ಎಲೆಕ್ಟ್ರಿಕ್ ಕಾರುಗಳ ನಿರ್ಮಾಣದ ಸುಳಿವು ನೀಡಿದ ಮಾರುತಿ ಸುಜುಕಿ

2030ರ ವೇಳೆಗೆ ದೇಶದಲ್ಲಿ ಪೆಟ್ರೋಲ್ ಮತ್ತು ಡಿಸೇಲ್ ಕಾರುಗಳ ಸದ್ದು ಸಂಪೂರ್ಣವಾಗಿ ತಗ್ಗಲಿದ್ದು, ಎಲೆಕ್ಟ್ರಿಕ್ ಕಾರು ಬಳಕೆ ಗಣನೀಯ ಪ್ರಮಾಣದಲ್ಲಿ ಹೆಚ್ಚಳವಾಗಲಿದೆ.

By Praveen

2030ರ ವೇಳೆಗೆ ದೇಶದಲ್ಲಿ ಪೆಟ್ರೋಲ್ ಮತ್ತು ಡಿಸೇಲ್ ಕಾರುಗಳ ಸದ್ದು ಸಂಪೂರ್ಣವಾಗಿ ತಗ್ಗಲಿದ್ದು, ಎಲೆಕ್ಟ್ರಿಕ್ ಕಾರು ಬಳಕೆ ಗಣನೀಯ ಪ್ರಮಾಣದಲ್ಲಿ ಹೆಚ್ಚಳವಾಗಲಿದೆ. ಈ ನಿಟ್ಟಿನಲ್ಲಿ ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆಗೆ ಮಾರುತಿ ಸುಜುಕಿ ವಿಶೇಷ ಯೋಜನೆ ಕೈಗೊಳ್ಳುವ ಸುಳಿವು ನೀಡಿದೆ.

ಎಲೆಕ್ಟ್ರಿಕ್ ಕಾರುಗಳ ನಿರ್ಮಾಣದ ಸುಳಿವು ನೀಡಿದ ಮಾರುತಿ ಸುಜುಕಿ

ಸದ್ಯ ದೇಶಿಯ ಮಾರುಕಟ್ಟೆಯಲ್ಲಿ ಮಹೀಂದ್ರಾ ನಿರ್ಮಾಣದ ಎಲೆಕ್ಟ್ರಿಕ್ ಕಾರು ಆವೃತ್ತಿಗಳ ಮಾತ್ರ ಅಸ್ತಿತ್ವದಲ್ಲಿದ್ದು, ಇದು 2020ರ ವೇಳೆಗೆ ಗಣಣೀಯ ಪ್ರಮಾಣದಲ್ಲಿ ಹೆಚ್ಚಳವಾಗಲಿದೆ. ಜೊತೆಗೆ ವಿವಿಧ ಕಾರು ಉತ್ಪಾದಕರು ವಿವಿಧ ಮಾದರಿಯ ಸುಧಾರಿತ ತಂತ್ರಜ್ಞಾನ ಹೊಂದಿರುವ ಎಲೆಕ್ಟ್ರಿಕ್ ಕಾರು ಆವೃತ್ತಿಗಳನ್ನು ಬಿಡುಗಡೆ ಮಾಡಲಿದ್ದಾರೆ.

ಎಲೆಕ್ಟ್ರಿಕ್ ಕಾರುಗಳ ನಿರ್ಮಾಣದ ಸುಳಿವು ನೀಡಿದ ಮಾರುತಿ ಸುಜುಕಿ

ಈ ಹಿನ್ನೆಲೆ ಭವಿಷ್ಯದ ಕಾರು ಮಾದರಿಗಳ ಮೇಲೆ ಆಸಕ್ತಿ ವಹಿಸಿರುವ ಮಾರುತಿ ಸುಜುಕಿ ಸಂಸ್ಥೆಯು ಪ್ರಸಕ್ತ ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ಹೊಸ ಮಾದರಿಯ ಎಲೆಕ್ಟ್ರಿಕ್ ಕಾರುಗಳನ್ನು ನಿರ್ಮಾಣ ಮಾಡುವ ಯೋಜನೆಯಲ್ಲಿದೆ.

