ಎಸ್‌ಯುವಿ ಕಾರುಗಳಿಗೆ ಹೆಚ್ಚಿದ ಬೇಡಿಕೆ- ಟಾಟಾ ನೆಕ್ಸನ್ ಖರೀದಿಗೆ ಮುಗಿಬಿದ್ದ ಗ್ರಾಹಕರು

ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಟ್ರೆಂಡ್ ಸೃಷ್ಠಿಸಿರುವ ಟಾಟಾ ಮೋಟಾರ್ಸ್ ನಿರ್ಮಾಣದ ನೆಕ್ಸನ್ ಆವೃತ್ತಿಯು ಸದ್ಯ ಕಾರು ಮಾರಾಟ ವಿಭಾಗದಲ್ಲಿ ಬೃಹತ್ ದಾಖಲೆಯತ್ತ ಮುನ್ನುಗ್ಗುತ್ತಿದ್ದು, ಕಾರು ಖರೀದಿಗೆ ಗ್ರಾಹಕರು ಮುಗಿಬಿದ್ದಿದ್ದಾರೆ.

By Praveen

ಎಸ್‌ಯುವಿ ವೈಶಿಷ್ಟ್ಯತೆಗಳೊಂದಿಗೆ ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಟ್ರೆಂಡ್ ಸೃಷ್ಠಿಸಿರುವ ಟಾಟಾ ಮೋಟಾರ್ಸ್ ನಿರ್ಮಾಣದ ನೆಕ್ಸನ್ ಆವೃತ್ತಿಯು ಸದ್ಯ ಕಾರು ಮಾರಾಟ ವಿಭಾಗದಲ್ಲಿ ಬೃಹತ್ ದಾಖಲೆಯತ್ತ ಮುನ್ನುಗ್ಗುತ್ತಿದ್ದು, ಕಾರು ಖರೀದಿಗೆ ಗ್ರಾಹಕರು ಮುಗಿಬಿದ್ದಿದ್ದಾರೆ.

ಎಸ್‌ಯುವಿ ಕಾರುಗಳಿಗೆ ಹೆಚ್ಚಿದ ಬೇಡಿಕೆ- ಟಾಟಾ ನೆಕ್ಸನ್ ಖರೀದಿಗೆ ಮುಗಿಬಿದ್ದ ಗ್ರಾಹಕರು

ಈ ಹಿನ್ನೆಲೆ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಹೊಸ ಕಾರು ಪೂರೈಕೆ ಮಾಡಲು ಉತ್ಪಾದನಾ ಕಾರ್ಯವನ್ನು ಚುರುಕುಗೊಳಿಸಿರುವ ಟಾಟಾ ಮೋಟಾರ್ಸ್ ಸಂಸ್ಥೆಯು, ಕಾರು ಖರೀದಿಯ ಕಾಯುವಿಕೆ ಅವಧಿಯನ್ನು ತಗ್ಗಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸುತ್ತಿದೆ.

ಎಸ್‌ಯುವಿ ಕಾರುಗಳಿಗೆ ಹೆಚ್ಚಿದ ಬೇಡಿಕೆ- ಟಾಟಾ ನೆಕ್ಸನ್ ಖರೀದಿಗೆ ಮುಗಿಬಿದ್ದ ಗ್ರಾಹಕರು

ಸದ್ಯ ನೆಕ್ಸನ್ ಕಾರು ಖರೀದಿ ಮಾಡಬೇಕಾದರೆ 6 ರಿಂದ 7 ವಾರಗಳ ಕಾಲ ಕಾಯಲೇಬೇಕಾದ ಅನಿವಾರ್ಯತೆಗಳಿದ್ದು, ಇದು ಹಬ್ಬದ ದಿನಗಳಲ್ಲಿ ಇನ್ನು ಹೆಚ್ಚಾಗುವ ಸಾಧ್ಯತೆಗಳಿವೆ. ಈ ಹಿನ್ನೆಲೆ ಕಾಯುವಿಕೆ ಅವಧಿಯನ್ನು 4 ವಾರಗಳಿಗೆ ತಗ್ಗಿಸಲು ಟಾಟಾ ಕ್ರಮ ಕೈಗೊಳ್ಳುತ್ತಿದೆ.

