ಬಿಡುಗಡೆಗೆ ಸಿದ್ದಗೊಳ್ಳುತ್ತಿದೆ ಟಾಟಾ ನ್ಯಾನೋ ಎಲೆಕ್ಟ್ರಿಕ್ ಕಾರು
ಮಹತ್ವದ ಯೋಜನೆಯೊಂದನ್ನು ಸಿದ್ಧಗೊಳಿಸಿರುವ ಟಾಟಾ ಮೋಟಾರ್ಸ್ ಸಂಸ್ಥೆಯು ಸದ್ಯದಲ್ಲೇ ಸುಧಾರಿತ ತಂತ್ರಜ್ಞಾನ ಹೊಂದಿರುವ ನ್ಯಾನೋ ಎಲೆಕ್ಟ್ರಿಕ್ ಆವೃತ್ತಿಯನ್ನು ಬಿಡುಗಡೆ ಮಾಡಲಿದೆ.
ಎಲೆಕ್ಟ್ರಿಕ್ ಕಾರುಗಳಿಗೆ ದಿನದಿಂದ ದಿನಕ್ಕೆ ಬೇಡಿಕೆ ಹೆಚ್ಚುತ್ತಿದ್ದು, ಈ ಹಿನ್ನೆಲೆ ಮಹತ್ವದ ಯೋಜನೆಯೊಂದನ್ನು ಸಿದ್ಧಗೊಳಿಸಿರುವ ಟಾಟಾ ಮೋಟಾರ್ಸ್ ಸಂಸ್ಥೆಯು ಸದ್ಯದಲ್ಲೇ ಸುಧಾರಿತ ತಂತ್ರಜ್ಞಾನ ಹೊಂದಿರುವ ನ್ಯಾನೋ ಎಲೆಕ್ಟ್ರಿಕ್ ಆವೃತ್ತಿಯನ್ನು ಬಿಡುಗಡೆ ಮಾಡಲಿದೆ.

ಇದಕ್ಕಾಗಿಯೇ ಟಾಟಾ ಮೋಟಾರ್ಸ್ ಸಂಸ್ಥೆಯು ಕೊಯಮತ್ತೂರಿನ ಅಜ್ಞಾತ ಸ್ಥಳಗಳಲ್ಲಿ ಎಲೆಕ್ಟ್ರಿಕ್ ನ್ಯಾನೋ ಆವೃತ್ತಿಯನ್ನು ರಹಸ್ಯವಾಗಿ ಪರೀಕ್ಷೆಯನ್ನು ಪೂರ್ಣಗೊಳಿಸಿದ್ದು, ಪರೀಕ್ಷಾ ಸಂದರ್ಭದಲ್ಲಿ ಟಾಟಾ ಸಮೂಹ ಸಂಸ್ಥೆಗಳ ಅಧ್ಯಕ್ಷ ರತನ್ ಟಾಟಾ ಸಹ ಉಪಸ್ಥಿತರಿದ್ದರು ಎನ್ನಲಾಗಿದೆ.

ಟಾಟಾ ಮೋಟಾರ್ಸ್ ಯುರೋಪಿನ್ ಟೆಕ್ನಿಕಲ್ ಸೆಂಟರ್ (ಟಿಎಂಇಟಿಸಿ) ಕೇಂದ್ರದಲ್ಲಿ ನ್ಯಾನೋ ಎಲೆಕ್ಟ್ರಿಕ್ ಆವೃತ್ತಿಯು ಸಿದ್ಧಗೊಂಡಿದ್ದು, ಪರೀಕ್ಷಾರ್ಥದಲ್ಲಿ ಯಶಸ್ವಿಯಾಗಿದೆ ಎನ್ನಲಾಗಿದೆ.
Recommended Video


ಹೀಗಾಗಿಯೇ ಪೆಟ್ರೋಲ್ ಮತ್ತು ಡೀಸೆಲ್ ಆವೃತ್ತಿಗಳಿಂತಲೂ ಎಲೆಕ್ಟ್ರಿಕ್ ಕಾರುಗಳು ಕಡಿಮೆ ಬೆಲೆಗೆ ಲಭ್ಯವಾಗುವ ಸಾಧ್ಯತೆಗಳಿದ್ದು, ಹೊಸ ಕಾರುಗಳಿಂದ ಅತ್ಯುತ್ತಮ ಕಾರ್ಯನಿರ್ವಹಣೆಯನ್ನು ನೀರಿಕ್ಷೆ ಮಾಡಬಹುದಾಗಿದೆ.

ಈ ಹಿಂದೆ ನ್ಯಾನೋ ಮಾರಾಟದಲ್ಲಿ ಇತಿಹಾಸ ಸೃಷ್ಠಿಸಿದ್ದ ಟಾಟಾ ಸಂಸ್ಥೆಯ ಈಗಾಗಲೇ ಭಾರೀ ಪ್ರಮಾಣದಲ್ಲಿ ನ್ಯಾನೋ ಮಾರಾಟ ಮಾಡಿದ್ದು, ಎಲೆಕ್ಟ್ರಿಕ್ ಆವೃತ್ತಿಯೊಂದಿಗೆ ಮತ್ತೊಮ್ಮೆ ದಾಖಲೆಯ ಮಾರಾಟ ಕಾಣುವ ತವಕದಲ್ಲಿದೆ.

ಸದ್ಯ ಮಾರುಕಟ್ಟೆಯಲ್ಲಿರುವ ಎಲೆಕ್ಟ್ರಿಕ್ ಕಾರು ವಿಭಾಗದಲ್ಲಿ ಅತಿ ಹೆಚ್ಚು ಬೇಡಿಕೆ ಹೊಂದಿರುವ ಮಹೀಂದ್ರಾ ಇ2ಒ ಪ್ಲಸ್ ಮಾದರಿಗಳಿಗೆ ಟಾಟಾ ನ್ಯಾನೋ ಎಲೆಕ್ಟ್ರಿಕ್ ಪ್ರತಿಸ್ಪರ್ಧಿಯಾಗಲಿದ್ದು, ಆಟೋಮೊಬೈಲ್ ಉದ್ಯಮದಲ್ಲಿ ಹೊಸ ಅಧ್ಯಾಯ ಶುರು ಮಾಡಲಿದೆ.

ಡ್ರೈವ್ ಸ್ಪಾರ್ಕ್ ಅಭಿಪ್ರಾಯ
ಎಲೆಕ್ಟ್ರಿಕ್ ಕಾರು ಆವೃತ್ತಿಗಳಿಗೆ ದಿನದಿಂದ ದಿನಕ್ಕೆ ಬೇಡಿಕೆ ಹೆಚ್ಚುತ್ತಿದ್ದು, ಈ ನಿಟ್ಟಿನಲ್ಲಿ ಯೋಜನೆ ರೂಪಿಸಿರುವ ಟಾಟಾ ಮೋಟಾರ್ಸ್, ಮುಂಬರುವ ದಿನಗಳಲ್ಲಿ ಎಲೆಕ್ಟ್ರಿಕ್ ಆವೃತ್ತಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಪರಿಚಯಿಸಲಿದೆ.


Click it and Unblock the Notifications