ಭಾರತದಲ್ಲಿ ಸುಜುಕಿ ಸ್ವಿಫ್ಟ್ ಸ್ಪೋರ್ಟ್ ಆವೃತ್ತಿ ಬಿಡುಗಡೆಗೆ ದಿನಗಣನೆ

ಸ್ಪೋರ್ಟ್ ಕಾರು ಆವೃತ್ತಿಗಳಲ್ಲಿ ಭಾರೀ ಸಂಚಲನ ಮೂಡಿಸಿರುವ ಸುಜುಕಿ ಸ್ವಿಫ್ಟ್ ಸ್ಪೋರ್ಟ್ ಆವೃತ್ತಿಯು ಭಾರತದಲ್ಲಿ ಬಿಡುಗಡೆಗೆ ಸಜ್ಜುಗೊಳ್ಳುತ್ತಿದ್ದು, ಹ್ಯುಂಡೈ ಐ30 ಆವೃತ್ತಿಗೆ ತೀವ್ರ ಪೈಪೋಟಿ ನೀಡುವ ತವಕದಲ್ಲಿದೆ.

By Praveen

ಈಗಾಗಲೇ ಮುಂದುವರಿದ ಕೆಲವು ರಾಷ್ಟ್ರಗಳಲ್ಲಿ ಬಿಡುಗಡೆಯಾಗಿ ಭರ್ಜರಿಯಾಗಿ ಮಾರಾಟಗೊಳ್ಳುತ್ತಿರುವ ಸುಜುಕಿ ಸ್ವಿಫ್ಟ್ ಸ್ಪೋರ್ಟ್ ಆವೃತ್ತಿಯು 2018ಕ್ಕೆ ಭಾರತದಲ್ಲೂ ಬಿಡುಗಡೆಯಾಗುತ್ತಿದ್ದು, ಅದಕ್ಕೂ ಮೊದಲು ಫ್ರಾಂಕ್‌ಫರ್ಟ್ ಮೋಟಾರ್ ಮೇಳದಲ್ಲಿ ಪ್ರದರ್ಶನಗೊಳ್ಳಲಿದೆ.

ಭಾರತದಲ್ಲಿ ಸುಜುಕಿ ಸ್ವಿಫ್ಟ್ ಸ್ಪೋರ್ಟ್ ಆವೃತ್ತಿ ಬಿಡುಗಡೆಗೆ ದಿನಗಣನೆ

ಹ್ಯಾಚ್‌ಬ್ಯಾಕ್ ವೈಶಿಷ್ಟ್ಯತೆಗಳೊಂದಿಗೆ ಅಭಿವೃದ್ಧಿ ಹೊಂದಿರುವ ಸುಜುಕಿ ಸ್ವಿಫ್ಟ್ ಸ್ಪೋರ್ಟ್ ಕಾರು ಸ್ಪೈಡರ್ ಇಂಟಿರಿಯರ್ ಹಾಗೂ ಎಕ್ಸ್‌ಟಿರಿಯರ್‌ನೊಂದಿಗೆ ವಿಭಿನ್ನತೆಯನ್ನು ಪಡೆದುಕೊಂಡಿದೆ.

ಭಾರತದಲ್ಲಿ ಸುಜುಕಿ ಸ್ವಿಫ್ಟ್ ಸ್ಪೋರ್ಟ್ ಆವೃತ್ತಿ ಬಿಡುಗಡೆಗೆ ದಿನಗಣನೆ

ಗ್ರಾಹಕರ ಬೇಡಿಕೆ ತಕ್ಕಂತೆ ವಿವಿಧ ಬಣ್ಣಗಳಲ್ಲಿ ಕೂಡಾ ಖರೀದಿಗೆ ಲಭ್ಯವಿರಲಿದ್ದು, ಡ್ಯುಯಲ್ ಏರ್‌ಬ್ಯಾಗ್ ಕಿಟ್, ಸ್ಪೆಷಲ್ ಅಲಾಯ್ ವೀಲ್ಹ್ ಮತ್ತು ಸ್ಪೋರ್ಟ್ ಸ್ಟೈನ್‌ಲೆಸ್ ಸ್ಟಿಲ್ ಪೆಡಲ್ ಅಳವಡಿಕೆ ಮಾಡಲಾಗಿದೆ.

