ಸದ್ಯದಲ್ಲೇ ಟಾಟಾ ಟಿಯಾಗೋ ಎಲೆಕ್ಟ್ರಿಕ್ ಕಾರು ಬಿಡುಗಡೆಗೆ ಸಿದ್ದತೆ

ಮಹತ್ವದ ಯೋಜನೆಯೊಂದನ್ನು ಸಿದ್ಧಗೊಳಿಸಿರುವ ಟಾಟಾ ಮೋಟಾರ್ಸ್ ಸಂಸ್ಥೆಯು ಸದ್ಯದಲ್ಲೇ ಸುಧಾರಿತ ತಂತ್ರಜ್ಞಾನ ಹೊಂದಿರುವ ಟಿಗೋರ್ ಎಲೆಕ್ಟ್ರಿಕ್ ಆವೃತ್ತಿಯನ್ನು ಬಿಡುಗಡೆ ಮಾಡುತ್ತಿದೆ.

By Praveen

ಎಲೆಕ್ಟ್ರಿಕ್ ಕಾರುಗಳಿಗೆ ದಿನದಿಂದ ದಿನಕ್ಕೆ ಬೇಡಿಕೆ ಹೆಚ್ಚುತ್ತಿದ್ದು, ಈ ಹಿನ್ನೆಲೆ ಮಹತ್ವದ ಯೋಜನೆಯೊಂದನ್ನು ಸಿದ್ಧಗೊಳಿಸಿರುವ ಟಾಟಾ ಮೋಟಾರ್ಸ್ ಸಂಸ್ಥೆಯು ಸದ್ಯದಲ್ಲೇ ಸುಧಾರಿತ ತಂತ್ರಜ್ಞಾನ ಹೊಂದಿರುವ ಟಿಗೋರ್ ಎಲೆಕ್ಟ್ರಿಕ್ ಆವೃತ್ತಿಯನ್ನು ಬಿಡುಗಡೆ ಮಾಡುತ್ತಿದೆ.

ಸದ್ಯದಲ್ಲೇ ಟಾಟಾ ಟಿಯಾಗೋ ಎಲೆಕ್ಟ್ರಿಕ್ ಕಾರು ಬಿಡುಗಡೆಗೆ ಸಿದ್ದತೆ

ಟಾಟಾ ಮೋಟಾರ್ಸ್ ಯುರೋಪಿನ್ ಟೆಕ್ನಿಕಲ್ ಸೆಂಟರ್‌(ಟಿಎಂಇಟಿಸಿ) ಕೇಂದ್ರದಲ್ಲಿ ಟಿಗೋರ್ ಎಲೆಕ್ಟ್ರಿಕ್ ಆವೃತ್ತಿಯು ಸಿದ್ಧಗೊಂಡಿದ್ದು, ಸೆಪ್ಟೆಂಬರ್‌ 6 ಅಥವಾ 7ರಂದು ಮೊದಲ ಬಾರಿಗೆ ಯುರೋಪ ರಾಷ್ಟ್ರಗಳಲ್ಲಿ ಬಿಡುಗಡೆಗೊಳ್ಳಲಿದೆ.

ಸದ್ಯದಲ್ಲೇ ಟಾಟಾ ಟಿಯಾಗೋ ಎಲೆಕ್ಟ್ರಿಕ್ ಕಾರು ಬಿಡುಗಡೆಗೆ ಸಿದ್ದತೆ

ಈ ಕುರಿತು ಅಧಿಕೃತ ಮಾಹಿತಿ ಹೊರಹಾಕಿರುವ ಟಾಟಾ ಮೋಟಾರ್ಸ್ ಸಂಸ್ಥೆಯು, "ಟಿಯಾಗೋ ಎಲೆಕ್ಟ್ರಿಕ್ ಆವೃತ್ತಿಯು ಸದ್ಯದಲ್ಲೇ ಭಾರತದಲ್ಲೂ ಖರೀದಿಗೆ ಲಭ್ಯವಿರಲಿದ್ದು, ಇದಕ್ಕಾಗಿ ಟಾಟಾ ಎದುರು ನೋಡುತ್ತಿದೆ" ಎಂದಿದೆ.

