ಪೆಟ್ರೋಲಿಯಂ ಉತ್ಪನ್ನಗಳು ಜಿಎಸ್‌ಟಿ ವ್ಯಾಪ್ತಿಗೆ ಬಂದ್ರೆ ಗ್ರಾಹಕರಿಗೆ ಏನು ಪ್ರಯೋಜನ?

ತೈಲ ಉತ್ಪನ್ನಗಳು ಜಿಎಸ್‌ಟಿ ವ್ಯಾಪ್ತಿಗೆ ಬಂದಲ್ಲಿ ಆಗಬಹುದಾದ ಸಾಧಕ ಮತ್ತು ಭಾದಕಗಳ ಕುರಿತಾದ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.

By Praveen

ಈವರೆಗೂ ಜಿಎಸ್'ಟಿ ವ್ಯಾಪ್ತಿಯಿಂದ ಹೊರಗಿದ್ದ ತೈಲ ಉತ್ಪನ್ನಗಳು ಇನ್ಮುಂದೆ ಜಿಎಸ್​ಟಿ ವ್ಯಾಪ್ತಿಗೆ ಒಳಪಡುವ ಸಾಧ್ಯತೆಗಳಿದ್ದು, ಈ ಹಿನ್ನೆಲೆ ತೈಲ ಉತ್ಪನ್ನಗಳು ಜಿಎಸ್‌ಟಿ ವ್ಯಾಪ್ತಿಗೆ ಬಂದಲ್ಲಿ ಆಗಬಹುದಾದ ಸಾಧಕ ಮತ್ತು ಭಾದಕಗಳ ಕುರಿತಾದ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.

ಪೆಟ್ರೋಲಿಯಂ ಉತ್ಪನಗಳು ಜಿಎಸ್‌ಟಿ ವ್ಯಾಪ್ತಿಗೆ ಬಂದ್ರೆ ಏನು ಪ್ರಯೋಜನ?

ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್​ಟಿ ವ್ಯಾಪ್ತಿಗೆ ಒಳಪಡಿಸುವ ಉದ್ದೇಶದಿಂದ ನಿನ್ನೆಯಷ್ಟೇ ನಡೆದ ತೈಲ ಬೆಲೆ ಏರಿಕೆ ಕುರಿತಾದ ಸಭೆಯಲ್ಲಿ ಒಮ್ಮತದ ನಿರ್ಧಾರ ಕೈಗೊಂಡಿರುವ ಕೇಂದ್ರ ಸರ್ಕಾರವು ಮತ್ತೊಂದು ಮಹತ್ವದ ನಿರ್ಧಾರವನ್ನು ಪ್ರಕಟಿಸಲು ಸಜ್ಜುಗೊಳ್ಳುತ್ತಿದೆ.

ಪೆಟ್ರೋಲಿಯಂ ಉತ್ಪನಗಳು ಜಿಎಸ್‌ಟಿ ವ್ಯಾಪ್ತಿಗೆ ಬಂದ್ರೆ ಏನು ಪ್ರಯೋಜನ?

ಇಂಧನ ಸಚಿವ ಧರ್ಮೇಂದ್ರ ಪ್ರಧಾನ್ ನೇತೃತ್ವದ ಸಭೆಯಲ್ಲಿ ಈ ಕುರಿತು ಚರ್ಚೆ ನಡೆದಿದ್ದು, ತೈಲ ಉತ್ಪನ್ನ ಜಿಎಸ್​ಟಿ ವ್ಯಾಪ್ತಿಗೆ ಬಂದರೆ ದರ ಇಳಿಕೆ ಸಾಧ್ಯತೆ ಇದೆ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಲಾಗಿದೆ.

Recommended Video

Tata Tiago XTA AMT Launched In India | In Kannada - DriveSpark ಕನ್ನಡ
ಪೆಟ್ರೋಲಿಯಂ ಉತ್ಪನಗಳು ಜಿಎಸ್‌ಟಿ ವ್ಯಾಪ್ತಿಗೆ ಬಂದ್ರೆ ಏನು ಪ್ರಯೋಜನ?

ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತರಬೇಕು ಎಂದು ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿಕೆ ನೀಡಿದ್ದ ಬೆನ್ನಲ್ಲೇ ಕೇಂದ್ರ ಸರ್ಕಾರ ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತರುತ್ತದೆಯೇ ಎಂಬ ಪ್ರಶ್ನೆ ಎದುರಾಗಿದೆ.

ಪೆಟ್ರೋಲಿಯಂ ಉತ್ಪನಗಳು ಜಿಎಸ್‌ಟಿ ವ್ಯಾಪ್ತಿಗೆ ಬಂದ್ರೆ ಏನು ಪ್ರಯೋಜನ?