ಎಸ್‌ಯುವಿ ಕಾರುಗಳಿಗೆ ಹೆಚ್ಚಿದ ಬೇಡಿಕೆ- ಟಾಟಾ ನೆಕ್ಸನ್ ಖರೀದಿಗೆ ಮುಗಿಬಿದ್ದ ಗ್ರಾಹಕರು

ಇನ್ನು ವಿಶಿಷ್ಟ ವಿನ್ಯಾಸಗಳೊಂದಿಗೆ ಎಸ್‌ಯುವಿ ಪ್ರಿಯರನ್ನು ಸೆಳೆಯುವಲ್ಲಿ ಯಶಸ್ವಿಯಾಗಿರುವ ನೆಕ್ಸನ್ ಆವೃತ್ತಿಯು ಇಂಪ್ಯಾಕ್ಟ್ ಡಿಸೈನ್‌ನೊಂದಿಗೆ ಅಭಿವೃದ್ಧಿಗೊಂಡಿದ್ದು, ಮಲ್ಟಿ ಡ್ರೈವ್ ಮೋಡ್, ತೇಲುವ ಡ್ಯಾಶ್ ಟಾಪ್ ಎಚ್‌ಡಿ ಟಚ್‌ಸ್ಕ್ರೀನ್, ಹರ್ಮನ್ ಇನ್ಫೋಟೈನ್ಮೆಂಟ್ ಸಿಸ್ಟಂ, ಬೃಹತ್ತಾದ ಸೆಂಟ್ರಲ್ ಕನ್ಸಾಲ್ ಪಡೆದುಕೊಂಡಿರುವುದು ಹೊಸ ನೀರಿಕ್ಷೆ ಹುಟ್ಟುಹಾಕಿದೆ.

Recommended Video

Tata Nexon Price And Features Variant-wise - DriveSpark
ಎಸ್‌ಯುವಿ ಕಾರುಗಳಿಗೆ ಹೆಚ್ಚಿದ ಬೇಡಿಕೆ- ಟಾಟಾ ನೆಕ್ಸನ್ ಖರೀದಿಗೆ ಮುಗಿಬಿದ್ದ ಗ್ರಾಹಕರು

ಎಂಜಿನ್ ಸಾಮರ್ಥ್ಯ

ನೂತನ ಟಾಟಾ ನೆಕ್ಸನ್ ಆವೃತ್ತಿಯು 1.2 ಲೀಟರ್ ಟರ್ಬೊಚಾರ್ಜ್ಡ್ ಪೆಟ್ರೋಲ್ ರೆವೊಟ್ರಾನ್ ಮತ್ತು 1.5 ಲೀಟರ್ ರೆವೊಟಾರ್ಕ್ ಡೀಸೆಲ್ ಎಂಜಿನ್ ಆಳವಡಿಸಲಾಗಿದ್ದು, ಹೊಸತಾದ ಆರು ಸ್ಪೀಡ್ ಗೇರ್ ಬಾಕ್ಸ್ ಪರಿಚಯಿಸಲಾಗಿದೆ.

ಎಸ್‌ಯುವಿ ಕಾರುಗಳಿಗೆ ಹೆಚ್ಚಿದ ಬೇಡಿಕೆ- ಟಾಟಾ ನೆಕ್ಸನ್ ಖರೀದಿಗೆ ಮುಗಿಬಿದ್ದ ಗ್ರಾಹಕರು

ಬೆಲೆ (ಬೆಂಗಳೂರು ಎಕ್ಸ್‌ಶೋರಂ)

ಪೆಟ್ರೋಲ್ ಆವೃತ್ತಿಯ ಆರಂಭಿಕ ಕಾರಿನ ಬೆಲೆಯು ರೂ. 5.94 ಲಕ್ಷಕ್ಕೆ ಮತ್ತು ಉನ್ನತ ಆವೃತ್ತಿಯ ಬೆಲೆಯು ರೂ.8.59 ಲಕ್ಷಕ್ಕೆ ಲಭ್ಯವಿದ್ದರೇ ಡೀಸೆಲ್ ಆವೃತ್ತಿಯ ಆರಂಭಿಕ ಬೆಲೆಯು ರೂ. 6.85 ಲಕ್ಷಕ್ಕೆ ಮತ್ತು ಉನ್ನತ ಆವೃತ್ತಿಯನ್ನು ರೂ.9.54 ಲಕ್ಷಕ್ಕೆ ಖರೀದಿಸಬಹುದಾಗಿದೆ.

