Just In
- 25 min ago Bajaj: ಯುವಕರ ಮನಗೆದ್ದಿರುವ ಪಲ್ಸರ್ ಬೈಕ್ಗಳಿವು, ಬೆಲೆ ರೂ.2 ಲಕ್ಷದೊಳಗೆ.. 50 ಕಿ.ಮೀಗಿಂತ ಹೆಚ್ಚಿನ ಮೈಲೇಜ್
- 1 hr ago ಥಾರ್ 5 ಡೋರ್ ಬಿಡುಗಡೆಗೂ ಮುನ್ನವೇ ಎದುರಾಳಿ ರೆಡಿ: ಹೊಸ ಗೂರ್ಖಾಗೆ ನಲುಗುತ್ತಾ ಮಹೀಂದ್ರಾ!
- 2 hrs ago ಪ್ರತಿ ಕಿ.ಮೀ ಚಲಿಸಲು ಕೇವಲ 60 ಪೈಸೆ ವೆಚ್ಚ: ಟಾಟಾ ಟಿಯಾಗೋ ಇವಿ EMI, ಆನ್ ರೋಡ್ ಬೆಲೆ ಎಷ್ಟು?
- 16 hrs ago ಜಿಮ್ನಿಗೆ ಸೆಡ್ಡು ಹೊಡೆಯಲು ಎಂಜಿ ಮಾಸ್ಟರ್ ಪ್ಲಾನ್: ಸದ್ಯದಲ್ಲೇ ಕಾಮೆಟ್ ಆಧರಿಸಿ 5 ಡೋರ್ ಕಾರು ಭಾರತಕ್ಕೆ?
Don't Miss!
- News ಕೋಲಾರ ಟಿಕೆಟ್ ಗಾಗಿ ಫೈಟಿ; ಶಾಸಕರ ರಾಜೀನಾಮೆ ಎಚ್ಚರಿಕೆ - ಡಿಕೆ ಶಿವಕುಮಾರ್ ಏನಂದ್ರು?
- Technology ಇಂದು ಪೊಕೊ C61 ಫೋನಿನ ಫಸ್ಟ್ ಸೇಲ್!..ಬೆಲೆ, ಆಫರ್ ಮಾಹಿತಿ ಇಲ್ಲಿದೆ
- Lifestyle ಕೈಗೆ ಹಿಡಿದ ಬಣ್ಣ ತೆಗಿಯೋದು ತುಂಬಾ ಸಿಂಪಲ್..! ಇಂಥಾ ಪ್ರತಿಭೆ ನೀವೆಲ್ಲೂ ನೋಡಿರಲ್ಲ..!
- Finance ಬೆಂಗಳೂರಿನ ರಿಯಲ್ ಎಸ್ಟೇಟ್ ಸಂಸ್ಥೆ ಕಾಂಕಾರ್ಡ್ನಿಂದ 100 ಕೋಟಿಗೆ 4.5 ಎಕರೆ ಭೂಮಿ ಸ್ವಾಧೀನ
- Movies ಶಾರುಖ್ ಖಾನ್ ಹಾಗೂ ನಾನು ಈ ಯುಗದ ಕೊನೆಯ ಸೂಪರ್ ಸ್ಟಾರ್ಸ್ ಎಂದ ಕಂಗನಾ..!
- Sports Hardik Pandya: ಸ್ವತಃ ಮುಂಬೈ ಇಂಡಿಯನ್ಸ್ ಫ್ಯಾನ್ಸ್ನಿಂದಲೂ ಹಾರ್ದಿಕ್ ಪಾಂಡ್ಯ ಟ್ರೋಲ್!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೋಂಡಾ ಸಂಸ್ಥೆಯ 20 ವರ್ಷಗಳ ರೆಕಾರ್ಡ್ ಬ್ರೇಕ್ ಮಾಡಿದ ಅಮೇಜ್ ಕಾರು..
ಜಪಾನ್ ಮೂಲದ ವಾಹನ ತಯಾರಕ ಸಂಸ್ಥೆಯಾದ ಹೋಂಡಾ ತಮ್ಮ ಅಮೇಜ್ ಕಾರನ್ನು ಗ್ರಾಹಕರಿಗೆ ಅನುಗುಣವಾಗಿ ಉತ್ಪಾದಿಸಿ ಬಿಡುಗಡೆಗೊಳಿಸಿದ್ದು, ಇದೀಗ ಅಮೇಜ್ ಕಾರು ಹೋಂಡಾ ಸಂಸ್ಥೆಯು ಎಂದು ಕಾಣದ ಧಾಖಲೆಯನ್ನು ಸೃಷ್ಠಿಸಿದೆ.