Recommended Video

2017 Skoda Octavia RS Launched In India | In Kannada - DriveSpark ಕನ್ನಡ
ಎಲೆಕ್ಟ್ರಿಕ್ ಕಾರುಗಳ ನಿರ್ಮಾಣದ ಸುಳಿವು ನೀಡಿದ ಮಾರುತಿ ಸುಜುಕಿ

ಇದಲ್ಲದೇ ಭಾರತೀಯ ಮಾರುಕಟ್ಟೆಯಲ್ಲಿ ಶೇ.50ರಷ್ಟು ಮಾರುಕಟ್ಟೆ ಪಾಲನ್ನು ಹೊಂದಿರುವ ಮಾರುತಿ ಸುಜುಕಿ ಸಂಸ್ಥೆಯು, ಎಲೆಕ್ಟ್ರಿಕ್ ಕಾರುಗಳ ನಿರ್ಮಾಣ ಯೋಜನೆ ಕೈಗೊಳ್ಳುವ ಮೂಲಕ ಹಲವು ಬದಲಾವಣೆಗೆ ಕಾರಣವಾಗಲಿದೆ.

ಎಲೆಕ್ಟ್ರಿಕ್ ಕಾರುಗಳ ನಿರ್ಮಾಣದ ಸುಳಿವು ನೀಡಿದ ಮಾರುತಿ ಸುಜುಕಿ

ಇದರ ಜೊತೆ ಸದ್ಯ ಮಾರುಕಟ್ಟೆಯಲ್ಲಿರುವ ಕಾರು ಆವೃತ್ತಿಗಳಲ್ಲೇ ಉತ್ತಮ ಇಂಧನ ಕಾರ್ಯಕ್ಷಮತೆಯನ್ನು ಪರಿಚಯಿಸುವ ಬಗ್ಗೆಯೂ ಚಿಂತನೆ ನಡೆಸಲಾಗಿದ್ದು, ಪರಿಸರಕ್ಕೆ ಪೂರಕವಾದ ಎಲೆಕ್ಟ್ರಿಕ್ ಕಾರುಗಳ ನಿರ್ಮಾಣವನ್ನು ಭವಿಷ್ಯ ಯೋಜನೆಯಾಗಿ ಕೈಗೆತ್ತಿಕೊಳ್ಳಲಿದೆ.

ಎಲೆಕ್ಟ್ರಿಕ್ ಕಾರುಗಳ ನಿರ್ಮಾಣದ ಸುಳಿವು ನೀಡಿದ ಮಾರುತಿ ಸುಜುಕಿ

ಹೀಗಾಗಿ ಕೆಲವು ವರದಿಗಳ ಪ್ರಕಾರ ಮೊದಲ ಹಂತದಲ್ಲಿ ಮಾರುತಿ ಸುಜುಕಿ ಆರಂಭಿಕ ಕಾರು ಆವೃತ್ತಿಗಳು ಎಲೆಕ್ಟ್ರಿಕ್ ಎಂಜಿನ್ ಪಡೆದುಕೊಳ್ಳುವ ಸಾಧ್ಯತೆಗಳಿದ್ದು, ಮಹೀಂದ್ರಾ ಸೇರಿದಂತೆ ಮುಂಬರುವ ಪ್ರಮುಖ ಎಲೆಕ್ಟ್ರಿಕ್ ಮಾದರಿಗಳಿಗೆ ತೀವ್ರ ಸ್ಪರ್ಧೆ ನೀಡಲಿವೆ.

ಎಲೆಕ್ಟ್ರಿಕ್ ಕಾರುಗಳ ನಿರ್ಮಾಣದ ಸುಳಿವು ನೀಡಿದ ಮಾರುತಿ ಸುಜುಕಿ

ಡ್ರೈವ್ ಸ್ಪಾರ್ಕ್ ಅಭಿಪ್ರಾಯ

ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆ ಮತ್ತು ಮಾರಾಟ ಮೇಲೆ ಕೆಲವು ರಿಯಾಯ್ತಿಗಳನ್ನು ನೀಡಲಾಗುತ್ತಿದ್ದು, ಇದೇ ಉದ್ದೇಶದಿಂದಾಗಿ ಎಲ್ಲ ಪ್ರಮುಖ ಕಾರು ಉತ್ಪಾದಕರು ಕೂಡಾ ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆಗೆ ವಿಶೇಷ ಯೋಜನೆ ರೂಪಿಸುತ್ತಿರುವುದು ಬೃಹತ್ ಬದಲಾವಣೆಗೆ ಕಾರಣವಾಗಲಿದೆ.

Most Read Articles

Kannada
English summary
Read in Kannada about Maruti Suzuki Reveals Its Electric Car Plans.
Story first published: Wednesday, September 6, 2017, 15:10 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X