ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡ ಮುಂದಿನ ತಲೆಮಾರಿನ ಸ್ಯಾಂಟ್ರೊ ಕಾರು..

ಇದೇ ವರ್ಷದ ಮೂರನೇ ತ್ರೈಮಾಸಿಕ ಅವಧಿಗೆ ಬಿಡುಗಡೆಗೊಳ್ಳಲಿರುವ ಹ್ಯುಂಡೈ ಇಂಡಿಯಾ ನಿರ್ಮಾಣದ ನೆಕ್ಸ್ಟ್ ಜನರೇಷನ್ ಸ್ಯಾಂಟ್ರೊ ಕಾರು ಆವೃತ್ತಿಯು ಹಲವು ಬಾರಿ ಸ್ಪಾಟ್ ಟೆಸ್ಟಿಂಗ್‌ ವೇಳೆ ಸೆರೆಸಿಕ್ಕಿದೆ.

By Rahul Ts

ಹ್ಯಾಚ್‌ಬ್ಯಾಕ್ ಕಾರುಗಳಲ್ಲಿ ಅತಿ ಹೆಚ್ಚು ಜನಪ್ರಿಯ ಹೊಂದಿರುವ ಹ್ಯುಂಡೈ ಸ್ಯಾಂಟ್ರೊ ಕಾರುಗಳು ಇದೀಗ ಮತ್ತೊಮ್ಮೆ ಭಾರತೀಯ ಮಾರುಕಟ್ಟೆಯಲ್ಲಿ ಸದ್ದು ಮಾಡುವ ನೀರಿಕ್ಷೆಯಲ್ಲಿದ್ದು, ಈ ಹಿನ್ನೆಲೆ ದೇಶದ ಪ್ರಮುಖ ಕಡೆಗಳಲ್ಲಿ ಸ್ಪಾಟ್ ಟೆಸ್ಟಿಂಗ್ ನಡೆಸುವ ಮೂಲಕ ಹ್ಯಾಚ್‌ಬ್ಯಾಕ್ ಪ್ರಿಯರ ಮೆಚ್ಚುಗೆಗೆ ಕಾರಣವಾಗಿದೆ.

ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡ ಮುಂದಿನ ತಲೆಮಾರಿನ ಸ್ಯಾಂಟ್ರೊ ಕಾರು..

ಇದೇ ವರ್ಷದ ಮೂರನೇ ತ್ರೈಮಾಸಿಕ ಅವಧಿಗೆ ಬಿಡುಗಡೆಗೊಳ್ಳಲಿರುವ ಹ್ಯುಂಡೈ ಇಂಡಿಯಾ ನಿರ್ಮಾಣದ ನೆಕ್ಸ್ಟ್ ಜನರೇಷನ್ ಸ್ಯಾಂಟ್ರೊ ಕಾರು ಆವೃತ್ತಿಯು ಹಲವು ಬಾರಿ ಸ್ಪಾಟ್ ಟೆಸ್ಟಿಂಗ್‌ ವೇಳೆ ಸೆರೆಸಿಕ್ಕಿದ್ದು, ಇದೀಗ ಹೊಸ ಕಾರಿನ ಇಂಟಿರಿಯರ್ ಅಂಶಗಳ ಬಗೆಗೆ ಹೆಚ್ಚಿನ ಮಾಹಿತಿ ಲಭ್ಯವಾಗಿರುವುದು ಮತ್ತೊಂದು ವಿಶೇಷ.

ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡ ಮುಂದಿನ ತಲೆಮಾರಿನ ಸ್ಯಾಂಟ್ರೊ ಕಾರು..

ಸ್ಟಾಟ್ ಟೆಸ್ಟಿಂಗ್ ವೇಳೆ ಮುಂದಿನ ತಲೆಮಾರಿನ ಹ್ಯುಂಡೈ ಸ್ಯಾಂಟ್ರೊ ಕಾರುಗಳು ಉತ್ತಮ ಪ್ರದರ್ಶನ ತೊರುತ್ತಿದ್ದು, ಅಧಿಕ ಮೈಲೇಜ್ ಮತ್ತು ಅತ್ಯುತ್ತಮ ಬ್ರೇಕಿಂಗ್ ಸೌಲಭ್ಯಗಳು ಗ್ರಾಹಕರ ನಂಬಿಕೆಗೆ ವಿಶ್ವಾಸರ್ಹವಾಗಲಿವೆ ಎಂಬ ಮಾಹಿತಿಯೂ ದೊರೆತಿದೆ.

ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡ ಮುಂದಿನ ತಲೆಮಾರಿನ ಸ್ಯಾಂಟ್ರೊ ಕಾರು..

ಆದ್ರೆ ಸ್ಪಾಟ್ ಟೆಸ್ಟಿಂಗ್‌ನಲ್ಲಿ ಕಾಣಿಸಿಕೊಂಡ ನೆಕ್ಸ್ಟ್ ಜನರೇಷನ್ ಹ್ಯುಂಡೈ ಸ್ಯಾಂಟ್ರೊ ಮೇಲೆ ಭಾರೀ ಪ್ರಮಾಣದ ಮುಸುಕು ಹೊದಿಸಿದ ಪರಿಣಾಮ ವಿನ್ಯಾಸಗಳ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಸಾಧ್ಯವಾಗಿಲ್ಲ.

ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡ ಮುಂದಿನ ತಲೆಮಾರಿನ ಸ್ಯಾಂಟ್ರೊ ಕಾರು..

ಆದರೆ, ಹೊಸ ಕಾರುಗಳು ಎಎಂಟಿ(ಆಟೋ ಮ್ಯಾಟಿಕ್ ಗೇರ್‌ಬಾಕ್ಸ್) ಕೂಡಾ ಹೊಂದುವ ಸಾಧ್ಯತೆಗಳಿದ್ದು, 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಮತ್ತು ಐ10 ಮಾದರಿಯಲ್ಲೇ ಒಳ ವಿನ್ಯಾಸದ ಸೌಲಭ್ಯಗಳನ್ನು ಪಡೆಯಲಿವೆ ಎನ್ನಲಾಗುತ್ತಿದೆ.

ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡ ಮುಂದಿನ ತಲೆಮಾರಿನ ಸ್ಯಾಂಟ್ರೊ ಕಾರು..

ಹೀಗಾಗಿ ಮಧ್ಯಮ ವರ್ಗಗಳ ಸ್ನೇಹಿಯಾಗಿರುವ ಉತ್ತಮ ಹ್ಯಾಚ್‌ಬ್ಯಾಕ್ ಕಾರುಗಳ ಪಟ್ಟಿಯಲ್ಲಿ ಸ್ಥಾನ ಪಡೆಯಲು ಶಕ್ತವಾಗಿರುವ ನೆಕ್ಸ್ಟ್ ಜನರೇಷನ್ ಹ್ಯುಂಡೈ ಸ್ಯಾಂಟ್ರೊ ಕಾರುಗಳು, 800 ಸಿಸಿ ಪೆಟ್ರೋಲ್ ಎಂಜಿನ್ ಇಲ್ಲವಾದ್ರೆ 1.0-ಲೀಟರ್ ಜೊತೆ ತ್ರಿ ಸಿಲಿಂರ್ ಎಂಜಿನ್ ಪಡೆದುಕೊಳ್ಳಲಿದೆ. ಆದ್ರೆ ಹೊಸ ಕಾರುಗಳಲ್ಲಿ ಡಿಸೇಲ್ ಆವೃತ್ತಿಯನ್ನು ಪರಿಚಯಿಸುತ್ತಿಲ್ಲ.

ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡ ಮುಂದಿನ ತಲೆಮಾರಿನ ಸ್ಯಾಂಟ್ರೊ ಕಾರು..

