ಟೊಯೊಟಾದಿಂದ ಹೊಸ ಮಾದರಿಯ ಇನೋವಾ ಕ್ರಿಸ್ಟಾ ಟೂರಿಂಗ್ ಸ್ಪೋರ್ಟ್ ಬಿಡುಗಡೆ
ಟೊಯೊಟಾ ಕಿಲೋಸ್ಕರ್ ಮೋಟಾರ್ ಸಂಸ್ಥೆಯು ತನ್ನ ಜನಪ್ರಿಯ ಎಸ್‌ಯುವಿ ಮಾದರಿಯಾದ ಇನೋವಾ ಕ್ರಿಸ್ಟಾ ಟೂರಿಂಗ್ ಸ್ಪೋರ್ಟ್ ಆವೃತ್ತಿಯನ್ನು ಸುಧಾರಿತ ತಂತ್ರಜ್ಞಾನಗಳೊಂದಿಗೆ ಮರು ಅಭಿವೃದ್ಧಿಗೊಳಿಸಿದ್ದು, ಇದೀಗ ಮಾರುಕಟ್ಟೆಯಲ್ಲಿ ಖರೀದಿಗೆ ಲಭ್ಯವಾಗಿದೆ.
ಟೊಯೊಟಾ ಕಿಲೋಸ್ಕರ್ ಮೋಟಾರ್ ಸಂಸ್ಥೆಯು ತನ್ನ ಜನಪ್ರಿಯ ಎಸ್‌ಯುವಿ ಮಾದರಿಯಾದ ಇನೋವಾ ಕ್ರಿಸ್ಟಾ ಟೂರಿಂಗ್ ಸ್ಪೋರ್ಟ್ ಆವೃತ್ತಿಯನ್ನು ಸುಧಾರಿತ ತಂತ್ರಜ್ಞಾನಗಳೊಂದಿಗೆ ಮರು ಅಭಿವೃದ್ಧಿಗೊಳಿಸಿದ್ದು, ಇದೀಗ ಮಾರುಕಟ್ಟೆಯಲ್ಲಿ ಖರೀದಿಗೆ ಲಭ್ಯವಾಗಿದೆ.

ಇನೋವಾ ಕ್ರಿಸ್ಟಾ ಟೂರಿಂಗ್ ಸ್ಪೋರ್ಟ್ ಆವೃತ್ತಿಯು ಈಗಾಗಲೇ ಮಾರುಕಟ್ಟೆಯಲ್ಲಿ ಸಾಕಷ್ಟು ಜನಪ್ರಿಯತೆಗೊಂಡಿದ್ದು, ಗ್ರಾಹಕರ ಬೇಡಿಕೆ ಹಿನ್ನೆಲೆ ತಾಂತ್ರಿಕ ಅಂಶಗಳನ್ನು ಹೊರತುಪಡಿಸಿ ಸುಧಾರಿತ ಮಾದರಿಯ ವೈಶಿಷ್ಟ್ಯತೆಗಳೊಂದಿಗೆ ನವೀಕರಿಸಿ ಬಿಡುಗಡೆಗೊಳಿಸಿದೆ.

ಹೀಗಾಗಿ ಇನೋವಾ ಕ್ರಿಸ್ಟಾ ಟೂರಿಂಗ್ ಸ್ಪೋರ್ಟ್ ಆವೃತ್ತಿಯು ಈ ಹಿಂದಿನ ಮಾದರಿಗಿಂತ ಹೆಚ್ಚು ಸುರಕ್ಷಾ ಸೌಲಭ್ಯಗಳನ್ನು ಮತ್ತು ಆಧುನಿಕ ಮಾದರಿಯ ಒಳವಿನ್ಯಾಸಗಳನ್ನು ಪಡೆದುಕೊಂಡಿದ್ದು, ತಾಂತ್ರಿಕ ವಿಭಾಗದಲ್ಲಿ ಯಾವುದೇ ಬದಲಾವಣೆ ತರದೆ ಈ ಹಿಂದಿನ ವೈಶಿಷ್ಟ್ಯತೆಗಳನ್ನೇ ಮುಂದುವರಿಸಲಾಗಿದೆ.

ಇನ್ನು ಇನೋವಾ ಕ್ರಿಸ್ಟಾ ಟೂರಿಂಗ್ ಸ್ಪೋರ್ಟ್ ಮಾದರಿಯಲ್ಲಿ ಇದೇ ಮೊದಲ ಬಾರಿಗೆ ಡೀಸೆಲ್ ಆವೃತ್ತಿಯಲ್ಲಿ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ವ್ಯವಸ್ಥೆಯನ್ನು ಒದಗಿಸಲಾಗಿದ್ದು, ದೆಹಲಿ ಎಕ್ಸ್‌ಶೋರಂ ಪ್ರಕಾರಹೊಸ ಕಾರಿನ ಬೆಲೆಯನ್ನು ರೂ.19.60 ಲಕ್ಷಕ್ಕೆ ನಿಗದಿಗೊಳಿಸಲಾಗಿದೆ.

ಇದರ ಜೊತೆಗೆ ಪೆಟ್ರೋಲ್ ಆವೃತ್ತಿಯಲ್ಲೂ ಕೂಡಾ 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಜೊತೆಗೆ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ವ್ಯವಸ್ಥೆಯನ್ನು ಪಡೆದುಕೊಂಡಿರುವುದು ಸ್ಪೋಟ್ ಪ್ರಿಯರ ಆಯ್ಕೆಗೆ ಸಹಕಾರಿಯಾಗಲಿದೆ.

ಎಂಜಿನ್ ಸಾಮರ್ಥ್ಯ
ಇನೋವಾ ಕ್ರಿಸ್ಟಾ ಟೂರಿಂಗ್ ಸ್ಪೋರ್ಟ್ ಆವೃತ್ತಿಯು 2,393ಸಿಸಿ ಸಾಮರ್ಥ್ಯದ 2.4-ಲೀಟರ್ ಡಿಸೇಲ್ ಎಂಜಿನ್ ಹೊಂದಿದ್ದು, ಐಷಾರಾಮಿ ಕಾರು ಮಾದರಿಗಳಲ್ಲಿ ಮಾತ್ರ ಲಭ್ಯವಾಗುವ ಇಂಟೆಲಿಜೆಂಟ್ ಮ್ಯಾನುವಲ್ ಟ್ರಾನ್ಸ್‌ಮಿಷನ್ ತಂತ್ರಜ್ಞಾನವನ್ನು ಒದಗಿಸಲಾಗಿದೆ.

ಆದ್ರೆ ಟೊಯೊಟಾ ಸಂಸ್ಥೆಯು ಹೊಸ ಇನೋವಾ ಕುರಿತು ಯಾವುದೇ ಮಾಹಿತಿಯನ್ನು ಬಿಟ್ಟುಕೊಟ್ಟಿಲ್ಲವಾದರೂ ತನ್ನ ಅಧಿಕೃತ ವೆಬ್‌ತಾಣದಲ್ಲಿ ಅಪ್ಡೆಟ್ ಮಾಹಿತಿಗಳನ್ನು ಬಿಡುಗಡೆಗೊಳಿಸಿದ್ದು, ಮಾರಾಟಕ್ಕೂ ಕೂಡಾ ಲಭ್ಯವಿವೆ.


Click it and Unblock the Notifications