ಜಪಾನ್ ಮೂಲದ ವಾಹನ ತಯಾರಕ ಸಂಸ್ಥೆಯಾದ ಹೋಂಡಾ ತಮ್ಮ ಅಮೇಜ್ ಕಾರನ್ನು ಗ್ರಾಹಕರಿಗೆ ಅನುಗುಣವಾಗಿ ಉತ್ಪಾದಿಸಿ ಬಿಡುಗಡೆಗೊಳಿಸಿದ್ದು, ಇದೀಗ ಅಮೇಜ್ ಕಾರು ಹೋಂಡಾ ಸಂಸ್ಥೆಯು ಎಂದು ಕಾಣದ ಧಾಖಲೆಯನ್ನು ಸೃಷ್ಠಿಸಿದೆ.
ಹೌದು, ಇದೇ ವರ್ಷದ ಮೇ ತಿಂಗಳಿನಲ್ಲಿ ಬಿಡುಗಡೆಗೊಂಡ ಹೋಂಡಾ ಅಮೇಜ್ ಕೇವಲ 3 ತಿಂಗಳಿನಲ್ಲಿ ಸುಮಾರು 30,000 ಸಾವಿರಕ್ಕು ಹೆಚ್ಚು ಕಾರುಗಳು ಮಾರಾಟಗೊಂಡಿವೆ. ಹೋಂಡಾ ಸಂಸ್ಥೆ ಪ್ರಾರಂಭಗೊಂಡು 20 ವರ್ಷಗಳಾದರೂ, ಇದೇ ಮೊದಲ ಬಾರಿಗೆ ಕಡಿಮೆ ಅವಧಿಯಲ್ಲಿ ಅಧಿಕವಾಗಿ ಮಾರಾಟಗೊಂಡ ಕಾರು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ಹೋಂಡಾ ಸಂಸ್ಥೆಯು 2017ರ ಏಪ್ರಿಲ್ನಿಂದ ಜುಲೈ ತಿಂಗಳಿನಲ್ಲಿ ಸುಮಾರು 55,647 ಯೂನಿಟ್ ಕಾರುಗಳನ್ನು ಮಾರಾಟ ಮಾಡಿದ್ದು, 2018ರ ಏಪ್ರಿಲ್ ನಿಂದ ಜುಲೈ ತಿಂಗಳ ಅವಧಿಯಲ್ಲಿ ಸುಮಾರು 62,579 ಕಾರುಗಳನ್ನು ಮಾರಾಟ ಮಾಡಿದೆ. ಅಂದರೇ ಕಳೆದ ವರ್ಷಕ್ಕಿಂತ ಈ ವರ್ಷದ ಏಪ್ರಿಲ್ನಿಂದ ಜುಲೈ ತಿಂಗಳ ಮಾರಾಟದಲ್ಲಿ ಶೇಕಡ 12.5ರಷ್ಟು ಅಧಿಕ ಮಾರಾಟ ಕಂಡಿದೆ.
ಮೇ 16 ರಂದು ಬಿಡುಗಡೆಗೊಂಡ ಹೋಂಡಾ ಅಮೇಜ್ ಕಾರುಗಳು ದೆಹಲಿಯ ಎಕ್ಸ್ ಶೋರಂ ಪ್ರಕಾರ ರೂ.5.59ರ ಪ್ರಾರಂಭಿಕ ಬೆಲೆಯನ್ನು ಪಡೆದುಕೊಂಡಿದ್ದು, ಇನ್ನು ಉನ್ನತ್ತ ಮಟ್ಟದ ಆವೃತ್ತಿಯ ಬೆಲೆಯನ್ನು ರೂ.899 ಲಕ್ಷಕ್ಕೆ ಮಾರಾಟಗೊಳ್ಳುತ್ತಿದೆ.
ಹೋಂಡಾ ಸಂಸ್ಥೆಯು ಬಿಡುಗಡೆ ಮಾಡಿರುವ ಅಮೇಜ್ ಕಾರುಗಳು ಒಟ್ಟು ನಾಲ್ಕು ಮಾದರಿಯಲ್ಲಿ ಖರೀದಿ ಲಭ್ಯವಿದ್ದು, ಗ್ರಾಹಕರು ತಮ್ಮ ಬೇಡಿಕೆಗೆ ಅನುಗುಣವಾಗಿ ಇ, ಎಸ್, ವಿ ಮತ್ತು ವಿಎಕ್ಸ್ ವೆರಿಯೆಂಟ್ಗಳನ್ನು ಆಯ್ಕೆ ಮಾಡಬಹುದಾಗಿದೆ. ಹೀಗಾಗಿ ವೆರಿಯೆಂಟ್ಗಳಿಗೆ ಅನುಗುಣವಾಗಿ ಕಾರಿನ ಬೆಲೆಗಳು ನಿಗದಿ ಮಾಡಲಾಗಿದೆ.
