ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆ ಬಗ್ಗೆ ಸುಳಿವು ನೀಡಿದ ಟೊಯೊಟಾ

ಟೊಯೊಟಾ ಮೋಟಾರ್ಸ್ ವಿಭಾಗವು 2020ರ ವೇಳೆಗೆ ಎಲ್ಲಾ ಪ್ರಮುಖ ಕಾರು ಮಾದರಿಗಳನ್ನು ಎಲೆಕ್ಟ್ರಿಕ್ ಎಂಜಿನ್‌ನೊಂದಿಗೆ ಬಿಡುಗಡೆಗೊಳಿಸುವ ಸುಳಿವು ನೀಡಿದ್ದು, ಈ ನಿಟ್ಟಿನಲ್ಲಿ ಕೈಗೊಂಡಿರುವ ಮಹತ್ವದ ಯೋಜನೆಗಳ ಮಾಹಿತಿ ಇಲ್ಲಿದೆ.

By Praveen

ಜಪಾನ್ ಮೂಲದ ಪ್ರತಿಷ್ಠಿತ ಕಾರು ಉತ್ಪಾದನಾ ಸಂಸ್ಥೆಯಾದ ಟೊಯೊಟಾ ಮೋಟಾರ್ಸ್ ವಿಭಾಗವು 2020ರ ವೇಳೆಗೆ ಎಲ್ಲಾ ಪ್ರಮುಖ ಕಾರು ಮಾದರಿಗಳನ್ನು ಎಲೆಕ್ಟ್ರಿಕ್ ಎಂಜಿನ್‌ನೊಂದಿಗೆ ಬಿಡುಗಡೆಗೊಳಿಸುವ ಸುಳಿವು ನೀಡಿದ್ದು, ಈ ನಿಟ್ಟಿನಲ್ಲಿ ಕೈಗೊಂಡಿರುವ ಮಹತ್ವದ ಯೋಜನೆಗಳ ಮಾಹಿತಿ ಇಲ್ಲಿದೆ.

ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆ ಬಗ್ಗೆ ಸುಳಿವು ನೀಡಿದ ಟೊಯೊಟಾ

2030ರ ವೇಳೆಗೆ ಶೇ. 90ರಷ್ಟು ಎಲೆಕ್ಟ್ರಿಕ್ ವಾಹನಗಳನ್ನು ರಸ್ತೆಗಿಳಿಸುವ ಮಹತ್ವದ ಯೋಜನೆಗೆ ಪೂರಕವಾಗಿ ಎಲ್ಲಾ ಕಾರು ಉತ್ಪಾದನಾ ಸಂಸ್ಥೆಗಳು ಬೃಹತ್ ಯೋಜನೆಗಳನ್ನು ರೂಪಿಸುತ್ತಿದ್ದು, ಇದೀಗ ಟೊಯೊಟೊ ಕೂಡಾ ಇದೇ ನಿಟ್ಟಿನಲ್ಲಿ ಹೆಜ್ಜೆಯಿರಿಸುತ್ತಿದೆ.

ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆ ಬಗ್ಗೆ ಸುಳಿವು ನೀಡಿದ ಟೊಯೊಟಾ

ಹೀಗಾಗಿ 2018ರ ಜನವರಿಯಲ್ಲಿ ನಡೆಯಲಿರುವ ದೆಹಲಿ ಆಟೋ ಮೇಳದಲ್ಲಿ ಎಲೆಕ್ಟ್ರಿಕ್ ಮಾದರಿಗಳನ್ನು ಪ್ರದರ್ಶನಗೊಳಿಸಲು ಉದ್ದೇಶಿಸಿರುವ ಟೊಯೊಟಾ ಸಂಸ್ಥೆಯು ಇದಕ್ಕಾಗಿ ತಯಾರಿ ನಡೆಸುತ್ತಿದೆ.