ಧರ್ಮೇಂದ್ರ ಪ್ರಧಾನ್ ಸಲಹೆ ಬಗ್ಗೆ ಚರ್ಚೆಗಳು ನಡೆಯುತ್ತಿದ್ದು, ಮಾರುಕಟ್ಟೆ ವಿಶ್ಲೇಷಕರ ಪ್ರಕಾರ ಜಿಎಸ್ ಟಿ ವ್ಯಾಪ್ತಿಗೆ ಪೆಟ್ರೋಲಿಯಂ ಉತ್ಪನ್ನಗಳನ್ನು ತರುವುದರಿಂದ ಗ್ರಾಹಕರಿಗೆ ಅನುಕೂಲವಾಗಲಿದೆ.

ಪೆಟ್ರೋಲಿಯಂ ಉತ್ಪನಗಳು ಜಿಎಸ್‌ಟಿ ವ್ಯಾಪ್ತಿಗೆ ಬಂದ್ರೆ ಏನು ಪ್ರಯೋಜನ?

ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್ ಟಿ ವ್ಯಾಪ್ತಿಗೆ ತರುವುದರಿಂದ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಭಾರಿ ಪ್ರಮಾಣದಲ್ಲಿ ಇಳಿಕೆಯಾಗಲಿದ್ದು, ಒಂದು ವೇಳೆ ಶೇ.12 ರ ತೆರಿಗೆ ವ್ಯಾಪ್ತಿಗೆ ಉತ್ಪನ್ನಗಳನ್ನು ತಂದರೆ ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 38.1 ರೂಪಾಯಿಗೆ ಪೆಟ್ರೋಲ್ ಸಿಗುತ್ತದೆ.

ಪೆಟ್ರೋಲಿಯಂ ಉತ್ಪನಗಳು ಜಿಎಸ್‌ಟಿ ವ್ಯಾಪ್ತಿಗೆ ಬಂದ್ರೆ ಏನು ಪ್ರಯೋಜನ?

ಶೇ.18 ರಷ್ಟು ತೆರಿಗೆ ವ್ಯಾಪ್ತಿಗೆ ತರುವುದಾದರೆ 40.5 ರೂಪಾಯಿಗೆ, ಶೇ.28 ರಷ್ಟು ತೆರಿಗೆ ವ್ಯಾಪ್ತಿಗೆ ತಂದರೆ 43.44 ರೂಪಾಯಿಗಳಿಗೆ ಪೆಟ್ರೋಲಿಯಂ ಉತ್ಪನ್ನಗಳು ಗ್ರಾಹಕರಿಗೆ ಸಿಗುತ್ತದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಪೆಟ್ರೋಲಿಯಂ ಉತ್ಪನಗಳು ಜಿಎಸ್‌ಟಿ ವ್ಯಾಪ್ತಿಗೆ ಬಂದ್ರೆ ಏನು ಪ್ರಯೋಜನ?

ಆದ್ರೆ ಕೇಂದ್ರ ಸರ್ಕಾರವು ಇಂತದೊಂದು ಮಹತ್ವದ ನಿರ್ಧಾರ ಪ್ರಕಟಿಸುವುದಕ್ಕೂ ಮುನ್ನ ಎಲ್ಲಾ ರಾಜ್ಯಗಳ ಅಭಿಪ್ರಾಯ ಪಡೆಯುವುದು ಅವಶ್ಯಕತೆಯಿದ್ದು, ಇದಕ್ಕೆ ವಿರೋಧ ವ್ಯಕ್ತವಾಗುವ ಸಾಧ್ಯತೆಗಳನ್ನು ಅಲ್ಲಗಳೆಯುವಂತಿಲ್ಲ. ಯಾಕೇಂದ್ರೆ ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ತೆರಿಗೆಯೇ ಆಯಾ ರಾಜ್ಯ ಸರ್ಕಾರಗಳ ಬಹುದೊಡ್ಡ ಆದಾಯ ಮೂಲವಾಗಿದೆ.

ಪೆಟ್ರೋಲಿಯಂ ಉತ್ಪನಗಳು ಜಿಎಸ್‌ಟಿ ವ್ಯಾಪ್ತಿಗೆ ಬಂದ್ರೆ ಏನು ಪ್ರಯೋಜನ?

ಹೀಗಾಗಿ ಆಯಾ ರಾಜ್ಯಗಳ ಆದಾಯಕ್ಕೆ ಯಾವುದೇ ತೊಂದರೆ ಆಗದಂತೆ ಮತ್ತು ತೈಲ ಉತ್ಪಾದನಾ ಸಂಸ್ಥೆಗಳಿಗೆ ಪೂರಕವಾಗಿ ನಿರ್ಧಾರ ಪ್ರಕಟಿಸುವ ಜವಾಬ್ದಾರಿ ಕೇಂದ್ರದ ಮೇಲಿದೆ.

Most Read Articles

Kannada
English summary
Read in Kannada about petroleum products will under gst. So how it would benefit to consumers.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X