ತೈವಾನ್‌ನಲ್ಲಿ ಮಾರುತಿ ಸುಜುಕಿ ಎಸ್ ಕ್ರಾಸ್ ಫೇಸ್‌ಲಿಫ್ಟ್ ಬಿಡುಗಡೆ

ಮಾರುತಿ ಸುಜುಕಿ ನಿರ್ಮಾಣದ ಎಸ್ ಕ್ರಾಸ್ ಆವೃತ್ತಿಯು ಭಾರತದಲ್ಲಿ ಬಿಡುಗಡೆಗೆ ಸಿದ್ಧಗೊಂಡಿದ್ದು, ಇದಕ್ಕೂ ಮುನ್ನ ಹೊಸ ಮಾದರಿಯು ತೈವಾನ್‌ನಲ್ಲಿ ಬಿಡುಗಡೆಗೊಳ್ಳುವ ಮೂಲಕ ಭಾರೀ ನೀರಿಕ್ಷೆ ಹುಟ್ಟುಹಾಕಿದೆ.

By Praveen

ಮಾರುತಿ ಸುಜುಕಿ ನಿರ್ಮಾಣದ ಎಸ್ ಕ್ರಾಸ್ ಫೇಸ್‌ಲಿಫ್ಟ್ ಆವೃತ್ತಿಯು ಭಾರತದಲ್ಲಿ ಬಿಡುಗಡೆಗೆ ಸಿದ್ಧಗೊಂಡಿದ್ದು, ಇದಕ್ಕೂ ಮುನ್ನ ಹೊಸ ಮಾದರಿಯು ತೈವಾನ್‌ನಲ್ಲಿ ಬಿಡುಗಡೆಗೊಳ್ಳುವ ಮೂಲಕ ಭಾರೀ ನೀರಿಕ್ಷೆ ಹುಟ್ಟುಹಾಕಿದೆ.

ಇದರೊಂದಿಗೆ ಮಾರುತಿ ಸುಜುಕಿ ಫೇಸ್‌ಲಿಫ್ಟ್ ಮಾದರಿಯೂ ಭಾರತದಲ್ಲೂ ಶೀಘ್ರದಲ್ಲೇ ಬಿಡುಗಡೆಯಾಗುವ ನೀರಿಕ್ಷೆಯಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಕಾರಿನ ವಿನ್ಯಾಸಗಳ ಕುರಿತು ಸಾಕಷ್ಚು ಚರ್ಚೆಗಳು ಕೂಡಾ ನಡೆಯುತ್ತಿವೆ.

ತೈವಾನ್‌ನಲ್ಲಿ ಮಾರುತಿ ಸುಜುಕಿ ಎಸ್ ಕ್ರಾಸ್ ಫೇಸ್‌ಲಿಫ್ಟ್ ಬಿಡುಗಡೆ

ತೈವಾನ್ ಸೇರಿದಂತೆ ಯುರೋಪ್‌ನ ಪ್ರಮುಖ ರಾಷ್ಟ್ರಗಳಲ್ಲಿ ಎಸ್ ಕ್ರಾಸ್ ಫೇಸ್‌ಲಿಫ್ಟ್ ಆವೃತ್ತಿಯು ಬಿಡುಗಡೆಯಾಗಿದ್ದು, ಸದ್ಯದಲ್ಲೇ ಭಾರತದಲ್ಲೂ ಎಸ್ ಕ್ರಾಸ್ ಫೇಸ್‌ಲಿಫ್ಟ್ ಬಿಡುಗಡೆ ಮಾಡಲಿರುವ ಮಾರುತಿ ಸುಜುಕಿ ಸಂಸ್ಥೆಯೂ ಹೊಸ ಕಾರುಗಳನ್ನು ಸದ್ಯದಲ್ಲೇ ನೆಕ್ಸಾ ಕಾರು ಶೋರಂಗಳಲ್ಲಿ ಪ್ರದರ್ಶನಕ್ಕೆ ಇಡಲಿದೆ.

ತೈವಾನ್‌ನಲ್ಲಿ ಮಾರುತಿ ಸುಜುಕಿ ಎಸ್ ಕ್ರಾಸ್ ಫೇಸ್‌ಲಿಫ್ಟ್ ಬಿಡುಗಡೆ

ಎಸ್‌ಯುವಿ ವೈಶಿಷ್ಟ್ಯತೆಗಳೊಂದಿಗೆ ಎಸ್ ಕ್ರಾಸ್ ಫೇಸ್‌ಲಿಫ್ಟ್ ಆವೃತ್ತಿಯೂ ಅಭಿವೃದ್ಧಿಯಾಗಿದ್ದು, ಐಷಾರಾಮಿ ಕಾರುಗಳ ಹೊರನೋಟವನ್ನು ಪಡೆದುಕೊಂಡಿದೆ. ಇದರಿಂದಾಗಿ ಕಡಿಮೆ ಬಜೆಟ್‌ನಲ್ಲಿ ಉತ್ತಮ ಕಾರು ಖರೀದಿಸುವ ಗ್ರಾಹಕರಿಗೆ ಇದು ಸಹಕಾರಿಯಾಗಿದೆ.