ಎಸ್‌ಯುವಿ ಕಾರುಗಳಿಗೆ ಹೆಚ್ಚಿದ ಬೇಡಿಕೆ- ಟಾಟಾ ನೆಕ್ಸನ್ ಖರೀದಿಗೆ ಮುಗಿಬಿದ್ದ ಗ್ರಾಹಕರು

ಇದಲ್ಲದೇ ನೆಕ್ಸನ್ ಮಾದರಿಯ ಮತ್ತಷ್ಟು ವಿಶೇಷತೆಗಳ ಬಗ್ಗೆ ಹೇಳುವುದಾದರೆ, ಈ ಕಾರು ರಿವರ್ಸ್ ಕ್ಯಾಮೆರಾ, 6.5 ಇಂಚಿನ ಇನ್ಫೋಟೈನ್ಮೆಂಟ್ ಸಿಸ್ಟಮ್ ಎಚ್‌ಡಿ ಡಿಸ್‌ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಸೌಲಭ್ಯಗಳನ್ನು ಹೊಂದಿದೆ. ಹಾಗೆಯೇ ಹೊಸ ಕಾರಿನಲ್ಲಿ ಸುರಕ್ಷತೆಗೆ ಹೆಚ್ಚಿನ ಆಯ್ಕೆಗಳನ್ನು ನೀಡಲಾಗಿದ್ದು, ಡ್ಯುಯಲ್-ಫ್ರಂಟ್ ಏರ್ ಬ್ಯಾಗ್ ಮತ್ತು ಆಬಿಎಸ್ ಜೊತೆ ಇಬಿಡಿ ಸ್ಟ್ಯಾಂಡರ್ಡ್ ವ್ಯವಸ್ಥೆಯನ್ನು ಹೊಂದಿದೆ.

ಎಸ್‌ಯುವಿ ಕಾರುಗಳಿಗೆ ಹೆಚ್ಚಿದ ಬೇಡಿಕೆ- ಟಾಟಾ ನೆಕ್ಸನ್ ಖರೀದಿಗೆ ಮುಗಿಬಿದ್ದ ಗ್ರಾಹಕರು

ಮೈಲೇಜ್

ನೆಕ್ಸನ್ ಕಾರು ಮಾದರಿಗಳಲ್ಲಿ ಡಿಸೇಲ್ ಆವೃತ್ತಿಯು ಪ್ರತಿ ಲೀಟರ್‌ಗೆ 21 ಕಿಮಿ ಮೈಲೇಜ್ ನೀಡಿದ್ದಲ್ಲಿ ಪೆಟ್ರೋಲ್ ಆವೃತ್ತಿಯು ಪ್ರತಿ ಲೀಟರ್ 17ಕಿಮಿ ಮೈಲೇಜ್ ಒದಗಿಸುತ್ತವೆ.

ಎಸ್‌ಯುವಿ ಕಾರುಗಳಿಗೆ ಹೆಚ್ಚಿದ ಬೇಡಿಕೆ- ಟಾಟಾ ನೆಕ್ಸನ್ ಖರೀದಿಗೆ ಮುಗಿಬಿದ್ದ ಗ್ರಾಹಕರು

ಡ್ರೈವ್ ಸ್ಪಾರ್ಕ್ ಅಭಿಪ್ರಾಯ

ಭಾರತೀಯ ಮಧ್ಯಮ ವರ್ಗದ ಗ್ರಾಹಕರಿಗೆ ಟಾಟಾ ನೆಕ್ಸನ್ ಎಸ್‌ಯುವಿ ಒಂದು ಉತ್ತಮ ಆಯ್ಕೆಯಾಗಿದ್ದು, ಕೈಗೆಟುಕುವ ದರ ಲಭ್ಯವಾಗಿರುವುದು ಕಾರು ಖರೀದಿಗೆ ಉತ್ತಮ ವಾತಾವರಣ ಸಿಕ್ಕಿದೆ ಎನ್ನಬಹುದು.

Most Read Articles

Kannada
English summary
Read in Kannada about Wait For The Tata Nexon Gets Longer.
Story first published: Thursday, October 5, 2017, 13:52 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X