ಎನ್‌ಸಿಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ 5 ಸ್ಟಾರ್ ರೇಟಿಂಗ್ ಪಡೆದ ರೇಂಜ್ ರೋವರ್ ವೆಲಾರ್

ಗ್ಲೋಬಲ್ ಎನ್‌ಸಿಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ 2017ರ ರೇಂಜ್ ರೋವರ್ ವೆಲಾರ್ ಐಷಾರಾಮಿ ಎಸ್‌ಯುವಿ ಕಾರು ಪೂರ್ಣ ಪ್ರಮಾಣದ ಸುರಕ್ಷಾ ರೇಟಿಂಗ್ ಪಡೆದುಕೊಂಡಿದ್ದು, ಹೊಸ ಕಾರಿನ ಸುರಕ್ಷಾ ಸಾಧನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

By Praveen

ಹೊಸ ಕಾರುಗಳಲ್ಲಿ ಒದಗಿಸಲಾಗಿರುವ ಸುರಕ್ಷಾ ವಿಚಾರವಾಗಿ ನಡೆಸಲಾಗುವ ಗ್ಲೋಬಲ್ ಎನ್‌ಸಿಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ 2017ರ ರೇಂಜ್ ರೋವರ್ ವೆಲಾರ್ ಐಷಾರಾಮಿ ಎಸ್‌ಯುವಿ ಕಾರು ಪೂರ್ಣ ಪ್ರಮಾಣದ ಸುರಕ್ಷಾ ರೇಟಿಂಗ್ ಪಡೆದುಕೊಂಡಿದ್ದು, ಹೊಸ ಕಾರಿನ ಸುರಕ್ಷಾ ಸಾಧನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

ಎನ್‌ಸಿಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ 5 ಸ್ಟಾರ್ ರೇಟಿಂಗ್ ಪಡೆದ ರೇಂಜ್ ರೋವರ್ ವೆಲಾರ್

ಪ್ರಥಮ ಬಾರಿಗೆ ಕಾರು ಉತ್ಪಾದನೆ ಆದ ನಂತರ ಸುರಕ್ಷಾ ವಿಚಾರವಾಗಿ ನಡೆಸಲಾಗುವ ಗ್ಲೋಬಲ್ ಎನ್‌ಸಿಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ವೆಲಾರ್ ಕಾರುಗಳು 5 ಸ್ಟಾರ್ ರೇಟಿಂಗ್ ಪಡೆದುಕೊಂಡಿದ್ದು, ಅಪಘಾತ ಸಂದರ್ಭಗಳಲ್ಲಿ ಕಾರು ಪ್ರಯಾಣಿಕರಿಗೆ ಸಂಪೂರ್ಣ ಸುರಕ್ಷೆ ನೀಡುವ ಬಗ್ಗೆ ಭರವಸೆ ನೀಡಿವೆ.

ಎನ್‌ಸಿಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ 5 ಸ್ಟಾರ್ ರೇಟಿಂಗ್ ಪಡೆದ ರೇಂಜ್ ರೋವರ್ ವೆಲಾರ್

ಏನಿದು ಕ್ರ್ಯಾಶ್ ಟೆಸ್ಟಿಂಗ್?

ಹೊಸ ಕಾರು ಮಾದರಿಗಳ ಸುರಕ್ಷತೆ ಕುರಿತಂತೆ ಪರೀಕ್ಷೆ ನಡೆಸುವ ಗ್ಲೋಬಲ್ ಎನ್‌ಸಿಎಪಿಯು ಸಂಸ್ಥೆಯು ಹೊಸ ಕಾರುಗಳಲ್ಲಿನ ಸುರಕ್ಷಾ ವೈಶಿಷ್ಟ್ಯತೆಗಳ ಕುರಿತು ರೇಟಿಂಗ್ ನೀಡುತ್ತದೆ.

ಎನ್‌ಸಿಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ 5 ಸ್ಟಾರ್ ರೇಟಿಂಗ್ ಪಡೆದ ರೇಂಜ್ ರೋವರ್ ವೆಲಾರ್

ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ 5 ಸ್ಟಾರ್ ಪಡೆದರೆ ಅದು ಹೆಚ್ಚು ಸುರಕ್ಷಿತ ಕಾರು ಎಂದರ್ಥ. ಜೊತೆಗೆ 4, 3, 2, 1, 0 ಸ್ಟಾರ್ ರೇಟಿಂಗ್ ಬಂದಲ್ಲಿ ಅನುಕ್ರಮವಾಗಿ ಉತ್ತಮ, ಖರೀದಿಗೆ ಯೋಗ್ಯ, ಸಾಧಾರಣ, ಅಸುರಕ್ಷಿತ ಕಾರು ಎಂದು ಕರೆಯಲಾಗುತ್ತದೆ.

