ಮಹೀಂದ್ರಾ ಟಿಯುವಿ300 ಮತ್ತು ಕೆಯುವಿ100 ಫೇಸ್‌ಲಿಫ್ಟ್ ಬಿಡುಗಡೆಗೆ ಕ್ಷಣಗಣನೆ
ಎಸ್‌ಯುವಿ ಕಾರು ವಿಭಾಗದಲ್ಲಿ ಹೊಸ ನೀರಿಕ್ಷೆ ಹುಟ್ಟುಹಾಕಿರುವ ಮಹೀಂದ್ರಾ ಟಿಯುವಿ300 ಹಾಗೂ ಕೆಯುವಿ100 ಆವೃತ್ತಿಗಳ ಫೇಸ್‌ಲಿಫ್ಟ್ ಮಾದರಿಗಳನ್ನು ಬಿಡುಗಡೆಗೆ ಸಜ್ಜುಗೊಳ್ಳುತ್ತಿದ್ದು, ಹೊಸ ಕಾರಿನ ತಾಂತ್ರಿಕ ಅಂಶಗಳ ಮಾಹಿತಿ ಇಲ್ಲಿದೆ ನೋಡಿ.
ಎಸ್‌ಯುವಿ ಕಾರು ವಿಭಾಗದಲ್ಲಿ ಹೊಸ ನೀರಿಕ್ಷೆ ಹುಟ್ಟುಹಾಕಿರುವ ಮಹೀಂದ್ರಾ ಟಿಯುವಿ300 ಹಾಗೂ ಕೆಯುವಿ100 ಆವೃತ್ತಿಗಳ ಫೇಸ್‌ಲಿಫ್ಟ್ ಮಾದರಿಗಳನ್ನು ಬಿಡುಗಡೆಗೆ ಸಜ್ಜುಗೊಳ್ಳುತ್ತಿದ್ದು, ಹೊಸ ಕಾರಿನ ತಾಂತ್ರಿಕ ಅಂಶಗಳ ಮಾಹಿತಿ ಇಲ್ಲಿದೆ ನೋಡಿ.

ದೇಶಿಯ ಮಾರುಕಟ್ಟೆಯಲ್ಲಿ ಅತಿಹೆಚ್ಚು ಜನಪ್ರಿಯಗೊಂಡಿರುವ ಮಹೀಂದ್ರಾ ಸಂಸ್ಥೆಯು ಇದೇ ತಿಂಗಳು 21ಕ್ಕೆ ಟಿಯುವಿ300 ಹಾಗೂ ಕೆಯುವಿ100 ಆವೃತ್ತಿಗಳ ಫೇಸ್‌ಲಿಫ್ಟ್ ಮಾದರಿಗಳನ್ನು ಬಿಡುಗೊಳಿಸುತ್ತಿದ್ದು, ಹೊಸ ಕಾರಿಗೆ ಭಾರೀ ಬೇಡಿಕೆ ಸೃಷ್ಟಿಯಾಗುವ ಸಾಧ್ಯತೆಗಳಿವೆ.

ಈ ಹಿಂದಿನ ಮಾದರಿಗಳ ಎಂಜಿನ್ ವೈಶಿಷ್ಟ್ಯತೆಗಳನ್ನು ಟಿಯುವಿ300 ಹಾಗೂ ಕೆಯುವಿ100 ಆವೃತ್ತಿಗಳ ಫೇಸ್‌ಲಿಫ್ಟ್ ಮಾದರಿಯಲ್ಲೂ ಮುಂದುವರಿಸಲಾಗಿದ್ದು, ಹೊರ ಮತ್ತು ಒಳ ವಿನ್ಯಾಸಗಳಲ್ಲಿ ಸಾಕಷ್ಟು ಬದಲಾವಣೆ ತರಲಾಗುತ್ತಿದೆ.
Recommended Video


ಫೇಸ್‌ಲಿಫ್ಟ್ ಆವೃತ್ತಿಗಳು ಡ್ಯುಯಲ್ ಟೋನ್ ಬಣ್ಣದೊಂದಿಗೆ ಅಭಿವೃದ್ಧಿಗೊಳಿಸಲಾಗಿದ್ದು, ಅಂಡ್ರಾಯಿಡ್ ಆಟೋ, ನೆವಿಗೆಷನ್, ಮಹೀಂದ್ರಾ ಬ್ಯೂ ಸೆನ್ಸ್ ಆ್ಯಪ್ ವ್ಯವಸ್ಥೆಯನ್ನು ಹೊಂದಿರಲಿದ್ದು, 1.5-ಲೀಟರ್ ಡಿಸೇಲ್ ಎಂಜಿನ್ ಸಾಮರ್ಥ್ಯ ಹೊಂದಿವೆ.

ಇನ್ನು ಕೆಯುವಿ100 ಮಾದರಿಯಲ್ಲಿ ಈ ಹಿಂದಿನ ಮಾದರಿಗಿಂತಲೂ ಸಾಕಷ್ಟು ಬದಲಾವಣೆ ತರಲಾಗಿದ್ದು, ಹೊರ ಮತ್ತು ಒಳಭಾಗದಲ್ಲಿ ಕ್ಯಾಬಿನ್ ಸೌಲಭ್ಯವನ್ನು ಪಡೆದುಕೊಂಡಿರುವುದು ಎಸ್‌ಯುವಿ ಪ್ರಿಯರನ್ನು ಸೆಳೆಯುವಲ್ಲಿ ಸಹಕಾರಿಯಾಗಲಿವೆ.

ಜೊತೆಗೆ ಕೆಯುವಿ100 ಫೇಸ್‌ಲಿಫ್ಟ್ ವಿನ್ಯಾಸಗಳ ಅಭಿವೃದ್ಧಿಗೆ ಹೊಸ ಮಾದರಿಯ ತಂತ್ರಜ್ಞಾನವನ್ನು ಬಳಕೆ ಮಾಡಲಾಗಿದ್ದು, ಈ ಹಿಂದಿನ ಮಾದರಿಗಿಂತಲೂ ಹೆಚ್ಚಿನ ಇಂಧನ ಕಾರ್ಯಕ್ಷಮತೆ, ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ ಒದಗಿಸಲಾಗಿದೆ.

ಡ್ರೈವ್ ಸ್ಪಾರ್ಕ್ ಅಭಿಪ್ರಾಯ
ಎಸ್‌ಯುವಿ ವಿಭಾಗಕ್ಕೆ ಹೊಸ ಮಾದರಿಗಳನ್ನು ಪರಿಚಯಿಸುತ್ತಿರುವ ಮಹೀಂದ್ರಾ ಸಂಸ್ಥೆಯು ಇದೇ ತಿಂಗಳು 21ಕ್ಕೆ ಟಿಯುವಿ300 ಹಾಗೂ ಕೆಯುವಿ100 ಆವೃತ್ತಿಗಳ ಫೇಸ್‌ಲಿಫ್ಟ್ ಬಿಡುಗಡೆಗೊಳಿಸುತ್ತಿದ್ದು, ಉತ್ಸವ ದಿನ ಹಿನ್ನೆಲೆ ಬೆಲೆಗಳ ಮೇಲೆ ಉತ್ತಮ ಆಫರ್ ಒದಗಿಸುವ ಬಗ್ಗೆಯೂ ಸುಳಿವು ನೀಡಿದೆ.


Click it and Unblock the Notifications








