ಹೋಂಡಾ ಸಂಸ್ಥೆಯ 20 ವರ್ಷಗಳ ರೆಕಾರ್ಡ್ ಬ್ರೇಕ್ ಮಾಡಿದ ಅಮೇಜ್ ಕಾರು..

ಜಪಾನ್ ಮೂಲದ ವಾಹನ ತಯಾರಕ ಸಂಸ್ಥೆಯಾದ ಹೋಂಡಾ ತಮ್ಮ ಅಮೇಜ್ ಕಾರನ್ನು ಗ್ರಾಹಕರಿಗೆ ಅನುಗುಣವಾಗಿ ಉತ್ಪಾದಿಸಿ ಬಿಡುಗಡೆಗೊಳಿಸಿದ್ದು, ಇದೀಗ ಅಮೇಜ್ ಕಾರು ಹೋಂಡಾ ಸಂಸ್ಥೆಯು ಎಂದು ಕಾಣದ ಧಾಖಲೆಯನ್ನು ಸೃಷ್ಠಿಸಿದೆ.

By Rahul Ts

ಜಪಾನ್ ಮೂಲದ ವಾಹನ ತಯಾರಕ ಸಂಸ್ಥೆಯಾದ ಹೋಂಡಾ ತಮ್ಮ ಅಮೇಜ್ ಕಾರನ್ನು ಗ್ರಾಹಕರಿಗೆ ಅನುಗುಣವಾಗಿ ಉತ್ಪಾದಿಸಿ ಬಿಡುಗಡೆಗೊಳಿಸಿದ್ದು, ಇದೀಗ ಅಮೇಜ್ ಕಾರು ಹೋಂಡಾ ಸಂಸ್ಥೆಯು ಎಂದು ಕಾಣದ ಧಾಖಲೆಯನ್ನು ಸೃಷ್ಠಿಸಿದೆ.

ಹೋಂಡಾ ಸಂಸ್ಥೆಯ 20 ವರ್ಷಗಳ ರೆಕಾರ್ಡ್ ಬ್ರೇಕ್ ಮಾಡಿದ ಹೊಸ ಅಮೇಜ್..

ಹೌದು, ಇದೇ ವರ್ಷದ ಮೇ ತಿಂಗಳಿನಲ್ಲಿ ಬಿಡುಗಡೆಗೊಂಡ ಹೋಂಡಾ ಅಮೇಜ್ ಕೇವಲ 3 ತಿಂಗಳಿನಲ್ಲಿ ಸುಮಾರು 30,000 ಸಾವಿರಕ್ಕು ಹೆಚ್ಚು ಕಾರುಗಳು ಮಾರಾಟಗೊಂಡಿವೆ. ಹೋಂಡಾ ಸಂಸ್ಥೆ ಪ್ರಾರಂಭಗೊಂಡು 20 ವರ್ಷಗಳಾದರೂ, ಇದೇ ಮೊದಲ ಬಾರಿಗೆ ಕಡಿಮೆ ಅವಧಿಯಲ್ಲಿ ಅಧಿಕವಾಗಿ ಮಾರಾಟಗೊಂಡ ಕಾರು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಹೋಂಡಾ ಸಂಸ್ಥೆಯ 20 ವರ್ಷಗಳ ರೆಕಾರ್ಡ್ ಬ್ರೇಕ್ ಮಾಡಿದ ಹೊಸ ಅಮೇಜ್..

ಹೋಂಡಾ ಸಂಸ್ಥೆಯು 2017ರ ಏಪ್ರಿಲ್‍ನಿಂದ ಜುಲೈ ತಿಂಗಳಿನಲ್ಲಿ ಸುಮಾರು 55,647 ಯೂನಿಟ್ ಕಾರುಗಳನ್ನು ಮಾರಾಟ ಮಾಡಿದ್ದು, 2018ರ ಏಪ್ರಿಲ್ ನಿಂದ ಜುಲೈ ತಿಂಗಳ ಅವಧಿಯಲ್ಲಿ ಸುಮಾರು 62,579 ಕಾರುಗಳನ್ನು ಮಾರಾಟ ಮಾಡಿದೆ. ಅಂದರೇ ಕಳೆದ ವರ್ಷಕ್ಕಿಂತ ಈ ವರ್ಷದ ಏಪ್ರಿಲ್‍ನಿಂದ ಜುಲೈ ತಿಂಗಳ ಮಾರಾಟದಲ್ಲಿ ಶೇಕಡ 12.5ರಷ್ಟು ಅಧಿಕ ಮಾರಾಟ ಕಂಡಿದೆ.

