ಸ್ಪಾಟ್ ಟೆಸ್ಟಿಂಗ್‌ನಲ್ಲಿ ಕಾಣಿಸಿಕೊಂಡ ಮಹೀಂದ್ರಾ ಟಿಯುವಿ300 ಪ್ಲಸ್

ಮಹೀಂದ್ರಾ ಸಂಸ್ಥೆಯು ಸದ್ಯ ಟಿಯುವಿ300 ಪ್ಲಸ್ ಬಿಡುಗಡೆಗಾಗಿ ಎದುರು ನೋಡುತ್ತಿದ್ದು, ಈ ಹಿನ್ನೆಲೆ ಹೊಸ ಕಾರಿನ ತಾಂತ್ರಿಕ ಅಂಶಗಳ ಕಾರ್ಯಕ್ಷಮತೆ ಕುರಿತಾಗಿ ಸ್ಪಾಟ್ ಟೆಸ್ಟಿಂಗ್ ನಡೆಸುತ್ತಿದೆ.

By Praveen

ಎಸ್‌ಯುವಿ ಕಾರು ವಿಭಾಗದಲ್ಲಿ ಮುನ್ನಡೆ ಸಾಧಿಸುತ್ತಿರುವ ಮಹೀಂದ್ರಾ ಸಂಸ್ಥೆಯು ಸದ್ಯ ಟಿಯುವಿ300 ಪ್ಲಸ್ ಬಿಡುಗಡೆಗಾಗಿ ಎದುರು ನೋಡುತ್ತಿದ್ದು, ಈ ಹಿನ್ನೆಲೆ ಹೊಸ ಕಾರಿನ ತಾಂತ್ರಿಕ ಅಂಶಗಳ ಕಾರ್ಯಕ್ಷಮತೆ ಕುರಿತಾಗಿ ಸ್ಪಾಟ್ ಟೆಸ್ಟಿಂಗ್ ನಡೆಸುತ್ತಿದೆ.

ಸ್ಪಾಟ್ ಟೆಸ್ಟಿಂಗ್‌ನಲ್ಲಿ ಕಾಣಿಸಿಕೊಂಡ ಮಹೀಂದ್ರಾ ಟಿಯುವಿ300 ಪ್ಲಸ್

ಎಸ್‍‌ಯುವಿ ಪ್ರಿಯರಿಗಾಗಿ ಐದು ಹೊಸ ಕಾರು ಮಾದರಿಗಳನ್ನು ಪರಿಚಯಿಸುವ ಬಗ್ಗೆ ಸುಳಿವು ನೀಡಿರುವ ಮಹೀಂದ್ರಾ ಸಂಸ್ಥೆಯು ಸದ್ಯ ಟಿಯುವಿ300 ಸರಣಿಯ ಮುಂದುವರಿದ ಭಾಗವನ್ನು ಬಿಡುಗಡೆ ಮಾಡುತ್ತಿದ್ದು, ಈ ಹಿಂದಿನ ಜನಪ್ರಿಯ ಜೈಲೊ ಮಾದರಿಯನ್ನು ಸ್ಥಗಿತಗೊಳಿಸಲು ನಿರ್ಧರಿಸಿದೆ.

ಸ್ಪಾಟ್ ಟೆಸ್ಟಿಂಗ್‌ನಲ್ಲಿ ಕಾಣಿಸಿಕೊಂಡ ಮಹೀಂದ್ರಾ ಟಿಯುವಿ300 ಪ್ಲಸ್

ಹೀಗಾಗಿ ಪ್ರಸ್ತುತ ಮಾರುಕಟ್ಟೆಯಲ್ಲಿ ಟಿಯುವಿ300 ಮಾದರಿಗಿಂತ ಪ್ಲಸ್ ಆವೃತ್ತಿಯು ಅತಿ ಹೆಚ್ಚು ಆಕರ್ಷಣೆ ಪಡೆದುಕೊಂಡಿದ್ದು, ಕ್ಯಾಬಿನ್ ಭಾಗ ಮತ್ತು ಕಾರಿನ ಎಡ್ಜ್‌ಗಳಲ್ಲಿ ವಿಶೇಷ ವಿನ್ಯಾಸವನ್ನು ಕೈಗೊಂಡಿರುವುದು ಸ್ಪಾಟ್ ಟೆಸ್ಟಿಂಗ್‌ನಲ್ಲಿ ಖಚಿತವಾಗಿದೆ.