Recommended Video

2018 Suzuki Swift Sport Unveiled - DriveSpark
ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆ ಬಗ್ಗೆ ಸುಳಿವು ನೀಡಿದ ಟೊಯೊಟಾ

ಆಟೋ ಮೇಳದಲ್ಲಿ ಎಲೆಕ್ಟ್ರಿಕ್ ಮಾದರಿಗಳನ್ನು ಪ್ರದರ್ಶನಗೊಳಿಸಿದ ನಂತರವಷ್ಟೇ ಭಾರತೀಯ ಮಾರುಕಟ್ಟೆಯಲ್ಲಿ ಭವಿಷ್ಯ ವಾಹನಗಳನ್ನು ಬಿಡುಗಡೆಗೊಳಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದು, 2021ರ ವೇಳೆಗೆ ಹೊಸ ಮಾದರಿಗಳು ಖರೀದಿಗೆ ಲಭ್ಯವಾಗುವ ಸಾಧ್ಯತೆಗಳಿವೆ.

ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆ ಬಗ್ಗೆ ಸುಳಿವು ನೀಡಿದ ಟೊಯೊಟಾ

ಇನ್ನು ಅಮೆರಿಕ ಟೆಸ್ಲಾ ಮಾದರಿಯಲ್ಲಿ ಹೊಸ ನಮೂನೆಯ ಕಾರುಗಳನ್ನು ಅಭಿವೃದ್ಧಿಗೊಳಿಸಲು ಎದುರು ನೋಡುತ್ತಿರುವ ಟೊಯೊಟಾ, ಹೆಚ್ಚು ಕಾರ್ಯಕ್ಷಮತೆ ಹೊಂದಿರುವ ಲಿಥಿಯಂ ಅಯಾನ್ ಬ್ಯಾಟರಿಗಳನ್ನು ಪರಿಚಯಿಸಲಿದೆ.

ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆ ಬಗ್ಗೆ ಸುಳಿವು ನೀಡಿದ ಟೊಯೊಟಾ

ಒಂದು ವೇಳೆ ಟೊಯೊಟಾ ಎಲೆಕ್ಟ್ರಿಕ್ ಮಾದರಿಗಳಲ್ಲಿ ಲಿಥಿಯಂ ಅಯಾನ್ ಬ್ಯಾಟರಿಗಳನ್ನು ಪರಿಚಯಿಸಿದ್ದಲ್ಲಿ ಭಾರೀ ಜನಪ್ರಿಯತೆ ಪಡೆಯುವುದರಲ್ಲಿ ಯಾವುದೇ ಸಂದೇಹವಿಲ್ಲ. ಇದಕ್ಕೆ ಕಾರಣ ಲಿಥಿಯಂ ಅಯಾನ್ ಬ್ಯಾಟರಿಗಳನ್ನು ಒಂದು ಚಾರ್ಜ್ ಮಾಡಿದರೆ ಸರಾಸರಿಯಾಗಿ 350 ರಿಂದ 400 ಕಿಮಿ ಮೈಲೇಜ್ ನೀಡಬಲ್ಲ ಸಾಮರ್ಥ್ಯ ಹೊಂದಿವೆ.

ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆ ಬಗ್ಗೆ ಸುಳಿವು ನೀಡಿದ ಟೊಯೊಟಾ

ಡ್ರೈವ್ ಸ್ಪಾರ್ಕ್ ಅಭಿಪ್ರಾಯ

ಈಗಾಗಲೇ ಎಲೆಕ್ಟ್ರಿಕ್ ಕಾರು ಉತ್ಪಾದನೆಯತ್ತ ಎಲ್ಲ ವಾಹನ ಉತ್ಪಾದಕರು ಗಮನಹರಿಸುತ್ತಿದ್ದು, ಟೊಯೊಟಾ ಕೂಡಾ ಈ ನಿಟ್ಟಿನಲ್ಲಿ ಭವಿಷ್ಯ ಯೋಜನೆ ರೂಪಿಸುತ್ತಿರುವ ಭಾರತೀಯ ಆಟೋ ಉದ್ಯಮದ ಚಿತ್ರಣ ಬದಲಿಸುವುದರಲ್ಲಿ ಯಾವುದೇ ಅನುಮಾನವಿಲ್ಲ.

Most Read Articles

Kannada
Read more on ಟೊಯೊಟಾ toyota
English summary
Read in Kannada about Toyota Plans To Introduce Electrified Vehicles.
Story first published: Thursday, September 21, 2017, 15:26 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X