ಎನ್‌ಸಿಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ 5 ಸ್ಟಾರ್ ರೇಟಿಂಗ್ ಪಡೆದ ರೇಂಜ್ ರೋವರ್ ವೆಲಾರ್

ಇದೀಗ ಬಿಡುಗಡೆಗೆ ಸಿದ್ಧಗೊಂಡಿರುವ ಸಿದ್ಧಗೊಂಡಿರುವ ರೇಂಜ್ ರೋವರ್ ವೆಲಾರ್ ಕೂಡಾ 5 ಸ್ಟಾರ್ ರೇಟಿಂಗ್ ಪಡೆಯುವ ಮೂಲಕ ಹೊಸ ಭಾರೀ ನೀರಿಕ್ಷೆ ಹುಟ್ಟುಹಾಕಿದ್ದು, ಅಪಘಾತ ಸಂದರ್ಭಗಳಲ್ಲಿ ಚಾಲಕ ಸೇರಿದಂತೆ ಕಾರಿನಲ್ಲಿರುವ ಎಲ್ಲ ಪ್ರಯಾಣಿಕರಿಗೂ ಸುರಕ್ಷತೆ ನೀಡುವಲ್ಲಿ ಶಕ್ತವಾಗಿದೆ.

ಇನ್ನು ರೇಂಜ್ ರೋವರ್‌ ವೇಲಾರ್ ಮುಂಭಾಗವು ಹಗುರವಾದ ಅಲ್ಯೂಮಿನಿಯಂ ಆರ್ಕಿಟೆಕ್ಚರ್‌ನಿಂದ ನಿರ್ಮಾಣಗೊಂಡಿದ್ದು, ಅತ್ಯಾಧುನಿಕ ಅಲ್ಟ್ರಾಕ್ಲೀನ್‌ ಯುಕೆ ನಿರ್ಮಿತ ಇಗ್ನಿಯಂ ಪೆಟ್ರೋಲ್‌ ಮತ್ತು ಡಿಸೇಲ್‌ ಎಂಜಿನ್‌ ಹೊಂದಿವೆ.

ಎನ್‌ಸಿಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ 5 ಸ್ಟಾರ್ ರೇಟಿಂಗ್ ಪಡೆದ ರೇಂಜ್ ರೋವರ್ ವೆಲಾರ್

ಹೀಗಾಗಿ 177-ಬಿಎಚ್‌ಪಿ ಮತ್ತು 430-ಎನ್ಎಂ ಟಾರ್ಕ್ ಉತ್ಪಾದನಾ ಶಕ್ತಿಯನ್ನು ಹೊಂದಿದ್ದು, ಆಲ್ ವೀಲ್ಹ್ ಡ್ರೈವ್ ಟೆಕ್ನಾಲಜಿ ಹಾಗೂ 8-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಪಡೆದುಕೊಳ್ಳಲಿವೆ.

ಎನ್‌ಸಿಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ 5 ಸ್ಟಾರ್ ರೇಟಿಂಗ್ ಪಡೆದ ರೇಂಜ್ ರೋವರ್ ವೆಲಾರ್

ಬ್ರಿಟನ್‌ ಐಷಾರಾಮಿ ಕಾರು ಮಾರುಕಟ್ಟೆಯಲ್ಲಿ ಶೇ.85ರಷ್ಟು ಪಾಲು ಹೊಂದಿರುವ ಜಾಗ್ವಾರ್‌ ಲ್ಯಾಂಡ್‌ರೋವರ್‌ನ ಹೊಸ ಮಾದರಿಯ ವೆಲಾರ್‌ ಲಂಡನ್‌ನ ವೆಸ್ಟ್‌ಮಿಡ್‌ಲ್ಯಾಂಡ್‌ ಸೊಲಿಹುಲ್‌ ಘಟಕದಲ್ಲಿ ನಿರ್ಮಾಣವಾಗಿದ್ದು, ಸದ್ಯದಲ್ಲೇ ಭಾರತೀಯ ಮಾರುಕಟ್ಟೆಗೂ ಲಗ್ಗೆಯಿಡಲಿವೆ.

Most Read Articles

Kannada
English summary
Read in Kannada about India Bound Range Rover Velar Scores Big On Safety.
Story first published: Friday, October 6, 2017, 14:32 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X