Recommended Video

Bangalore City Police Use A Road Roller To Crush Loud Exhausts
ಸ್ಪಾಟ್ ಟೆಸ್ಟಿಂಗ್‌ನಲ್ಲಿ ಕಾಣಿಸಿಕೊಂಡ ಮಹೀಂದ್ರಾ ಟಿಯುವಿ300 ಪ್ಲಸ್

ಇನ್ನು ಹೆಚ್ಚುವರಿಯಾಗಿ ಟಿಯುವಿ300 ಪ್ಲಸ್ ಮಾದರಿಯಲ್ಲಿ ಆಟೋಮೆಟಿಕ್ ಕ್ಲೈಮೆಟ್ ಕಂಟ್ರೊಲರ್, ಹಿಂಭಾಗದ ಕ್ಯಾಬಿನ್‌ನಲ್ಲೂ ಎಸಿ ವ್ಯವಸ್ಥೆ ಸೇರಿದಂತೆ ಸುಧಾರಿತ ಸುರಕ್ಷಾ ವೈಶಿಷ್ಟ್ಯತೆಗಳನ್ನು ಒದಗಿಸಲಾಗಿದ್ದು, ಚಾಲಕ ಸೇರಿ ಐದು ಜನ ಆರಾಮವಾಗಿ ಪ್ರಯಾಣ ಮಾಡಬಹುದಾಗಿದೆ.

ಸ್ಪಾಟ್ ಟೆಸ್ಟಿಂಗ್‌ನಲ್ಲಿ ಕಾಣಿಸಿಕೊಂಡ ಮಹೀಂದ್ರಾ ಟಿಯುವಿ300 ಪ್ಲಸ್

ಎಂಜಿನ್ ಸಾಮರ್ಥ್ಯ

ಈ ಹಿಂದಿನ ಮಾದರಿಯಂತೆ ಟಿಯುವಿ300 ಪ್ಲಸ್ ಮಾದರಿಯು 1.99-ಲೀಟರ್ ಪೆಟ್ರೋಲ್ ಎಂಜಿನ್ ಹೊಂದಿರಲಿದ್ದು, 2.2-ಲೀಟರ್ ಡೀಸೆಲ್ ಎಂಜಿನ್‌ನೊಂದಿಗೆ 119-ಬಿಎಚ್‌ಪಿ ಉತ್ಪಾದಿಸಬಲ್ಲ ಗುಣಹೊಂದಿದೆ.

ಸ್ಪಾಟ್ ಟೆಸ್ಟಿಂಗ್‌ನಲ್ಲಿ ಕಾಣಿಸಿಕೊಂಡ ಮಹೀಂದ್ರಾ ಟಿಯುವಿ300 ಪ್ಲಸ್

ಇದರಿಂದಾಗಿ ಪ್ರಸ್ತುತ ಮಾರುಕಟ್ಟೆಯಲ್ಲಿರುವ ಪ್ರಮುಖ ಎಸ್‌ಯುವಿಗಳಿಗೆ ಪೈಪೋಟಿ ನೀಡಲಿರುವ ಟಿಯುವಿ300 ಪ್ಲಸ್ ಆವೃತ್ತಿಯು 2018ರ ಮೊದಲ ತ್ರೈಮಾಸಿಕ ಅಂತ್ಯಕ್ಕೆ ಖರೀದಿಗೆ ಲಭ್ಯವಾಗುವ ನೀರಿಕ್ಷೆಯಿದೆ.

ಸ್ಪಾಟ್ ಟೆಸ್ಟಿಂಗ್‌ನಲ್ಲಿ ಕಾಣಿಸಿಕೊಂಡ ಮಹೀಂದ್ರಾ ಟಿಯುವಿ300 ಪ್ಲಸ್

ಡ್ರೈವ್ ಸ್ಪಾರ್ಕ್ ಅಭಿಪ್ರಾಯ

ಎಕ್ಸ್‌ಯುವಿ500 ಫೇಸ್‌ಲಿಫ್ಟ್ ಮತ್ತು ಹೊಸ ಎಂಪಿವಿ ಒಂದನ್ನು ಬಿಡುಗಡೆ ಮಾಡುವ ತವಕದಲ್ಲಿರುವ ಮಹೀಂದ್ರಾ ಸಂಸ್ಥೆಯು ಟಿಯುವಿ300 ಪ್ಲಸ್ ಮಾದರಿಯನ್ನು ಕೂಡಾ ಮಾರುಕಟ್ಟೆಗೆ ಬಿಡುಗಡೆಗೊಳಿಸುತ್ತಿದ್ದು, ಹೊಸ ಕಾರಿನ ಬಿಡುಗಡೆಯ ಸಂಪೂರ್ಣ ಮಾಹಿತಿ ನಿಮ್ಮ ಡ್ರೈವ್ ಸ್ಪಾರ್ಕ್‌ನಲ್ಲಿ ಲಭ್ಯವಾಗಲಿದೆ.

ತಪ್ಪದೇ ಓದಿ-ಹೇಗಿದೆ ನೋಡ್ರಿ ಸ್ವಾಮಿ- ಬೊಲೆರೊದಲ್ಲೇ ನಿರ್ಮಾಣವಾಯ್ತು ಐಷಾರಾಮಿ ಮರ್ಸಿಡಿಸ್ ಬೆಂಝ್ ಎಸ್‌ಯುವಿ

Most Read Articles

Kannada
English summary
Read in Kannada about Mahindra TUV300 Plus Production Model Spotted Testing In India.
Story first published: Wednesday, December 13, 2017, 18:58 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X