10 ಸಾವಿರ ಎಲೆಕ್ಟ್ರಿಕ್ ಕಾರುಗಳನ್ನು ಒದಗಿಸುವ ಟೆಂಡರ್ ಪಡೆದ ಮಹೀಂದ್ರಾ..!!
ಹೊಸ ಯೋಜನೆಯೊಂದನ್ನು ರೂಪಿಸಿರುವ ಇಇಎಸ್ಎಲ್ ಸಂಸ್ಥೆಯು ವಿವಿಧ ಇಲಾಖೆಯ ಅಧಿಕಾರಿಗಳಿಗಾಗಿ 10 ಸಾವಿರ ಎಲೆಕ್ಟ್ರಿಕ್ ಕಾರುಗಳನ್ನು ಖರೀದಿಸಲಾಗುತ್ತಿದೆ.
ಪರಿಸರ ಮಾಲಿನ್ಯ ತಡೆ ಉದ್ದೇಶದಿಂದಾಗಿ ಎಲೆಕ್ಟ್ರಿಕ್ ಕಾರುಗಳಿಗೆ ದಿನದಿಂದ ದಿನಕ್ಕೆ ಬೇಡಿಕೆ ಹೆಚ್ಚುತ್ತಿದ್ದು, ಈ ನಿಟ್ಟಿನಲ್ಲಿ ಹೊಸ ಯೋಜನೆಯೊಂದನ್ನು ರೂಪಿಸಿರುವ ಇಇಎಸ್ಎಲ್ ಸಂಸ್ಥೆಯು ವಿವಿಧ ಇಲಾಖೆಯ ಅಧಿಕಾರಿಗಳಿಗಾಗಿ 10 ಸಾವಿರ ಎಲೆಕ್ಟ್ರಿಕ್ ಕಾರುಗಳನ್ನು ಖರೀದಿಸಲಾಗುತ್ತಿದೆ.

ಎಲೆಕ್ಟ್ರಿಕ್ ಕಾರುಗಳನ್ನು ಒದಗಿಸುವ ಟೆಂಡರ್ ಇದೀಗ ಪ್ರತಿಷ್ಠಿತ ಮಹೀಂದ್ರಾ ಸಂಸ್ಥೆಯ ಪಾಲಾಗಿದ್ದು, ಎನರ್ಜಿ ಎಫಿಷಿಯೆನ್ಸಿ ಸರ್ವಿಸ್ ಲಿಮಿಟೆಡ್ (ಇಇಎಸ್ಎಲ್) ಬೇಡಿಕೆಗೆ ಅನುಗುಣವಾಗಿ ವಿವಿಧ ಮಾದರಿಯ ಎಲೆಕ್ಟ್ರಿಕ್ ಕಾರುಗಳನ್ನು ಒದಗಿಸಲಿದೆ.

ಜಗತ್ತಿನಲ್ಲಿ ಅತಿ ಹೆಚ್ಚು ಮಾಲಿನ್ಯ ಹೊರಸೂಸುವ ರಾಷ್ಟ್ರಗಳಲ್ಲಿ 3 ನೇ ಸ್ಥಾನ ಹೊಂದಿರುವ ಭಾರತವು ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆ ಮತ್ತು ಖರೀದಿಗೆ ವಿಶೇಷ ಗಮನಹರಿಸುತ್ತಿದ್ದು, ಇದಕ್ಕಾಗಿಯೇ ತಳಮಟ್ಟದಿಂದಲೇ ಎಲೆಕ್ಟ್ರಿಕ್ ಕಾರುಗಳಿಗೆ ಉತ್ತೇಜನ ನೀಡುವ ಉದ್ದೇಶ ಹೊಂದಲಾಗಿದೆ.