ಸ್ಪೋರ್ಟಿ ಲುಕ್ ಹೊಂದಿರುವ ಅಮೇಜ್ ಕಾರುಗಳು ಎರಡನೇ ತಲೆಮಾರಿನ ಶಾರ್ಪರ್ ಆಂಗಲ್ಸ್, ಬೋಲ್ಡರ್ ಡಿಸೈನ್ ಹಾಗೂ ಆಂಗ್ಯೂಲರ್ ಹೆಡ್ಲ್ಯಾಂಪ್ಗಳನ್ನು ಪಡೆದುಕೊಂಡಿದ್ದು, 15 ಇಂಚಿನ ಅಲಾಯ್ ವೀಲ್ಗಳು, ಹಿಂಭಾಗದ ವಿನ್ಯಾಸದಲ್ಲಿ ಹೊಸ ಪ್ರೇರಣೆಯ ಕ್ರೋಮ್ ಸ್ಟ್ರಿಪ್, ಸಿ ಟೈಪ್ ಟೈಲ್ ಲೈಟ್ಸ್ ಗಳನ್ನು ಪಡೆದಿದಿರುವುದು ಆಕರ್ಷಕವಾಗಿದೆ.
ಹೊಸ ಅಮೇಜ್ ಕಾರುಗಳು 1.2-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ನಲ್ಲಿ ಖರೀದಿಸಬಹುದಾಗಿದ್ದು, ಪೆಟ್ರೋಲ್ ಆವೃತ್ತಿಯು 89-ಬಿಎಚ್ಪಿ, 110-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದಲ್ಲಿ ಡಿಸೇಲ್ ಆವೃತ್ತಿಯು 99-ಬಿಎಚ್ಪಿ, 200-ಎನ್ಎಂ ಉತ್ಪಾದನೆ ಮಾಡಬಲ್ಲವು.
ಇದಲ್ಲದೇ ಹೊಸ ಕಾರುಗಳಲ್ಲಿ 5-ಸ್ಪೀಡ್ ಮ್ಯಾನುವಲ್ ಗೇರ್ಬಾಕ್ಸ್ ಮತ್ತು 5-ಸ್ಪೀಡ್ ಆಟೋಮ್ಯಾಟಿಕ್ ಗೇರ್ಬಾಕ್ಸ್ ಆಯ್ಕೆಯಿದ್ದು, ಮ್ಯಾನುವಲ್ಗಿಂತ ಡಿಸೇಲ್ ಆವೃತ್ತಿಗಿಂತ ಆಟೋಮ್ಯಾಟಿಕ್ ಗೇರ್ಬಾಕ್ಸ್ ಹೊಂದಿರುವ ಡಿಸೇಲ್ ಆವೃತ್ತಿಯು 79-ಬಿಎಚ್ಪಿ ಮತ್ತು 160-ಎನ್ಎಂ ಟಾರ್ಕ್ ಮಾತ್ರ ಉತ್ಪಾದಿಸಲಿವೆ.
ಕಾರಿನ ಒಳವಿನ್ಯಾಸ
ಹೊಸ ಅಮೇಜ್ ಕಾರುಗಳು ಎಲ್ಇಡಿ ಡಿಎಲ್ಆರ್, ಡ್ಯುಯಲ್ ಟೋನ್ ಡ್ಯಾಶ್ಬೋರ್ಡ್, ಆಪಲ್ ಕಾರ್ ಪ್ಲೇ ಹಾಗೂ ಆಂಡ್ರಾಯ್ಡ್ ಆಟೋ ಅನ್ನು ಒಳಗೊಂಡ ಟಚ್ ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಂ, ಕ್ಲೈಮೆಟ್ ಕಂಟ್ರೋಲರ್, ಸ್ಟೀರಿಂಗ್ ಮೌಟೆಂಡ್ ಕಂಟ್ರೋಲರ್ ಮತ್ತು ಪೆಡಲ್ ಶಿಫ್ಟರ್ಸ್ ಅನ್ನು ಅಳವಡಿಸಲಾಗಿದೆ.
ಜೊತೆಗೆ ಕೀ ಲೇಸ್ ಎಂಟ್ರಿ, ಎಬಿಎಸ್, ಇಬಿಡಿ, ಸೆಂಟ್ರಲ್ ಲಾಕಿಂಗ್, ಡ್ಯುಯಲ್ ಫ್ರಂಟ್ ಏರ್ಬ್ಯಾಗ್, ಕ್ರೂಸ್ ಕಂಟ್ರೋಲರ್, ರಿವರ್ಸ್ ಪಾರ್ಕಿಂಗ್ ಕ್ಯಾಮೆರಾ ಜೊತೆ ಸೆನ್ಸಾರ್ ಒದಗಿಸಲಾಗಿದ್ದು, ಮಾರುತಿ ಡಿಜೈರ್, ಹ್ಯುಂಡೈ ಎಕ್ಸ್ಸೆಂಟ್ ಮತ್ತು ಟಾಟಾ ಟಿಗೋರ್ ಕಾರುಗಳಿಗೆ ತ್ರೀವ ಪೈಪೋಟಿ ನೀಡಲಿದೆ.