ಸದ್ಯದಲ್ಲೇ ಟಾಟಾ ಟಿಯಾಗೋ ಎಲೆಕ್ಟ್ರಿಕ್ ಕಾರು ಬಿಡುಗಡೆಗೆ ಸಿದ್ದತೆ

ಹೀಗಾಗಿ ಪೆಟ್ರೋಲ್ ಮತ್ತು ಡೀಸೆಲ್ ಆವೃತ್ತಿಗಳಿಂತಲೂ ಎಲೆಕ್ಟ್ರಿಕ್ ಕಾರು ಕಡಿಮೆ ಬೆಲೆಗೆ ಲಭ್ಯವಾಗುವ ಸಾಧ್ಯತೆಗಳಿದ್ದು, ಹೊಸ ಕಾರುಗಳಿಂದ ಅತ್ಯುತ್ತಮ ಕಾರ್ಯನಿರ್ವಹಣೆಯನ್ನು ನೀರಿಕ್ಷೆ ಮಾಡಬಹುದಾಗಿದೆ.

ಸದ್ಯದಲ್ಲೇ ಟಾಟಾ ಟಿಯಾಗೋ ಎಲೆಕ್ಟ್ರಿಕ್ ಕಾರು ಬಿಡುಗಡೆಗೆ ಸಿದ್ದತೆ

ಟಾಟಾ ಸಂಸ್ಥೆಯ ಟಿಗೋರ್ ಮತ್ತು ಟಿಯಾಗೋ ಕಾರು ಆವೃತ್ತಿಗಳು ಈಗಾಗಲೇ ಭಾರೀ ಪ್ರಮಾಣದಲ್ಲಿ ಮಾರಾಟಗೊಂಡಿದ್ದು, ಎಲೆಕ್ಟ್ರಿಕ್ ಆವೃತ್ತಿಯೊಂದಿಗೆ ಮತ್ತೊಮ್ಮೆ ದಾಖಲೆಯ ಮಾರಾಟ ಕಾಣುವ ಸಾಧ್ಯತೆಗಳಿವೆ.

ಸದ್ಯದಲ್ಲೇ ಟಾಟಾ ಟಿಯಾಗೋ ಎಲೆಕ್ಟ್ರಿಕ್ ಕಾರು ಬಿಡುಗಡೆಗೆ ಸಿದ್ದತೆ

ಟಾಟಾ ಎಲೆಕ್ಟ್ರಿಕ್ ಆವೃತ್ತಿಯಲ್ಲಿ ಲಿಥಿಯಂ ಅಲಾನ್ ಬ್ಯಾಟರಿಯನ್ನು ಬಳಕೆ ಮಾಡಲಾಗುತ್ತಿದ್ದು, ಟಿಯಾಗೋ ಬಿಡುಗಡೆ ನಂತರ ನ್ಯಾನೋ ಕಾರುಗಳು ಕೂಡಾ ಎಲೆಕ್ಟ್ರಿಕ್ ಎಂಜಿನ್ ಪಡೆದುಕೊಳ್ಳಲಿವೆ.

ಸದ್ಯದಲ್ಲೇ ಟಾಟಾ ಟಿಯಾಗೋ ಎಲೆಕ್ಟ್ರಿಕ್ ಕಾರು ಬಿಡುಗಡೆಗೆ ಸಿದ್ದತೆ

ಡ್ರೈವ್ ಸ್ಪಾರ್ಕ್ ಅಭಿಪ್ರಾಯ

2030ರ ವೇಳೆಗೆ ದೇಶದಲ್ಲಿ ಡೀಸೆಲ್, ಪೆಟ್ರೋಲ್ ಕಾರುಗಳ ಮಾರಾಟ ಮತ್ತು ಉತ್ಪಾದನೆ ಸಂಪೂರ್ಣ ತಗ್ಗಲಿದ್ದು, ಈಗಿನಿಂದಲೇ ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆಗೆ ಟಾಟಾ ಸೇರಿದಂತೆ ಎಲ್ಲಾ ಕಾರು ಉತ್ಪಾದಕರು ಮುಂದಾಗಿರುವುದು ಗಮರ್ನಾಹ ಸಂಗತಿ.

Most Read Articles

Kannada
English summary
Read in Kannada about Tata Tiago EV will launch in India next year.
Story first published: Friday, August 11, 2017, 18:56 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X