ಭಾರತದಲ್ಲಿ ಸುಜುಕಿ ಸ್ವಿಫ್ಟ್ ಸ್ಪೋರ್ಟ್ ಆವೃತ್ತಿ ಬಿಡುಗಡೆಗೆ ದಿನಗಣನೆ

ಇದಲ್ಲದೇ ಸ್ಪೋರ್ಟ್ ಆವೃತ್ತಿಯ ಚಿಹ್ನೆ ಕೂಡಾ ಹೊಸ ಕಾರಿನ ಲುಕ್‌ನ್ನು ಮತ್ತಷ್ಟು ಹೆಚ್ಚಳ ಮಾಡಿದ್ದು, 1.4-ಲೀಟರ್ ನಾಲ್ಕು ಸಿಲಿಂಡರ್ ಟರ್ಬೋಚಾರ್ಜ್ಡ್ ಬೂಸ್ಟರ್ ಜೆಟ್ ಕೆ14ಸಿ ಪೆಟ್ರೋಲ್ ಎಂಜಿನ್‌ನೊಂದಿಗೆ ಲಭ್ಯವಿರಲಿದೆ.

ಭಾರತದಲ್ಲಿ ಸುಜುಕಿ ಸ್ವಿಫ್ಟ್ ಸ್ಪೋರ್ಟ್ ಆವೃತ್ತಿ ಬಿಡುಗಡೆಗೆ ದಿನಗಣನೆ

ಆದ್ರೆ ಕೆಲವು ವರದಿಗಳ ಪ್ರಕಾರ ಹೊಸ ಸುಜುಕಿ ಸ್ವಿಫ್ಟ್ ಆವೃತ್ತಿಯನ್ನು ಭಾರತೀಯ ಮಾರುಕಟ್ಟೆಗಾಗಿ 1.0-ಲೀಟರ್ ನಾಲ್ಕು ಸಿಲಿಂಡರ್ ಟರ್ಬೋಚಾರ್ಜ್ಡ್ ಬೂಸ್ಟರ್ ಜೆಟ್‌ನೊಂದಿಗೆ ಅಭಿವೃದ್ಧಿಗೊಳಿಸಲಾಗುತ್ತಿದೆ ಎನ್ನಲಾಗಿದೆ.

ಭಾರತದಲ್ಲಿ ಸುಜುಕಿ ಸ್ವಿಫ್ಟ್ ಸ್ಪೋರ್ಟ್ ಆವೃತ್ತಿ ಬಿಡುಗಡೆಗೆ ದಿನಗಣನೆ

ಇನ್ನು ಸ್ಪಿಫ್ಟ್ ಆವೃತ್ತಿ ವೈಶಿಷ್ಟ್ಯತೆಗಳು ಸದ್ಯ ಮಾರುಕಟ್ಟೆಯಲ್ಲಿರುವ ಬಲೆನೊ ಆರ್‌ಎಸ್, ಫೋಕ್ಸ್‌ವ್ಯಾಗನ್ ಪೊಲೊ ಜಿಟಿ ಮತ್ತು ಫಿಯೆಟ್ ಅಬಾರ್ತ್ ಕಾರಿನಲ್ಲಿ ಲಭ್ಯವಿದ್ದು, ಇವುಗಳಿಂತ ಹೇಗೆ ಭಿನ್ನತೆ ಹೊಂದಲಿದೆ ಎಂಬುವುದೇ ಚರ್ಚೆಗೆ ಕಾರಣವಾಗಿದೆ.

ಭಾರತದಲ್ಲಿ ಸುಜುಕಿ ಸ್ವಿಫ್ಟ್ ಸ್ಪೋರ್ಟ್ ಆವೃತ್ತಿ ಬಿಡುಗಡೆಗೆ ದಿನಗಣನೆ

ಡ್ರೈವ್ ಸ್ಪಾರ್ಕ್ ಅಭಿಪ್ರಾಯ

ಭಾರತೀಯ ಮಾರುಕಟ್ಟೆಯಲ್ಲಿ ಸ್ಪೋರ್ಟ್ ಕಾರುಗಳಿಗೆ ಬೇಡಿಕೆ ಹೆಚ್ಚುತ್ತಿದ್ದು, ಈ ನಿಟ್ಟಿನಲ್ಲಿ ಸ್ವಿಫ್ಟ್ ಸ್ಪೋರ್ಟ್ ಆವೃತ್ತಿಯನ್ನು ಬಿಡುಗಡೆ ಮಾಡುತ್ತಿರುವ ಸುಜುಕಿ ಸಂಸ್ಥೆಯು ಬಹುನೀರಿಕ್ಷಿತ ಹ್ಯುಂಡೈ ಐ30 ಕಾರಿಗೆ ಪ್ರತಿ ಸ್ಪರ್ಧಿಯಾಗುವ ತವಕದಲ್ಲಿದೆ.

Most Read Articles

Kannada
Read more on ಸುಜುಕಿ suzuki
English summary
Read in kannada about Maruti Suzuki Swift Sport World Premiere at 2017 Frankfurt Motor Show.
Story first published: Wednesday, July 26, 2017, 12:46 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X