ತೈವಾನ್‌ನಲ್ಲಿ ಮಾರುತಿ ಸುಜುಕಿ ಎಸ್ ಕ್ರಾಸ್ ಫೇಸ್‌ಲಿಫ್ಟ್ ಬಿಡುಗಡೆ

ಎಂಜಿನ್ ಮಾಹಿತಿ

ಡೀಸೆಲ್ ಮತ್ತು ಪೆಟ್ರೋಲ್ ಎರಡು ಮಾದರಿಯಲ್ಲೂ ಎಸ್ ಕ್ರಾಸ್ ಲಭ್ಯವಿರಲಿದ್ದು, ತೈವಾನ್‌ನಲ್ಲಿ ಬಿಡುಗಡೆಯಾದ ಆವೃತ್ತಿಯೂ 1.4-ಲೀಟರ್ ಬೂಸ್ಟರ್‌ಜೆಟ್ ಎಂಜಿನ್‌ನೊಂದಿಗೆ 138ಬಿಎಚ್‌ಪಿ ಮತ್ತು 219ಎನ್ಎಂ ಟಾರ್ಕ್ ಉತ್ಪಾದನೆಯನ್ನು ಮಾಡುತ್ತದೆ.

ತೈವಾನ್‌ನಲ್ಲಿ ಮಾರುತಿ ಸುಜುಕಿ ಎಸ್ ಕ್ರಾಸ್ ಫೇಸ್‌ಲಿಫ್ಟ್ ಬಿಡುಗಡೆ

ಎಸ್ ಕ್ರಾಸ್‌ನಲ್ಲಿ ಎಬಿಎಸ್, ರಿರ್ ವ್ಯೂವ್ ಕ್ಯಾಮೆರಾ, ಪಾರ್ಕಿಂಗ್ ಸೆನ್ಸಾರ್, ಕ್ರೂಸ್ ಕಂಟ್ರೋಲರ್, ಡ್ಯುಯಲ್ ಜೋನ್ ಕಂಟ್ರೋಲರ್ ಮತ್ತು 7-ಇಂಚ್ ಇನ್ಪೋಟೈನ್‌ಮೆಂಟ್ ಡಿಸ್‌ಫೈ ಇರಿಸಲಾಗಿದ್ದು, ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ವಿವಿಧ ಮಾದರಿಗಳನ್ನು ಪರಿಚಯಿಸಲಾಗುತ್ತಿದೆ.

ತೈವಾನ್‌ನಲ್ಲಿ ಮಾರುತಿ ಸುಜುಕಿ ಎಸ್ ಕ್ರಾಸ್ ಫೇಸ್‌ಲಿಫ್ಟ್ ಬಿಡುಗಡೆ

ಇದರೊಂದಿಗೆ ಎಸ್ ಕ್ರಾಸ್ ಫೇಸ್‌ಲಿಫ್ಟ್‌‌ನಲ್ಲಿ ಸುರಕ್ಷಾ ವಿಚಾರಗಳಿಗೆ ಹೆಚ್ಚಿನ ಒತ್ತು ನೀಡಲಾಗಿದ್ದು, 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಪಡೆದಕೊಂಡಿವೆ. ಹೀಗಾಗಿ ಎಸ್ ಕ್ರಾಸ್ ಫೇಸ್‌ಲಿಫ್ಟ್ ಕಾರಿನ ಬೆಲೆಗಳು ಸ್ಪರ್ಧಾತ್ಮಕವಾಗಿದ್ದು, ರೂ.9 ಲಕ್ಷದಿಂದ 13 ಲಕ್ಷ ಇರಬಹುದೆಂದು ಅಂದಾಜಿಸಲಾಗಿದೆ.

ತೈವಾನ್‌ನಲ್ಲಿ ಮಾರುತಿ ಸುಜುಕಿ ಎಸ್ ಕ್ರಾಸ್ ಫೇಸ್‌ಲಿಫ್ಟ್ ಬಿಡುಗಡೆ

ಡ್ರೈವ್‌ಸ್ಪಾರ್ಕ್ ಅಭಿಪ್ರಾಯ

ಹತ್ತು ಹಲವು ವಿಶೇಷತೆಗಳಿಂದ ಕೂಡಿರುವ ಎಸ್‌ ಕ್ರಾಸ್ ಆವೃತ್ತಿಯು ಮುಂಬರುವ ಹಬ್ಬದ ದಿನಗಳಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳಿದ್ದು, ಬಿಡುಗಡೆಗೂ ಮುನ್ನವೇ ಹೊಸ ಕಾರಿನ ಕುರಿತು ನಡೆಯುತ್ತಿರುವ ಚರ್ಚೆಗಳು ಕೂಡಾ ಭಾರೀ ನೀರಿಕ್ಷೆ ಹುಟ್ಟುಹಾಕಿವೆ.

Article Published On: Monday, July 24, 2017, 11:13 [IST]
English summary
Read in Kannada about Suzuki Introduces India-Bound S-Cross Facelift In Taiwan.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+