ಬದಲಾಗಿ ಸಿಎನ್‌ಜಿ ಎಂಜಿನ್ ಪ್ರೇರಣೆ ಹೊಂದಿರುವ ಸ್ಯಾಂಟ್ರೊ ಕಾರುಗಳು ಪೆಟ್ರೋಲ್ ಮತ್ತು ಸಿಎನ್‌ಜಿ ಎರಡು ಮಾದರಿಯ ಇಂಧನವನ್ನು ಬಳಕೆ ಮಾಡಿಕೊಳ್ಳುವ ಸೌಲಭ್ಯ ಒದಗಿಸುತ್ತಿದ್ದು, ಗ್ರಾಹಕರು ತಮ್ಮ ಇಷ್ಟಕ್ಕೆ ಅನುಗುಣವಾಗಿ ಹೊಸ ಕಾರುಗಳನ್ನು ಆಯ್ಕೆ ಮಾಡಬಹುದು.

ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡ ಮುಂದಿನ ತಲೆಮಾರಿನ ಸ್ಯಾಂಟ್ರೊ ಕಾರು..

ಇನ್ನು ಪ್ರಯಾಣಿಕರ ಸುರಕ್ಷತೆಗಾಗಿ ಎಬಿಎಸ್ ಮತ್ತು ಡ್ಯುಯಲ್ ಏರ್‌ಬ್ಯಾಗ್ ಸೌಲಭ್ಯಗಳನ್ನು ಸಹ ಆಯ್ಕೆ ರೂಪದಲ್ಲಿ ನೀಡಲಿದ್ದು, ಪಾರ್ಕಿಂಗ್ ಸೆನ್ಸಾರ್, ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಮತ್ತು ವಿಶೇಷ ವಿನ್ಯಾಸದ ಟಾಲಿ ಬಾಯ್ ಡಿಸೈನ್ ಹೊಂದಿರಲಿವೆ.

ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡ ಮುಂದಿನ ತಲೆಮಾರಿನ ಸ್ಯಾಂಟ್ರೊ ಕಾರು..

ಸಿಎನ್‌ಜಿ ಎಂಜಿನ್ ಪ್ರೇರಿತ ಸ್ಯಾಂಟ್ರೊ ಮಾದರಿಯು ಸಾಮಾನ್ಯ ಮಾದರಿಗಿಂತ 50 ಸಾವಿರ ಹೆಚ್ಚುವರಿ ಬೆಲೆ ಪಡೆಯುವ ಸಾಧ್ಯತೆಗಳಿದ್ದು, ಒಟ್ಟಿನಲ್ಲಿ ಕಾರಿನ ಬೆಲೆಗಳು ರೂ. 3.50 ಲಕ್ಷದಿಂದ ರೂ. 5 ಲಕ್ಷ ಇರಬಹುದೆಂದು ಅಂದಾಜಿಸಲಾಗಿದೆ.

ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡ ಮುಂದಿನ ತಲೆಮಾರಿನ ಸ್ಯಾಂಟ್ರೊ ಕಾರು..

ಹೊಸತನಗಳೊಂದಿಗೆ ಮಾರುಕಟ್ಟೆ ಪ್ರವೇಶ ಪಡೆಯುತ್ತಿರುವ ನೆಕ್ಸ್ಟ್ ಜನರೇಷನ್ ಹ್ಯುಂಡೈ ಸ್ಯಾಂಟ್ರೊ ಆವೃತ್ತಿಯು ಸಣ್ಣ ಕಾರುಗಳ ವಿಭಾಗದಲ್ಲಿ ಹೊಸ ಸಂಚಲನ ಸೃಷ್ಠಿಸುವ ತವಕದಲ್ಲಿದ್ದು, ಮಾರುತಿ ಸುಜುಕಿ ಸೆಲೆರಿಯೊ, ಟಾಟಾ ಟಿಯಾಗೋ ಮತ್ತು ರೆನಾಲ್ಟ್ ಕ್ವಿಡ್‌ಗೆ ತೀವ್ರ ಸ್ಪರ್ಧಿಯಾಗಲಿದೆ.

More from DriveSpark

Article Published On: Saturday, June 9, 2018, 18:13 [IST]
English summary
2018 Hyundai Santro spied next to Maruti Swift, Alto, WagonR, Renault Kwid.
Read more on hyundai santro
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+