ಆಗಸ್ಟ್ 22ಕ್ಕೆ ನ್ಯೂ ಜನರೇಷನ್ ಹ್ಯುಂಡೈ ವೆರ್ನಾ ಬಿಡುಗಡೆ
ದಕ್ಷಿಣ ಕೊರಿಯಾದ ಪ್ರತಿಷ್ಠಿತ ಕಾರು ಉತ್ಪಾದನಾ ಸಂಸ್ಥೆಯಾದ ಹ್ಯುಂಡೈ ಇಂಡಿಯಾ ನ್ಯೂ ಜನರೇಷನ್ ವೆರ್ನಾ ಕಾರನ್ನು ಆಗಸ್ಟ್ 22ಕ್ಕೆ ಬಿಡುಗಡೆ ಮಾಡುತ್ತಿದ್ದು, ಈ ಹಿನ್ನೆಲೆ ಹೊಸ ಕಾರಿನ ತಾಂತ್ರಿಕ ವಿವರಗಳನ್ನು ಬಿಡುಗಡೆಗೊಳಿಸಲಾಗಿದೆ.
ದಕ್ಷಿಣ ಕೊರಿಯಾದ ಪ್ರತಿಷ್ಠಿತ ಕಾರು ಉತ್ಪಾದನಾ ಸಂಸ್ಥೆಯಾದ ಹ್ಯುಂಡೈ ಇಂಡಿಯಾ ನ್ಯೂ ಜನರೇಷನ್ ವೆರ್ನಾ ಕಾರನ್ನು ಆಗಸ್ಟ್ 22ಕ್ಕೆ ಬಿಡುಗಡೆ ಮಾಡುತ್ತಿದ್ದು, ಈ ಹಿನ್ನೆಲೆ ಹೊಸ ಕಾರಿನ ತಾಂತ್ರಿಕ ವಿವರಗಳನ್ನು ಬಿಡುಗಡೆಗೊಳಿಸಲಾಗಿದೆ.

ಕೆ 2 ಫ್ಲ್ಯಾಟ್ ಫಾರ್ಮ್ ಆಧಾರ ಮೇಲೆ ಅಭಿವೃದ್ದಿಗೊಂಡಿರುವ 5ನೇ ಜನರೇಷನ್ ಹ್ಯುಂಡೈ ವೆರ್ನಾ ಕಾರು ಬಿಡುಗಡೆಗೊಳ್ಳುತ್ತಿದ್ದು, ಸುಧಾರಿತ ತಂತ್ರಜ್ಞಾನ ಹೊಂದಿರುವ ವಿನೂತನ ವೈಶಿಷ್ಟ್ಯತೆಗಳನ್ನು ಪಡೆದುಕೊಂಡಿರುವುದು ಮತ್ತೊಂದು ವಿಶೇಷ.

ಸುರಕ್ಷತೆಗಾಗಿ ಹೊಸ ಕಾರಿನಲ್ಲಿ ವಿಶೇಷ ಗಮನಹರಿಸಲಾಗಿದ್ದು, ಕ್ರ್ಯಾಶಿಂಗ್ ಬಲಾಢ್ಯತೆಯನ್ನು ಹೆಚ್ಚಿಸಲಾಗಿದೆ. ಜೊತೆಗೆ ಪ್ರಸ್ತುತ ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ಒಳ ಮತ್ತು ಹೊರ ವಿನ್ಯಾಸಗಳನ್ನು ಕೈಗೊಳ್ಳಲಾಗಿದೆ.

ಹೊಸ ಕಾರಿನ ಬಾರ್ಡರ್‌ಗಳಲ್ಲಿ ಎಲ್‌ಇಡಿ ವ್ಯವಸ್ಥೆಯಿದ್ದು, ಹೆಡ್‌ಲ್ಯಾಂಪ್ ಮತ್ತು ಟೈಲ್‌ಲ್ಯಾಂಪ್ ವಿಭಾಗದಲ್ಲಿ ಹೊಸ ತಲೆಮಾರಿನ ವಿನ್ಯಾಸಗಳನ್ನು ಅಭಿವೃದ್ದಿಗೊಳಿಸಲಾಗಿದೆ.

ಮುಂಭಾಗ ಮತ್ತು ಹಿಂಭಾಗದ ನೋಟದಲ್ಲಿ ವೆರ್ನಾ ಮಾದರಿಗೆ ಸ್ಪೋರ್ಟ್ ಲುಕ್ ನೀಡಲಾಗಿದ್ದು, 7-ಇಂಚಿನ ಇನ್ಫೋಮೆಟಿಕ್ ಡಿಸ್‌ಫೈ, ಡ್ಯುಯಲ್ ನೆವಿಗೆಷನ್ ಸಿಸ್ಟಮ್ ಮತ್ತು ಕಾರ್ ಪಾರ್ಕಿಂಗ್‌ಗೆ ನೆರವಾಗಬಲ್ಲ ರಿರ್ ಕ್ಯಾಮೆರಾ ಸೌಲಭ್ಯ ನೀಡಲಾಗಿದೆ.

ಇನ್ನು ವೆರ್ನಾ ಕಾರು ಮಾದರಿಯೂ 1.6-ಲೀಟರ್ ಪೆಟ್ರೋಲ್ ಎಂಜಿನ್ ಮತ್ತು 1.6-ಲೀಟರ್ ಡೀಸೆಲ್ ಎಂಜಿನ್‌ನೊಂದಿಗೆ ಲಭ್ಯವಾಗಲಿದ್ದು, 6-ಸ್ಪೀಡ್ ಆಟೋಮ್ಯಾಟಿಕ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ ಗೇರ್‌ಬಾಕ್ಸ್ ಪಡೆದುಕೊಂಡಿದೆ.

ಹೀಗಾಗಿ ಪೆಟ್ರೋಲ್ ಎಂಜಿನ್ 121.3-ಬಿಎಚ್‌ಪಿ ಮತ್ತು ಡೀಸೆಲ್ ಎಂಜಿನ್ 126.2-ಬಿಎಚ್‌ಪಿ ಉತ್ಪಾದಿಸಬಲ್ಲ ಸಾಮರ್ಥ್ಯವನ್ನು ಹೊಂದಿರುವ ಹ್ಯುಂಡೈ ವೆರ್ನಾ, 16-ಇಂಚಿನ್ ಅಲಾಯ್ ಚಕ್ರಗಳೊಂದಿಗೆ ಲಭ್ಯವಿದೆ.

ಡ್ರೈವ್ ಸ್ಪಾರ್ಕ್ ಅಭಿಪ್ರಾಯ
ಪ್ರಸ್ತತ ಮಾರುಕಟ್ಟೆಯಲ್ಲಿ ಅತಿಹೆಚ್ಚು ಬೇಡಿಕೆ ಹೊಂದಿರುವ ಮಾರುತಿ ಸುಜುಕಿ ಸಿಯಾಜ್ ಮತ್ತು ಹೋಂಡಾ ಸಿಟಿಗೆ ಪ್ರತಿಸ್ಪರ್ಧಿಯಾಗುವ ನಿಟ್ಟಿನಲ್ಲಿ ವೆರ್ನಾ ಕಾರನ್ನು ಅಭಿವೃದ್ಧಿಗೊಳ್ಳುತ್ತಿದ್ದು, ಬೆಲೆಗಳು ರೂ.8.50 ಲಕ್ಷದಿಂದ ರೂ.10.50ಲಕ್ಷ ಇರಬಹುದೆಂದು ಅಂದಾಜಿಸಲಾಗಿದೆ.


Click it and Unblock the Notifications