Just In
- 10 hrs ago ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- 11 hrs ago ಟೊಯೊಟಾದ ಫಾರ್ಚ್ಯೂನರ್ನಲ್ಲೂ ಸಿಗಲಿದೆ ಹೈಬ್ರಿಡ್: ಇದರ ಮೈಲೇಜ್ ಕೇಳಿ ಸುಸ್ತಾದ ಗ್ರಾಹಕರು!
- 11 hrs ago ನಿಜವಾದ ಮಾನವತಾವಾದಿ: ನಟ ರಾಘವ ಲಾರೆನ್ಸ್ರಿಂದ ವಿಶೇಷ ಚೇತನ ಸಾಧಕರಿಗೆ 13 ಟಿವಿಎಸ್ ಸ್ಕೂಟರ್ ಗಿಫ್ಟ್
- 13 hrs ago ಜನ ಕ್ಯೂ ನಿಂತು ಖರೀದಿಸುತ್ತಿದ್ದ ಮಾರುತಿ ಸ್ವಿಫ್ಟ್ ಕಾರು ಮಾರಾಟದಲ್ಲಿ ಕುಸಿತ: ಕಾರಣವೇನು?
Don't Miss!
- News Lok Sabha Election 2024 Phase 1 Polling LIVE: ಲೋಕಸಭಾ ಚುನಾವಣೆ 2024ರ ಮೊದಲ ಹಂತದ ಮತದಾನ!
- Movies 'ಮಾರ್ಟಿನ್' ಚಿತ್ರದ ನಿರ್ಮಾಪಕ- ನಿರ್ದೇಶಕರ ಮಧ್ಯೆ ಕಿರಿಕ್: ಕೊನೆಗೂ ಸಿಕ್ತು ಸ್ಪಷ್ಟನೆ
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪೆಟ್ರೋಲಿಯಂ ಉತ್ಪನ್ನಗಳು ಜಿಎಸ್ಟಿ ವ್ಯಾಪ್ತಿಗೆ ಬಂದ್ರೆ ಗ್ರಾಹಕರಿಗೆ ಏನು ಪ್ರಯೋಜನ?
ತೈಲ ಉತ್ಪನ್ನಗಳು ಜಿಎಸ್ಟಿ ವ್ಯಾಪ್ತಿಗೆ ಬಂದಲ್ಲಿ ಆಗಬಹುದಾದ ಸಾಧಕ ಮತ್ತು ಭಾದಕಗಳ ಕುರಿತಾದ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.
ಈವರೆಗೂ ಜಿಎಸ್'ಟಿ ವ್ಯಾಪ್ತಿಯಿಂದ ಹೊರಗಿದ್ದ ತೈಲ ಉತ್ಪನ್ನಗಳು ಇನ್ಮುಂದೆ ಜಿಎಸ್ಟಿ ವ್ಯಾಪ್ತಿಗೆ ಒಳಪಡುವ ಸಾಧ್ಯತೆಗಳಿದ್ದು, ಈ ಹಿನ್ನೆಲೆ ತೈಲ ಉತ್ಪನ್ನಗಳು ಜಿಎಸ್ಟಿ ವ್ಯಾಪ್ತಿಗೆ ಬಂದಲ್ಲಿ ಆಗಬಹುದಾದ ಸಾಧಕ ಮತ್ತು ಭಾದಕಗಳ ಕುರಿತಾದ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.
ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್ಟಿ ವ್ಯಾಪ್ತಿಗೆ ಒಳಪಡಿಸುವ ಉದ್ದೇಶದಿಂದ ನಿನ್ನೆಯಷ್ಟೇ ನಡೆದ ತೈಲ ಬೆಲೆ ಏರಿಕೆ ಕುರಿತಾದ ಸಭೆಯಲ್ಲಿ ಒಮ್ಮತದ ನಿರ್ಧಾರ ಕೈಗೊಂಡಿರುವ ಕೇಂದ್ರ ಸರ್ಕಾರವು ಮತ್ತೊಂದು ಮಹತ್ವದ ನಿರ್ಧಾರವನ್ನು ಪ್ರಕಟಿಸಲು ಸಜ್ಜುಗೊಳ್ಳುತ್ತಿದೆ.
ಇಂಧನ ಸಚಿವ ಧರ್ಮೇಂದ್ರ ಪ್ರಧಾನ್ ನೇತೃತ್ವದ ಸಭೆಯಲ್ಲಿ ಈ ಕುರಿತು ಚರ್ಚೆ ನಡೆದಿದ್ದು, ತೈಲ ಉತ್ಪನ್ನ ಜಿಎಸ್ಟಿ ವ್ಯಾಪ್ತಿಗೆ ಬಂದರೆ ದರ ಇಳಿಕೆ ಸಾಧ್ಯತೆ ಇದೆ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಲಾಗಿದೆ.
