ಚೀನಾದಲ್ಲಿ ಕ್ವಿಡ್ ಎಲೆಕ್ಟ್ರಿಕ್ ಕಾರು ಬಿಡುಗಡೆ ಮಾಡಲಿದೆ ರೆನಾಲ್ಟ್..!
ಎಲೆಕ್ಟ್ರಿಕ್ ಕಾರುಗಳಿಗೆ ದಿನದಿಂದ ದಿನಕ್ಕೆ ಬೇಡಿಕೆ ಹೆಚ್ಚುತ್ತಿದ್ದು, ಈ ಹಿನ್ನೆಲೆ ಪ್ರಮುಖ ಕಾರು ಉತ್ಪಾದನಾ ಸಂಸ್ಥೆಯಾದ ರೆನಾಲ್ಟ್ ತನ್ನ ಪ್ರಮುಖ ಕಾರು ಮಾದರಿಯಾದ ಕ್ವಿಡ್ ಎಲೆಕ್ಟ್ರಿಕ್ ಆವೃತ್ತಿಯನ್ನು ಚೀನಾದಲ್ಲಿ ಪರಿಚಯಿಸುತ್ತಿದೆ.
ಎಲೆಕ್ಟ್ರಿಕ್ ಕಾರುಗಳಿಗೆ ದಿನದಿಂದ ದಿನಕ್ಕೆ ಬೇಡಿಕೆ ಹೆಚ್ಚುತ್ತಿದ್ದು, ಈ ಹಿನ್ನೆಲೆ ಪ್ರಮುಖ ಕಾರು ಉತ್ಪಾದನಾ ಸಂಸ್ಥೆಯಾದ ರೆನಾಲ್ಟ್ ತನ್ನ ಪ್ರಮುಖ ಕಾರು ಮಾದರಿಯಾದ ಕ್ವಿಡ್ ಎಲೆಕ್ಟ್ರಿಕ್ ಆವೃತ್ತಿಯನ್ನು ಚೀನಾದಲ್ಲಿ ಪರಿಚಯಿಸುತ್ತಿದೆ.

ಚೀನಾದಲ್ಲಿ ವಾಯುಮಾಲಿನ್ಯ ಪ್ರಮಾಣದ ಹೆಚ್ಚುತ್ತಿದ್ದು, ಈ ಹಿನ್ನೆಲೆ ಪೆಟ್ರೋಲ್ ಮತ್ತು ಡೀಸೆಲ್ ಕಾರುಗಳ ಬಳಕೆಗೆ ಸ್ಥಳೀಯ ಸರ್ಕಾರಗಳು ಕೆಲವು ನಿರ್ಬಂಧ ಹೇರುತ್ತಿವೆ. ಹೀಗಾಗಿ ಎಲೆಕ್ಟ್ರಿಕ್ ಕಾರುಗಳಿಗೆ ವಿಶೇಷ ಬೇಡಿಕೆ ಸೃಷ್ಠಿಯಾಗಿದೆ.

ಇದೇ ಅವಕಾಶವನ್ನು ಬಳಸಿಕೊಳ್ಳುತ್ತಿರುವ ರೆನಾಲ್ಟ್ ಸಂಸ್ಥೆಯು ಸದ್ಯದಲ್ಲೇ ಕ್ವಿಡ್ ಎಲೆಕ್ಟ್ರಿಕ್ ಆವೃತ್ತಿಯನ್ನು ಬಿಡುಗಡೆ ಮಾಡುತ್ತಿದ್ದು, ಈ ಬಗ್ಗೆ ರೆನಾಲ್ಟ್ ಅಧಿಕೃತ ಮಾಹಿತಿಯನ್ನು ಬಹಿರಂಗಪಡಿಸಿದೆ.

ಬೇಡಿಕೆಗೆ ಅನುಗುಣವಾಗಿ ಚೀನಾದಲ್ಲಿ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡುತ್ತಿರುವುದಾಗಿ ತಿಳಿಸಿರುವ ರೆನಾಲ್ಟ್, ಮುಂಬರುವ ದಿನಗಳಲ್ಲಿ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳಲ್ಲೂ ಎಲೆಕ್ಟ್ರಿಕ್ ಕಾರುಗಳನ್ನು ಪರಿಚಯಿಸಲಿದ್ದೇವೆ ಎಂದಿದ್ದಾರೆ.

ಹೀಗಾಗಿ ಮುಂಬರುವ ದಿನಗಳಲ್ಲಿ ಭಾರತದಲ್ಲೂ ಕ್ವಿಡ್ ಎಲೆಕ್ಟ್ರಿಕ್ ಆವೃತ್ತಿಯು ಬಿಡಗಡೆಯಾಗಲಿದ್ದು, ಪರಿಸರ ಮಾಲಿನ್ಯ ತಡೆ ಉದ್ದೇಶದ ಅಡಿ ಗ್ರಾಹಕರನ್ನು ಸೆಳೆಯುವ ತಂತ್ರ ರೂಪಿಸಿವೆ.

ಇದಲ್ಲದೇ ಪರಿಸರ ಮಾಲಿನ್ಯ ತಡೆಯಲು ಎಲೆಕ್ಟ್ರಿಕ್ ಕಾರುಗಳ ಬಳಕೆ ಅವಶ್ಯಕತೆ ಇದ್ದು, ಈ ನಿಟ್ಟಿನಲ್ಲಿ ಪ್ರಮುಖ ಕಾರು ಉತ್ಪಾದನಾ ಸಂಸ್ಥೆಗಳು ಕೂಡಾ ಎಲೆಕ್ಟ್ರಿಕ್ ಕಾರುಗಳ ಅಭಿವೃದ್ಧಿಗೆ ಬೃಹತ್ ಯೋಜನೆ ರೂಪಿಸುತ್ತಿವೆ.


Click it and Unblock the Notifications








