಾಲಿ ರಾಜ್, ಸದ್ಯ ಭಾರತದ ತಂಡದ ನಾಯಕಿಯಾಗಿ ಗಮನಾರ್ಹ ಪ್ರದರ್ಶನ ನೀಡುತ್ತಿರುವುದನ್ನು ನಾವು ನೋಡಬಹುದಾಗಿದೆ.

ಭಾರತ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್‌ಗೆ ಬಿಎಂಡಬ್ಲ್ಯು ಕಾರು ಗಿಫ್ಟ್ !!

ಸದ್ಯ, ಭಾರತದ ಮಹಿಳಾ ಕ್ರಿಕೆಟ್ ತಂಡ ಹೆಚ್ಚು ಸದ್ದು ಮಾಡುತ್ತಿದ್ದು, ಚಾಮುಂಡೇಶ್ವರಿ‌ನಾಥ್ ಈ ಮೊದಲು ಷೆವರ್ಲೆ ಕಾರನ್ನು 2007ರಲ್ಲಿ ಮಿಥಾಲಿ ರಾಜ್ ಅವರಿಗೆ ನೀಡಿ ಗೌರವಿಸಿದ್ದನ್ನು ನಾವು ಮರೆಯುವಂತಿಲ್ಲ.

ಭಾರತ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್‌ಗೆ ಬಿಎಂಡಬ್ಲ್ಯು ಕಾರು ಗಿಫ್ಟ್ !!

ಇದೇ ವೇಳೆ ತೆಲಂಗಾಣ ಸರ್ಕಾರದಿಂದ ಒಂದು ನಿವೇಶನ ಹಾಗೂ 1 ಕೋಟಿ. ರು.ನಗದು ಬಹುಮಾನ ನೀಡುವುದಾಗಿ ಘೋಷಣೆ ಮಾಡಿದೆ.

ಭಾರತ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್‌ಗೆ ಬಿಎಂಡಬ್ಲ್ಯು ಕಾರು ಗಿಫ್ಟ್ !!

ಐಸಿಸಿ ವಿಶ್ವಕಪ್ ಟೂರ್ನಿಯಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡವನ್ನು ಫೈನಲ್ ವರೆಗೆ ಯಶಸ್ವಿಯಾಗಿ ಮುನ್ನಡೆಸಿದ್ದ ನಾಯಕಿ ಮಿಥಾಲಿ ರಾಜ್‌ಗೆ ಬಹುಮಾನಗಳ ಮಹಾಪೂರವೇ ಹರಿದು ಬರುತ್ತಿದ್ದು, ಮತ್ತಷ್ಟು ಸಾಧನೆ ಇವರು ಮಾಡಲಿ ಎಂಬುದೇ drivespark ಆಶಯ.

English summary
Indian women's cricket team skipper Mithali Raj on Tuesday was gifted a BMW by Chamudeswarinath, vice president of Hyderabad Badminton Association.
Story first published: Tuesday, August 1, 2017, 16:41 [IST]

Latest Photos

ತಕ್ಷಣದ ಆಟೊ ಸುದ್ದಿಗಳನ್ನು ಡ್ರೈವ್ಸ್ಪಾರ್ಕ್ನಲ್ಲಿ ಪಡೆದುಕೊಳ್ಳಿ- Kannada DriveSpark