2020ಕ್ಕೆ ಬರಲಿದೆ ಫೋಕ್ಸ್‌ವ್ಯಾಗನ್ ನಿರ್ಮಾಣದ ಎಲೆಕ್ಟ್ರಿಕ್ ಬಸ್
ಎಲೆಕ್ಟ್ರಿಕ್ ಎಂಜಿನ್ ಪ್ರೇರಿತ ವಾಹನಗಳ ಉತ್ಪಾದನೆ ಮತ್ತು ಮಾರಾಟ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಈ ಹಿನ್ನೆಲೆ 2022ರ ವೇಳೆಗೆ ತನ್ನ ಪರಿಕಲ್ಪನೆಯ ಎಲೆಕ್ಟ್ರಿಕ್ ಬಸ್ ಅನ್ನು ಹೊರತರುವುದಾಗಿ ಫೋಕ್ಸ್‌ವ್ಯಾಗನ್ ಹೇಳಿಕೊಂಡಿದೆ.
ಎಲೆಕ್ಟ್ರಿಕ್ ಎಂಜಿನ್ ಪ್ರೇರಿತ ವಾಹನಗಳ ಉತ್ಪಾದನೆ ಮತ್ತು ಮಾರಾಟ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಈ ಹಿನ್ನೆಲೆ 2022ರ ವೇಳೆಗೆ ತನ್ನ ಪರಿಕಲ್ಪನೆಯ ಎಲೆಕ್ಟ್ರಿಕ್ ಬಸ್ ಅನ್ನು ಹೊರತರುವುದಾಗಿ ಫೋಕ್ಸ್‌ವ್ಯಾಗನ್ ಹೇಳಿಕೊಂಡಿದೆ.

ಈ ಹಿನ್ನೆಲೆ ತನ್ನ ಹೊಸ ಪರಿಕಲ್ಪನೆಯ ಎಲೆಕ್ಟ್ರಿಕ್ ಬಸ್ ಮಾದರಿಯನ್ನು ಹೊರಹಾಕಿರುವ ಫೋಕ್ಸ್‌ವ್ಯಾಗನ್, ಪ್ರಸ್ತುತ ಮಾರುಕಟ್ಟೆಯಲ್ಲಿನ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಬಸ್ ವಿನ್ಯಾಸಗಳನ್ನು ಕೈಗೊಳ್ಳುವುದಾಗಿ ಹೇಳಿಕೊಂಡಿದೆ.

ಫೋಕ್ಸ್‌ವ್ಯಾಗನ್ ಹೊರಹಾಕಿರುವ ಎಲೆಕ್ಟ್ರಿಕ್ ಬಸ್ ಮಾದರಿಯು ಹಳೆಯ ಶಾಲಾ ವಾಹನಗಳ ವಿನ್ಯಾಸ ಹೊಂದಿದ್ದು, ಬಝ್ ವಿನ್ಯಾಸವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ಬಗ್ಗೆ ಸಂಶೋಧನೆ ನಡೆಸಿದೆ.

ಇನ್ನೊಂದು ವಿಶೇಷ ಅಂದ್ರೆ ಫೋಕ್ಸ್‌ವ್ಯಾಗನ್ ನಿರ್ಮಾಣ ಮಾಡುತ್ತಿರುವ ಬಝ್ ಪರಿಕಲ್ಪನೆಯ ಬಸ್ ಮಾದರಿಗಳು ಕೇವಲ ಒಂದೇ ಚಾರ್ಜ್‌ನಲ್ಲಿ 300 ಮೈಲಿ ಕ್ರಮಿಸುವ ಸಾಮರ್ಥ್ಯ ಹೊಂದಿದ್ದು, 30 ನಿಮಿಷಗಳಲ್ಲಿ ಶೇ.80 ಚಾರ್ಜ್ ಮಾಡಬಹುದಾಗಿದೆ.
Recommended Video


ಇದಲ್ಲದೇ ಐ.ಡಿ ಬಝ್ ಸೆಮಿ ಆಟೋನಮಸ್ ಟೆಕ್ನಾಲಜಿ ಹೊಂದಿರುವ ಫೋರ್ಕ್ಸ್‌ವ್ಯಾಗನ್ ಎಲೆಕ್ಟ್ರಿಕ್ ಬಸ್‌ಗಳು "ಆಲ್ ಎಲೆಕ್ಟ್ರಿಕ್ ವೆಹಿಕಲ್' ಎನ್ನುವ ಪರಿಕಲ್ಪನೆಯೊಂದಿಗೆ ಹೆಚ್ಚು ಸದ್ದು ಮಾಡುತ್ತಿವೆ.

ಹೀಗಾಗಿಯೇ ಹೊಸ ಪರಿಕಲ್ಪನೆ ಅಡಿ ಇನ್ನಷ್ಟು ಹೊಸ ಆವಿಷ್ಕಾರಗಳನ್ನು ಕೈಗೊಂಡಿರುವ ಫೋಕ್ಸ್‌ವ್ಯಾಗನ್ ಸಂಸ್ಥೆಯು, ಎಲೆಕ್ಟ್ರಿಕ್ ಬಸ್‌ನಲ್ಲಿ ಮತ್ತಷ್ಟು ಸುಧಾರಿತ ತಂತ್ರಜ್ಞಾನ ಒದಗಿಸುವ ಕುರಿತು ಸುಳಿವು ನೀಡಿದೆ.

ಡ್ರೈವ್ ಸ್ಪಾರ್ಕ್ ಅಭಿಪ್ರಾಯ
2030ರ ವೇಳೆಗೆ ಶೇ.90 ರಷ್ಟು ವಾಹನಗಳು ಎಲೆಕ್ಟ್ರಿಕ್ ಎಂಜಿನ್‌ನೊಂದಿಗೆ ಅಭಿವೃದ್ಧಿ ಹೊಂದಿರಲಿದ್ದು, ಫೋಕ್ಸ್‌ವ್ಯಾಗನ್ ನಿರ್ಮಾಣದ ಎಲೆಕ್ಟ್ರಿಕ್ ಬಸ್‌ಗಳು 2017ರ ಡೆಟ್ರಾಯಿಟ್ ಆಟೋ ಮೇಳದಲ್ಲಿ ಪ್ರದರ್ಶನಗೊಳ್ಳಲಿದೆ.


Click it and Unblock the Notifications








