ಭಾರತದಲ್ಲಿ ಬಿಡುಗಡೆಯಾಗಲಿವೆ ನಿಸ್ಸಾನ್ ಎಲೆಕ್ಟ್ರಿಕ್ ಹ್ಯಾಚ್‌ಬ್ಯಾಕ್ ಕಾರುಗಳು..!!

ಹೊಸ ಯೋಜನೆಯೊಂದನ್ನು ರೂಪಿಸಿರುವ ನಿಸ್ಸಾನ್ ಇಂಡಿಯಾ ಸಂಸ್ಥೆಯು ಭಾರತೀಯ ಮಾರುಕಟ್ಟೆಗಾಗಿ ಎಲೆಕ್ಟ್ರಿಕ್ ಹ್ಯಾಚ್‌ಬ್ಯಾಕ್ ಕಾರುಗಳನ್ನು ಬಿಡುಗಡೆಗೊಳಿಸುವ ಬಗ್ಗೆ ಚಿಂತನೆ ನಡೆಸುತ್ತಿದೆ.

By Praveen

ವಿಶ್ವಾದ್ಯಂತ ಎಲೆಕ್ಟ್ರಿಕ್ ಕಾರುಗಳಿಗೆ ಬೇಡಿಕೆ ಹೆಚ್ಚುತ್ತಿದ್ದು, ಈ ನಿಟ್ಟಿನಲ್ಲಿ ಹೊಸ ಯೋಜನೆಯೊಂದನ್ನು ರೂಪಿಸಿರುವ ನಿಸ್ಸಾನ್ ಇಂಡಿಯಾ ಸಂಸ್ಥೆಯು ಭಾರತೀಯ ಮಾರುಕಟ್ಟೆಗಾಗಿ ಎಲೆಕ್ಟ್ರಿಕ್ ಹ್ಯಾಚ್‌ಬ್ಯಾಕ್ ಕಾರುಗಳನ್ನು ಬಿಡುಗಡೆಗೊಳಿಸುವ ಬಗ್ಗೆ ಚಿಂತನೆ ನಡೆಸುತ್ತಿದೆ.

ಭಾರತದಲ್ಲಿ ಬಿಡುಗಡೆಯಾಗಲಿವೆ ನಿಸ್ಸಾನ್ ಎಲೆಕ್ಟ್ರಿಕ್ ಹ್ಯಾಚ್‌ಬ್ಯಾಕ್

2030ರ ವೇಳೆಗೆ ಜಗತ್ತಿನಲ್ಲಿ ಶೇ. 90ರಷ್ಟು ಎಲೆಕ್ಟ್ರಿಕ್ ಕಾರುಗಳನ್ನು ರಸ್ತೆಗಿಳಿಸುವ ಬಗ್ಗೆ ಗಂಭೀರ ಚಿಂತನೆಗಳು ನಡೆಯುತ್ತಿದ್ದು, ಭಾರತೀಯ ಮಾರುಕಟ್ಟೆಯ ಅನುಗುಣವಾಗಿ ಇ-ಪವರ್ ಎಲೆಕ್ಟ್ರಿಕ್ ಕಾರುಗಳನ್ನು ಅಭಿವೃದ್ಧಿಗೊಳಿಸಲು ನಿಸ್ಸಾನ್ ಮಹತ್ವದ ಯೋಜನೆಯೊಂದನ್ನು ಸಿದ್ಧಗೊಳಿಸಿದೆ.

ಭಾರತದಲ್ಲಿ ಬಿಡುಗಡೆಯಾಗಲಿವೆ ನಿಸ್ಸಾನ್ ಎಲೆಕ್ಟ್ರಿಕ್ ಹ್ಯಾಚ್‌ಬ್ಯಾಕ್

ವರದಿಗಳ ಪ್ರಕಾರ ನಿಸ್ಸಾನ್ ಸಂಸ್ಥೆಯು ಸದ್ಯ ಮಾರುಕಟ್ಟೆಯಲ್ಲಿ ಖರೀದಿ ಲಭ್ಯವಿರುವ ಪೆಟ್ರೋಲ್ ಎಂಜಿನ್ ಮಾದರಿಗಳನ್ನೇ ಎಲೆಕ್ಟ್ರಿಕ್ ಮಾದರಿಗಳಿಗೆ ಪರಿವರ್ತಿಸುವ ಗುರಿ ಹೊಂದಲಾಗಿದೆ ಎನ್ನಲಾಗಿದ್ದು, ಪೆಟ್ರೋಲ್ ಮೂಲಕವೇ ಎಲೆಕ್ಟ್ರಿಕ್ ಎಂಜಿನ್ ಚಾರ್ಜ್ ಮಾಡಬಹುದಾದ ವ್ಯವಸ್ಥೆಯನ್ನು ಕಲ್ಪಿಸುವ ಸಾಧ್ಯತೆಗಳಿವೆ.