ಹೋಂಡಾ ಸಂಸ್ಥೆಯ 20 ವರ್ಷಗಳ ರೆಕಾರ್ಡ್ ಬ್ರೇಕ್ ಮಾಡಿದ ಹೊಸ ಅಮೇಜ್..

ಮೇ 16 ರಂದು ಬಿಡುಗಡೆಗೊಂಡ ಹೋಂಡಾ ಅಮೇಜ್ ಕಾರುಗಳು ದೆಹಲಿಯ ಎಕ್ಸ್ ಶೋರಂ ಪ್ರಕಾರ ರೂ.5.59ರ ಪ್ರಾರಂಭಿಕ ಬೆಲೆಯನ್ನು ಪಡೆದುಕೊಂಡಿದ್ದು, ಇನ್ನು ಉನ್ನತ್ತ ಮಟ್ಟದ ಆವೃತ್ತಿಯ ಬೆಲೆಯನ್ನು ರೂ.899 ಲಕ್ಷಕ್ಕೆ ಮಾರಾಟಗೊಳ್ಳುತ್ತಿದೆ.

ಹೋಂಡಾ ಸಂಸ್ಥೆಯ 20 ವರ್ಷಗಳ ರೆಕಾರ್ಡ್ ಬ್ರೇಕ್ ಮಾಡಿದ ಹೊಸ ಅಮೇಜ್..

ಹೋಂಡಾ ಸಂಸ್ಥೆಯು ಬಿಡುಗಡೆ ಮಾಡಿರುವ ಅಮೇಜ್ ಕಾರುಗಳು ಒಟ್ಟು ನಾಲ್ಕು ಮಾದರಿಯಲ್ಲಿ ಖರೀದಿ ಲಭ್ಯವಿದ್ದು, ಗ್ರಾಹಕರು ತಮ್ಮ ಬೇಡಿಕೆಗೆ ಅನುಗುಣವಾಗಿ ಇ, ಎಸ್, ವಿ ಮತ್ತು ವಿಎಕ್ಸ್ ವೆರಿಯೆಂಟ್‌ಗಳನ್ನು ಆಯ್ಕೆ ಮಾಡಬಹುದಾಗಿದೆ. ಹೀಗಾಗಿ ವೆರಿಯೆಂಟ್‌ಗಳಿಗೆ ಅನುಗುಣವಾಗಿ ಕಾರಿನ ಬೆಲೆಗಳು ನಿಗದಿ ಮಾಡಲಾಗಿದೆ.

ಹೋಂಡಾ ಸಂಸ್ಥೆಯ 20 ವರ್ಷಗಳ ರೆಕಾರ್ಡ್ ಬ್ರೇಕ್ ಮಾಡಿದ ಹೊಸ ಅಮೇಜ್..

ಸ್ಪೋರ್ಟಿ ಲುಕ್ ಹೊಂದಿರುವ ಅಮೇಜ್ ಕಾರುಗಳು ಎರಡನೇ ತಲೆಮಾರಿನ ಶಾರ್ಪರ್ ಆಂಗಲ್ಸ್, ಬೋಲ್ಡರ್ ಡಿಸೈನ್ ಹಾಗೂ ಆಂಗ್ಯೂಲರ್ ಹೆಡ್‍‍ಲ್ಯಾಂಪ್‍‍ಗಳನ್ನು ಪಡೆದುಕೊಂಡಿದ್ದು, 15 ಇಂಚಿನ ಅಲಾಯ್ ವೀಲ್‍‍ಗಳು, ಹಿಂಭಾಗದ ವಿನ್ಯಾಸದಲ್ಲಿ ಹೊಸ ಪ್ರೇರಣೆಯ ಕ್ರೋಮ್ ಸ್ಟ್ರಿಪ್, ಸಿ ಟೈಪ್ ಟೈಲ್‍ ಲೈಟ್ಸ್ ಗಳನ್ನು ಪಡೆದಿದಿರುವುದು ಆಕರ್ಷಕವಾಗಿದೆ.

ಹೋಂಡಾ ಸಂಸ್ಥೆಯ 20 ವರ್ಷಗಳ ರೆಕಾರ್ಡ್ ಬ್ರೇಕ್ ಮಾಡಿದ ಹೊಸ ಅಮೇಜ್..