ಇದಕ್ಕಾಗಿಯೇ ಎನರ್ಜಿ ಎಫಿಷಿಯೆನ್ಸಿ ಸರ್ವಿಸ್ ಲಿಮಿಟೆಡ್ (ಇಇಎಸ್ಎಲ್) ಸಂಸ್ಥೆಯು 10 ಸಾವಿರ ಎಲೆಕ್ಟ್ರಿಕ್ ಕಾರುಗಳ ಖರೀದಿಗಾಗಿ ಟೆಂಡರ್ ನೀಡಲಾಗಿದ್ದು, ಕಲ್ಲಿದ್ದಲು, ಗಣಿ, ವಿದ್ಯುತ್, ಹೊಸ ಮತ್ತು ನವೀಕರಿಸಬಹುದಾದ ಶಕ್ತಿ ಇಲಾಖೆಗಳ ಅಧಿಕಾರಿಗಳು ಮತ್ತು ವಿವಿಧ ಸಚಿವಾಲಯಗಳಿಗೆ ಎಲೆಕ್ಟ್ರಿಕ್ ಕಾರುಗಳನ್ನೇ ಒದಗಿಸುತ್ತಿದೆ.
Recommended Video


ದೇಶದಲ್ಲಿ ವಿದ್ಯುತ್ ವಾಹನಗಳನ್ನು ಉತ್ತೇಜಿಸಲು ಸರ್ಕಾರದ ಮಹತ್ವದ ಯೋಜನೆ ಹೊಂದಿದ್ದು, 2030 ರ ವೇಳೆಗೆ ವಿದ್ಯುತ್ ವಾಹನಗಳು ಮಾತ್ರವೇ ದೇಶದಲ್ಲಿ ಮಾರಾಟಗೊಳ್ಳಲಿವೆ ಎಂದು ವಿದ್ಯುತ್, ಕಲ್ಲಿದ್ದಲು, ಗಣಿ, ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪಿಯುಶ್ ಗೋಯಲ್ ಹೊಸ ಆಶಯ ವ್ಯಕ್ತಪಡಿಸಿದ್ದಾರೆ.

ಇನ್ನು ದೇಶದಲ್ಲಿ ಎಲೆಕ್ಟ್ರಿಕ್ ಕಾರುಗಳನ್ನು ಉತ್ಪಾದಿಸುವ ಸಂಸ್ಥೆಗಳಲ್ಲಿ ಮಹೀಂದ್ರಾ ಮುಂಚೂಣಿಯಲ್ಲಿದ್ದು, ಸಹಜವಾಗಿಯೇ ಬೃಹತ್ ಯೋಜನೆ ಮಹೀಂದ್ರಾ ಪಾಲಾಗಿದೆ. ಈ ಹಿನ್ನೆಲೆ ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆ ವಿಶೇಷ ಗಮನಹರಿಸಿರುವ ಮಹೀಂದ್ರಾ 600 ಕೋಟಿ ರೂಪಾಯಿ ಬಂಡವಾಳ ಹೂಡಿಕೆ ಮಾಡುತ್ತಿದೆ.

ಇನ್ನು ಮಹೀಂದ್ರಾ ಸಂಸ್ಥೆಯ ಇ2ಒ, ಇ2ಒ ಪ್ಲಸ್, ಇ ವೆರಿಟೊ ಎಲೆಕ್ಟ್ರಿಕ್ ಮಾದರಿಗಳು ಅತಿಹೆಚ್ಚು ಜನಪ್ರಿಯತೆ ಹೊಂದಿದ್ದು, ಇವುಗಳನ್ನು ಹೊರತು ಪಡಿಸಿ ಮತ್ತು ಮತ್ತಷ್ಟು ಹೊಸ ಮಾದರಿಗಳನ್ನು ಪರಿಚಯಿಸಲು ಮಹೀಂದ್ರಾ ಮುಂದಾಗಿದೆ.

ಡ್ರೈವ್ ಸ್ಪಾರ್ಕ್ ಅಭಿಪ್ರಾಯ
2030ರ ವೇಳೆಗೆ ದೇಶಾದ್ಯಂತ ಶೇ.90 ರಷ್ಟು ಎಲೆಕ್ಟ್ರಿಕ್ ಕಾರುಗಳನ್ನು ಬಳಕೆ ಮಾಡುವ ಉದ್ದೇಶವಿದ್ದು, ಈ ನಿಟ್ಟಿನಲ್ಲಿ ಎನರ್ಜಿ ಎಫಿಷಿಯೆನ್ಸಿ ಸರ್ವಿಸ್ ಲಿಮಿಟೆಡ್ ತೆಗೆದುಕೊಂಡಿರುವ ನಿರ್ಧಾರ ಸ್ವಾಗತಾರ್ಹ.


Click it and Unblock the Notifications