Recommended Video

2017 Skoda Octavia RS Launched In India | In Kannada - DriveSpark ಕನ್ನಡ
ಭಾರತದಲ್ಲಿ ಬಿಡುಗಡೆಯಾಗಲಿವೆ ನಿಸ್ಸಾನ್ ಎಲೆಕ್ಟ್ರಿಕ್ ಹ್ಯಾಚ್‌ಬ್ಯಾಕ್

ಇದಕ್ಕೆ ಪ್ರಮುಖ ಕಾರಣ ಏನೆಂದರೆ ಭಾರತದಲ್ಲಿ ಮುಂದುವರಿದ ರಾಷ್ಟ್ರಗಳಲ್ಲಿ ಲಭ್ಯವಿರುವಂತೆ ಅಧಿಕ ಸಂಖ್ಯೆಯ ಎಲೆಕ್ಟ್ರಿಕ್ ಚಾರ್ಜಿಂಗ್ ಸ್ಟೇಷನ್‌ಗಳಿಲ್ಲ. ಈ ಕಾರಣಗಳಿಂದಾಗಿ ಪೆಟ್ರೋಲ್‌ನಿಂದಲೇ ಎಲೆಕ್ಟ್ರಿಕ್ ಎಂಜಿನ್ ಚಾರ್ಜ್ ಮಾಡಬಹುದಾದ ಸಾಧ್ಯತೆಗಳ ಬಗ್ಗೆ ಸಂಶೋಧನೆ ಕೈಗೊಂಡಿದೆ.

ಭಾರತದಲ್ಲಿ ಬಿಡುಗಡೆಯಾಗಲಿವೆ ನಿಸ್ಸಾನ್ ಎಲೆಕ್ಟ್ರಿಕ್ ಹ್ಯಾಚ್‌ಬ್ಯಾಕ್

ಒಂದು ವೇಳೆ ಹೊಸ ಯೋಜನೆಗೆ ಹಸಿರು ನಿಶಾನೆ ಸಿಕ್ಕಲ್ಲಿ 2019ರ ವೇಳೆಗೆ ಭಾರತದಲ್ಲಿ ನಿಸ್ಸಾನ್‌ನಿಂದ ವಿವಿಧ ಮಾದರಿಗಳ ಎಲೆಕ್ಟ್ರಿಕ್ ಕಾರು ಆವೃತ್ತಿಗಳು ಬಿಡುಗಡೆಯಾಗಲಿದ್ದು, 2025ರ ಹೊತ್ತಿಗೆ ಪೂರ್ಣ ಪ್ರಮಾಣದಲ್ಲಿ ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆಯನ್ನು ಕೈಗೊಳ್ಳುವ ಸಾಧ್ಯತೆಗಳಿವೆ.

ಭಾರತದಲ್ಲಿ ಬಿಡುಗಡೆಯಾಗಲಿವೆ ನಿಸ್ಸಾನ್ ಎಲೆಕ್ಟ್ರಿಕ್ ಹ್ಯಾಚ್‌ಬ್ಯಾಕ್

ಈ ಬಗ್ಗೆ ಮಾತನಾಡಿರುವ ನಿಸ್ಸಾನ್ ಗ್ಲೋಬಲ್ ಮಾರ್ಕೆಟಿಂಗ್ ಉಪಾಧ್ಯಕ್ಷ ಡೇನಿಯಲ್ ಷಿಲ್ಲಾಸಿ, ಭಾರತೀಯ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ಕಾರುಗಳ ಮಾರುಕಟ್ಟೆಗೆ ಉತ್ತಮ ಭವಿಷ್ಯವಿದ್ದು, ಈ ನಿಟ್ಟಿನಲ್ಲಿ ನಿಸ್ಸಾನ್ ಸಂಸ್ಥೆಯು ಭಾರತೀಯ ಗ್ರಾಹಕರಿಗಾಗಿ ಮಹತ್ವದ ಯೋಜನೆಯೊಂದನ್ನು ಕೈಗೊಳ್ಳಲಿದ್ದೇವೆ' ಎಂದಿದ್ದಾರೆ.

ಭಾರತದಲ್ಲಿ ಬಿಡುಗಡೆಯಾಗಲಿವೆ ನಿಸ್ಸಾನ್ ಎಲೆಕ್ಟ್ರಿಕ್ ಹ್ಯಾಚ್‌ಬ್ಯಾಕ್

ಡ್ರೈವ್ ಸ್ಪಾರ್ಕ್ ಅಭಿಪ್ರಾಯ

ಎಲೆಕ್ಟ್ರಿಕ್ ಕಾರುಗಳಿಗೆ ದೇಶದಲ್ಲಿ ಭಾರೀ ಪ್ರಮಾಣದ ಬೇಡಿಕೆ ಸೃಷ್ಠಿಯಾಗುತ್ತಿದ್ದು, ಈ ನಿಟ್ಟಿನಲ್ಲಿ ಪ್ರಮುಖ ಕಾರು ಉತ್ಪಾದಕರು ದೇಶಿಯ ಮಾರುಕಟ್ಟೆಗಾಗಿ ವಿವಿಧ ಯೋಜನೆಗಳನ್ನು ಕೈಗೊಳ್ಳುತ್ತಿರುವುದು ಮಹತ್ವದ ಮೈಲಿಗಲ್ಲು ಸಾಧಿಸುತ್ತಿದೆ ಎನ್ನಬಹುದು.

Most Read Articles

Kannada
English summary
Read in Kannada about Nissan Note e-Power Hatchback Being Evaluated For India.
Story first published: Monday, September 11, 2017, 11:53 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X