ಹೊಸ ಅಮೇಜ್ ಕಾರುಗಳು 1.2-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್‌ನಲ್ಲಿ ಖರೀದಿಸಬಹುದಾಗಿದ್ದು, ಪೆಟ್ರೋಲ್ ಆವೃತ್ತಿಯು 89-ಬಿಎಚ್‌ಪಿ, 110-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದಲ್ಲಿ ಡಿಸೇಲ್ ಆವೃತ್ತಿಯು 99-ಬಿಎಚ್‌ಪಿ, 200-ಎನ್ಎಂ ಉತ್ಪಾದನೆ ಮಾಡಬಲ್ಲವು.

ಹೋಂಡಾ ಸಂಸ್ಥೆಯ 20 ವರ್ಷಗಳ ರೆಕಾರ್ಡ್ ಬ್ರೇಕ್ ಮಾಡಿದ ಹೊಸ ಅಮೇಜ್..

ಇದಲ್ಲದೇ ಹೊಸ ಕಾರುಗಳಲ್ಲಿ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಮತ್ತು 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯಿದ್ದು, ಮ್ಯಾನುವಲ್‌ಗಿಂತ ಡಿಸೇಲ್ ಆವೃತ್ತಿಗಿಂತ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಹೊಂದಿರುವ ಡಿಸೇಲ್ ಆವೃತ್ತಿಯು 79-ಬಿಎಚ್‌ಪಿ ಮತ್ತು 160-ಎನ್ಎಂ ಟಾರ್ಕ್ ಮಾತ್ರ ಉತ್ಪಾದಿಸಲಿವೆ.

ಹೋಂಡಾ ಸಂಸ್ಥೆಯ 20 ವರ್ಷಗಳ ರೆಕಾರ್ಡ್ ಬ್ರೇಕ್ ಮಾಡಿದ ಹೊಸ ಅಮೇಜ್..

ಕಾರಿನ ಒಳವಿನ್ಯಾಸ

ಹೊಸ ಅಮೇಜ್ ಕಾರುಗಳು ಎಲ್ಇಡಿ ಡಿಎಲ್‍ಆರ್, ಡ್ಯುಯಲ್ ಟೋನ್ ಡ್ಯಾಶ್‌ಬೋರ್ಡ್, ಆಪಲ್ ಕಾರ್ ಪ್ಲೇ ಹಾಗೂ ಆಂಡ್ರಾಯ್ಡ್ ಆಟೋ ಅನ್ನು ಒಳಗೊಂಡ ಟಚ್ ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಂ, ಕ್ಲೈಮೆಟ್ ಕಂಟ್ರೋಲರ್, ಸ್ಟೀರಿಂಗ್ ಮೌಟೆಂಡ್ ಕಂಟ್ರೋಲರ್ ಮತ್ತು ಪೆಡಲ್ ಶಿಫ್ಟರ್ಸ್ ಅನ್ನು ಅಳವಡಿಸಲಾಗಿದೆ.

ಹೋಂಡಾ ಸಂಸ್ಥೆಯ 20 ವರ್ಷಗಳ ರೆಕಾರ್ಡ್ ಬ್ರೇಕ್ ಮಾಡಿದ ಹೊಸ ಅಮೇಜ್..

ಜೊತೆಗೆ ಕೀ ಲೇಸ್ ಎಂಟ್ರಿ, ಎಬಿಎಸ್, ಇಬಿಡಿ, ಸೆಂಟ್ರಲ್ ಲಾಕಿಂಗ್, ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್, ಕ್ರೂಸ್ ಕಂಟ್ರೋಲರ್, ರಿವರ್ಸ್ ಪಾರ್ಕಿಂಗ್ ಕ್ಯಾಮೆರಾ ಜೊತೆ ಸೆನ್ಸಾರ್ ಒದಗಿಸಲಾಗಿದ್ದು, ಮಾರುತಿ ಡಿಜೈರ್, ಹ್ಯುಂಡೈ ಎಕ್ಸ್ಸೆಂಟ್ ಮತ್ತು ಟಾಟಾ ಟಿಗೋರ್ ಕಾರುಗಳಿಗೆ ತ್ರೀವ ಪೈಪೋಟಿ ನೀಡಲಿದೆ.

Most Read Articles

Kannada
Read more on amaze new car sales
English summary
2018 Honda Amaze breaks record.
Story first published: Wednesday, August 22, 2018, 15:10 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X