Recommended Video
ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್ಟಿ ವ್ಯಾಪ್ತಿಗೆ ತರಬೇಕು ಎಂದು ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿಕೆ ನೀಡಿದ್ದ ಬೆನ್ನಲ್ಲೇ ಕೇಂದ್ರ ಸರ್ಕಾರ ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್ಟಿ ವ್ಯಾಪ್ತಿಗೆ ತರುತ್ತದೆಯೇ ಎಂಬ ಪ್ರಶ್ನೆ ಎದುರಾಗಿದೆ.
ಧರ್ಮೇಂದ್ರ ಪ್ರಧಾನ್ ಸಲಹೆ ಬಗ್ಗೆ ಚರ್ಚೆಗಳು ನಡೆಯುತ್ತಿದ್ದು, ಮಾರುಕಟ್ಟೆ ವಿಶ್ಲೇಷಕರ ಪ್ರಕಾರ ಜಿಎಸ್ ಟಿ ವ್ಯಾಪ್ತಿಗೆ ಪೆಟ್ರೋಲಿಯಂ ಉತ್ಪನ್ನಗಳನ್ನು ತರುವುದರಿಂದ ಗ್ರಾಹಕರಿಗೆ ಅನುಕೂಲವಾಗಲಿದೆ.
ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್ ಟಿ ವ್ಯಾಪ್ತಿಗೆ ತರುವುದರಿಂದ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಭಾರಿ ಪ್ರಮಾಣದಲ್ಲಿ ಇಳಿಕೆಯಾಗಲಿದ್ದು, ಒಂದು ವೇಳೆ ಶೇ.12 ರ ತೆರಿಗೆ ವ್ಯಾಪ್ತಿಗೆ ಉತ್ಪನ್ನಗಳನ್ನು ತಂದರೆ ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 38.1 ರೂಪಾಯಿಗೆ ಪೆಟ್ರೋಲ್ ಸಿಗುತ್ತದೆ.
ಶೇ.18 ರಷ್ಟು ತೆರಿಗೆ ವ್ಯಾಪ್ತಿಗೆ ತರುವುದಾದರೆ 40.5 ರೂಪಾಯಿಗೆ, ಶೇ.28 ರಷ್ಟು ತೆರಿಗೆ ವ್ಯಾಪ್ತಿಗೆ ತಂದರೆ 43.44 ರೂಪಾಯಿಗಳಿಗೆ ಪೆಟ್ರೋಲಿಯಂ ಉತ್ಪನ್ನಗಳು ಗ್ರಾಹಕರಿಗೆ ಸಿಗುತ್ತದೆ ಎಂದು ವಿಶ್ಲೇಷಿಸಲಾಗುತ್ತಿದೆ.
ಆದ್ರೆ ಕೇಂದ್ರ ಸರ್ಕಾರವು ಇಂತದೊಂದು ಮಹತ್ವದ ನಿರ್ಧಾರ ಪ್ರಕಟಿಸುವುದಕ್ಕೂ ಮುನ್ನ ಎಲ್ಲಾ ರಾಜ್ಯಗಳ ಅಭಿಪ್ರಾಯ ಪಡೆಯುವುದು ಅವಶ್ಯಕತೆಯಿದ್ದು, ಇದಕ್ಕೆ ವಿರೋಧ ವ್ಯಕ್ತವಾಗುವ ಸಾಧ್ಯತೆಗಳನ್ನು ಅಲ್ಲಗಳೆಯುವಂತಿಲ್ಲ. ಯಾಕೇಂದ್ರೆ ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ತೆರಿಗೆಯೇ ಆಯಾ ರಾಜ್ಯ ಸರ್ಕಾರಗಳ ಬಹುದೊಡ್ಡ ಆದಾಯ ಮೂಲವಾಗಿದೆ.
ಹೀಗಾಗಿ ಆಯಾ ರಾಜ್ಯಗಳ ಆದಾಯಕ್ಕೆ ಯಾವುದೇ ತೊಂದರೆ ಆಗದಂತೆ ಮತ್ತು ತೈಲ ಉತ್ಪಾದನಾ ಸಂಸ್ಥೆಗಳಿಗೆ ಪೂರಕವಾಗಿ ನಿರ್ಧಾರ ಪ್ರಕಟಿಸುವ ಜವಾಬ್ದಾರಿ ಕೇಂದ್ರದ ಮೇಲಿದೆ.